ಕರುನಾಡ ಚಕ್ರವರ್ತಿ ಶಿವರಾಜಕುಮಾರ್ ಅವರಿಂದ “ಲವ್ 360” ಚಿತ್ರದ ಥಿಯೇಟ್ರಿಕಲ್ ಟ್ರೇಲರ್ ಬಿಡುಗಡೆ.

love 360 kannada movie theatrical trailer release shivarajkum

ಶಶಾಂಕ್ ನಿರ್ದೇಶನದ “ಲವ್ 360” ಚಿತ್ರದ ಥಿಯೇಟ್ರಿಕಲ್ ಟ್ರೇಲರ್ ಕರುನಾಡ ಚಕ್ರವರ್ತಿ ಶಿವರಾಜಕುಮಾರ್ ಅವರಿಂದ ಬಿಡುಗಡೆಯಾಗಿದೆ. ಚಿತ್ರ ಇದೇ ಆಗಸ್ಟ್ 19 ರಂದು ರಾಜ್ಯಾದ್ಯಂತ ತೆರೆ ಕಾಣುತ್ತಿದೆ.love 360 kannada movie theatrical trailer

ಶಶಾಂಕ್ ನನ್ನ ಅಚ್ಚುಮೆಚ್ಚಿನ ನಿರ್ದೇಶಕರಲ್ಲಿ ಒಬ್ಬರು. ಅವರ ನಿರ್ದೇಶನದಲ್ಲಿ ನಾನು ನಟಿಸಬೇಕಿತ್ತು. ಕಾರಣಾಂತರದಿಂದ ಆಗಿಲ್ಲ. ಮುಂದೆ ನಮಿಬ್ಬರ ಕಾಂಬಿನೇಶನ್ ನಲ್ಲಿ ಚಿತ್ರ ಬರುತ್ತದೆ. ಸದ್ಯ ಶಶಾಂಕ್ ನಿರ್ದೇಶನದ “ಲವ್ 360” ಚಿತ್ರದ ಟ್ರೇಲರ್ ನೋಡಿದೆ. ಚೆನ್ನಾಗಿದೆ. ಅರ್ಜುನ್ ಜನ್ಯ ಸಂಗೀತ ನೀಡಿರುವ ಈ ಚಿತ್ರದ ಹಾಡುಗಳು ಸುಮಧುರವಾಗಿದೆ. ಅದರಲ್ಲೂ ಸಿದ್ ಶ್ರೀರಾಮ್ ಹಾಡಿರುವ “ಜಗವೇ ನೀನು ಗೆಳತಿಯೆ” ಹಾಡಂತೂ ನನಗೆ ಬಹಳ ಇಷ್ಟ. ನಾಯಕ, ನಾಯಕಿ ಎಲ್ಲರೂ ಚೆನ್ನಾಗಿ ಅಭಿನಯಿಸಿದ್ದಾರೆ. ನಾನು ಬಿಡುಗಡೆ ದಿನದಂದೇ ಈ ಚಿತ್ರವನ್ನು ಚಿತ್ರಮಂದಿರದಲ್ಲಿ ಅಭಿಮಾನಿಗಳ ಜೊತೆಗೆ ನೋಡುತ್ತೇನೆ ಎಂದರು ನಟ ಶಿವರಾಜಕುಮಾರ್.love 360 kannada movie theatrical trailer

ಚಿತ್ರದ ಥಿಯೇಟ್ರಿಕಲ್ ಟ್ರೇಲರ್ ಬಿಡುಗಡೆ ಮಾಡಿ ಕೊಟ್ಟ ಶಿವರಾಜಕುಮಾರ್ ಅವರಿಗೆ ಧನ್ಯವಾದಗಳು. ಚಿತ್ರ ಆಗಸ್ಟ್ ೧೯ರಂದು ತೆರೆ ಕಾಣಲಿದೆ. ಅದಕ್ಕೂ ಮುನ್ನ ನಾವು ಬೇರೆ ಬೇರೆ ಊರುಗಳಿಗೆ ಭೇಟಿ ನೀಡುತ್ತಿದ್ದೇವೆ. ಹೋದ ಕಡೆ ಸಿಗುತ್ತಿರುವlove 360 kannada movie theatrical trailer
ಅಭೂತಪೂರ್ವ ಬೆಂಬಲಕ್ಕೆ‌ ಮನತುಂಬಿ ಬಂದಿದೆ. ಖ್ಯಾತ ಕೆ.ಆರ್.ಜಿ ಸ್ಟುಡಿಯೋಸ್ ಸಂಸ್ಥೆಯವರು ನಮ್ಮ ಚಿತ್ರವನ್ನು ವಿತರಣೆ ಮಾಡುತ್ತಿದ್ದಾರೆ. ನೂರೈವತ್ತಕ್ಕೂ ಅಧಿಕ ಚಿತ್ರಮಂದಿರಗಳಲ್ಲಿ ಈ ಚಿತ್ರ ಬಿಡುಗಡೆಯಾಗುತ್ತಿದೆ. ಈಗಾಗಲೇ ಹಾಡುಗಳನ್ನು ಜನಪ್ರಿಯಗೊಳಿಸಿರುವ ಕನ್ನಡ ಕಲಾ ರಸಿಕರು ಚಿತ್ರವನ್ನೂ ಗೆಲಿಸುತ್ತಾರೆಂಬ ನಂಬಿಕೆ ಇದೆ ಎಂದರು ನಿರ್ದೇಶಕ ಶಶಾಂಕ್.love 360 kannada movie theatrical trailer

ನನ್ನ ಸ್ನೇಹಿತನೊಬ್ಬ, “ನೀನು ಹೀರೋ ತರಹ ಇಲ್ಲ. ನಿನ್ನ ಸಿನಿಮಾ ಯಾರು ನೋಡುತ್ತಾರೆ ಅಂದಿದ್ದ”. ಆ ಮಾತು‌ ನನ್ನ ಮನಸ್ಸಿನಲ್ಲೇ ಇತ್ತು. ಆದರೆ ಈಗ ಬೇರೆ ಬೇರೆ ಊರುಗಳಿಗೆ, ಅದರಲ್ಲೂ ಕಾಲೇಜುಗಳಿಗೆ ಭೇಟಿ ನೀಡಿದಾಗ ಅಲ್ಲಿನ ವಿದ್ಯಾರ್ಥಿಗಳು ನನ್ನನ್ನು ಗುರುತಿಸುತ್ತಿರುವ ರೀತಿ ಕಂಡು ಆಶ್ಚರ್ಯವಾಗಿದೆ. ಹೆಣ್ಣುಮಕ್ಕಳಂತೂ ನಾವು ನಿಮ್ಮ ಅಭಿಮಾನಿಗಳು. ನಿಮ್ಮ ಚಿತ್ರದ ಹಾಡುಗಳು ತುಂಬಾ ‌ಚೆನ್ನಾಗಿದೆ. ನೀವು ತುಂಬಾ ಚೆನ್ನಾಗಿ ಕಾಣುತ್ತೀರಾ ಎನ್ನುತ್ತಿದ್ದಾರೆ. ಅದಕ್ಕೆಲ್ಲಾ ಕಾರಣ ನಿರ್ದೇಶಕ ಶಶಾಂಕ್ ಸರ್. ಅವರಿಗೆ ಹಾಗೂ ನನಗೆ ಬೆಂಬಲ ನೀಡುತ್ತಿರುವ ನನ್ನ‌ ತಾಯಿ ಹಾಗೂ ಅಂಕಲ್ ಗೆ ಧನ್ಯವಾದ ಎಂದರು ನಾಯಕ ಪ್ರವೀಣ್.love 360 kannada movie theatrical trailer

ನಾಯಕಿ ರಚನಾ ಇಂದರ್ ಸಹ ಚಿತ್ರಕ್ಕೆ ಬಿಡುಗಡೆ ಪೂರ್ವದಲ್ಲಿ ಸಿಗುತ್ತಿರುವ ಪ್ರತಿಕ್ರಿಯೆಗೆ ಸಂತಸಪಟ್ಟರು. ನಟರಾದ ಡ್ಯಾನಿ ಕುಟ್ಟಪ್ಪ ಹಾಗೂ ಮಹಂತೇಶ್ ಸಹ ಚಿತ್ರದ ಕುರಿತು ಮಾತನಾಡಿದರು.

You Will  Love   Like  These

Chitra Suddhi
daali uttarakhand kannada movie

ಡಾಲಿ ಧನಂಜಯ “ಉತ್ತರ ಕಾಂಡ”ದ ನಾಯಕ.

ವಿಜಯ್ ಕಿರಗಂದೂರು ಅರ್ಪಿಸುವ, ಕೆ.ಆರ್.ಜಿ ಸ್ಟುಡಿಯೋಸ್ ಲಾಂಛನದಲ್ಲಿ ಕಾರ್ತಿಕ್ ಹಾಗೂ ಯೋಗಿ ಜಿ ರಾಜ್ ನಿರ್ಮಿಸುತ್ತಿರುವ ” ಉತ್ತರಕಾಂಡ” ಚಿತ್ರದ ನಾಯಕನಾಗಿ ಡಾಲಿ ಧನಂಜಯ ಅಭಿನಯಿಸುತ್ತಿದ್ದಾರೆ. ಈ ಹಿಂದೆ ಕೆ.ಆರ್.ಜಿ ಸ್ಟುಡಿಯೋಸ್ ನಿರ್ಮಾಣದಲ್ಲಿ ಡಾಲಿ ಧನಂಜಯ ನಾಯಕನಾಗಿ ನಟಿಸಿದ್ದ “ರತ್ನನ ಪ್ರಪಂಚ” ಚಿತ್ರ ಸಹ ಪ್ರಚಂಡ ಯಶಸ್ಸು ಕಂಡಿತ್ತು.…

Chitra Suddhi
In the movie "December 24". Boys from Kunigal Taluk

“ಡಿಸೆಂಬರ್ 24” ಚಿತ್ರದಲ್ಲಿ ಹಾವಳಿ ಕೊಡೋಕೆ ಕುಣಿಗಲ್...

“ಡಿಸೆಂಬರ್ 24” ಚಿತ್ರದಲ್ಲಿ ಅನಿಲ್ ಗೌಡ್ರು, ಕುಮಾರ್ ಗೌಡ್ರು ಹಾಗೂ ಬೆಟ್ಟೇಗೌಡ್ರು ಖಡಕ್ ಖಳನಾಯಕರಾಗಿ ಅಭಿನಯಿಸಿದ್ದು, ಈ ಚಿತ್ರದಲ್ಲಿ ಇವರು ತುಂಬಾ ವಿಭಿನ್ನವಾದ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಈ ಚಿತ್ರದಲ್ಲಿ ನಾಯಕರ ಪಾತ್ರ ಎಷ್ಟು ಮುಖ್ಯನೋ ಹಾಗೆ ಖಳನಾಯಕರ ಪಾತ್ರಗಳು ಅಷ್ಟೇ ಮುಖ್ಯ. ಅದರಂತೆ ಖಳನಾಯಕರ ಆರ್ಭಟ ಜೋರಾಗೆ ಇರಲಿದೆ…

News
VXplore Banking & Competitive Exams Coaching Academy

ಅದು ಕೆಂಗೇರಿಯಲ್ಲಿ ಹೊಸದಾಗಿ ಶುರುವಾದ ಸ್ಪರ್ಧಾತ್ಮಕ ಪರೀಕ್ಷೆಗಳ...

ಸಾವಿರಾರು ವಿದ್ಯಾರ್ಥಿಗಳಿಗೆ ಭವಿಷ್ಯ ಕಟ್ಟಿಕೊಟ್ಟ ಪ್ರತಿಷ್ಠಿತ ವಿದ್ಯಾ ಸಂಸ್ಥೆಯ ನಿರ್ದೇಶಕರಾದ  ಚಂದ್ರ ಮೂರ್ತಿ ಯವರು ಇದರ ಸಂಸ್ಥಾಪಕರು. ಉತ್ತಮ ಮಟ್ಟದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಭೇತಿ ನೀಡುವ ಕಾರಣದಿಂದ ಈ VXplore Banking & Competitive Exams Coaching Academy. ತರಭೇತಿ ಕೇಂದ್ರವನ್ನು ತೆರೆದಿದ್ದಾರೆ. ಅದು ಆಕಾಕ್ಷಿ ವಿಧ್ಯಾರ್ಥಿಗಳಿಗೆ ಅವರ…

Chitra Suddhi
i am pregnant kannada movie censored ua

“ಐ ಆಮ್ ಪ್ರೆಗ್ನೆಂಟ್” ಚಿತ್ರವು ಸೆನ್ಸಾರ್ ಮಂಡಳಿಯಿಂದ...

“ಅನು ಸಿನಿಮಾಸ್” ಬ್ಯಾನರ್ ಅಡಿಯಲ್ಲಿ ತಯಾರಾಗುತ್ತಿರುವ “ಐ ಆಮ್ ಪ್ರೆಗ್ನೆಂಟ್” ಎಂಬ ಚಿತ್ರವನ್ನು ಸೆನ್ಸಾರ್ ಮಂಡಳಿಯಿಂದ ಉತ್ತಮ ಪ್ರತಿಕ್ರಿಯೆ ಪಡೆದಿದೆ . ಕೆಲವೇ ದಿನಗಳಲ್ಲಿ ಚಿತ್ರಮಂದಿರಕ್ಕೆ ಲಗ್ಗೆಯಿಡಲು ಚಿತ್ರತಂಡ ಎಲ್ಲ ತಯಾರಿ ಮಾಡಿಕೊಳ್ಳುತ್ತಿದ್ದಾರೆ . ಇದರಲ್ಲಿ ನುರಿತ ಕಲಾವಿದರು ಹಾಗೂ ನುರಿತ ತಂತ್ರಜ್ಞರು ಕೂಡ ಇದಕ್ಕೆ ಉತ್ತಮ ಬೆಂಬಲವನ್ನು…

Chitra Suddhi
90 bidi manig nadi song release

ನಾಳೆಯಿಂದ ನೈಂಟಿ ನಶೆ!

ಹಿರಿಯ ಹಾಸ್ಯ ನಟ ಬಿರಾದಾರ್ ಅಭಿನಯದ ಐನೂರನೇ ಚಿತ್ರ ಎಂಬ ಹಣೆಪಟ್ಟಿ ಹೊತ್ತುಕೊಂಡು ಆರಂಭದಿಂದಲೇ ಭರ್ಜರಿ ಸದ್ದು ಮಾಡುತ್ತಲೇ ಬಂದ ಚಿತ್ರ ’90 ಬಿಡಿ ಮನೀಗ್ ನಡಿ’. ಉತ್ತರ ಕರ್ನಾಟಕ ಶೈಲಿಯ ಕಾಮಿಡಿ ಕ್ರೈಂ ಥ್ರಿಲ್ಲರ್ ಕಥೆ ಎನ್ನುತ್ತಾ, ‘ಟೀಸರ್’ ಮೂಲಕ ಚಿತ್ರ ಭರವಸೆ ಮೂಡಿಸಿತ್ತು. ಇದೀಗ ಚಿತ್ರತಂಡ…