ಡಿಸೆಂಬರ್ 30 ರಂದು ತೆರೆಗೆ ಬರಲಿದೆ “ಮೇಡ್ ಇನ್ ಬೆಂಗಳೂರು”.

"Made in Bangalore" will hit the screens on December 30.

ಕೋಟ್ಯಾಂತರ ಜನರಿಗೆ ಆಶ್ರಯ ನೀಡಿರುವ ಬೆಂಗಳೂರಿನ ಕುರಿತಾದ ಚಿತ್ರ ” ಮೇಡ್ ಇನ್ ಬೆಂಗಳೂರು ” ಇದೇ ಡಿಸೆಂಬರ್ 30 ರಂದು ಬಿಡುಗಡೆಯಾಗುತ್ತಿದೆ. ಬಿಡುಗಡೆಗೂ ಪೂರ್ವದಲ್ಲಿ ಆಯೋಜಿಸಲಾಗಿದ್ದ ಸಮಾರಂಭದಲ್ಲಿ ಯುವ ಉದ್ಯಮಿ ಸುಹಾಸ್ ಗೋಪಿನಾಥ್ ಸೇರಿದಂತೆ ಅನ್ನು ಗಣ್ಯರು ಹಾಗೂ ಚಿತ್ರತಂಡದ ಸದಸ್ಯರು ಭಾಗಿಯಾಗಿದ್ದರು‌."Made in Bangalore" will hit the screens on December 30.

ನಾವು ಮೂರು ಜನ ಸ್ನೇಹಿತರು ಸೇರಿ ಇಪ್ಪತ್ತೈದು ವರ್ಷಗಳ ಹಿಂದೆ ಒಂದು ಕಂಪನಿ ಆರಂಭಿಸಿದ್ದೆವು. ನಿರ್ದೇಶಕ ಪ್ರದೀಪ್ ಶಾಸ್ತ್ರಿ ಸ್ಟಾರ್ಟ್ ಅಪ್ ಹಾಗೂ ಬೆಂಗಳೂರಿನ ಮೇಲಿರುವ ಎಮೋಷನ್ ಕುರಿತಾದ ಈ ಚಿತ್ರದ ಕಥೆ ಹೇಳಿದರು. ನನಗೆ ನಾವು ಕಂಪನಿ ಆರಂಭಿಸಿದ ದಿನಗಳು ನೆನಪಾದವು. ಕಥೆ ಇಷ್ಟವಾಗಿ ಸಿನಿಮಾ ಆರಂಭ ಮಾಡಿದ್ದೆವು. ಅನಂತನಾಗ್, ಸಾಯಿಕುಮಾರ್, ಪ್ರಕಾಶ್ ಬೆಳವಾಡಿ ಅವರಂತಹ ಹಿರಿಯ ಕಲಾವಿದರು ಹಾಗೂ ಹೊಸ ಕಲಾವಿದರು ಈ ಚಿತ್ರದಲ್ಲಿ ಅಭಿನಯಿಸಿದ್ದಾರೆ‌. ಚಿತ್ರ ಡಿಸೆಂಬರ್ 30ರಂದು ತೆರೆಗೆ ಬರುತ್ತಿದೆ. ನೋಡಿ ಹಾರೈಸಿ ಎಂದರು ನಿರ್ಮಾಪಕರು ಬಾಲಕೃಷ್ಣ ಬಿ.ಎಸ್."Made in Bangalore" will hit the screens on December 30.

ಈ ಚಿತ್ರದ ನಿರ್ಮಾಪಕರಿಗೆ ಕಥೆ ಹೇಳಲು ಮೇಲಿಂದ ಮೇಲೆ ಫೋನ್ ಮಾಡುತ್ತಿದ್ದೆ. ಕೊನೆಗೂ ಕಥೆ ಕೇಳಿದ್ದ ಬಾಲಕೃಷ್ಣ ಅವರು ಚಿತ್ರ ನಿರ್ಮಾಣಕ್ಕೆ ಮುಂದಾದರು. ಬೆಂಗಳೂರು ಎಂದರೆ ಎಮೋಷನ್. ಈ ಊರು ಅನೇಕರಿಗೆ ಜೀವನ ನೀಡಿದೆ. ಬೆಂಗಳೂರು ಹಾಗೂ ಸ್ಟಾರ್ಟ್ ಅಪ್ ಸುತ್ತ ನಮ್ಮ ಚಿತ್ರದ ಕಥೆ ಸಾಗುತ್ತದೆ. ಅನಂತನಾಗ್, ಸಾಯಿಕುಮಾರ್, ಪ್ರಕಾಶ್ ಬೆಳವಾಡಿ ಮುಂತಾದ ಹಿರಿಯ ಕಲಾವಿದರು ಹಾಗೂ ಮಧುಸೂದನ್, ಪುನೀತ್ ಮಾಂಜಾ, ವಂಶೀಧರ್, ಹಿಮಾಂಶಿ ಅವರಂತಹ ಕಿರಿಯ ಕಲಾವಿದರ ತಾರಾಬಳಗ ಈ ಚಿತ್ರದಲ್ಲಿದೆ. ಉತ್ತಮ ತಂತ್ರಜ್ಞರು ಈ ಚಿತ್ರದಲ್ಲಿ ಕಾರ್ಯ ನಿರ್ವಹಿಸಿದ್ದಾರೆ. ಹಾಡುಗಳು ಹಾಗೂ ಟ್ರೇಲರ್ ಮೂಲಕ ಈಗಾಗಲೇ ಜನರ ಮನ ಗೆದ್ದಿರುವ ನಮ್ಮ ಚಿತ್ರ ಡಿಸೆಂಬರ್ 30 ರಂದು ತೆರೆಗೆ ಬರಲಿದೆ. ಎಲ್ಲರೂ ನೋಡಿ ಎಂದರು ನಿರ್ದೇಶಕ ಪ್ರದೀಪ್ ಕೆ ಶಾಸ್ತ್ರಿ."Made in Bangalore" will hit the screens on December 30.

ಬೆಂಗಳೂರಿನ ಬಗ್ಗೆ ತಮ್ಮದೇ ಶೈಲಿಯಲ್ಲಿ ಪ್ರೀತಿಯ ಮಾತುಗಳಾಡಿದ ನಟ ಪ್ರಕಾಶ್ ಬೆಳವಾಡಿ, ತಮ್ಮ ಪಾತ್ರದ ಕುರಿತು ಮಾಹಿತಿ ನೀಡಿದರು. ನಾನು ಕೂಡ “ಮೇಡ್ ಇನ್ ಬೆಂಗಳೂರು”. ಆಂದ್ರದಲ್ಲಿ ನಾನು ಹುಟ್ಟಿದ್ದು, ಆದರೆ ಜೀವನ ನೀಡಿದ್ದು ಬೆಂಗಳೂರು ಎಂದ ನಟ ಸಾಯಿಕುಮಾರ್, ಈ ಚಿತ್ರದಲ್ಲಿ ಗ್ಯಾಂಗ್ ಸ್ಟರ್ ಪಾತ್ರದಲ್ಲಿ ಕಾಣಿಸಿಕೊಂಡಿರುವುದಾಗಿ ತಿಳಿಸಿದರು."Made in Bangalore" will hit the screens on December 30.

ಯುವ ಕಲಾವಿದರಾದ ಮಧುಸೂದನ್ ಗೋವಿಂದ್, ಪುನೀತ್ ಮಾಂಜಾ, ವಂಶೀಧರ್, ಹಿಮಾಂಶಿ ಮುಂತಾದವರು ತಮ್ಮ ಪಾತ್ರದ ಕುರಿತು ಮಾತನಾಡಿದರು. ಹಾಡುಗಳ ಬಗ್ಗೆ ಅಶ್ವಿನ್ ಪಿ ಕುಮಾರ್ ಮಾಹಿತಿ ನೀಡಿದರು. ಯುವ ಉದ್ಯಮಿ, ಗ್ಲೋಬಲ್ಸ್ ಇಂಕ್ ನ ಸ್ಥಾಪಕ ಹಾಗೂ ಅತೀ ಕಿರಿಯ ವಯಸ್ಸಿನಲ್ಲೇ ಸಿ ಇ ಓ ಪಟ್ಟ ಅಲಂಕರಿಸಿದ ಬೆಂಗಳೂರಿನವರೇ ಆದ ಸುಹಾಸ್ ಗೋಪಿನಾಥ್ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಆಗಮಿಸಿ, ತಾವು ಬೆಳೆದು ಬಂದ ದಾರಿಯನ್ನು ವಿವರಿಸಿ, ಚಿತ್ರತಂಡಕ್ಕೆ ಶುಭ ಕೋರಿದರು."Made in Bangalore" will hit the screens on December 30.

You Will  Love   Like  These

Chitra Suddhi
daali uttarakhand kannada movie

ಡಾಲಿ ಧನಂಜಯ “ಉತ್ತರ ಕಾಂಡ”ದ ನಾಯಕ.

ವಿಜಯ್ ಕಿರಗಂದೂರು ಅರ್ಪಿಸುವ, ಕೆ.ಆರ್.ಜಿ ಸ್ಟುಡಿಯೋಸ್ ಲಾಂಛನದಲ್ಲಿ ಕಾರ್ತಿಕ್ ಹಾಗೂ ಯೋಗಿ ಜಿ ರಾಜ್ ನಿರ್ಮಿಸುತ್ತಿರುವ ” ಉತ್ತರಕಾಂಡ” ಚಿತ್ರದ ನಾಯಕನಾಗಿ ಡಾಲಿ ಧನಂಜಯ ಅಭಿನಯಿಸುತ್ತಿದ್ದಾರೆ. ಈ ಹಿಂದೆ ಕೆ.ಆರ್.ಜಿ ಸ್ಟುಡಿಯೋಸ್ ನಿರ್ಮಾಣದಲ್ಲಿ ಡಾಲಿ ಧನಂಜಯ ನಾಯಕನಾಗಿ ನಟಿಸಿದ್ದ “ರತ್ನನ ಪ್ರಪಂಚ” ಚಿತ್ರ ಸಹ ಪ್ರಚಂಡ ಯಶಸ್ಸು ಕಂಡಿತ್ತು.…

Chitra Suddhi
In the movie "December 24". Boys from Kunigal Taluk

“ಡಿಸೆಂಬರ್ 24” ಚಿತ್ರದಲ್ಲಿ ಹಾವಳಿ ಕೊಡೋಕೆ ಕುಣಿಗಲ್...

“ಡಿಸೆಂಬರ್ 24” ಚಿತ್ರದಲ್ಲಿ ಅನಿಲ್ ಗೌಡ್ರು, ಕುಮಾರ್ ಗೌಡ್ರು ಹಾಗೂ ಬೆಟ್ಟೇಗೌಡ್ರು ಖಡಕ್ ಖಳನಾಯಕರಾಗಿ ಅಭಿನಯಿಸಿದ್ದು, ಈ ಚಿತ್ರದಲ್ಲಿ ಇವರು ತುಂಬಾ ವಿಭಿನ್ನವಾದ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಈ ಚಿತ್ರದಲ್ಲಿ ನಾಯಕರ ಪಾತ್ರ ಎಷ್ಟು ಮುಖ್ಯನೋ ಹಾಗೆ ಖಳನಾಯಕರ ಪಾತ್ರಗಳು ಅಷ್ಟೇ ಮುಖ್ಯ. ಅದರಂತೆ ಖಳನಾಯಕರ ಆರ್ಭಟ ಜೋರಾಗೆ ಇರಲಿದೆ…

News
VXplore Banking & Competitive Exams Coaching Academy

ಅದು ಕೆಂಗೇರಿಯಲ್ಲಿ ಹೊಸದಾಗಿ ಶುರುವಾದ ಸ್ಪರ್ಧಾತ್ಮಕ ಪರೀಕ್ಷೆಗಳ...

ಸಾವಿರಾರು ವಿದ್ಯಾರ್ಥಿಗಳಿಗೆ ಭವಿಷ್ಯ ಕಟ್ಟಿಕೊಟ್ಟ ಪ್ರತಿಷ್ಠಿತ ವಿದ್ಯಾ ಸಂಸ್ಥೆಯ ನಿರ್ದೇಶಕರಾದ  ಚಂದ್ರ ಮೂರ್ತಿ ಯವರು ಇದರ ಸಂಸ್ಥಾಪಕರು. ಉತ್ತಮ ಮಟ್ಟದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಭೇತಿ ನೀಡುವ ಕಾರಣದಿಂದ ಈ VXplore Banking & Competitive Exams Coaching Academy. ತರಭೇತಿ ಕೇಂದ್ರವನ್ನು ತೆರೆದಿದ್ದಾರೆ. ಅದು ಆಕಾಕ್ಷಿ ವಿಧ್ಯಾರ್ಥಿಗಳಿಗೆ ಅವರ…

Chitra Suddhi
90 bidi manig nadi song release

ನಾಳೆಯಿಂದ ನೈಂಟಿ ನಶೆ!

ಹಿರಿಯ ಹಾಸ್ಯ ನಟ ಬಿರಾದಾರ್ ಅಭಿನಯದ ಐನೂರನೇ ಚಿತ್ರ ಎಂಬ ಹಣೆಪಟ್ಟಿ ಹೊತ್ತುಕೊಂಡು ಆರಂಭದಿಂದಲೇ ಭರ್ಜರಿ ಸದ್ದು ಮಾಡುತ್ತಲೇ ಬಂದ ಚಿತ್ರ ’90 ಬಿಡಿ ಮನೀಗ್ ನಡಿ’. ಉತ್ತರ ಕರ್ನಾಟಕ ಶೈಲಿಯ ಕಾಮಿಡಿ ಕ್ರೈಂ ಥ್ರಿಲ್ಲರ್ ಕಥೆ ಎನ್ನುತ್ತಾ, ‘ಟೀಸರ್’ ಮೂಲಕ ಚಿತ್ರ ಭರವಸೆ ಮೂಡಿಸಿತ್ತು. ಇದೀಗ ಚಿತ್ರತಂಡ…

Chitra Suddhi
i am pregnant kannada movie censored ua

“ಐ ಆಮ್ ಪ್ರೆಗ್ನೆಂಟ್” ಚಿತ್ರವು ಸೆನ್ಸಾರ್ ಮಂಡಳಿಯಿಂದ...

“ಅನು ಸಿನಿಮಾಸ್” ಬ್ಯಾನರ್ ಅಡಿಯಲ್ಲಿ ತಯಾರಾಗುತ್ತಿರುವ “ಐ ಆಮ್ ಪ್ರೆಗ್ನೆಂಟ್” ಎಂಬ ಚಿತ್ರವನ್ನು ಸೆನ್ಸಾರ್ ಮಂಡಳಿಯಿಂದ ಉತ್ತಮ ಪ್ರತಿಕ್ರಿಯೆ ಪಡೆದಿದೆ . ಕೆಲವೇ ದಿನಗಳಲ್ಲಿ ಚಿತ್ರಮಂದಿರಕ್ಕೆ ಲಗ್ಗೆಯಿಡಲು ಚಿತ್ರತಂಡ ಎಲ್ಲ ತಯಾರಿ ಮಾಡಿಕೊಳ್ಳುತ್ತಿದ್ದಾರೆ . ಇದರಲ್ಲಿ ನುರಿತ ಕಲಾವಿದರು ಹಾಗೂ ನುರಿತ ತಂತ್ರಜ್ಞರು ಕೂಡ ಇದಕ್ಕೆ ಉತ್ತಮ ಬೆಂಬಲವನ್ನು…