ಮಾಸಾಂತ್ಯಕ್ಕೆ ಆರಂಭವಾಗಲಿದೆ ಮನಮಿಡಿಯುವ ಚಿತ್ರ.

ನಾಯಕನ ಹುಟ್ಟುಹಬ್ಬಕ್ಕೆ ಪೋಸ್ಟರ್ ಬಿಡುಗಡೆ ಮಾಡಿ ಶುಭಕೋರಿದ ಚಿತ್ರತಂಡ.

ನಿಯತ್ತಿನಲ್ಲಿ ನಾಯಿಗೆ ಸಮವಾದ ಪ್ರಾಣಿ ಇಲ್ಲ ಎನ್ನುತ್ತಾರೆ. ಸಾಕಿದ ಯಜಮಾನನ ಮೇಲೆ‌ ಆ ಪ್ರಾಣಿಗೆ ಎಲ್ಲಿಲ್ಲದ ಪ್ರೀತಿ. ಅದರಲ್ಲೂ ಪುಟ್ಟ ಮಕ್ಕಳಿಗಂತೂ ನಾಯಿ ಅಂದರೆ ಪ್ರಾಣ.

ಇಂತಹದೊಂದು ಅದ್ಭುತ ಕಥೆಯುಳ್ಳ ನೂತನ ಚಿತ್ರವೊಂದು ಪ್ರೊಡಕ್ಷನ್ಸ್ ನಂ 2 ಹೆಸರಿನಲ್ಲಿ ಆರಂಭವಾಗಲಿದೆ. ಅಂಗವೈಕಲ್ಯವಿರುವ ಬಾಲಕಿ ಹಾಗೂ ನಾಯಿಯೊಂದರ ನಡುವಿನ ಮಧುರ ಬಾಂಧವ್ಯದ ಸುತ್ತ ಈ ಚಿತ್ರದ ಕಥೆ ಹೆಣೆಯಲಾಗಿದೆ.WhatsApp Image 2022 06 08 at 5.49.33 PM

ಮಾಧವ ಈ ಚಿತ್ರದ ನಾಯಕರಾಗಿ ನಟಿಸುತ್ತಿದ್ದಾರೆ. ಸ್ವಪ್ನ ಶೆಟ್ಟಿಗಾರ ಈ ಚಿತ್ರದ ನಾಯಕಿ. ಇತ್ತೀಚೆಗೆ ನಾಯಕ ಮಾಧವ ಅವರ ಹುಟ್ಟುಹಬ್ಬ ನಡೆದಿತ್ತು. ಆ ಸಂದರ್ಭದಲ್ಲಿ ನಾಯಕ ಮಾಧವ ಅವರಿಗೆ ಶುಭಕೋರುವ ಪೋಸ್ಟರ್ ಸಹ ಬಿಡುಗಡೆಯಾಗಿದೆ.WhatsApp Image 2022 06 08 at 5.49.34 PM

ಶರಣಪ್ಪ ಗೌರಮ್ಮ ಅವರು ಈ ಚಿತ್ರ ನಿರ್ಮಾಣ ಮಾಡುತ್ತಿದ್ದಾರೆ. ಖ್ಯಾತ ಸಾಹಿತಿ ಗೌಸ್ ಫಿರ್ ನಿರ್ದೇಶಿಸುತ್ತಿರುವ ಇನ್ನೂ ಹೆಸರಿಡದ ಚಿತ್ರವನ್ನು ಕೂಡ ಶರಣಪ್ಪ ಗೌರಮ್ಮ ಅವರು ಪಾಲುದಾರಿಕೆಯಲ್ಲಿ ನಿರ್ಮಿಸುತ್ತಿದ್ದಾರೆ. ಇದು ಅವರ ನಿರ್ಮಾಣದ ಎರಡನೇ ಚಿತ್ರ.

ಕಿಕ್ ಬಾಕ್ಸಿಂಗ್ ನಲ್ಲಿ ಅಂತರರಾಷ್ಟ್ರೀಯ ಮಟ್ಟದಲ್ಲಿ ಹೆಸರು ಮಾಡಿರುವ ನಿರ್ಮಾಪಕ ಶರಣಪ್ಪ ಗೌರಮ್ಮ ಅವರಿಗೆ ಸಿನಿರಂಗ ಹೊಸತು.WhatsApp Image 2022 06 08 at 5.49.34 PM 3

ನಿರ್ಮಾಪಕ ಶರಣಪ್ಪ ಅವರ ಪುತ್ರಿ ಬೇಬಿ ಪ್ರಕೃತಿ ಈ ಚಿತ್ರದ ಪ್ರಮುಖ ಪಾತ್ರಧಾರಿ. ಈಕೆ ಕೂಡ ಕಿಕ್ ಬಾಕ್ಸಿಂಗ್ ನಲ್ಲಿ ಚಿಕ್ಕ ವಯಸ್ಸಿಗೆ ದೊಡ್ಡ ಹೆಸರು‌ ಮಾಡಿದ್ದಾರೆ. ಅಂಗವೈಕಲ್ಯವಿರುವ ಹುಡುಗಿಯಾಗಿ ಪ್ರಕೃತಿ ಈ ಚಿತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಅಷ್ಟೇ ಮುಖ್ಯಪಾತ್ರದಲ್ಲಿ ರಾಕಿ(ನಾಯಿ) ಕೂಡ ಅಭಿನಯಿಸಲಿದೆ.WhatsApp Image 2022 06 08 at 5.49.33 PM 1

ವಿಶ್ವಾಸ್ ಕೃಷ್ಣ ಈ‌ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ. ಇದು ಅವರಿಗೆ ಚೊಚ್ಚಲ ಚಿತ್ರ. ಮೂರು ಹಾಡುಗಳಿರುವ ಈ ಚಿತ್ರಕ್ಕೆ ಅನಿಲ್ ಸಿ.ಜೆ ಸಂಗೀತ ನೀಡುತ್ತಿದ್ದಾರೆ. ಕೀರ್ತನ್ ಪೂಜಾರಿ ಛಾಯಾಗ್ರಾಹಕರಾಗಿ ಕಾರ್ಯ ನಿರ್ವಹಿಸಲಿದ್ದಾರೆ.WhatsApp Image 2022 06 08 at 5.49.34 PM 2

ಇದೇ ತಿಂಗಳ ಕೊನೆಯಲ್ಲಿ ಚಿತ್ರದ ಮುಹೂರ್ತ ಸಮಾರಂಭ ನೆರವೇರಲಿದೆ. ಸದ್ಯದಲ್ಲೇ ಶೀರ್ಷಿಕೆ ಅನಾವರಣವಾಗಲಿದೆ. ಶಿವಮೊಗ್ಗ ಹಾಗೂ ಮಲೆನಾಡಿನ ಸುಂದರ ಪರಿಸರದಲ್ಲಿ ಚಿತ್ರೀಕರಣ ನಡೆಯಲಿದೆ‌.

You Will  Love   Like  These

Chitra Suddhi
daali uttarakhand kannada movie

ಡಾಲಿ ಧನಂಜಯ “ಉತ್ತರ ಕಾಂಡ”ದ ನಾಯಕ.

ವಿಜಯ್ ಕಿರಗಂದೂರು ಅರ್ಪಿಸುವ, ಕೆ.ಆರ್.ಜಿ ಸ್ಟುಡಿಯೋಸ್ ಲಾಂಛನದಲ್ಲಿ ಕಾರ್ತಿಕ್ ಹಾಗೂ ಯೋಗಿ ಜಿ ರಾಜ್ ನಿರ್ಮಿಸುತ್ತಿರುವ ” ಉತ್ತರಕಾಂಡ” ಚಿತ್ರದ ನಾಯಕನಾಗಿ ಡಾಲಿ ಧನಂಜಯ ಅಭಿನಯಿಸುತ್ತಿದ್ದಾರೆ. ಈ ಹಿಂದೆ ಕೆ.ಆರ್.ಜಿ ಸ್ಟುಡಿಯೋಸ್ ನಿರ್ಮಾಣದಲ್ಲಿ ಡಾಲಿ ಧನಂಜಯ ನಾಯಕನಾಗಿ ನಟಿಸಿದ್ದ “ರತ್ನನ ಪ್ರಪಂಚ” ಚಿತ್ರ ಸಹ ಪ್ರಚಂಡ ಯಶಸ್ಸು ಕಂಡಿತ್ತು.…

Chitra Suddhi
In the movie "December 24". Boys from Kunigal Taluk

“ಡಿಸೆಂಬರ್ 24” ಚಿತ್ರದಲ್ಲಿ ಹಾವಳಿ ಕೊಡೋಕೆ ಕುಣಿಗಲ್...

“ಡಿಸೆಂಬರ್ 24” ಚಿತ್ರದಲ್ಲಿ ಅನಿಲ್ ಗೌಡ್ರು, ಕುಮಾರ್ ಗೌಡ್ರು ಹಾಗೂ ಬೆಟ್ಟೇಗೌಡ್ರು ಖಡಕ್ ಖಳನಾಯಕರಾಗಿ ಅಭಿನಯಿಸಿದ್ದು, ಈ ಚಿತ್ರದಲ್ಲಿ ಇವರು ತುಂಬಾ ವಿಭಿನ್ನವಾದ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಈ ಚಿತ್ರದಲ್ಲಿ ನಾಯಕರ ಪಾತ್ರ ಎಷ್ಟು ಮುಖ್ಯನೋ ಹಾಗೆ ಖಳನಾಯಕರ ಪಾತ್ರಗಳು ಅಷ್ಟೇ ಮುಖ್ಯ. ಅದರಂತೆ ಖಳನಾಯಕರ ಆರ್ಭಟ ಜೋರಾಗೆ ಇರಲಿದೆ…

News
VXplore Banking & Competitive Exams Coaching Academy

ಅದು ಕೆಂಗೇರಿಯಲ್ಲಿ ಹೊಸದಾಗಿ ಶುರುವಾದ ಸ್ಪರ್ಧಾತ್ಮಕ ಪರೀಕ್ಷೆಗಳ...

ಸಾವಿರಾರು ವಿದ್ಯಾರ್ಥಿಗಳಿಗೆ ಭವಿಷ್ಯ ಕಟ್ಟಿಕೊಟ್ಟ ಪ್ರತಿಷ್ಠಿತ ವಿದ್ಯಾ ಸಂಸ್ಥೆಯ ನಿರ್ದೇಶಕರಾದ  ಚಂದ್ರ ಮೂರ್ತಿ ಯವರು ಇದರ ಸಂಸ್ಥಾಪಕರು. ಉತ್ತಮ ಮಟ್ಟದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಭೇತಿ ನೀಡುವ ಕಾರಣದಿಂದ ಈ VXplore Banking & Competitive Exams Coaching Academy. ತರಭೇತಿ ಕೇಂದ್ರವನ್ನು ತೆರೆದಿದ್ದಾರೆ. ಅದು ಆಕಾಕ್ಷಿ ವಿಧ್ಯಾರ್ಥಿಗಳಿಗೆ ಅವರ…

Chitra Suddhi
i am pregnant kannada movie censored ua

“ಐ ಆಮ್ ಪ್ರೆಗ್ನೆಂಟ್” ಚಿತ್ರವು ಸೆನ್ಸಾರ್ ಮಂಡಳಿಯಿಂದ...

“ಅನು ಸಿನಿಮಾಸ್” ಬ್ಯಾನರ್ ಅಡಿಯಲ್ಲಿ ತಯಾರಾಗುತ್ತಿರುವ “ಐ ಆಮ್ ಪ್ರೆಗ್ನೆಂಟ್” ಎಂಬ ಚಿತ್ರವನ್ನು ಸೆನ್ಸಾರ್ ಮಂಡಳಿಯಿಂದ ಉತ್ತಮ ಪ್ರತಿಕ್ರಿಯೆ ಪಡೆದಿದೆ . ಕೆಲವೇ ದಿನಗಳಲ್ಲಿ ಚಿತ್ರಮಂದಿರಕ್ಕೆ ಲಗ್ಗೆಯಿಡಲು ಚಿತ್ರತಂಡ ಎಲ್ಲ ತಯಾರಿ ಮಾಡಿಕೊಳ್ಳುತ್ತಿದ್ದಾರೆ . ಇದರಲ್ಲಿ ನುರಿತ ಕಲಾವಿದರು ಹಾಗೂ ನುರಿತ ತಂತ್ರಜ್ಞರು ಕೂಡ ಇದಕ್ಕೆ ಉತ್ತಮ ಬೆಂಬಲವನ್ನು…

Chitra Suddhi
90 bidi manig nadi song release

ನಾಳೆಯಿಂದ ನೈಂಟಿ ನಶೆ!

ಹಿರಿಯ ಹಾಸ್ಯ ನಟ ಬಿರಾದಾರ್ ಅಭಿನಯದ ಐನೂರನೇ ಚಿತ್ರ ಎಂಬ ಹಣೆಪಟ್ಟಿ ಹೊತ್ತುಕೊಂಡು ಆರಂಭದಿಂದಲೇ ಭರ್ಜರಿ ಸದ್ದು ಮಾಡುತ್ತಲೇ ಬಂದ ಚಿತ್ರ ’90 ಬಿಡಿ ಮನೀಗ್ ನಡಿ’. ಉತ್ತರ ಕರ್ನಾಟಕ ಶೈಲಿಯ ಕಾಮಿಡಿ ಕ್ರೈಂ ಥ್ರಿಲ್ಲರ್ ಕಥೆ ಎನ್ನುತ್ತಾ, ‘ಟೀಸರ್’ ಮೂಲಕ ಚಿತ್ರ ಭರವಸೆ ಮೂಡಿಸಿತ್ತು. ಇದೀಗ ಚಿತ್ರತಂಡ…