ಬೆಳಕಿನ ಹಬ್ಬಕ್ಕೆ ಅಮ್ಮ – ಮಗಳ ಭರ್ಜರಿ ಫೋಟೊ ಶೂಟ್ .. Malashree Aradhana Diwali
ನಾಡಿನೆಲ್ಲೆಡೆ ದೀಪಾವಳಿ ಸಂಭ್ರಮ. ಬೆಳಕಿನ ಹಬ್ಬದ ಸಂಭ್ರಮ ಹಿರಿಯ ನಟಿ ಮಾಲಾಶ್ರೀ ಅವರ ಮನೆಯಲ್ಲಿ ಈ ಬಾರಿ ಕೊಂಚ ಹೆಚ್ಚ ಎನ್ನಬಹುದು. ಹಬ್ಬದ ಸಂಭ್ರಮವನ್ನು ಸಂಭ್ರಮಿಸಲು ಮಾಲಾಶ್ರೀ ಅವರು ಮಗಳು ಆರಾಧನಾ ಜೊತೆ ಹೊಸ ಲುಕ್ ನಲ್ಲಿ ಮಿಂಚಿದ್ದಾರೆ. ಅಮ್ಮ – ಮಗಳು ನೂತನ ರೀತಿಯಲ್ಲಿ ಫೋಟೊ ಶೂಟ್ ಮಾಡಿಸಿಕೊಂಡಿದ್ದಾರೆ.
ದೀಪಾವಳಿ ಹಬ್ಬದ ಸಂದರ್ಭದಲ್ಲಿ ಈ ಫೋಟೊ ಶೂಟ್ ಮಾಡಿಸಿಕೊಂಡಿದ್ದೇವೆ. ನಾಡಿನ ಸಮಸ್ತ ಜನತೆಗೆ ದೀಪಾವಳಿ ಶುಭಾಶಯ ತಿಳಿಸುತ್ತೇನೆ. ಬಹಳ ವರ್ಷಗಳ ನಂತರ ನಾನು ಫೋಟೊ ಶೂಟ್ ಮಾಡಿಸಿಕೊಂಡಿದ್ದೀನಿ. ಮಗಳ ಜೊತೆಗೆ ಫೋಟೊ ಶೂಟ್ ಮಾಡಿಸಿಕೊಂಡಿರುವುದು ಹೆಚ್ಚು ಖುಷಿಯಾಗಿದೆ. ಈ ವರ್ಷ ನನ್ನ ಮಗಳು “ಕಾಟೇರ” ಚಿತ್ರದ ಮೂಲಕ ಚಿತ್ರರಂಗ ಪ್ರವೇಶಿಸಿದ್ದಾಳೆ. ನನಗೆ ತಾವು ನೀಡಿರುವ ಪ್ರೋತ್ಸಾಹ ನನ್ನ ಮಗಳಿಗೂ ನೀಡಿ ಎನ್ನುತ್ತಾರೆ ನಟಿ ಮಾಲಾಶ್ರೀ.