ಮನಸ್ಸು ಮತ್ತು ನಗು = ಮನಸ್ಮಿತ

ಹೊಸಬರೇ ಸೇರಿಕೊಂಡು ಸಿದ್ದಪಡಿಸಿರುವ ’ಮನಸ್ಮಿತ’ ಚಿತ್ರವನ್ನು ಅಪ್ಪಣ್ಣಸಂತೋಷ್ ರಚಿಸಿ ನಿರ್ದೇಶನ ಮಾಡಿ, ತಾಯಿ ಸೀತಮ್ಮ.ವಿ.ಟಿ ಹೆಸರಿನೊಂದಿಗೆ ಜಮುನ ಪ್ರೊಡಕ್ಷನ್ಸ್ ಅಡಿಯಲ್ಲಿ ನಿರ್ಮಾಣ ಮಾಡಿದ್ದಾರೆ. ಸಹ ನಿರ್ಮಾಪಕರಾಗಿ ದೀಪಿಕಾ.ವಿ.ಎ. ಇದ್ದಾರೆ.WhatsApp Image 2022 05 20 at 10.02.53 AM

ನಿರ್ದೇಶಕರು ಒಮ್ಮೆ ಹೊರಗೆ ಹೋಗಿದ್ದಾಗ ಪುಸ್ತಕವನ್ನು ಓದಿ, ಅದರಿಂದ ಪ್ರೇರಣೆಗೊಂಡು ಕಥೆಯನ್ನು ಬರೆದು, ಅದನ್ನು ಚಿತ್ರರೂಪಕ್ಕೆ ತಂದಿದ್ದಾರೆ. ಮ್ಯೂಸಿಕಲ್ ರೋಮ್ಯಾಂಟಿಕ್ ಥ್ರಿಲ್ಲರ್ ವಿಭಾಗದಲ್ಲಿ ಸಂಗೀತದ ನಾನಾ ಮಜಲುಗಳು ಹಾಗೂ ಪ್ರೇಮ ಕಥೆಯು ಬೆರತಿದ್ದು, ಎರಡು ಕಾಲಘಟ್ಟದಲ್ಲಿ ನಡೆಯುತ್ತದೆ. ಹುಡುಗಿಯ ಪ್ರೀತಿಯನ್ನು ಪಡೆಯಲು ಹೇಗೆ ಸಮರ್ಪಿಸಿಕೊಳ್ಳುತ್ತಾನೆ.WhatsApp Image 2022 05 20 at 10.02.54 AM 1

ಕುಟುಂಬದಲ್ಲಿ ಆದ ನೋವು, ಕೆಟ್ಟದಾಗಿರುವುದನ್ನು ಹೋಗಲಾಡಿಸಲು ಯಾವ ರೀತಿ ಹೋರಾಡುತ್ತಾನೆ ಎಂಬುದನ್ನು ಮನರಂಜನಾತ್ಮಕವಾಗಿ ತೋರಿಸಲಾಗಿದೆ. ಸೆನ್ಸಾರ್‌ನವರು ಪ್ರಶಂಸೆ ವ್ಯಕ್ತಪಡಿಸಿದ್ದು ಅಲ್ಲದೆ ’ಮನಮಂದಿರದಿ ನೆಲೆಸಿರುವೆ’ ಮತ್ತು ’ಶಿವನ’ ಕುರಿತ ಹಾಡು ಚೆನ್ನಾಗಿ ಮೂಡಿಬಂದಿರುವುದರಿಂದ ಎರಡು ಬಾರಿ ವೀಕ್ಷಿಸಿದ್ದಾರಂತೆ.WhatsApp Image 2022 05 20 at 10.02.54 AM

ಕಾಲೇಜು ಹುಡುಗನಾಗಿ ಮಡಕೇರಿ ಮೂಲದ ಚರಣ್‌ಗೌಡ ನಾಯಕ. ಹಲವು ಶೇಡ್ಸ್‌ಗಳಲ್ಲಿ ಕಾಣಿಸಿಕೊಳ್ಳುವ ಬೆಂಗಳೂರಿನ ಸಂಜನಾದಾಸ್ ನಾಯಕಿ. ಗಾಯಕನಾಗಿ ಬಾಲಿವುಡ್‌ನ ಅತುಲ್‌ಕುಲಕರ್ಣಿ, ನೃತ್ಯಗಾರ್ತಿಯಾಗಿ ಪಲ್ಲವಿಪುರೋಹಿತ್, ಮನೆಹಾಳು ಮಾಡುವ ರಾಜೇಂದ್ರಕಾರಂತ್, ನಾಯಕನ ತಾಯಿಯಾಗಿ ಶಿಲ್ಪ, ಉಳಿದಂತೆ ಸುಚೇಂದ್ರಪ್ರಸಾದ್, ಮೂಗುಸುರೇಶ್, ಕರಿಸುಬ್ಬು, ವೀಣಾಪೊನ್ನಪ್ಪ, ಸೌಭಾಗ್ಯ, ಪ್ರದೀಪ್‌ಶಾಸ್ತ್ರೀ, ಪ್ರದೀಪ್‌ಪೂಜಾರಿ ನಟಿಸಿದ್ದಾರೆ.WhatsApp Image 2022 05 20 at 10.02.56 AM

ಕೆ.ಕಲ್ಯಾಣ್ ಬರೆದಿರುವ ನಾಲ್ಕು ಹಾಡುಗಳಿಗೆ ಕ್ಲಾಸಿಕಲ್ ಸಂಗೀತವನ್ನು ಒದಗಿಸಿರುವುದು ಹರಿಕಾವ್ಯ. ಈ ಪೈಕಿ ದೇವರ ಹಾಡಿಗೆ ಶಂಕರ್‌ಮಹದೇವನ್ ಧ್ವನಿಯಾಗಿರುವುದು ವಿಶೇಷ. ಛಾಯಾಗ್ರಹಣ ಕೆ.ಎಸ್.ಚಂದ್ರಶೇಖರ್, ಸಂಕಲನ ಮಧುತುಂಬಕೆರೆ, ನೃತ್ಯ ಕಲೈ, ಸಾಹಸ ಕೌರವವೆಂಕಟೇಶ್ ಚಿತ್ರಕ್ಕಿದೆ. ಬೆಂಗಳೂರು, ಮರಳವಾಡಿ, ಕೂರ್ಗ್‌ನ ಸುಂದರ ತಾಣಗಳಲ್ಲಿ ಚಿತ್ರೀಕರಣ ನಡೆಸಲಾಗಿದೆ. A2 ಮ್ಯೂಸಿಕ್ ಹಾಡುಗಳ ಹಕ್ಕುಗಳನ್ನು ಪಡೆದುಕೊಂಡಿದೆ.WhatsApp Image 2022 05 20 at 10.02.55 AM

You Will  Love   Like  These

Chitra Suddhi
daali uttarakhand kannada movie

ಡಾಲಿ ಧನಂಜಯ “ಉತ್ತರ ಕಾಂಡ”ದ ನಾಯಕ.

ವಿಜಯ್ ಕಿರಗಂದೂರು ಅರ್ಪಿಸುವ, ಕೆ.ಆರ್.ಜಿ ಸ್ಟುಡಿಯೋಸ್ ಲಾಂಛನದಲ್ಲಿ ಕಾರ್ತಿಕ್ ಹಾಗೂ ಯೋಗಿ ಜಿ ರಾಜ್ ನಿರ್ಮಿಸುತ್ತಿರುವ ” ಉತ್ತರಕಾಂಡ” ಚಿತ್ರದ ನಾಯಕನಾಗಿ ಡಾಲಿ ಧನಂಜಯ ಅಭಿನಯಿಸುತ್ತಿದ್ದಾರೆ. ಈ ಹಿಂದೆ ಕೆ.ಆರ್.ಜಿ ಸ್ಟುಡಿಯೋಸ್ ನಿರ್ಮಾಣದಲ್ಲಿ ಡಾಲಿ ಧನಂಜಯ ನಾಯಕನಾಗಿ ನಟಿಸಿದ್ದ “ರತ್ನನ ಪ್ರಪಂಚ” ಚಿತ್ರ ಸಹ ಪ್ರಚಂಡ ಯಶಸ್ಸು ಕಂಡಿತ್ತು.…

Chitra Suddhi
In the movie "December 24". Boys from Kunigal Taluk

“ಡಿಸೆಂಬರ್ 24” ಚಿತ್ರದಲ್ಲಿ ಹಾವಳಿ ಕೊಡೋಕೆ ಕುಣಿಗಲ್...

“ಡಿಸೆಂಬರ್ 24” ಚಿತ್ರದಲ್ಲಿ ಅನಿಲ್ ಗೌಡ್ರು, ಕುಮಾರ್ ಗೌಡ್ರು ಹಾಗೂ ಬೆಟ್ಟೇಗೌಡ್ರು ಖಡಕ್ ಖಳನಾಯಕರಾಗಿ ಅಭಿನಯಿಸಿದ್ದು, ಈ ಚಿತ್ರದಲ್ಲಿ ಇವರು ತುಂಬಾ ವಿಭಿನ್ನವಾದ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಈ ಚಿತ್ರದಲ್ಲಿ ನಾಯಕರ ಪಾತ್ರ ಎಷ್ಟು ಮುಖ್ಯನೋ ಹಾಗೆ ಖಳನಾಯಕರ ಪಾತ್ರಗಳು ಅಷ್ಟೇ ಮುಖ್ಯ. ಅದರಂತೆ ಖಳನಾಯಕರ ಆರ್ಭಟ ಜೋರಾಗೆ ಇರಲಿದೆ…

News
VXplore Banking & Competitive Exams Coaching Academy

ಅದು ಕೆಂಗೇರಿಯಲ್ಲಿ ಹೊಸದಾಗಿ ಶುರುವಾದ ಸ್ಪರ್ಧಾತ್ಮಕ ಪರೀಕ್ಷೆಗಳ...

ಸಾವಿರಾರು ವಿದ್ಯಾರ್ಥಿಗಳಿಗೆ ಭವಿಷ್ಯ ಕಟ್ಟಿಕೊಟ್ಟ ಪ್ರತಿಷ್ಠಿತ ವಿದ್ಯಾ ಸಂಸ್ಥೆಯ ನಿರ್ದೇಶಕರಾದ  ಚಂದ್ರ ಮೂರ್ತಿ ಯವರು ಇದರ ಸಂಸ್ಥಾಪಕರು. ಉತ್ತಮ ಮಟ್ಟದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಭೇತಿ ನೀಡುವ ಕಾರಣದಿಂದ ಈ VXplore Banking & Competitive Exams Coaching Academy. ತರಭೇತಿ ಕೇಂದ್ರವನ್ನು ತೆರೆದಿದ್ದಾರೆ. ಅದು ಆಕಾಕ್ಷಿ ವಿಧ್ಯಾರ್ಥಿಗಳಿಗೆ ಅವರ…

Chitra Suddhi
i am pregnant kannada movie censored ua

“ಐ ಆಮ್ ಪ್ರೆಗ್ನೆಂಟ್” ಚಿತ್ರವು ಸೆನ್ಸಾರ್ ಮಂಡಳಿಯಿಂದ...

“ಅನು ಸಿನಿಮಾಸ್” ಬ್ಯಾನರ್ ಅಡಿಯಲ್ಲಿ ತಯಾರಾಗುತ್ತಿರುವ “ಐ ಆಮ್ ಪ್ರೆಗ್ನೆಂಟ್” ಎಂಬ ಚಿತ್ರವನ್ನು ಸೆನ್ಸಾರ್ ಮಂಡಳಿಯಿಂದ ಉತ್ತಮ ಪ್ರತಿಕ್ರಿಯೆ ಪಡೆದಿದೆ . ಕೆಲವೇ ದಿನಗಳಲ್ಲಿ ಚಿತ್ರಮಂದಿರಕ್ಕೆ ಲಗ್ಗೆಯಿಡಲು ಚಿತ್ರತಂಡ ಎಲ್ಲ ತಯಾರಿ ಮಾಡಿಕೊಳ್ಳುತ್ತಿದ್ದಾರೆ . ಇದರಲ್ಲಿ ನುರಿತ ಕಲಾವಿದರು ಹಾಗೂ ನುರಿತ ತಂತ್ರಜ್ಞರು ಕೂಡ ಇದಕ್ಕೆ ಉತ್ತಮ ಬೆಂಬಲವನ್ನು…

Chitra Suddhi
90 bidi manig nadi song release

ನಾಳೆಯಿಂದ ನೈಂಟಿ ನಶೆ!

ಹಿರಿಯ ಹಾಸ್ಯ ನಟ ಬಿರಾದಾರ್ ಅಭಿನಯದ ಐನೂರನೇ ಚಿತ್ರ ಎಂಬ ಹಣೆಪಟ್ಟಿ ಹೊತ್ತುಕೊಂಡು ಆರಂಭದಿಂದಲೇ ಭರ್ಜರಿ ಸದ್ದು ಮಾಡುತ್ತಲೇ ಬಂದ ಚಿತ್ರ ’90 ಬಿಡಿ ಮನೀಗ್ ನಡಿ’. ಉತ್ತರ ಕರ್ನಾಟಕ ಶೈಲಿಯ ಕಾಮಿಡಿ ಕ್ರೈಂ ಥ್ರಿಲ್ಲರ್ ಕಥೆ ಎನ್ನುತ್ತಾ, ‘ಟೀಸರ್’ ಮೂಲಕ ಚಿತ್ರ ಭರವಸೆ ಮೂಡಿಸಿತ್ತು. ಇದೀಗ ಚಿತ್ರತಂಡ…