ರಿಷಭ್ ಶೆಟ್ಟಿ – ಭಾ.ಮ ಹರೀಶ್ ಬಿಡುಗಡೆ ಮಾಡಿದರು “ಮಾಂಕ್ ದಿ ಯಂಗ್” ಚಿತ್ರದ ಪೋಸ್ಟರ್.

mank the young kannada movie

ನೂತನ ತಂಡದವರು ಸೇರಿ ನಿರ್ಮಿಸುತ್ತಿರುವ “ಮಾಂಕ್ ದಿ ಯಂಗ್” ಚಿತ್ರದ ಪೋಸ್ಟರ್ ಇತ್ತೀಚೆಗೆ ಬಿಡುಗಡೆಯಾಯಿತು. ಖ್ಯಾತ ನಿರ್ದೇಶಕ – ನಟ ರಿಷಭ್ ಶೆಟ್ಟಿ ಹಾಗೂ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರಾದ ಭಾ.ಮ.ಹರೀಶ್ ಪೋಸ್ಟರ್ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದರು.mank the young kannada movie

“ಮಾಂಕ್ ದಿ ಯಂಗ್” ನನ್ನ ಮೊದಲ ನಿರ್ದೇಶನದ ಚಿತ್ರ. ವಿಂಟೇಜ್, ಫ್ಯಾಂಟಸಿ ಥ್ರಿಲ್ಲರ್ ಕಥಾಹಂದರ ಹೊಂದಿರುವ ಈ ಚಿತ್ರದ ನಾಯಕನಾಗಿ ಸರೋವರ್ ಹಾಗೂ ನಾಯಕಿಯಾಗಿ ಸೌಂದರ್ಯ ಗೌಡ ಅಭಿನಯಿಸಿದ್ದಾರೆ. ಈ ಚಿತ್ರಕ್ಕೆ ಐದು ಜನ ನಿರ್ಮಾಪಕರು. ಐದು ನಿರ್ಮಾಪಕರೂ ಚಿತ್ರದಲ್ಲಿ ಅಭಿನಯಿಸಿರುವುದು ವಿಶೇಷ. ಈಗಾಗಲೇ ಚಿತ್ರೀಕರಣ ಮುಕ್ತಾಯವಾಗಿದೆ. ಪೋಸ್ಟ್ ಪ್ರೊಡಕ್ಷನ್ಸ್‌ ವರ್ಕ್ ಬಿರುಸಿನಿಂದ ಸಾಗಿದೆ. ಪೋಸ್ಟರ್ ಬಿಡುಗಡೆ ಮಾಡಿಕೊಟ್ಟ ರಿಷಭ್ ಶೆಟ್ಟಿ ಹಾಗೂ ಭಾ.ಮ.ಹರೀಶ್ ಅವರಿಗೆ ಧನ್ಯವಾದ ಎಂದರು ನಿರ್ದೇಶಕ ಮಾಸ್ಚಿತ್ ಸೂರ್ಯ.mank the young kannada movie

ನಾನು ಹದಿನೇಳನೇ ವಯಸ್ಸಿನಲ್ಲೇ ಆರ್ಮಿ ಸೇರಿದೆ. ನಲವತ್ತು ವರ್ಷಗಳು ಅಲ್ಲಿ ಸೇವೆ ಸಲ್ಲಿಸಿದ್ದೇನೆ. ಅಲ್ಲಿಂದ ಬಂದ ಮೇಲೆ ನನಗೆ ಚಿತ್ರದಲ್ಲಿ ನಟಿಸುವ ಆಸೆಯಾಯಿತು. ಈ ಹಿಂದೆ ಕೂಡ ಒಂದು ಚಿತ್ರದಲ್ಲಿ ಅಭಿನಯಿಸಿದ್ದೆ. ಇದು ಎರಡನೇ ಚಿತ್ರ. ಈ ಚಿತ್ರದ ಪಾತ್ರ ಕೂಡ ಚೆನ್ನಾಗಿದೆ ಎಂದರು ನಿರ್ಮಾಪಕರಲ್ಲೊಬ್ಬರಾದ ಕರ್ನಲ್ ರಾಜೇಂದ್ರನ್. ನಿರ್ಮಾಪಕರು ಹಾಗೂ ನಟರೂ ಆಗಿರುವ ವಿನಯ್ ಬಾಬು ರೆಡ್ಡಿ, ಲಾಲ್ ಚಂದ್, ಗೋಪಿ ಚಂದ್ ಸಹ ತಮ್ಮ ಪಾತ್ರದ ಬಗ್ಗೆ ಮಾಹಿತಿ ನೀಡಿದರು.mank the young kannada movie

ಎಲ್ಲರು ತಮ್ಮ ಚಿತ್ರವನ್ನು ವಿಭಿನ್ನವಾಗಿ ಮಾಡಿದ್ದೇವೆ ಎನ್ನುತ್ತಾರೆ. ಅದೇ ರೀತಿ ನಾವು ಹೇಳುತ್ತೇವೆ. ಆದರೆ ಸದ್ಯದಲ್ಲೇ ಟ್ರೇಲರ್ ಬಿಡುಗಡೆ ಮಾಡುತ್ತೇವೆ. ಟ್ರೇಲರ್ ನೋಡಿ ನೀವೇ ತೀರ್ಮಾನಿಸಿ. ನಿಜಕ್ಕೂ ಒಳ್ಳೆಯ ಅಡುಗೆ ಎಲ್ಲರಿಗೂ ರುಚಿಸುವ ಹಾಗೆ, ನಮ್ಮ ಚಿತ್ರ ಸಹ ಎಲ್ಲರ ಮನಸ್ಸಿಗೂ ಹತ್ತಿರವಾಗಲಿದೆ ಎಂದರು ಚಿತ್ರದ ನಿರ್ಮಾಪಕ ಹಾಗೂ ನಾಯಕ ಸರೋವರ.mank the young kannada movie

ನಾನು ಹೊಳೆನರಸೀಪುರದ ಹುಡುಗಿ. ನನಗೆ ನಟಿಸುವ ಆಸೆ. ಆದರೆ ಅದಕ್ಕೆ ಮನೆಯವರ ಪ್ರೋತ್ಸಾಹ ಇರಲಿಲ್ಲ. ನಾನು ಸಿವಿಲ್ ಎಂಜಿನಿಯರಿಂಗ್ ಓದಿ ಹೈದರಾಬಾದಿನಲ್ಲಿ ಕೆಲಸ ಮಾಡುತ್ತಿದ್ದೆ‌. ಆದರೆ ನಟನೆಯ ಮೇಲಿನ ಆಸಕ್ತಿಯಿಂದ ಕೆಲಸ ಬಿಟ್ಟು ಬಂದು ಈ ಚಿತ್ರದಲ್ಲಿ ನಟಿಸಿದ್ದೇನೆ. ಇದು ನನ್ನ ಮೊದಲ ಚಿತ್ರ. ರೂಪದರ್ಶಿಯಾಗೂ ಸಾಕಷ್ಟು ಹೆಸರು ‌ಮಾಡಿದ್ದೇನೆ. ಈ ಚಿತ್ರದ ಕಥೆ ಬ್ರಿಟೀಷರ ಕಾಲದಲ್ಲಿ ನಡೆಯುತ್ತದೆ. ಹಾಗಾಗಿ ಈ ಶೀರ್ಷಿಕೆ ಇಟ್ಟಿದ್ದಾರೆ ಎಂದು ನಾಯಕಿ ಸೌಂದರ್ಯ ಗೌಡ ಚಿತ್ರ ಹಾಗೂ ತಮ್ಮ ಪಾತ್ರದ ಬಗ್ಗೆ ಮಾತನಾಡಿದರು.mank the young kannada movie

ಹಿರಿಯ ನಟಿ ಉಷಾ ಭಂಡಾರಿ ಸಹ ತಮ್ಮ ಪಾತ್ರದ ಬಗ್ಗೆ ವಿವರಣೆ ನೀಡಿದರು. ಛಾಯಾಗ್ರಾಹಕ ಕಾರ್ತಿಕ್ ಶರ್ಮ, ಹಿರಿಯ ನಟ ಪ್ರಣಯ ಮೂರ್ತಿ ಸಹ ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

You Will  Love   Like  These

Chitra Suddhi
daali uttarakhand kannada movie

ಡಾಲಿ ಧನಂಜಯ “ಉತ್ತರ ಕಾಂಡ”ದ ನಾಯಕ.

ವಿಜಯ್ ಕಿರಗಂದೂರು ಅರ್ಪಿಸುವ, ಕೆ.ಆರ್.ಜಿ ಸ್ಟುಡಿಯೋಸ್ ಲಾಂಛನದಲ್ಲಿ ಕಾರ್ತಿಕ್ ಹಾಗೂ ಯೋಗಿ ಜಿ ರಾಜ್ ನಿರ್ಮಿಸುತ್ತಿರುವ ” ಉತ್ತರಕಾಂಡ” ಚಿತ್ರದ ನಾಯಕನಾಗಿ ಡಾಲಿ ಧನಂಜಯ ಅಭಿನಯಿಸುತ್ತಿದ್ದಾರೆ. ಈ ಹಿಂದೆ ಕೆ.ಆರ್.ಜಿ ಸ್ಟುಡಿಯೋಸ್ ನಿರ್ಮಾಣದಲ್ಲಿ ಡಾಲಿ ಧನಂಜಯ ನಾಯಕನಾಗಿ ನಟಿಸಿದ್ದ “ರತ್ನನ ಪ್ರಪಂಚ” ಚಿತ್ರ ಸಹ ಪ್ರಚಂಡ ಯಶಸ್ಸು ಕಂಡಿತ್ತು.…

Chitra Suddhi
In the movie "December 24". Boys from Kunigal Taluk

“ಡಿಸೆಂಬರ್ 24” ಚಿತ್ರದಲ್ಲಿ ಹಾವಳಿ ಕೊಡೋಕೆ ಕುಣಿಗಲ್...

“ಡಿಸೆಂಬರ್ 24” ಚಿತ್ರದಲ್ಲಿ ಅನಿಲ್ ಗೌಡ್ರು, ಕುಮಾರ್ ಗೌಡ್ರು ಹಾಗೂ ಬೆಟ್ಟೇಗೌಡ್ರು ಖಡಕ್ ಖಳನಾಯಕರಾಗಿ ಅಭಿನಯಿಸಿದ್ದು, ಈ ಚಿತ್ರದಲ್ಲಿ ಇವರು ತುಂಬಾ ವಿಭಿನ್ನವಾದ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಈ ಚಿತ್ರದಲ್ಲಿ ನಾಯಕರ ಪಾತ್ರ ಎಷ್ಟು ಮುಖ್ಯನೋ ಹಾಗೆ ಖಳನಾಯಕರ ಪಾತ್ರಗಳು ಅಷ್ಟೇ ಮುಖ್ಯ. ಅದರಂತೆ ಖಳನಾಯಕರ ಆರ್ಭಟ ಜೋರಾಗೆ ಇರಲಿದೆ…

News
VXplore Banking & Competitive Exams Coaching Academy

ಅದು ಕೆಂಗೇರಿಯಲ್ಲಿ ಹೊಸದಾಗಿ ಶುರುವಾದ ಸ್ಪರ್ಧಾತ್ಮಕ ಪರೀಕ್ಷೆಗಳ...

ಸಾವಿರಾರು ವಿದ್ಯಾರ್ಥಿಗಳಿಗೆ ಭವಿಷ್ಯ ಕಟ್ಟಿಕೊಟ್ಟ ಪ್ರತಿಷ್ಠಿತ ವಿದ್ಯಾ ಸಂಸ್ಥೆಯ ನಿರ್ದೇಶಕರಾದ  ಚಂದ್ರ ಮೂರ್ತಿ ಯವರು ಇದರ ಸಂಸ್ಥಾಪಕರು. ಉತ್ತಮ ಮಟ್ಟದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಭೇತಿ ನೀಡುವ ಕಾರಣದಿಂದ ಈ VXplore Banking & Competitive Exams Coaching Academy. ತರಭೇತಿ ಕೇಂದ್ರವನ್ನು ತೆರೆದಿದ್ದಾರೆ. ಅದು ಆಕಾಕ್ಷಿ ವಿಧ್ಯಾರ್ಥಿಗಳಿಗೆ ಅವರ…

Chitra Suddhi
i am pregnant kannada movie censored ua

“ಐ ಆಮ್ ಪ್ರೆಗ್ನೆಂಟ್” ಚಿತ್ರವು ಸೆನ್ಸಾರ್ ಮಂಡಳಿಯಿಂದ...

“ಅನು ಸಿನಿಮಾಸ್” ಬ್ಯಾನರ್ ಅಡಿಯಲ್ಲಿ ತಯಾರಾಗುತ್ತಿರುವ “ಐ ಆಮ್ ಪ್ರೆಗ್ನೆಂಟ್” ಎಂಬ ಚಿತ್ರವನ್ನು ಸೆನ್ಸಾರ್ ಮಂಡಳಿಯಿಂದ ಉತ್ತಮ ಪ್ರತಿಕ್ರಿಯೆ ಪಡೆದಿದೆ . ಕೆಲವೇ ದಿನಗಳಲ್ಲಿ ಚಿತ್ರಮಂದಿರಕ್ಕೆ ಲಗ್ಗೆಯಿಡಲು ಚಿತ್ರತಂಡ ಎಲ್ಲ ತಯಾರಿ ಮಾಡಿಕೊಳ್ಳುತ್ತಿದ್ದಾರೆ . ಇದರಲ್ಲಿ ನುರಿತ ಕಲಾವಿದರು ಹಾಗೂ ನುರಿತ ತಂತ್ರಜ್ಞರು ಕೂಡ ಇದಕ್ಕೆ ಉತ್ತಮ ಬೆಂಬಲವನ್ನು…

Chitra Suddhi
90 bidi manig nadi song release

ನಾಳೆಯಿಂದ ನೈಂಟಿ ನಶೆ!

ಹಿರಿಯ ಹಾಸ್ಯ ನಟ ಬಿರಾದಾರ್ ಅಭಿನಯದ ಐನೂರನೇ ಚಿತ್ರ ಎಂಬ ಹಣೆಪಟ್ಟಿ ಹೊತ್ತುಕೊಂಡು ಆರಂಭದಿಂದಲೇ ಭರ್ಜರಿ ಸದ್ದು ಮಾಡುತ್ತಲೇ ಬಂದ ಚಿತ್ರ ’90 ಬಿಡಿ ಮನೀಗ್ ನಡಿ’. ಉತ್ತರ ಕರ್ನಾಟಕ ಶೈಲಿಯ ಕಾಮಿಡಿ ಕ್ರೈಂ ಥ್ರಿಲ್ಲರ್ ಕಥೆ ಎನ್ನುತ್ತಾ, ‘ಟೀಸರ್’ ಮೂಲಕ ಚಿತ್ರ ಭರವಸೆ ಮೂಡಿಸಿತ್ತು. ಇದೀಗ ಚಿತ್ರತಂಡ…