ಸ್ವಾತಂತ್ರ್ಯ ದಿನಕ್ಕೆ ‘19.20.21’ ಹೊಸ ಪೋಸ್ಟರ್ ರಿಲೀಸ್…. ಕ್ಯೂರಿಯಾಸಿಟಿ ಮೂಡಿಸಿದ ಮಂಸೋರೆ ಸಿನಿಮಾ

mansore new movie 19 20 21

ರಾಷ್ಟ್ರ ಪ್ರಶಸ್ತಿ ಪುರಸ್ಕೃತ ನಿರ್ದೇಶಕ ಮಂಸೋರೆ ವಿಭಿನ್ನ ಸಿನಿಮಾಗಳನ್ನು ಚಿತ್ರಪ್ರೇಮಿಗಳ ಮಡಿಲಿಗೆ ಹಾಕುತ್ತಾ ಬರ್ತಿದ್ದಾರೆ. ‘ಹರಿವು’, ‘ನಾತಿಚರಾಮಿ’, ‘ಆ್ಯಕ್ಟ್​-1978’ ಚಿತ್ರಗಳ ಮೂಲಕ ಪ್ರೇಕ್ಷಕರ ಗಮನ ಸೆಳೆದಿರುವ ಅವರು, ಸದ್ಯ ‘19.20.21’ ಸಿನಿಮಾದಲ್ಲಿ ಬ್ಯುಸಿಯಾಗಿದ್ದಾರೆ. 75ನೇ ಸ್ವಾತಂತ್ರ್ಯ ದಿನದ ಅಂಗವಾಗಿ ಚಿತ್ರತಂಡ ವಿಶೇಷವಾದ ಪೋಸ್ಟರ್ ವೊಂದನ್ನು ಬಿಡುಗಡೆ ಮಾಡಿದೆ. ಬಾಯಿಗೆ ಬಟ್ಟೆ ಕಟ್ಟಿರುವ ವ್ಯಕ್ತಿ, ಆತನ ಬೆನ್ನು, ಬಾಯಲ್ಲಿ ರಕ್ತದ ಕಲೆ ಇರುವ ಕೌತುಕ ಮೂಡಿಸುವ ಒಂದು ಪೋಸ್ಟರ್ ಅನ್ನು ಮಂಸೋರೆ ಬಳಗ ಅನಾವರಣ ಮಾಡಿದೆ.mansore

ಜೈ ಭೀಮ್, ಜನಗಣಮನ ಸಿನಿಮಾಗಳ ಮಾದರಿಯಲ್ಲಿ ‘19.20.21’ ನೈಜ ಘಟನೆಯಾಧಾರಿತ ಚಿತ್ರವಾಗಿದ್ದು, ಬಾಲಾಜಿ ಮನೋಹರ್, ಎಂಡಿ ಪಲ್ಲವಿ, ಶೃಂಗ, ಸಂಪತ್ ಮೈತ್ರೇಯ, ಅವಿನಾಶ್, ಕೃಷ್ಣ ಹೆಬ್ಬಾಲೆ ಮುಂತಾದ ತಾರಾಬಳಗ ಚಿತ್ರದಲ್ಲಿದೆ. ‘ಆ್ಯಕ್ಟ್​-1978’ ಸಿನಿಮಾವನ್ನು ನಿರ್ಮಾಣ ಮಾಡಿದ್ದ ದೇವರಾಜ್​ ಈ ಚಿತ್ರಕ್ಕೂ ಬಂಡವಾಳ ಹೂಡಿದ್ದು , ಬಿಂದುಮಾಲಿನಿ ಸಂಗೀತ, ರೋಣದ ಬಕ್ಕೇಶ್ ಹಿನ್ನೆಲೆ ಸಂಗೀತ, ಶಿವು ಬಿಕೆ ಕುಮಾರ್ ಕ್ಯಾಮೆರಾ, ಸುರೇಶ್ ಆರುಮುಗಂ ಸಂಕಲನವಿದ್ದು‌. ಚಿತ್ರಕಥೆಯಲ್ಲಿ ಮಂಸೋರೆ ಜೊತೆಗೆ ವೀರೇಂದ್ರ ಮಲ್ಲಣ್ಣ ಲೇಖನಿ ಹಂಚಿಕೊಂಡಿದ್ದರೆ, ಸಂಭಾಷಣೆಗಳ ಬರವಣಿಗೆಯಲ್ಲಿ ಅವಿನಾಶ್ ಜಿ ಮತ್ತು ವೀರೇಂದ್ರ ಮಲ್ಲಣ್ಣ ತೊಡಗಿಸಿಕೊಂಡಿದ್ದಾರೆ. ಈಗಾಗಲೇ ಚಿತ್ರೀಕರಣ ಮುಗಿಸಿರುವ ತಂಡ, ಈಗ ಸಂಕಲನ ಮುಗಿಸಿ ಮುಂದಿನ ಹಂತದ ಪೋಸ್ಟ್ ಪ್ರೊಡಕ್ಷನ್ ಕೆಲಸಗಳಲ್ಲಿದ್ದಾರೆ.mansore 19 20 21


ನಿರ್ಮಾಣ ಸಂಸ್ಥೆ : ಡಿ ಕ್ರಿಯೇಷನ್ಸ್
ನಿರ್ಮಾಪಕ : ದೇವರಾಜ್
ನಿರ್ದೇಶಕ : ಮಂಸೋರೆ
ಚಿತ್ರಕಥೆ: ಮಂಸೋರೆ ಮತ್ತು ವೀರೇಂದ್ರ ಮಲ್ಲಣ್ಣ
ಸಂಭಾಷಣೆ : ಅವಿನಾಶ್ ಜಿ ಮತ್ತು ವೀರೇಂದ್ರ ಮಲ್ಲಣ್ಣ
ಸಂಗೀತ : ಬಿಂದು ಮಾಲಿನಿ
ಹಿನ್ನಲೆ ಸಂಗೀತ: ರೋಣದ ಬಕ್ಕೇಶ್
ಛಾಯಾಗ್ರಹಣ : ಶಿವು ಬಿ ಕೆ ಕುಮಾರ್
ಸಂಕಲನ : ಸುರೇಶ್ ಆರ್ಮುಗಂ
ಪತ್ರಿಕಾ ಸಂಪರ್ಕ: ಹರೀಶ್ ಅರಸು

You Will  Love   Like  These

Chitra Suddhi
daali uttarakhand kannada movie

ಡಾಲಿ ಧನಂಜಯ “ಉತ್ತರ ಕಾಂಡ”ದ ನಾಯಕ.

ವಿಜಯ್ ಕಿರಗಂದೂರು ಅರ್ಪಿಸುವ, ಕೆ.ಆರ್.ಜಿ ಸ್ಟುಡಿಯೋಸ್ ಲಾಂಛನದಲ್ಲಿ ಕಾರ್ತಿಕ್ ಹಾಗೂ ಯೋಗಿ ಜಿ ರಾಜ್ ನಿರ್ಮಿಸುತ್ತಿರುವ ” ಉತ್ತರಕಾಂಡ” ಚಿತ್ರದ ನಾಯಕನಾಗಿ ಡಾಲಿ ಧನಂಜಯ ಅಭಿನಯಿಸುತ್ತಿದ್ದಾರೆ. ಈ ಹಿಂದೆ ಕೆ.ಆರ್.ಜಿ ಸ್ಟುಡಿಯೋಸ್ ನಿರ್ಮಾಣದಲ್ಲಿ ಡಾಲಿ ಧನಂಜಯ ನಾಯಕನಾಗಿ ನಟಿಸಿದ್ದ “ರತ್ನನ ಪ್ರಪಂಚ” ಚಿತ್ರ ಸಹ ಪ್ರಚಂಡ ಯಶಸ್ಸು ಕಂಡಿತ್ತು.…

Chitra Suddhi
In the movie "December 24". Boys from Kunigal Taluk

“ಡಿಸೆಂಬರ್ 24” ಚಿತ್ರದಲ್ಲಿ ಹಾವಳಿ ಕೊಡೋಕೆ ಕುಣಿಗಲ್...

“ಡಿಸೆಂಬರ್ 24” ಚಿತ್ರದಲ್ಲಿ ಅನಿಲ್ ಗೌಡ್ರು, ಕುಮಾರ್ ಗೌಡ್ರು ಹಾಗೂ ಬೆಟ್ಟೇಗೌಡ್ರು ಖಡಕ್ ಖಳನಾಯಕರಾಗಿ ಅಭಿನಯಿಸಿದ್ದು, ಈ ಚಿತ್ರದಲ್ಲಿ ಇವರು ತುಂಬಾ ವಿಭಿನ್ನವಾದ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಈ ಚಿತ್ರದಲ್ಲಿ ನಾಯಕರ ಪಾತ್ರ ಎಷ್ಟು ಮುಖ್ಯನೋ ಹಾಗೆ ಖಳನಾಯಕರ ಪಾತ್ರಗಳು ಅಷ್ಟೇ ಮುಖ್ಯ. ಅದರಂತೆ ಖಳನಾಯಕರ ಆರ್ಭಟ ಜೋರಾಗೆ ಇರಲಿದೆ…

News
VXplore Banking & Competitive Exams Coaching Academy

ಅದು ಕೆಂಗೇರಿಯಲ್ಲಿ ಹೊಸದಾಗಿ ಶುರುವಾದ ಸ್ಪರ್ಧಾತ್ಮಕ ಪರೀಕ್ಷೆಗಳ...

ಸಾವಿರಾರು ವಿದ್ಯಾರ್ಥಿಗಳಿಗೆ ಭವಿಷ್ಯ ಕಟ್ಟಿಕೊಟ್ಟ ಪ್ರತಿಷ್ಠಿತ ವಿದ್ಯಾ ಸಂಸ್ಥೆಯ ನಿರ್ದೇಶಕರಾದ  ಚಂದ್ರ ಮೂರ್ತಿ ಯವರು ಇದರ ಸಂಸ್ಥಾಪಕರು. ಉತ್ತಮ ಮಟ್ಟದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಭೇತಿ ನೀಡುವ ಕಾರಣದಿಂದ ಈ VXplore Banking & Competitive Exams Coaching Academy. ತರಭೇತಿ ಕೇಂದ್ರವನ್ನು ತೆರೆದಿದ್ದಾರೆ. ಅದು ಆಕಾಕ್ಷಿ ವಿಧ್ಯಾರ್ಥಿಗಳಿಗೆ ಅವರ…

Chitra Suddhi
i am pregnant kannada movie censored ua

“ಐ ಆಮ್ ಪ್ರೆಗ್ನೆಂಟ್” ಚಿತ್ರವು ಸೆನ್ಸಾರ್ ಮಂಡಳಿಯಿಂದ...

“ಅನು ಸಿನಿಮಾಸ್” ಬ್ಯಾನರ್ ಅಡಿಯಲ್ಲಿ ತಯಾರಾಗುತ್ತಿರುವ “ಐ ಆಮ್ ಪ್ರೆಗ್ನೆಂಟ್” ಎಂಬ ಚಿತ್ರವನ್ನು ಸೆನ್ಸಾರ್ ಮಂಡಳಿಯಿಂದ ಉತ್ತಮ ಪ್ರತಿಕ್ರಿಯೆ ಪಡೆದಿದೆ . ಕೆಲವೇ ದಿನಗಳಲ್ಲಿ ಚಿತ್ರಮಂದಿರಕ್ಕೆ ಲಗ್ಗೆಯಿಡಲು ಚಿತ್ರತಂಡ ಎಲ್ಲ ತಯಾರಿ ಮಾಡಿಕೊಳ್ಳುತ್ತಿದ್ದಾರೆ . ಇದರಲ್ಲಿ ನುರಿತ ಕಲಾವಿದರು ಹಾಗೂ ನುರಿತ ತಂತ್ರಜ್ಞರು ಕೂಡ ಇದಕ್ಕೆ ಉತ್ತಮ ಬೆಂಬಲವನ್ನು…

Chitra Suddhi
90 bidi manig nadi song release

ನಾಳೆಯಿಂದ ನೈಂಟಿ ನಶೆ!

ಹಿರಿಯ ಹಾಸ್ಯ ನಟ ಬಿರಾದಾರ್ ಅಭಿನಯದ ಐನೂರನೇ ಚಿತ್ರ ಎಂಬ ಹಣೆಪಟ್ಟಿ ಹೊತ್ತುಕೊಂಡು ಆರಂಭದಿಂದಲೇ ಭರ್ಜರಿ ಸದ್ದು ಮಾಡುತ್ತಲೇ ಬಂದ ಚಿತ್ರ ’90 ಬಿಡಿ ಮನೀಗ್ ನಡಿ’. ಉತ್ತರ ಕರ್ನಾಟಕ ಶೈಲಿಯ ಕಾಮಿಡಿ ಕ್ರೈಂ ಥ್ರಿಲ್ಲರ್ ಕಥೆ ಎನ್ನುತ್ತಾ, ‘ಟೀಸರ್’ ಮೂಲಕ ಚಿತ್ರ ಭರವಸೆ ಮೂಡಿಸಿತ್ತು. ಇದೀಗ ಚಿತ್ರತಂಡ…