ಮಾರಿಗೋಲ್ಡ್ ಟ್ರೈಲರ್ ಬಿಡುಗಡೆ,

Marigold trailer release

ಚಿನ್ನದ ಬಿಸ್ಕತ್ ಮಾರಲು ಹೊರಟ ನಾಲ್ವರು ಹುಡುಗರ ಕಥೆ ಇಟ್ಟುಕೊಂಡು ನಿರ್ಮಾಪಕ ರಘುವರ್ಧನ್ ಅವರು “ಮಾರಿಗೋಲ್ಡ್” ಎಂಬ ಚಿತ್ರವನ್ನು ನಿರ್ಮಿಸಿದ್ದಾರೆ. ಬಿಡುಗಡೆಗೆ ಸಿದ್ದವಿರುವ ಈ ಚಿತ್ರದ ಟ್ರೈಲರ್ ಬಿಡುಗಡೆ ಕಾರ್ಯಕ್ರಮ ನಡೆಯಿತು.Marigold trailer release
ಬಿಗ್ ಬಾಸ್ ಖ್ಯಾತಿಯ ಸಂಗೀತ ಶೃಂಗೇರಿ ಹಾಗೂ ದಿಗಂತ್ ವಿಭಿನ್ನ ಪಾತ್ರದಲ್ಲಿ ಕಾಣಿಸಿಕೊಂಡಿರುವ ಈ ಚಿತ್ರದಲ್ಲಿ ಯಶ್ ಶೆಟ್ಟಿ, ಕಾಕ್ರೋಚ್ ಸುಧೀ ಹೀಗೆ ೪ ಪಾತ್ರಗಳ ಮೇಲೆ ಇಡೀಕಥೆ ಸುತ್ತುತ್ತದೆ. ಸಂಪತ್ ಮೈತ್ರೇಯಾ ವಿಭಿನ್ನ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಈ ಸಂದರ್ಭದಲ್ಲಿ ಮಾತನಾಡಿದ ನಿರ್ಮಾಪಕ ರಘುವರ್ಧನ್, “ಮಾರಿಗೋಲ್ಡ್” ಆಕ್ಷನ್, ಥ್ರಿಲ್ಲರ್ ಜಾನರ್ ಚಿತ್ರ. ಬೆಂಗಳೂರು, ಸಕಲೇಶಪುರ ಸುತ್ತ ಮುತ್ತ ಚಿತ್ರೀಕರಣ ನಡೆಸಿದ್ದೇವೆ ಎಂದು ಹೇಳಿದರು.Marigold trailer release
ನಿರ್ದೇಶಕ ರಾಘವೇಂದ್ರ ಎಂ.ನಾಯ್ಕ್ ಮಾತನಾಡಿ ಈ ಚಿತ್ರ ಆಗಲು ನಿರ್ಮಾಪಕ ರಘುನಂದನ್, ದಿಗಂತ್ ಹಾಗೂ ವಿಜಯ್ ಭರಮಸಾಗರ ಕಾರಣ. ಹಲವು ವರ್ಷಗಳಿಂದ ಜೊತೆಯಾಗಿ ಕೆಲಸ ಮಾಡಿದ ಕಲಾವಿದರೇ ಇದರಲ್ಲಿದ್ದರಿಂದ ಎಲ್ಲೂ ತೊಂದರೆಯಾಗಲಿಲ್ಲ ಎಂದರು.Marigold trailer release
ನಟ ದಿಗಂತ್ ಮಾತನಾಡಿ ನಿರ್ದೇಧಕ ರಘು ಜೊತೆ ಹಿಂದೆಯೇ ಕೆಲಸ ಮಾಡಬೇಕಿತ್ತು. ಚಿತ್ರಕ್ಕಾಗಿ ತುಂಬಾ ಕಷ್ಟಪಟ್ಟಿದ್ದೇವೆ. ಹೊಗೆ ಧೂಳಿನಲ್ಲಿ ಚಿತ್ರೀಕರಣ ಮಾಡಿದ್ದೇವೆ. ಒಮ್ಮೊಮ್ಮೆ ಏಳೆಂಟು ಟೇಕ್ ಆಗುತ್ತಿತ್ತು. ಚಿತ್ರ ನೋಡಿದಾಗ ಯಾಕೆ ಅಷ್ಟೊಂದು ಟೇಕ್ ತೆಗೆದುಕೊಂಡರು ಎನ್ನುವುದು ಗೊತ್ತಾಯಿತು. ನಾನೇನಾ ಆಕ್ಟ್ ಮಾಡಿರುವುದು ಅನ್ನಿಸಿತು. ನನ್ನ ಬೆನ್ನು ನಾನೇ ತಟ್ಟಿಕೊಂಡು ಖುಷಿ ಪಟ್ಟೆ . ನಿರ್ಮಾಪಕರು ತುಂಬಾ ತಿಳಿದುಕೊಂಡಿದ್ದಾರೆ. ಅವರೇ ನಿರ್ದೇಶಕರಾಗಿದ್ದರೂ ಹೊಸ ಪ್ರತಿಭೆಗೆ ಅವಕಾಶ ಕೊಟ್ಟಿದ್ದಾರೆ. ವೀರಸಮರ್ಥ ಒಳ್ಳೇ ಸಾಂಗ್ ಕೊಟ್ಟಿದ್ದಾರೆ ಎಂದರು.Marigold trailer release
ನಟಿ ಸಂಗೀತ ಮಾತನಾಡಿ ಶಾಲೆಯಲ್ಲಿ ಇರುವಾಗ ದಿಗಂತ್ ಮೇಲೆ ಕ್ರಷ್ ಆಗಿತ್ತು. ಅವರ ಜೊತೆ ಫೋಟೋ ತೆಗೆಸಿಕೊಂಡರೆ ಸಾಕು ಅನ್ನಿಸಿತ್ತು. ಈಗ ಅವರ ಜೊತೆ ನಟಿಸಿದ್ದ ಖುಷಿ ಆಗಿದೆ. ಅವರ ಜೊತೆ ಲವ್ ಸ್ಟೋರಿ ಚಿತ್ರ ಮಾಡುವ ಆಸೆ ಇತ್ತು ಆದರೆ ಆಕ್ಷನ್ ಸಿನಿಮಾ ಸಿಕ್ಕಿತ್ತು. ದಿಗಂತ್ ಜೊತೆ ನಟಿಸುತ್ತಿರುವುದಕ್ಕೆ ಖುಷಿ ಇದೆ ಎಂದು ಹೇಳಿಕೊಂಡರು
ಕಲಾವಿದರಾದ ಸಂಪತ್ ಮೈತ್ರೇಯಾ, ಯಶ್ ಶೆಟ್ಟಿ, ಗಣೇಶ್ ರಾವ್ ಕೇಸರ್ ಕರ್, ವಜ್ರಾಂಗ್ ಶೆಟ್ಟಿ, ಮಹಂತೇಶ್ ಹಿರೇಮಠ್ ,ಸಂಗೀತ ನಿರ್ದೇಶಕ ವೀರ್ ಸಮರ್ಥ, ಸಂಭಾಷಣೆಕಾರ ರಘು ನಿಡವಳ್ಳಿ, ಸಾಹಿತಿ ಕವಿರಾಜ್, ಛಾಯಾಗ್ರಾಹಕ ಕೆಎಸ್ ಚಂದ್ರಶೇಖರ್ ಚಿತ್ರದ ಬಗ್ಗೆ ಮಾಹಿತಿ ಹಂಚಿಕೊಂಡರು

You Will  Love   Like  These

Chitra Suddhi
daali uttarakhand kannada movie

ಡಾಲಿ ಧನಂಜಯ “ಉತ್ತರ ಕಾಂಡ”ದ ನಾಯಕ.

ವಿಜಯ್ ಕಿರಗಂದೂರು ಅರ್ಪಿಸುವ, ಕೆ.ಆರ್.ಜಿ ಸ್ಟುಡಿಯೋಸ್ ಲಾಂಛನದಲ್ಲಿ ಕಾರ್ತಿಕ್ ಹಾಗೂ ಯೋಗಿ ಜಿ ರಾಜ್ ನಿರ್ಮಿಸುತ್ತಿರುವ ” ಉತ್ತರಕಾಂಡ” ಚಿತ್ರದ ನಾಯಕನಾಗಿ ಡಾಲಿ ಧನಂಜಯ ಅಭಿನಯಿಸುತ್ತಿದ್ದಾರೆ. ಈ ಹಿಂದೆ ಕೆ.ಆರ್.ಜಿ ಸ್ಟುಡಿಯೋಸ್ ನಿರ್ಮಾಣದಲ್ಲಿ ಡಾಲಿ ಧನಂಜಯ ನಾಯಕನಾಗಿ ನಟಿಸಿದ್ದ “ರತ್ನನ ಪ್ರಪಂಚ” ಚಿತ್ರ ಸಹ ಪ್ರಚಂಡ ಯಶಸ್ಸು ಕಂಡಿತ್ತು.…

Chitra Suddhi
In the movie "December 24". Boys from Kunigal Taluk

“ಡಿಸೆಂಬರ್ 24” ಚಿತ್ರದಲ್ಲಿ ಹಾವಳಿ ಕೊಡೋಕೆ ಕುಣಿಗಲ್...

“ಡಿಸೆಂಬರ್ 24” ಚಿತ್ರದಲ್ಲಿ ಅನಿಲ್ ಗೌಡ್ರು, ಕುಮಾರ್ ಗೌಡ್ರು ಹಾಗೂ ಬೆಟ್ಟೇಗೌಡ್ರು ಖಡಕ್ ಖಳನಾಯಕರಾಗಿ ಅಭಿನಯಿಸಿದ್ದು, ಈ ಚಿತ್ರದಲ್ಲಿ ಇವರು ತುಂಬಾ ವಿಭಿನ್ನವಾದ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಈ ಚಿತ್ರದಲ್ಲಿ ನಾಯಕರ ಪಾತ್ರ ಎಷ್ಟು ಮುಖ್ಯನೋ ಹಾಗೆ ಖಳನಾಯಕರ ಪಾತ್ರಗಳು ಅಷ್ಟೇ ಮುಖ್ಯ. ಅದರಂತೆ ಖಳನಾಯಕರ ಆರ್ಭಟ ಜೋರಾಗೆ ಇರಲಿದೆ…

News
VXplore Banking & Competitive Exams Coaching Academy

ಅದು ಕೆಂಗೇರಿಯಲ್ಲಿ ಹೊಸದಾಗಿ ಶುರುವಾದ ಸ್ಪರ್ಧಾತ್ಮಕ ಪರೀಕ್ಷೆಗಳ...

ಸಾವಿರಾರು ವಿದ್ಯಾರ್ಥಿಗಳಿಗೆ ಭವಿಷ್ಯ ಕಟ್ಟಿಕೊಟ್ಟ ಪ್ರತಿಷ್ಠಿತ ವಿದ್ಯಾ ಸಂಸ್ಥೆಯ ನಿರ್ದೇಶಕರಾದ  ಚಂದ್ರ ಮೂರ್ತಿ ಯವರು ಇದರ ಸಂಸ್ಥಾಪಕರು. ಉತ್ತಮ ಮಟ್ಟದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಭೇತಿ ನೀಡುವ ಕಾರಣದಿಂದ ಈ VXplore Banking & Competitive Exams Coaching Academy. ತರಭೇತಿ ಕೇಂದ್ರವನ್ನು ತೆರೆದಿದ್ದಾರೆ. ಅದು ಆಕಾಕ್ಷಿ ವಿಧ್ಯಾರ್ಥಿಗಳಿಗೆ ಅವರ…

Chitra Suddhi
90 bidi manig nadi song release

ನಾಳೆಯಿಂದ ನೈಂಟಿ ನಶೆ!

ಹಿರಿಯ ಹಾಸ್ಯ ನಟ ಬಿರಾದಾರ್ ಅಭಿನಯದ ಐನೂರನೇ ಚಿತ್ರ ಎಂಬ ಹಣೆಪಟ್ಟಿ ಹೊತ್ತುಕೊಂಡು ಆರಂಭದಿಂದಲೇ ಭರ್ಜರಿ ಸದ್ದು ಮಾಡುತ್ತಲೇ ಬಂದ ಚಿತ್ರ ’90 ಬಿಡಿ ಮನೀಗ್ ನಡಿ’. ಉತ್ತರ ಕರ್ನಾಟಕ ಶೈಲಿಯ ಕಾಮಿಡಿ ಕ್ರೈಂ ಥ್ರಿಲ್ಲರ್ ಕಥೆ ಎನ್ನುತ್ತಾ, ‘ಟೀಸರ್’ ಮೂಲಕ ಚಿತ್ರ ಭರವಸೆ ಮೂಡಿಸಿತ್ತು. ಇದೀಗ ಚಿತ್ರತಂಡ…

Chitra Suddhi
i am pregnant kannada movie censored ua

“ಐ ಆಮ್ ಪ್ರೆಗ್ನೆಂಟ್” ಚಿತ್ರವು ಸೆನ್ಸಾರ್ ಮಂಡಳಿಯಿಂದ...

“ಅನು ಸಿನಿಮಾಸ್” ಬ್ಯಾನರ್ ಅಡಿಯಲ್ಲಿ ತಯಾರಾಗುತ್ತಿರುವ “ಐ ಆಮ್ ಪ್ರೆಗ್ನೆಂಟ್” ಎಂಬ ಚಿತ್ರವನ್ನು ಸೆನ್ಸಾರ್ ಮಂಡಳಿಯಿಂದ ಉತ್ತಮ ಪ್ರತಿಕ್ರಿಯೆ ಪಡೆದಿದೆ . ಕೆಲವೇ ದಿನಗಳಲ್ಲಿ ಚಿತ್ರಮಂದಿರಕ್ಕೆ ಲಗ್ಗೆಯಿಡಲು ಚಿತ್ರತಂಡ ಎಲ್ಲ ತಯಾರಿ ಮಾಡಿಕೊಳ್ಳುತ್ತಿದ್ದಾರೆ . ಇದರಲ್ಲಿ ನುರಿತ ಕಲಾವಿದರು ಹಾಗೂ ನುರಿತ ತಂತ್ರಜ್ಞರು ಕೂಡ ಇದಕ್ಕೆ ಉತ್ತಮ ಬೆಂಬಲವನ್ನು…