ಅಕ್ಟೋಬರ್ 31 ರಿಂದ ಸಿರಿ ಕನ್ನಡ ವಾಹಿನಿಯಲ್ಲಿ ಟಿ.ಎನ್ ಸೀತಾರಾಮ್ ನಿರ್ದೇಶನದ “ಮತ್ತೆ ಮಾಯಾಮೃಗ”.

matte-mayamruga-directed-by-tn-seetharam-to-be-telecast-from-october-31st-in-siri-kannada-channel

ಎರಡು ದಶಕಗಳ ಹಿಂದೆ ಪ್ರಸಾರವಾಗುತ್ತಿದ್ದ ಟಿ.ಎನ್ ಸೀತಾರಾಮ್ ನಿರ್ದೇಶನದ
“ಮಾಯಾಮೃಗ” ಧಾರಾವಾಹಿ ವಿಶ್ವದಾದ್ಯಂತ ಹೆಸರು ಮಾಡಿತ್ತು. ಈಗ ಆ ಧಾರಾವಾಹಿಯ ‌ಮುಂದುವರೆದ ಭಾಗ “ಮತ್ತೆ ಮಾಯಾಮೃಗ” ಎಂಬ ಹೆಸರಿನಿಂದ ಇದೇ ಅಕ್ಟೋಬರ್ 31 ರ ಸೋಮವಾರ ರಾತ್ರಿ 9 ಗಂಟೆಗೆ ಸಿರಿಕನ್ನಡ ವಾಹಿನಿಯಲ್ಲಿ ಪ್ರಸಾರ ಆರಂಭಿಸಲಿದೆ.matte-mayamruga-directed-by-tn-seetharam-to-be-telecast-from-october-31st-in-siri-kannada-channel

ನನ್ನನ್ನು ಸಂಪರ್ಕಿಸಿದ ಸಿರಿ ಕನ್ನಡ ವಾಹಿನಿಯ ಸಂಜಯ್ ಶಿಂಧೆ, ತಮ್ಮ ವಾಹಿನಿಗಾಗಿ ಧಾರಾವಾಹಿಯೊಂದನ್ನು ನಿರ್ದೇಶಿಸುವಂತೆ ಕೇಳಿದರು. ನಾನು‌ “ಮಾಯಾಮೃಗ” ಧಾರಾವಾಹಿ ಮುಂದುವರೆಸೋಣ “ಮತ್ತೆ ಮಾಯಾಮೃಗ” ಹೆಸರಿನಿಂದ ಎಂದು ಹೇಳಿದೆ. ಅವರು ಸಂತೋಷದಿಂದ ಒಪ್ಪಿಕೊಂಡರು. ಆಗ ನಿರ್ದೇಶನ ವಿಭಾಗದಲ್ಲಿ ನಾನು, ಪಿ.ಶೇಷಾದ್ರಿ ಹಾಗೂ ನಾಗೇಂದ್ರ ಶಾ ಇದ್ದೆವು. ಈಗಲೂ ನಾವು ಮೂವರು ಸೇರಿ “ಮತ್ತೆ ಮಾಯಾಮೃಗ” ನಿರ್ದೇಶಿಸುತ್ತಿದ್ದೇವೆ.matte-mayamruga-directed-by-tn-seetharam-to-be-telecast-from-october-31st-in-siri-kannada-channel

ಕಥಾ ವಿಸ್ತರಣೆಯಲ್ಲಿ ನನ್ನ ‌ಮಗಳು ಅಶ್ವಿನಿ ಹಾಗೂ ಪ್ರಹ್ಲಾದ್ ನಮ್ಮೊಂದಿಗಿದ್ದಾರೆ. ೨೩ ವರ್ಷಗಳಲ್ಲಿ ಸಾಕಷ್ಟು ಬದಲಾಗಿದೆ. ನಾನು ಸೇರಿದಂತೆ ಹಲವರಿಗೆ ವಯಸ್ಸಾಗಿದೆ. “ಮಾಯಾಮೃಗ” ದಲ್ಲಿ ಅಭಿನಯಿಸಿದ್ದ ವೈಶಾಲಿ ಕಾಸರವಳ್ಳಿ ಹಾಗೂ ಅನೇಕ ಕಲಾವಿದರು ನಮ್ಮೊಂದಿಗಿಲ್ಲ. ಹಳೆಯ ಕಲಾವಿದರು ಹಾಗೂ ಈಗಿನ ಹೊಸ ಕಲಾವಿದರ ಸಮಾಗಮದಲ್ಲಿ “ಮತ್ತೆ ಮಾಯಾಮೃಗ” ಮೂಡಿಬರಲಿದೆ. “ಬದುಕು ಬದಲಾಗಬಹುದು ಆದರೆ ಭಾವಗಳಲ್ಲ” ಎಂಬ ವಾಕ್ಯದೊಂದಿಗೆ ಎಂದು ಟಿ.ಎನ್ ಸೀತಾರಾಮ್ ವಿವರಣೆ ನೀಡಿದರು.matte-mayamruga-directed-by-tn-seetharam-to-be-telecast-from-october-31st-in-siri-kannada-channel

ಆಗ “ಮಾಯಾಮೃಗ” ಮಾಡುತ್ತಿದ್ದಾಗ ನಮಗೆ ಅಂತ ಪೈಪೋಟಿ ಇರಲಿಲ್ಲ. ಧಾರಾವಾಹಿ ಸಂಖ್ಯೆ ತುಂಬಾ ಕಡಿಮೆ ಇರುತ್ತಿತ್ತು. ಈಗ ಎಲ್ಲಾ ವಾಹಿನಿಗಳಿಂದ ಸುಮಾರು ಅರವತ್ತಕ್ಕೂ ಅಧಿಕ ಧಾರಾವಾಹಿಗಳು ದಿನ ಪ್ರಸಾರವಾಗುತ್ತಿದೆ. ಇವುಗಳ ಮಧ್ಯೆ ನಾವು ಪ್ರೇಕ್ಷಕರನ್ನು ನಮ್ಮ ಧಾರಾವಾಹಿಯತ್ತ ಸೆಳೆಯುವ ದೊಡ್ಡ ಸವಾಲು ನಮ್ಮ ಮುಂದಿದೆ. ಜನ “ಮತ್ತೆ ಮಾಯಾಮೃಗ” ವನ್ನು ಮೆಚ್ಚಿಕೊಳ್ಳುವ ವಿಶ್ವಾಸವೂ ಇದೆ ಎಂದರು ಪಿ.ಶೇಷಾದ್ರಿ.matte-mayamruga-directed-by-tn-seetharam-to-be-telecast-from-october-31st-in-siri-kannada-channel

ನಾಗೇಂದ್ರ ಶಾ ಸಹ ಧಾರಾವಾಹಿ ಕುರಿತು ಮಾತನಾಡಿದರು.

ನಾವು ದುಡ್ಡಿಗಾಗಿ ಈ ಧಾರಾವಾಹಿ ಮಾಡುತ್ತಿಲ್ಲ. ಟಿ.ಎನ್ ಸೀತಾರಾಮ್ ಅವರಂತಹ ಉತ್ತಮ ನಿರ್ದೇಶಕರು ನಮ್ಮ ವಾಹಿನಿಗಾಗಿ ಧಾರಾವಾಹಿ ನಿರ್ದೇಶಿಸುತ್ತಿರುವುದೇ ನಮಗೆ ಹೆಮ್ಮೆ ಎನ್ನುತ್ತಾರೆ ವಾಹಿನಿಯ ಸಂಸ್ಥಾಪಕ ನಿರ್ದೇಶಕರಾದ ಸಂಜಯ್ ಶಿಂಧೆ.
ಸಿರಿ ಕನ್ನಡ ವಾಹಿನಿಯ ಮುಖ್ಯಸ್ಥರಾದ ರಾಜೇಶ್ ರಾಜಘಟ್ಟ‌ ಹಾಗೂ ಧಾರಾವಾಹಿಯಲ್ಲಿ ಅಭಿನಯಿಸುತ್ತಿರುವ ಅನೇಕ ಕಲಾವಿದರು ಪತ್ರಿಕಾಗೋಷ್ಠಿಯಲ್ಲಿದ್ದರು.matte-mayamruga-directed-by-tn-seetharam-to-be-telecast-from-october-31st-in-siri-kannada-channel

You Will  Love   Like  These

Chitra Suddhi
daali uttarakhand kannada movie

ಡಾಲಿ ಧನಂಜಯ “ಉತ್ತರ ಕಾಂಡ”ದ ನಾಯಕ.

ವಿಜಯ್ ಕಿರಗಂದೂರು ಅರ್ಪಿಸುವ, ಕೆ.ಆರ್.ಜಿ ಸ್ಟುಡಿಯೋಸ್ ಲಾಂಛನದಲ್ಲಿ ಕಾರ್ತಿಕ್ ಹಾಗೂ ಯೋಗಿ ಜಿ ರಾಜ್ ನಿರ್ಮಿಸುತ್ತಿರುವ ” ಉತ್ತರಕಾಂಡ” ಚಿತ್ರದ ನಾಯಕನಾಗಿ ಡಾಲಿ ಧನಂಜಯ ಅಭಿನಯಿಸುತ್ತಿದ್ದಾರೆ. ಈ ಹಿಂದೆ ಕೆ.ಆರ್.ಜಿ ಸ್ಟುಡಿಯೋಸ್ ನಿರ್ಮಾಣದಲ್ಲಿ ಡಾಲಿ ಧನಂಜಯ ನಾಯಕನಾಗಿ ನಟಿಸಿದ್ದ “ರತ್ನನ ಪ್ರಪಂಚ” ಚಿತ್ರ ಸಹ ಪ್ರಚಂಡ ಯಶಸ್ಸು ಕಂಡಿತ್ತು.…

Chitra Suddhi
In the movie "December 24". Boys from Kunigal Taluk

“ಡಿಸೆಂಬರ್ 24” ಚಿತ್ರದಲ್ಲಿ ಹಾವಳಿ ಕೊಡೋಕೆ ಕುಣಿಗಲ್...

“ಡಿಸೆಂಬರ್ 24” ಚಿತ್ರದಲ್ಲಿ ಅನಿಲ್ ಗೌಡ್ರು, ಕುಮಾರ್ ಗೌಡ್ರು ಹಾಗೂ ಬೆಟ್ಟೇಗೌಡ್ರು ಖಡಕ್ ಖಳನಾಯಕರಾಗಿ ಅಭಿನಯಿಸಿದ್ದು, ಈ ಚಿತ್ರದಲ್ಲಿ ಇವರು ತುಂಬಾ ವಿಭಿನ್ನವಾದ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಈ ಚಿತ್ರದಲ್ಲಿ ನಾಯಕರ ಪಾತ್ರ ಎಷ್ಟು ಮುಖ್ಯನೋ ಹಾಗೆ ಖಳನಾಯಕರ ಪಾತ್ರಗಳು ಅಷ್ಟೇ ಮುಖ್ಯ. ಅದರಂತೆ ಖಳನಾಯಕರ ಆರ್ಭಟ ಜೋರಾಗೆ ಇರಲಿದೆ…

News
VXplore Banking & Competitive Exams Coaching Academy

ಅದು ಕೆಂಗೇರಿಯಲ್ಲಿ ಹೊಸದಾಗಿ ಶುರುವಾದ ಸ್ಪರ್ಧಾತ್ಮಕ ಪರೀಕ್ಷೆಗಳ...

ಸಾವಿರಾರು ವಿದ್ಯಾರ್ಥಿಗಳಿಗೆ ಭವಿಷ್ಯ ಕಟ್ಟಿಕೊಟ್ಟ ಪ್ರತಿಷ್ಠಿತ ವಿದ್ಯಾ ಸಂಸ್ಥೆಯ ನಿರ್ದೇಶಕರಾದ  ಚಂದ್ರ ಮೂರ್ತಿ ಯವರು ಇದರ ಸಂಸ್ಥಾಪಕರು. ಉತ್ತಮ ಮಟ್ಟದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಭೇತಿ ನೀಡುವ ಕಾರಣದಿಂದ ಈ VXplore Banking & Competitive Exams Coaching Academy. ತರಭೇತಿ ಕೇಂದ್ರವನ್ನು ತೆರೆದಿದ್ದಾರೆ. ಅದು ಆಕಾಕ್ಷಿ ವಿಧ್ಯಾರ್ಥಿಗಳಿಗೆ ಅವರ…

Chitra Suddhi
i am pregnant kannada movie censored ua

“ಐ ಆಮ್ ಪ್ರೆಗ್ನೆಂಟ್” ಚಿತ್ರವು ಸೆನ್ಸಾರ್ ಮಂಡಳಿಯಿಂದ...

“ಅನು ಸಿನಿಮಾಸ್” ಬ್ಯಾನರ್ ಅಡಿಯಲ್ಲಿ ತಯಾರಾಗುತ್ತಿರುವ “ಐ ಆಮ್ ಪ್ರೆಗ್ನೆಂಟ್” ಎಂಬ ಚಿತ್ರವನ್ನು ಸೆನ್ಸಾರ್ ಮಂಡಳಿಯಿಂದ ಉತ್ತಮ ಪ್ರತಿಕ್ರಿಯೆ ಪಡೆದಿದೆ . ಕೆಲವೇ ದಿನಗಳಲ್ಲಿ ಚಿತ್ರಮಂದಿರಕ್ಕೆ ಲಗ್ಗೆಯಿಡಲು ಚಿತ್ರತಂಡ ಎಲ್ಲ ತಯಾರಿ ಮಾಡಿಕೊಳ್ಳುತ್ತಿದ್ದಾರೆ . ಇದರಲ್ಲಿ ನುರಿತ ಕಲಾವಿದರು ಹಾಗೂ ನುರಿತ ತಂತ್ರಜ್ಞರು ಕೂಡ ಇದಕ್ಕೆ ಉತ್ತಮ ಬೆಂಬಲವನ್ನು…

Chitra Suddhi
90 bidi manig nadi song release

ನಾಳೆಯಿಂದ ನೈಂಟಿ ನಶೆ!

ಹಿರಿಯ ಹಾಸ್ಯ ನಟ ಬಿರಾದಾರ್ ಅಭಿನಯದ ಐನೂರನೇ ಚಿತ್ರ ಎಂಬ ಹಣೆಪಟ್ಟಿ ಹೊತ್ತುಕೊಂಡು ಆರಂಭದಿಂದಲೇ ಭರ್ಜರಿ ಸದ್ದು ಮಾಡುತ್ತಲೇ ಬಂದ ಚಿತ್ರ ’90 ಬಿಡಿ ಮನೀಗ್ ನಡಿ’. ಉತ್ತರ ಕರ್ನಾಟಕ ಶೈಲಿಯ ಕಾಮಿಡಿ ಕ್ರೈಂ ಥ್ರಿಲ್ಲರ್ ಕಥೆ ಎನ್ನುತ್ತಾ, ‘ಟೀಸರ್’ ಮೂಲಕ ಚಿತ್ರ ಭರವಸೆ ಮೂಡಿಸಿತ್ತು. ಇದೀಗ ಚಿತ್ರತಂಡ…