ಮಾಯಾನಗರಿಯಲ್ಲಿ ಅನೀಶ್ ಸಂಚಾರ

Mayanagari Anish

ಸದ್ಯದಲ್ಲೇ ಟೀಸರ್ ರಿಲೀಸ್

ಅನೀಶ್ ನಟಿಸಿರುವ, ಶಂಕರ್ ಆರಾಧ್ಯ ನಿರ್ದೇಶನದ ಮಾಯಾನಗರಿ ಸಿನಿಮಾ ಬಿಡುಗಡೆಗೆ ಅಣಿಯಾಗಿದೆ. ಅದಕ್ಕೂ ಮುನ್ನ ಟೀಸರ್ ಮೂಲಕ ಸದ್ದು ಮಾಡಲು ಸಜ್ಜಾಗಿದೆ ಚಿತ್ರತಂಡ. ಈಗಾಗಲೇ ಸೆನ್ಸಾರ್ ಪ್ರಕ್ರಿಯೆ ಮುಗಿಸಿರುವ ಚಿತ್ರತಂಡ, ಯು/ಎ ಅರ್ಹತಾ ಪತ್ರ ಪಡೆದುಕೊಂಡಿದೆ.Mayanagari Anish

ಸಿನಿಮಾ ನಿರ್ದೇಶನದ ಕನಸು ಹೊತ್ತು ಬರುವ ಯುವ ಪ್ರತಿಭೆಯ ಪಾತ್ರದಲ್ಲಿ ಅನೀಶ್ ಕಾಣಿಸಿಕೊಂಡಿದ್ದಾರೆ. ಕಾಮಿಡಿ, ಲವ್, ಆಕ್ಷನ್, ಸೆಂಟಿಮೆಂಟ್ ಕಥಾಹಂದರವಿರುವ ಈ ಚಿತ್ರದಲ್ಲಿ ಮತ್ತೊಂದು ವಿಶೇಷತೆ ಇದೆ. ಅದನ್ನು ಟ್ರೇಲರ್ ಬಿಡುಗಡೆ ವೇಳೆ ಅನಾವರಣ ಮಾಡುವ ಯೋಜನೆ ನಿರ್ದೇಶಕರಿಗಿದೆ.

ಶ್ರೀ ಕೃಷ್ಣನ ನುಡಿಮುತ್ತುಗಳು

Mayanagari Anish

ಇನ್ನು ಈ ಚಿತ್ರದಲ್ಲಿ ಹಲವಾರು ವಿಶೇಷತೆಗಳಿದ್ದು, ಅದನ್ನು ಹಂತ ಹಂತವಾಗಿ ಪರಿಚಯಿಸುವ ಆಲೋಚನೆ ಶಂಕರ್ ಆರಾಧ್ಯರದ್ದು. ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡಿದ್ದಾರೆ ಶಂಕರ್ ಆರಾಧ್ಯ. ಇದರ ಜತೆಗೆ ನಿರ್ಮಾಣದ ಜವಾಬ್ದಾರಿ ಕೂಡಾ ವಹಿಸಿಕೊಂಡಿದ್ದಾರೆ. ಸ್ಯಾಂಡಲ್ ವುಡ್ ಪಿಕ್ಚರ್ಸ್ ಬ್ಯಾನರ್ ಅಡಿಯಲ್ಲಿ ಈ ಚಿತ್ರ ನಿರ್ಮಾಣವಾಗಿದೆ. ಶ್ವೇತಾ ಶಂಕರ್ ಸಹ ನಿರ್ಮಾಣದಲ್ಲಿ ಕೈ ಜೋಡಿಸಿದ್ದಾರೆ.Mayanagari Anish

ತಾಂತ್ರಿಕವಾಗಿಯೂ ಈ ಚಿತ್ರ ಅದ್ಧೂರಿಯಾಗಿ ಮೂಡಿ ಬಂದಿದ್ದು, ಅರ್ಜುನ್ ಜನ್ಯ ಸಂಗೀತ ನೀಡಿದ್ದಾರೆ. ರಾಷ್ಟ್ರ ಪ್ರಶಸ್ತಿ ಪುರಸ್ಕೃತ ವಿಕ್ರಮ್ ಮೋರ್ ಈ ಚಿತ್ರದಲ್ಲಿ ವಿಭಿನ್ನವಾಗಿ ಫೈಟ್ ಕಂಪೋಸ್ ಮಾಡಿದ್ದಾರೆ. ಮದನ್ – ಹರಿಣಿ ಹಾಗೂ ಮುರಳಿ ನೃತ್ಯ ನಿರ್ದೇಶನ, ವಿಜಯ್ ಎಂ ಕುಮಾರ್ ಸಂಕಲನ, ಶ್ರೀನಿವಾಸ್ ಕ್ಯಾಮೆರಾ ಕೈಚಳಕ ಈ ಚಿತ್ರಕ್ಕಿದೆ.Mayanagari Anish

ಅನೀಶ್ ಜೋಡಿಯಾಗಿ ಶ್ರಾವ್ಯ ರಾವ್ ಹಾಗೂ ತೇಜು ನಟಿಸಿದ್ದಾರೆ. ಹಿರಿಯ ನಟ, ನಿರ್ದೇಶಕ ದ್ವಾರಕೀಶ್, ಶರತ್ ಲೋಹಿತಾಶ್ವ, ಅವಿನಾಶ್, ಸುಚೇಂದ್ರ ಪ್ರಸಾದ್, ಎಡಕಲ್ಲು ಗುಡ್ಡದ ಚಂದ್ರಶೇಖರ್, ಚಿಕ್ಕಣ್ಣ ಹಾಗೂ ನಿಹಾರಿಕಾ ಮೊದಲಾದವರು ಚಿತ್ರದ ತಾರಬಳಗದಲ್ಲಿದ್ದಾರೆ.

You Will  Love   Like  These

Chitra Suddhi
daali uttarakhand kannada movie

ಡಾಲಿ ಧನಂಜಯ “ಉತ್ತರ ಕಾಂಡ”ದ ನಾಯಕ.

ವಿಜಯ್ ಕಿರಗಂದೂರು ಅರ್ಪಿಸುವ, ಕೆ.ಆರ್.ಜಿ ಸ್ಟುಡಿಯೋಸ್ ಲಾಂಛನದಲ್ಲಿ ಕಾರ್ತಿಕ್ ಹಾಗೂ ಯೋಗಿ ಜಿ ರಾಜ್ ನಿರ್ಮಿಸುತ್ತಿರುವ ” ಉತ್ತರಕಾಂಡ” ಚಿತ್ರದ ನಾಯಕನಾಗಿ ಡಾಲಿ ಧನಂಜಯ ಅಭಿನಯಿಸುತ್ತಿದ್ದಾರೆ. ಈ ಹಿಂದೆ ಕೆ.ಆರ್.ಜಿ ಸ್ಟುಡಿಯೋಸ್ ನಿರ್ಮಾಣದಲ್ಲಿ ಡಾಲಿ ಧನಂಜಯ ನಾಯಕನಾಗಿ ನಟಿಸಿದ್ದ “ರತ್ನನ ಪ್ರಪಂಚ” ಚಿತ್ರ ಸಹ ಪ್ರಚಂಡ ಯಶಸ್ಸು ಕಂಡಿತ್ತು.…

Chitra Suddhi
In the movie "December 24". Boys from Kunigal Taluk

“ಡಿಸೆಂಬರ್ 24” ಚಿತ್ರದಲ್ಲಿ ಹಾವಳಿ ಕೊಡೋಕೆ ಕುಣಿಗಲ್...

“ಡಿಸೆಂಬರ್ 24” ಚಿತ್ರದಲ್ಲಿ ಅನಿಲ್ ಗೌಡ್ರು, ಕುಮಾರ್ ಗೌಡ್ರು ಹಾಗೂ ಬೆಟ್ಟೇಗೌಡ್ರು ಖಡಕ್ ಖಳನಾಯಕರಾಗಿ ಅಭಿನಯಿಸಿದ್ದು, ಈ ಚಿತ್ರದಲ್ಲಿ ಇವರು ತುಂಬಾ ವಿಭಿನ್ನವಾದ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಈ ಚಿತ್ರದಲ್ಲಿ ನಾಯಕರ ಪಾತ್ರ ಎಷ್ಟು ಮುಖ್ಯನೋ ಹಾಗೆ ಖಳನಾಯಕರ ಪಾತ್ರಗಳು ಅಷ್ಟೇ ಮುಖ್ಯ. ಅದರಂತೆ ಖಳನಾಯಕರ ಆರ್ಭಟ ಜೋರಾಗೆ ಇರಲಿದೆ…

News
VXplore Banking & Competitive Exams Coaching Academy

ಅದು ಕೆಂಗೇರಿಯಲ್ಲಿ ಹೊಸದಾಗಿ ಶುರುವಾದ ಸ್ಪರ್ಧಾತ್ಮಕ ಪರೀಕ್ಷೆಗಳ...

ಸಾವಿರಾರು ವಿದ್ಯಾರ್ಥಿಗಳಿಗೆ ಭವಿಷ್ಯ ಕಟ್ಟಿಕೊಟ್ಟ ಪ್ರತಿಷ್ಠಿತ ವಿದ್ಯಾ ಸಂಸ್ಥೆಯ ನಿರ್ದೇಶಕರಾದ  ಚಂದ್ರ ಮೂರ್ತಿ ಯವರು ಇದರ ಸಂಸ್ಥಾಪಕರು. ಉತ್ತಮ ಮಟ್ಟದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಭೇತಿ ನೀಡುವ ಕಾರಣದಿಂದ ಈ VXplore Banking & Competitive Exams Coaching Academy. ತರಭೇತಿ ಕೇಂದ್ರವನ್ನು ತೆರೆದಿದ್ದಾರೆ. ಅದು ಆಕಾಕ್ಷಿ ವಿಧ್ಯಾರ್ಥಿಗಳಿಗೆ ಅವರ…

Chitra Suddhi
90 bidi manig nadi song release

ನಾಳೆಯಿಂದ ನೈಂಟಿ ನಶೆ!

ಹಿರಿಯ ಹಾಸ್ಯ ನಟ ಬಿರಾದಾರ್ ಅಭಿನಯದ ಐನೂರನೇ ಚಿತ್ರ ಎಂಬ ಹಣೆಪಟ್ಟಿ ಹೊತ್ತುಕೊಂಡು ಆರಂಭದಿಂದಲೇ ಭರ್ಜರಿ ಸದ್ದು ಮಾಡುತ್ತಲೇ ಬಂದ ಚಿತ್ರ ’90 ಬಿಡಿ ಮನೀಗ್ ನಡಿ’. ಉತ್ತರ ಕರ್ನಾಟಕ ಶೈಲಿಯ ಕಾಮಿಡಿ ಕ್ರೈಂ ಥ್ರಿಲ್ಲರ್ ಕಥೆ ಎನ್ನುತ್ತಾ, ‘ಟೀಸರ್’ ಮೂಲಕ ಚಿತ್ರ ಭರವಸೆ ಮೂಡಿಸಿತ್ತು. ಇದೀಗ ಚಿತ್ರತಂಡ…

Chitra Suddhi
i am pregnant kannada movie censored ua

“ಐ ಆಮ್ ಪ್ರೆಗ್ನೆಂಟ್” ಚಿತ್ರವು ಸೆನ್ಸಾರ್ ಮಂಡಳಿಯಿಂದ...

“ಅನು ಸಿನಿಮಾಸ್” ಬ್ಯಾನರ್ ಅಡಿಯಲ್ಲಿ ತಯಾರಾಗುತ್ತಿರುವ “ಐ ಆಮ್ ಪ್ರೆಗ್ನೆಂಟ್” ಎಂಬ ಚಿತ್ರವನ್ನು ಸೆನ್ಸಾರ್ ಮಂಡಳಿಯಿಂದ ಉತ್ತಮ ಪ್ರತಿಕ್ರಿಯೆ ಪಡೆದಿದೆ . ಕೆಲವೇ ದಿನಗಳಲ್ಲಿ ಚಿತ್ರಮಂದಿರಕ್ಕೆ ಲಗ್ಗೆಯಿಡಲು ಚಿತ್ರತಂಡ ಎಲ್ಲ ತಯಾರಿ ಮಾಡಿಕೊಳ್ಳುತ್ತಿದ್ದಾರೆ . ಇದರಲ್ಲಿ ನುರಿತ ಕಲಾವಿದರು ಹಾಗೂ ನುರಿತ ತಂತ್ರಜ್ಞರು ಕೂಡ ಇದಕ್ಕೆ ಉತ್ತಮ ಬೆಂಬಲವನ್ನು…