ಸತ್ಯ ಮತ್ತು ಮಯೂರ ಪಿಕ್ಚರ್ಸ್ ಪ್ರೊಡಕ್ಷನ್ ನಡಿ ಹೊಸ ಸಿನಿಮಾ ಅನೌನ್ಸ್…

ಡಿ.ಸತ್ಯಪ್ರಕಾಶ್ ನಿರ್ಮಾಣದಲ್ಲಿ ಹೊಸ ಸಿನಿಮಾ ಅನೌನ್ಸ್.. ಸತ್ಯ ಮತ್ತು ಮಯೂರ ಪಿಕ್ಚರ್ಸ್ ಪ್ರೊಡಕ್ಷನ್ ನಡಿ ಬರಲಿದೆ ಚಿತ್ರ.. ಬನಗಿರಿ ವಿನಾಯಕ ದೇಗುಲದಲ್ಲಿ ಮುಹೂರ್ತದ ಸಂಭ್ರಮ

ರಾಮಾ ರಾಮಾ ರೇ, ಒಂದಲ್ಲ ಎರಡಲ್ಲ, ಮ್ಯಾನ್ ಆಫ್ ದಿ ಮ್ಯಾಚ್ ಹೀಗೆ ಹೊಸ ಬಗೆಯ ಶೀರ್ಷಿಕೆ ಹಾಗೂ ಕಥಾನಕದ ಮೂಲಕ ಚಿತ್ರಪ್ರೇಮಿಗಳನ್ನು ರಂಜಿಸುತ್ತಿರುವ ನಿರ್ದೇಶಕ ಕಂ ನಿರ್ಮಾಪಕ ಸತ್ಯಪ್ರಕಾಶ್ ಮತ್ತೊಂದು ಸಿನಿಮಾಗೆ ಗ್ರೀನ್ ಸಿಗ್ನಲ್ ಕೊಟ್ಟಿದ್ದಾರೆ. ಈ ಸಿನಿಮಾ ಮೂಲಕ ಸತ್ಯಪ್ರಕಾಶ್ ನಿರ್ದೇಶಕನಾಗಿ ನಿಮ್ಮ ಮುಂದೆ ಹಾಜರಾಗ್ತಿಲ್ಲ. ಬದಲಾಗಿ ನಿರ್ಮಾಪಕನಾಗಿ ಜವಾಬ್ದಾರಿ ಹೊತ್ತುಕೊಂಡಿದ್ದಾರೆ. ಮಂಜುನಾಥ್ ದಾಸೇಗೌಡ ಒಡೆತನದ ಮಯೂರ ಪಿಕ್ಚರ್ಸ್ ಹಾಗೂ ಸತ್ಯಪ್ರಕಾಶ್ ಸಾರಥ್ಯದ ಸತ್ಯ ಪಿಕ್ಚರ್ಸ್ ನಡಿ ಪ್ರೊಡಕ್ಷನ್ ನಂಬರ್ 2 ಸಿನಿಮಾ ಅನೌನ್ಸ್ ಆಗಿದ್ದು, ಇವತ್ತು ಬೆಂಗಳೂರಿನ ಬನಗಿರಿ ವಿನಾಯಕ ದೇಗುಲದಲ್ಲಿ ಮುಹೂರ್ತ ನೆರವೇರಿದೆ.20220610084658 714A0985s

ಸತ್ಯ ಮತ್ತು ಮಯೂರ್ ಪಿಕ್ಚರ್ಸ್ ಅರ್ಪಿಸುವ ಪ್ರೊಡಕ್ಷನ್ ನಂಬರ್-2 ಸಿನಿಮಾಗೆ ಸತ್ಯಪ್ರಕಾಶ್ ಕಥೆ ಬರೆದು ನಿರ್ಮಾಣ ಮಾಡುತ್ತಿದ್ದಾರೆ. ಜೊತೆಗೆ ಡಿ ಮಂಜುನಾಥ್ ಕೂಡ ನಿರ್ಮಾಣಕ್ಕೆ ಕೈ ಜೋಡಿಸಿದ್ದಾರೆ. ಈ ಹಿಂದೆ ಇವರಿಬ್ಬರು ಮ್ಯಾನ್ ಆಫ್ ದಿ ಮ್ಯಾಚ್ ಸಿನಿಮಾ ನಿರ್ಮಾಣ ಮಾಡಿದ್ದು, ಇದೀಗ ಮತ್ತೊಂದು ಹೊಸ ಸಿನಿಮಾಗೆ ಮುನ್ನುಡಿ ಬರೆದಿದ್ದಾರೆ. ಈ ಚಿತ್ರಕ್ಕೆ ಭಾಗ್ಯ ರಾಜ್, ಕಳ್ಳಬೆಟ್ಟರ ದರೋಡೆಕೋರರು, ರಾಜು ಜೇಮ್ಸ್ ಬಾಂಡ್ ಸಿನಿಮಾಗಳ ಸಾರಥಿ ದೀಪಕ್ ಮಧುವನಹಳ್ಳಿ ಆಕ್ಷನ್ ಕಟ್ ಹೇಳ್ತಿದ್ದು, ಅನೂಪ್ ಸೀಳಿನ್ ಸಂಗೀತ, ಲವಿತ್ ಕ್ಯಾಮೆರಾ, ಅಜಯ್ ಕುಮಾರ್ ಸಂಕಲನ, ವರದರಾಜ್ ಕಮತ್ ಕಲಾ ನಿರ್ದೇಶನ ಸಿನಿಮಾಕ್ಕಿದೆ.

ಸದ್ಯ ಸಿನಿಮಾ ಪ್ರೊಡಕ್ಷನ್ ನಂಬರ್ 2 ಅಂತಾ ಶೀರ್ಷಿಕೆ ಇಡಲಾಗಿದ್ದು, ರವಿಶಂಕರ್, ಸಾಧುಕೋಕಿಲನಂತಹ ಘಟಾನುಘಟಿ ತಾರಾಬಗಳ ಸಿನಿಮಾದಲ್ಲಿದೆ. ಈ ತಿಂಗಳಾಂತ್ಯಕ್ಕೆ ಉಳಿದ ಸ್ಟಾರ್ ಕಾಸ್ಟ್ ಜೊತೆಗೆ ಟೈಟಲ್ ಮೂಲಕ ಇಡೀ ಚಿತ್ರತಂಡ ನಿಮ್ಮ ಮುಂದೆ ಹಾಜರಾಗಲಿದ್ದು, ಮುಂದಿನ ತಿಂಗಳ ಎರಡನೇ ವಾರದಿಂದ ಶೂಟಿಂಗ್ ಅಖಾಡಕ್ಕೆ ಧುಮುಕಲು ಚಿತ್ರತಂಡ ಸಜ್ಜಾಗಿದೆ. ಬರೋಬ್ಬರಿ 45 ದಿನ ಚಿತ್ರೀಕರಣಕ್ಕೆ ಯೋಜನೆ ಹಾಕಿಕೊಂಡಿದೆ.

You Will  Love   Like  These

Chitra Suddhi
daali uttarakhand kannada movie

ಡಾಲಿ ಧನಂಜಯ “ಉತ್ತರ ಕಾಂಡ”ದ ನಾಯಕ.

ವಿಜಯ್ ಕಿರಗಂದೂರು ಅರ್ಪಿಸುವ, ಕೆ.ಆರ್.ಜಿ ಸ್ಟುಡಿಯೋಸ್ ಲಾಂಛನದಲ್ಲಿ ಕಾರ್ತಿಕ್ ಹಾಗೂ ಯೋಗಿ ಜಿ ರಾಜ್ ನಿರ್ಮಿಸುತ್ತಿರುವ ” ಉತ್ತರಕಾಂಡ” ಚಿತ್ರದ ನಾಯಕನಾಗಿ ಡಾಲಿ ಧನಂಜಯ ಅಭಿನಯಿಸುತ್ತಿದ್ದಾರೆ. ಈ ಹಿಂದೆ ಕೆ.ಆರ್.ಜಿ ಸ್ಟುಡಿಯೋಸ್ ನಿರ್ಮಾಣದಲ್ಲಿ ಡಾಲಿ ಧನಂಜಯ ನಾಯಕನಾಗಿ ನಟಿಸಿದ್ದ “ರತ್ನನ ಪ್ರಪಂಚ” ಚಿತ್ರ ಸಹ ಪ್ರಚಂಡ ಯಶಸ್ಸು ಕಂಡಿತ್ತು.…

News
VXplore Banking & Competitive Exams Coaching Academy

ಅದು ಕೆಂಗೇರಿಯಲ್ಲಿ ಹೊಸದಾಗಿ ಶುರುವಾದ ಸ್ಪರ್ಧಾತ್ಮಕ ಪರೀಕ್ಷೆಗಳ...

ಸಾವಿರಾರು ವಿದ್ಯಾರ್ಥಿಗಳಿಗೆ ಭವಿಷ್ಯ ಕಟ್ಟಿಕೊಟ್ಟ ಪ್ರತಿಷ್ಠಿತ ವಿದ್ಯಾ ಸಂಸ್ಥೆಯ ನಿರ್ದೇಶಕರಾದ  ಚಂದ್ರ ಮೂರ್ತಿ ಯವರು ಇದರ ಸಂಸ್ಥಾಪಕರು. ಉತ್ತಮ ಮಟ್ಟದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಭೇತಿ ನೀಡುವ ಕಾರಣದಿಂದ ಈ VXplore Banking & Competitive Exams Coaching Academy. ತರಭೇತಿ ಕೇಂದ್ರವನ್ನು ತೆರೆದಿದ್ದಾರೆ. ಅದು ಆಕಾಕ್ಷಿ ವಿಧ್ಯಾರ್ಥಿಗಳಿಗೆ ಅವರ…

Chitra Suddhi
In the movie "December 24". Boys from Kunigal Taluk

“ಡಿಸೆಂಬರ್ 24” ಚಿತ್ರದಲ್ಲಿ ಹಾವಳಿ ಕೊಡೋಕೆ ಕುಣಿಗಲ್...

“ಡಿಸೆಂಬರ್ 24” ಚಿತ್ರದಲ್ಲಿ ಅನಿಲ್ ಗೌಡ್ರು, ಕುಮಾರ್ ಗೌಡ್ರು ಹಾಗೂ ಬೆಟ್ಟೇಗೌಡ್ರು ಖಡಕ್ ಖಳನಾಯಕರಾಗಿ ಅಭಿನಯಿಸಿದ್ದು, ಈ ಚಿತ್ರದಲ್ಲಿ ಇವರು ತುಂಬಾ ವಿಭಿನ್ನವಾದ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಈ ಚಿತ್ರದಲ್ಲಿ ನಾಯಕರ ಪಾತ್ರ ಎಷ್ಟು ಮುಖ್ಯನೋ ಹಾಗೆ ಖಳನಾಯಕರ ಪಾತ್ರಗಳು ಅಷ್ಟೇ ಮುಖ್ಯ. ಅದರಂತೆ ಖಳನಾಯಕರ ಆರ್ಭಟ ಜೋರಾಗೆ ಇರಲಿದೆ…

Chitra Suddhi
90 bidi manig nadi song release

ನಾಳೆಯಿಂದ ನೈಂಟಿ ನಶೆ!

ಹಿರಿಯ ಹಾಸ್ಯ ನಟ ಬಿರಾದಾರ್ ಅಭಿನಯದ ಐನೂರನೇ ಚಿತ್ರ ಎಂಬ ಹಣೆಪಟ್ಟಿ ಹೊತ್ತುಕೊಂಡು ಆರಂಭದಿಂದಲೇ ಭರ್ಜರಿ ಸದ್ದು ಮಾಡುತ್ತಲೇ ಬಂದ ಚಿತ್ರ ’90 ಬಿಡಿ ಮನೀಗ್ ನಡಿ’. ಉತ್ತರ ಕರ್ನಾಟಕ ಶೈಲಿಯ ಕಾಮಿಡಿ ಕ್ರೈಂ ಥ್ರಿಲ್ಲರ್ ಕಥೆ ಎನ್ನುತ್ತಾ, ‘ಟೀಸರ್’ ಮೂಲಕ ಚಿತ್ರ ಭರವಸೆ ಮೂಡಿಸಿತ್ತು. ಇದೀಗ ಚಿತ್ರತಂಡ…

Chitra Suddhi
i am pregnant kannada movie censored ua

“ಐ ಆಮ್ ಪ್ರೆಗ್ನೆಂಟ್” ಚಿತ್ರವು ಸೆನ್ಸಾರ್ ಮಂಡಳಿಯಿಂದ...

“ಅನು ಸಿನಿಮಾಸ್” ಬ್ಯಾನರ್ ಅಡಿಯಲ್ಲಿ ತಯಾರಾಗುತ್ತಿರುವ “ಐ ಆಮ್ ಪ್ರೆಗ್ನೆಂಟ್” ಎಂಬ ಚಿತ್ರವನ್ನು ಸೆನ್ಸಾರ್ ಮಂಡಳಿಯಿಂದ ಉತ್ತಮ ಪ್ರತಿಕ್ರಿಯೆ ಪಡೆದಿದೆ . ಕೆಲವೇ ದಿನಗಳಲ್ಲಿ ಚಿತ್ರಮಂದಿರಕ್ಕೆ ಲಗ್ಗೆಯಿಡಲು ಚಿತ್ರತಂಡ ಎಲ್ಲ ತಯಾರಿ ಮಾಡಿಕೊಳ್ಳುತ್ತಿದ್ದಾರೆ . ಇದರಲ್ಲಿ ನುರಿತ ಕಲಾವಿದರು ಹಾಗೂ ನುರಿತ ತಂತ್ರಜ್ಞರು ಕೂಡ ಇದಕ್ಕೆ ಉತ್ತಮ ಬೆಂಬಲವನ್ನು…