ಭಾವನೆಗಳ ಸುತ್ತ “ಮೆಲೋಡಿ ಡ್ರಾಮ” .

"Melody Drama" Around Emotions

ಸುಮಧುರ ಹಾಡುಗಳ ಜೊತೆ ಸುಂದರ ಪ್ರೀತಿಯ ಪಯಣ .

ಪ್ರೈಮ್ ಸ್ಟಾರ್ ಸ್ಟುಡಿಯೋ ಲಾಂಛನದಲ್ಲಿ ಎಂ.ನಂಜುಂಡ ರೆಡ್ಡಿ ಅವರು ನಿರ್ಮಿಸಿರುವ, ಮಂಜು ಕಾರ್ತಿಕ್ ನಿರ್ದೇಶನದ ” ಮೆಲೋಡಿ ಡ್ರಾಮ” ಚಿತ್ರದ ಹಾಡು ಬಿಡುಗಡೆ ಚಿತ್ರತಂಡದ ಸದಸ್ಯರ ಸಮ್ಮುಖದಲ್ಲಿ ಇತ್ತೀಚಿಗೆ ನಡೆಯಿತು."Melody Drama" Around Emotions

“ಮೊಲೋಡಿ ಡ್ರಾಮ” ಮೂಲಕ ಪ್ರೀತಿ ಭಾವನೆಗಳ ಜೊತೆಗೆ ಸಂಬಂಧ ಹೇಗೆ ನಡೆದುಕೊಂಡು ಹೋಗಬೇಕು ಹಾಗೂ ಜೀವನದಲ್ಲಿ ಪ್ರತಿಯೊಬ್ಬರು ತಪ್ಪು ಮಾಡುತ್ತಾರೆ. ತಪ್ಪನ್ನು ತಿದ್ದಿಕೊಳ್ಳುವ ಅವಕಾಶ ಪ್ರತಿಯೊಬ್ಬರಿಗೂ ಇರುತ್ತದೆ. ನಾವು ತಿದ್ದಿಕೊಳ್ಳಬೇಕು ಎಂಬ ವಿಷಯವನ್ನು ಹೇಳ ಹೊರಟ್ಟಿದ್ದೇವೆ. “ಮೆಲೋಡಿ ಡ್ರಾಮ” ಚಿತ್ರಕ್ಕೆ “ನಿನ್ನ ಕಥೆ ನನ್ನ ಜೊತೆ” ಎಂಬ ಅಡಿಬರಹವಿದೆ‌. ಚಿತ್ರದಲ್ಲಿ ಏಳು ಸುಮಧುರ ಹಾಡುಗಳಿವೆ. ಸೋನು ನಿಗಮ್ , ಕೈಲಾಶ್ ಖೇರ್, ಪಲಾಕ್ ಮುಚ್ವಲ್, ಮುಂತಾದ ಖ್ಯಾತ ಗಾಯಕರು ಹಾಡಿದ್ದಾರೆ. ಮನು ಡಿ ಬಿ ಹಳ್ಳಿ ಅವರ ಛಾಯಾಗ್ರಹಣ ಚಿತ್ರದ ಅಂದವನ್ನು ಮತ್ತಷ್ಟು ಹೆಚ್ಚಿಸಿದೆ."Melody Drama" Around Emotions “ದ್ವಿಪಾತ್ರ” ಮೂಲಕ ಚಿತ್ರರಂಗಕ್ಕೆ ಪ್ರವೇಶಿಸಿದ ಸತ್ಯ ಈ ಚಿತ್ರದ ನಾಯಕನಾಗಿ, “ಸೀತಾವಲ್ಲಭ” ಹಾಗೂ “ಸರಸು” ಧಾರಾವಾಹಿ ಮೂಲಕ ಮನೆಮಾತಾಗಿರುವ ಸುಪ್ರೀತ ಸತ್ಯನಾರಾಯಣ ಅವರು ನಾಯಕಿಯಾಗಿ ನಟಿಸಿದ್ದಾರೆ. ರಂಗಾಯಣ ರಘು, ಅನು ಪ್ರಭಾಕರ್, ರಾಜೇಶ್ ನಟರಂಗ, ಬಾಲು ರಾಜವಾಡಿ, ಲಕ್ಷ್ಮೀ ಸಿದ್ದಯ್ಯ ಮುಂತಾದವರು ಈ ಚಿತ್ರದಲ್ಲಿ ಅಭಿನಯಿಸಿದ್ದಾರೆ. ಸದ್ಯ ಚಿತ್ರವನ್ನು ಸೆನ್ಸಾರ್ ಮಂಡಳಿ ನೋಡಿ ಮೆಚ್ಚುಕೊಂಡಿದ್ದು, ಜೂನ್ ನಲ್ಲಿ ತೆರೆಗೆ ತರುವ ಪ್ರಯತ್ನ ಮಾಡುತ್ತಿದ್ದೇವೆ. ಹದಿನೈದು ವರ್ಷಗಳಿಂದ ವಿವಿಧ ನಿರ್ದೇಶಕರ ಬಳಿ ಕೆಲಸ ಮಾಡಿರುವ ನನ್ನ ನಿರ್ದೇಶನದ ಮೊದಲ ಚಿತ್ರವಿದು ಎಂದು ಮಂಜು ಕಾರ್ತಿಕ್ ತಿಳಿಸಿದರು.

“ದಿಪಾತ್ರ” ನನ್ನ ಮೊದಲ ಚಿತ್ರ. ಇದು ಎರಡನೆಯದು. ಕಾರ್ತಿಕ್ ನನ್ನ ಪಾತ್ರದ ಹೆಸರು. ಈ ಚಿತ್ರದ ಪಾತ್ರ ತುಂಬಾ ಚೆನ್ನಾಗಿದೆ ಎಂದರು ನಾಯಕ ಸತ್ಯ."Melody Drama" Around Emotions

ಈ ಹಿಂದೆ ಕೆಲವು ಜನಪ್ರಿಯ ಧಾರಾವಾಹಿ ಹಾಗೂ ಕೆಲವು ಚಿತ್ರಗಳಲ್ಲಿ ನಟಿಸಿದ್ದೇನೆ. “ಮೆಲೋಡಿ ಡ್ರಾಮ” ದಲ್ಲಿ ಹಿತ ಎಂಬುದು ನನ್ನ ಪಾತ್ರದ ಹೆಸರು. ಬ್ಯಾಂಕ್ ಉದ್ಯೋಗಿಯಾಗಿ ಕಾರ್ಯ ನಿರ್ವಹಿಸುತ್ತಿರುತ್ತೇನೆ ಎಂದು ತಮ್ಮ ಪಾತ್ರದ ಬಗ್ಗೆ ನಾಯಕಿ ಸುಪ್ರೀತ ಸತ್ಯನಾರಾಯಣ ತಿಳಿಸಿದರು.

ನನಗೆ ಚಿಕ್ಕಂದಿನಿಂದಲೂ ಸಿನಿಮಾ ನೋಡುವ ಹವ್ಯಾಸ. ಮೂವತ್ತೈದು ವರ್ಷಗಳಿಂದ ತಪ್ಪದೆ ವಾರಕ್ಕೊಂದು ಸಿನಿಮಾ ನೊಡಿಕೊಂಡು ಬರುತ್ತಿದ್ದೇನೆ. ನಿರ್ಮಾಪಕನಾಗಿ ಇದು ಮೊದಲ ಚಿತ್ರ. ಒಳ್ಳೆಯ ಚಿತ್ರ ಮಾಡಿದ ಖುಷಿಯಿದೆ ಎಂದರು ನಿರ್ಮಾಪಕ ನಂಜುಂಡ ರೆಡ್ಡಿ."Melody Drama" Around Emotions

ಚಿತ್ರದಲ್ಲಿ ಏಳು ಹಾಡುಗಳಿದೆ. ಜಯಂತ್ ಕಾಯ್ಕಿಣಿ, ವಿ ನಾಗೇಂದ್ರ ಪ್ರಸಾದ್, ಧನಂಜಯ್ ರಂಜನ್ ಹಾಡುಗಳನ್ನು ಬರೆದಿದ್ದಾರೆ ಎಂದು ಸಂಗೀತ ನಿರ್ದೇಶಕ ಕಿರಣ್ ರವೀಂದ್ರನಾಥ್ ಮಾಹಿತಿ ನೀಡಿದರು‌. ಛಾಯಾಗ್ರಹಕ ಮನು ಡಿ.ಬಿ ಹಳ್ಳಿ, ಸಂಕಲನಕಾರ ಆರ್ ಮಂಜು ಹಾಗೂ ಚಿತ್ರದಲ್ಲಿ ನಟಿಸಿರುವ ಅಶ್ವಿನ್ ಹಾಸನ್, ವೈಭವ್ ನಾಗರಾಜ್, ವಿನೋದ್ ಗೊಬ್ಬರಗಾಲ ಮುಂತಾದವರು “ಮೆಲೋಡಿ ಡ್ರಾಮ” ಬಗ್ಗೆ ಮಾತನಾಡಿದರು.

You Will  Love   Like  These

Chitra Suddhi
daali uttarakhand kannada movie

ಡಾಲಿ ಧನಂಜಯ “ಉತ್ತರ ಕಾಂಡ”ದ ನಾಯಕ.

ವಿಜಯ್ ಕಿರಗಂದೂರು ಅರ್ಪಿಸುವ, ಕೆ.ಆರ್.ಜಿ ಸ್ಟುಡಿಯೋಸ್ ಲಾಂಛನದಲ್ಲಿ ಕಾರ್ತಿಕ್ ಹಾಗೂ ಯೋಗಿ ಜಿ ರಾಜ್ ನಿರ್ಮಿಸುತ್ತಿರುವ ” ಉತ್ತರಕಾಂಡ” ಚಿತ್ರದ ನಾಯಕನಾಗಿ ಡಾಲಿ ಧನಂಜಯ ಅಭಿನಯಿಸುತ್ತಿದ್ದಾರೆ. ಈ ಹಿಂದೆ ಕೆ.ಆರ್.ಜಿ ಸ್ಟುಡಿಯೋಸ್ ನಿರ್ಮಾಣದಲ್ಲಿ ಡಾಲಿ ಧನಂಜಯ ನಾಯಕನಾಗಿ ನಟಿಸಿದ್ದ “ರತ್ನನ ಪ್ರಪಂಚ” ಚಿತ್ರ ಸಹ ಪ್ರಚಂಡ ಯಶಸ್ಸು ಕಂಡಿತ್ತು.…

News
VXplore Banking & Competitive Exams Coaching Academy

ಅದು ಕೆಂಗೇರಿಯಲ್ಲಿ ಹೊಸದಾಗಿ ಶುರುವಾದ ಸ್ಪರ್ಧಾತ್ಮಕ ಪರೀಕ್ಷೆಗಳ...

ಸಾವಿರಾರು ವಿದ್ಯಾರ್ಥಿಗಳಿಗೆ ಭವಿಷ್ಯ ಕಟ್ಟಿಕೊಟ್ಟ ಪ್ರತಿಷ್ಠಿತ ವಿದ್ಯಾ ಸಂಸ್ಥೆಯ ನಿರ್ದೇಶಕರಾದ  ಚಂದ್ರ ಮೂರ್ತಿ ಯವರು ಇದರ ಸಂಸ್ಥಾಪಕರು. ಉತ್ತಮ ಮಟ್ಟದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಭೇತಿ ನೀಡುವ ಕಾರಣದಿಂದ ಈ VXplore Banking & Competitive Exams Coaching Academy. ತರಭೇತಿ ಕೇಂದ್ರವನ್ನು ತೆರೆದಿದ್ದಾರೆ. ಅದು ಆಕಾಕ್ಷಿ ವಿಧ್ಯಾರ್ಥಿಗಳಿಗೆ ಅವರ…

Chitra Suddhi
In the movie "December 24". Boys from Kunigal Taluk

“ಡಿಸೆಂಬರ್ 24” ಚಿತ್ರದಲ್ಲಿ ಹಾವಳಿ ಕೊಡೋಕೆ ಕುಣಿಗಲ್...

“ಡಿಸೆಂಬರ್ 24” ಚಿತ್ರದಲ್ಲಿ ಅನಿಲ್ ಗೌಡ್ರು, ಕುಮಾರ್ ಗೌಡ್ರು ಹಾಗೂ ಬೆಟ್ಟೇಗೌಡ್ರು ಖಡಕ್ ಖಳನಾಯಕರಾಗಿ ಅಭಿನಯಿಸಿದ್ದು, ಈ ಚಿತ್ರದಲ್ಲಿ ಇವರು ತುಂಬಾ ವಿಭಿನ್ನವಾದ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಈ ಚಿತ್ರದಲ್ಲಿ ನಾಯಕರ ಪಾತ್ರ ಎಷ್ಟು ಮುಖ್ಯನೋ ಹಾಗೆ ಖಳನಾಯಕರ ಪಾತ್ರಗಳು ಅಷ್ಟೇ ಮುಖ್ಯ. ಅದರಂತೆ ಖಳನಾಯಕರ ಆರ್ಭಟ ಜೋರಾಗೆ ಇರಲಿದೆ…

Chitra Suddhi
90 bidi manig nadi song release

ನಾಳೆಯಿಂದ ನೈಂಟಿ ನಶೆ!

ಹಿರಿಯ ಹಾಸ್ಯ ನಟ ಬಿರಾದಾರ್ ಅಭಿನಯದ ಐನೂರನೇ ಚಿತ್ರ ಎಂಬ ಹಣೆಪಟ್ಟಿ ಹೊತ್ತುಕೊಂಡು ಆರಂಭದಿಂದಲೇ ಭರ್ಜರಿ ಸದ್ದು ಮಾಡುತ್ತಲೇ ಬಂದ ಚಿತ್ರ ’90 ಬಿಡಿ ಮನೀಗ್ ನಡಿ’. ಉತ್ತರ ಕರ್ನಾಟಕ ಶೈಲಿಯ ಕಾಮಿಡಿ ಕ್ರೈಂ ಥ್ರಿಲ್ಲರ್ ಕಥೆ ಎನ್ನುತ್ತಾ, ‘ಟೀಸರ್’ ಮೂಲಕ ಚಿತ್ರ ಭರವಸೆ ಮೂಡಿಸಿತ್ತು. ಇದೀಗ ಚಿತ್ರತಂಡ…

Chitra Suddhi
i am pregnant kannada movie censored ua

“ಐ ಆಮ್ ಪ್ರೆಗ್ನೆಂಟ್” ಚಿತ್ರವು ಸೆನ್ಸಾರ್ ಮಂಡಳಿಯಿಂದ...

“ಅನು ಸಿನಿಮಾಸ್” ಬ್ಯಾನರ್ ಅಡಿಯಲ್ಲಿ ತಯಾರಾಗುತ್ತಿರುವ “ಐ ಆಮ್ ಪ್ರೆಗ್ನೆಂಟ್” ಎಂಬ ಚಿತ್ರವನ್ನು ಸೆನ್ಸಾರ್ ಮಂಡಳಿಯಿಂದ ಉತ್ತಮ ಪ್ರತಿಕ್ರಿಯೆ ಪಡೆದಿದೆ . ಕೆಲವೇ ದಿನಗಳಲ್ಲಿ ಚಿತ್ರಮಂದಿರಕ್ಕೆ ಲಗ್ಗೆಯಿಡಲು ಚಿತ್ರತಂಡ ಎಲ್ಲ ತಯಾರಿ ಮಾಡಿಕೊಳ್ಳುತ್ತಿದ್ದಾರೆ . ಇದರಲ್ಲಿ ನುರಿತ ಕಲಾವಿದರು ಹಾಗೂ ನುರಿತ ತಂತ್ರಜ್ಞರು ಕೂಡ ಇದಕ್ಕೆ ಉತ್ತಮ ಬೆಂಬಲವನ್ನು…