ಆರಂಭವಾಯಿತು ನವರಸನ್ ಸಾರಥ್ಯದ “MMB LAGACY”

mmb lagacy is navarasa leader

ಮೈ ಮೂವೀ ಬಜಾರ್ ಮೂಲಕ ಸಾಕಷ್ಟು ಚಿತ್ರಗಳ ಇವೆಂಟ್ ಗಳನ್ನು ನಡೆಸಿಕೊಂಡು ಬರುತ್ತಿರುವ ನವರಸನ್, ಈಗ ಮತ್ತೊಂದು ಹೊಸ ಹೆಜ್ಜೆ ಇಟ್ಟಿದ್ದಾರೆ. ಮಾಗಡಿ ರಸ್ತೆಯ ಜಿ.ಟಿ‌ ಮಾಲ್ ನ ನಾಲ್ಕನೇ ಮಹಡಿಯಲ್ಲಿ “MMB LAGACY” ಎಂಬ ಸುಂದರ ಸಭಾಂಗಣವನ್ನು ಆರಂಭಿಸಿದ್ದಾರೆ. ‌ಇತ್ತೀಚೆಗೆ ಇದರ ಉದ್ಘಾಟನೆ ನೆರವೇರಿತು.MMB LAGACY

ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರಾದ ಭಾ.ಮ.ಹರೀಶ್, ನಟ ವಿನೋದ್ ಪ್ರಭಾಕರ್, ನಿಶಾ ವಿನೋದ್ ಪ್ರಭಾಕರ್, ಖ್ಯಾತ ಗಾಯಕ ಅಲೋಕ್, ನಿರ್ಮಾಪಕರಾದ ಸಂಜಯ್ ಗೌಡ, ರವಿ ಗೌಡ, ನಟ ತಬಲ‌ನಾಣಿ, ಪಿ.ಆರ್.ಓ ಸುಧೀಂದ್ರ ವೆಂಕಟೇಶ್, ನಾಗೇಂದ್ರ ಸೇರಿದಂತೆ ಅನೇಕ ಗಣ್ಯರು ಉದ್ಘಾಟನಾ ಸಮಾರಂಭಕ್ಕೆ ಆಗಮಿಸಿ ಶುಭ ಕೋರಿದರು. ಈ ಸಂದರ್ಭದಲ್ಲಿ ನವರಸನ್ “MMB LAGACY” ಕುರಿತು ಮಾಹಿತಿ ನೀಡಿದರು.MMB LAGACY

ನಾನು ಮೈ ಮೂವೀ ಬಜಾರ್ ಮೂಲಕ ಕೆಲವು ವರ್ಷಗಳಿಂದ ಸಾಕಷ್ಟು ಚಿತ್ರಗಳ ಹಲವು ಕಾರ್ಯಕ್ರಮಗಳನ್ನು ನಡೆಸಿಕೊಂಡು ಬರುತ್ತಿದ್ದೇನೆ. ಫೈವ್ ಸ್ಟಾರ್ ಹೋಟೆಲ್ ಗಳಲ್ಲಿ ಹೆಚ್ಚು ಕಾರ್ಯಕ್ರಮ ನಡೆದಿದೆ. ಅಲ್ಲಿ ಊಟದ ವೆಚ್ಚ ಸಾವಿರ, ಎರಡು ಸಾವಿರ ಹೀಗಿರುತ್ತದೆ. ಅಲ್ಲಿ ಒಂದು ಸಮಾರಂಭ ಮಾಡಲು ನಾಲ್ಕೈದು ಲಕ್ಷ ಖರ್ಚಾಗುತ್ತದೆ. ಎಲ್ಲಾ‌ ನಿರ್ಮಾಪಕರಿಗೂ ಅಷ್ಟು ಖರ್ಚು ಮಾಡವುದಕ್ಕೆ ಆಗುವುದಿಲ್ಲ. ಹಾಗಾಗಿ ನಾನು ಕೆಲವು ಸ್ನೇಹಿತರೊಂದಿಗೆ ಚರ್ಚಿಸಿ, ನಿರ್ಮಾಪಕರಿಗೆ ಅನುಕೂಲವಾಗುವಂತಹ ಒಂದು ವಿಶಾಲವಾದ ಸಭಾಂಗಣ ತೆರೆಯಲು ತೀರ್ಮಾನಿಸಿದೆ. ಸ್ಥಳ ಹುಡುಕುತ್ತಿದ್ದಾಗ ಜಿ.ಟಿ.ಮಾಲ್ ನ ಮಾಲೀಕರಾದ ಆನಂದ್ ಅವರು ನಿಮಗೆ ಅನುಕೂಲವಾದರೆ, ಈ ಸ್ಥಳದಲ್ಲೇ ಆರಂಭಿಸಿ ಎಂದರು.MMB LAGACY

ಕಳೆದ ಆರು ತಿಂಗಳಿನಿಂದ ಸುಮಾರು ಮೂರುವರೆ ಕೋಟಿಗೂ ಅಧಿಕ ಖರ್ಚಿನಲ್ಲಿ “MMB LAGACY” ಯನ್ನು ನಿರ್ಮಾಣ ಮಾಡಿದ್ದೇನೆ. ಈ ಜಾಗ ಯಾವುದೇ ಫೈವ್ ಸ್ಟಾರ್ ಹೋಟೆಲ್ ಗೆ ಕಡಿಮೆ ಇಲ್ಲದಂತೆ ನಿರ್ಮಾಣವಾಗಿದೆ. ಆಧುನಿಕ ಸೌಂಡ್ ಸಿಸ್ಟಮ್, ಎಲ್ ಇ ಡಿ, ನವೀನವೀನ ಲೈಟಿಂಗ್ ವ್ಯವಸ್ಥೆ ಎಲ್ಲವೂ ಇಲ್ಲಿ ಲಭ್ಯವಿದೆ. ನಿರ್ಮಾಪಕರಿಗೆ ಹೊರೆಯಾಗದಂತೆ ದರವನ್ನು ನಿಗದಿ ಪಡಿಸಿದ್ದೇವೆ. ಪತ್ರಿಕಾಗೋಷ್ಠಿ, ಆಡಿಯೋ, ಟೀಸರ್, ಟ್ರೇಲರ್ ಬಿಡುಗಡೆ ಸಮಾರಂಭ ಹಾಗೂ ಪ್ರೀ ರಿಲೀಸ್ ಇವೆಂಟ್ ಮುಂತಾದ ಸಮಾರಂಭಗಳನ್ನು ಇಲ್ಲಿ ನಡೆಸಬಹುದು. ಸುಮಾರು 200ಜನ ಆರಾಮವಾಗಿ ಸಮಾರಂಭದಲ್ಲಿ ಪಾಲ್ಗೊಳ್ಳುಬಹುದು. ಸುಸಜ್ಜಿತ ಸಭಾಂಗಣ, ಊಟದ ಹಾಲ್ ಇದೆ. ಊಟ, ತಿಂಡಿ ಹಾಗೂ ಸಾಭಾಂಗಣದ ವೆಚ್ಚ ಎಲ್ಲವೂ ಕೈಗೆಟುಕುವ ಬೆಲೆಯಲ್ಲೇ ನಿಗದಿ ಮಾಡಲಾಗಿದೆ. ಸಿನಿಮಾ ಕಾರ್ಯಕ್ರಮಗಳಲ್ಲದೆ ಹುಟ್ಟುಹಬ್ಬ ಮುಂತಾದ ಕಾರ್ಯಕ್ರಮಗಳನ್ನು ಇಲ್ಲಿ ಮಾಡಿಕೊಳ್ಳಬಹುದು. ಕನ್ನಡ ಚಿತ್ರರಂಗದ ನಿರ್ಮಾಪಕರಿಗೆ ಅನುಕೂಲವಾಗಲೆಂದೆ ತೆರೆದಿರುವ “MMB LAGACY” ಯನ್ನು ತಾವೆಲ್ಲರು ಬಳಸಿಕೊಳ್ಳಬೇಕೆಂದು ನವರಸನ್ ಮನವಿ ಮಾಡಿದರು.MMB LAGACY

You Will  Love   Like  These

Chitra Suddhi
daali uttarakhand kannada movie

ಡಾಲಿ ಧನಂಜಯ “ಉತ್ತರ ಕಾಂಡ”ದ ನಾಯಕ.

ವಿಜಯ್ ಕಿರಗಂದೂರು ಅರ್ಪಿಸುವ, ಕೆ.ಆರ್.ಜಿ ಸ್ಟುಡಿಯೋಸ್ ಲಾಂಛನದಲ್ಲಿ ಕಾರ್ತಿಕ್ ಹಾಗೂ ಯೋಗಿ ಜಿ ರಾಜ್ ನಿರ್ಮಿಸುತ್ತಿರುವ ” ಉತ್ತರಕಾಂಡ” ಚಿತ್ರದ ನಾಯಕನಾಗಿ ಡಾಲಿ ಧನಂಜಯ ಅಭಿನಯಿಸುತ್ತಿದ್ದಾರೆ. ಈ ಹಿಂದೆ ಕೆ.ಆರ್.ಜಿ ಸ್ಟುಡಿಯೋಸ್ ನಿರ್ಮಾಣದಲ್ಲಿ ಡಾಲಿ ಧನಂಜಯ ನಾಯಕನಾಗಿ ನಟಿಸಿದ್ದ “ರತ್ನನ ಪ್ರಪಂಚ” ಚಿತ್ರ ಸಹ ಪ್ರಚಂಡ ಯಶಸ್ಸು ಕಂಡಿತ್ತು.…

Chitra Suddhi
In the movie "December 24". Boys from Kunigal Taluk

“ಡಿಸೆಂಬರ್ 24” ಚಿತ್ರದಲ್ಲಿ ಹಾವಳಿ ಕೊಡೋಕೆ ಕುಣಿಗಲ್...

“ಡಿಸೆಂಬರ್ 24” ಚಿತ್ರದಲ್ಲಿ ಅನಿಲ್ ಗೌಡ್ರು, ಕುಮಾರ್ ಗೌಡ್ರು ಹಾಗೂ ಬೆಟ್ಟೇಗೌಡ್ರು ಖಡಕ್ ಖಳನಾಯಕರಾಗಿ ಅಭಿನಯಿಸಿದ್ದು, ಈ ಚಿತ್ರದಲ್ಲಿ ಇವರು ತುಂಬಾ ವಿಭಿನ್ನವಾದ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಈ ಚಿತ್ರದಲ್ಲಿ ನಾಯಕರ ಪಾತ್ರ ಎಷ್ಟು ಮುಖ್ಯನೋ ಹಾಗೆ ಖಳನಾಯಕರ ಪಾತ್ರಗಳು ಅಷ್ಟೇ ಮುಖ್ಯ. ಅದರಂತೆ ಖಳನಾಯಕರ ಆರ್ಭಟ ಜೋರಾಗೆ ಇರಲಿದೆ…

News
VXplore Banking & Competitive Exams Coaching Academy

ಅದು ಕೆಂಗೇರಿಯಲ್ಲಿ ಹೊಸದಾಗಿ ಶುರುವಾದ ಸ್ಪರ್ಧಾತ್ಮಕ ಪರೀಕ್ಷೆಗಳ...

ಸಾವಿರಾರು ವಿದ್ಯಾರ್ಥಿಗಳಿಗೆ ಭವಿಷ್ಯ ಕಟ್ಟಿಕೊಟ್ಟ ಪ್ರತಿಷ್ಠಿತ ವಿದ್ಯಾ ಸಂಸ್ಥೆಯ ನಿರ್ದೇಶಕರಾದ  ಚಂದ್ರ ಮೂರ್ತಿ ಯವರು ಇದರ ಸಂಸ್ಥಾಪಕರು. ಉತ್ತಮ ಮಟ್ಟದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಭೇತಿ ನೀಡುವ ಕಾರಣದಿಂದ ಈ VXplore Banking & Competitive Exams Coaching Academy. ತರಭೇತಿ ಕೇಂದ್ರವನ್ನು ತೆರೆದಿದ್ದಾರೆ. ಅದು ಆಕಾಕ್ಷಿ ವಿಧ್ಯಾರ್ಥಿಗಳಿಗೆ ಅವರ…

Chitra Suddhi
i am pregnant kannada movie censored ua

“ಐ ಆಮ್ ಪ್ರೆಗ್ನೆಂಟ್” ಚಿತ್ರವು ಸೆನ್ಸಾರ್ ಮಂಡಳಿಯಿಂದ...

“ಅನು ಸಿನಿಮಾಸ್” ಬ್ಯಾನರ್ ಅಡಿಯಲ್ಲಿ ತಯಾರಾಗುತ್ತಿರುವ “ಐ ಆಮ್ ಪ್ರೆಗ್ನೆಂಟ್” ಎಂಬ ಚಿತ್ರವನ್ನು ಸೆನ್ಸಾರ್ ಮಂಡಳಿಯಿಂದ ಉತ್ತಮ ಪ್ರತಿಕ್ರಿಯೆ ಪಡೆದಿದೆ . ಕೆಲವೇ ದಿನಗಳಲ್ಲಿ ಚಿತ್ರಮಂದಿರಕ್ಕೆ ಲಗ್ಗೆಯಿಡಲು ಚಿತ್ರತಂಡ ಎಲ್ಲ ತಯಾರಿ ಮಾಡಿಕೊಳ್ಳುತ್ತಿದ್ದಾರೆ . ಇದರಲ್ಲಿ ನುರಿತ ಕಲಾವಿದರು ಹಾಗೂ ನುರಿತ ತಂತ್ರಜ್ಞರು ಕೂಡ ಇದಕ್ಕೆ ಉತ್ತಮ ಬೆಂಬಲವನ್ನು…

Chitra Suddhi
90 bidi manig nadi song release

ನಾಳೆಯಿಂದ ನೈಂಟಿ ನಶೆ!

ಹಿರಿಯ ಹಾಸ್ಯ ನಟ ಬಿರಾದಾರ್ ಅಭಿನಯದ ಐನೂರನೇ ಚಿತ್ರ ಎಂಬ ಹಣೆಪಟ್ಟಿ ಹೊತ್ತುಕೊಂಡು ಆರಂಭದಿಂದಲೇ ಭರ್ಜರಿ ಸದ್ದು ಮಾಡುತ್ತಲೇ ಬಂದ ಚಿತ್ರ ’90 ಬಿಡಿ ಮನೀಗ್ ನಡಿ’. ಉತ್ತರ ಕರ್ನಾಟಕ ಶೈಲಿಯ ಕಾಮಿಡಿ ಕ್ರೈಂ ಥ್ರಿಲ್ಲರ್ ಕಥೆ ಎನ್ನುತ್ತಾ, ‘ಟೀಸರ್’ ಮೂಲಕ ಚಿತ್ರ ಭರವಸೆ ಮೂಡಿಸಿತ್ತು. ಇದೀಗ ಚಿತ್ರತಂಡ…