ನವೀನ್ ಶಂಕರ್ ಹುಟ್ಟುಹಬ್ಬಕ್ಕೆ ಬಿಡುಗಡೆಯಾಯಿತು “ಕ್ಷೇತ್ರಪತಿ” ಚಿತ್ರದ ಮೋಷನ್ ಪೋಸ್ಟರ್ .

Motion poster of movie "Kshetrapati" released on Naveen Shankar's birthday

“ಗುಲ್ಟು”, ” ಹೊಯ್ಸಳ “, ” ಹೊಂದಿಸಿ ಬರೆಯಿರಿ” ಚಿತ್ರಗಳ ಮೂಲಕ ಜನಪ್ರಿಯರಾಗಿರುವ ನವೀನ್ ಶಂಕರ್ ಪ್ರಸ್ತುತ “ಕ್ಷೇತ್ರಪತಿ” ಚಿತ್ರದಲ್ಲಿ ನಾಯಕನಾಗಿ ನಟಿಸಿದ್ದಾರೆ‌.Motion poster of movie "Kshetrapati" released on Naveen Shankar's birthday

ನವೀನ್ ಶಂಕರ್ ಅವರಿಗೆ ಈಗ ಹುಟ್ಟುಹಬ್ಬದ ಸಂಭ್ರಮ. ಮೋಷನ್ ಪೋಸ್ಟರ್ ರಿಲೀಸ್ ಮಾಡುವ ಮೂಲಕ ನವೀನ್ ಶಂಕರ್ ಅವರಿಗೆ “ಕ್ಷೇತ್ರಪತಿ” ತಂಡ ಹುಟ್ಟುಹಬ್ಬದ ಶುಭಾಶಯ ತಿಳಿಸಿದೆ. ಮೋಷನ್ ಪೋಸ್ಟರ್ ಸಾಕಷ್ಟು ಕುತೂಹಲ ಮೂಡಿಸಿದೆ. ಈ ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದ್ದು, ಪೋಸ್ಟ್ ಪ್ರೊಡಕ್ಷನ್ ಅಂತಿಮ ಹಂತದಲ್ಲಿದೆ. ಜುಲೈನಲ್ಲಿ ಚಿತ್ರ ತೆರೆಗೆ ಬರಲಿದೆ. KRG ಸ್ಟುಡಿಯೋಸ್ ಮೂಲಕ ಬಿಡುಗಡೆಯಾಗುತ್ತಿದೆ.Motion poster of movie "Kshetrapati" released on Naveen Shankar's birthday

ಆಶ್ರಗ ಕ್ರಿಯೇಷನ್ಸ್ ಲಾಂಛನದಲ್ಲಿ ನಿರ್ಮಾಣವಾಗಿರುವ ಈ ಚಿತ್ರವನ್ನು ಶ್ರೀಕಾಂತ್ ಕಟಗಿ ನಿರ್ದೇಶಿಸಿದ್ದಾರೆ. “ಕ್ಷೇತ್ರಪತಿ” ಸೋಶಿಯಲ್ ಪೊಲಿಟಿಕಲ್ ಡ್ರಾಮ ಕಥಾಹಂದರ ಹೊಂದಿದೆ ಎನ್ನುತ್ತಾರೆ ನಿರ್ದೇಶಕರು. ಶ್ರೀಕಾಂತ್ ಅವರಿಗೆ ಇದು ಚೊಚ್ಚಲ ನಿರ್ದೇಶನದ ಚಿತ್ರ. ಇದು ಉತ್ತರ ಕರ್ನಾಟಕ ಭಾಗದಲ್ಲಿ ನಡೆಯುವ ಕಥೆಯಾಗಿದ್ದು, ಹೆಚ್ಚಿನ ಭಾಗದ ಚಿತ್ರೀಕರಣ ಉತ್ತರ ಕರ್ನಾಟಕದಲ್ಲೇ ನಡೆದಿದೆ‌.Motion poster of movie "Kshetrapati" released on Naveen Shankar's birthday

ಕೆ.ಜಿ.ಎಫ್ ಖ್ಯಾತಿಯ ರವಿ ಬಸ್ರೂರ್ ಈ ಚಿತ್ರಕ್ಕೆ ಸಂಗೀತ ನೀಡಿದ್ದಾರೆ. ವೈ ವಿ ಬಿ ಶಿವಸಾಗರ್ ಛಾಯಾಗ್ರಹಣ, ಮನು ಶೇಡ್ಗಾರ್ ಸಂಕಲನ, ನರಸಿಂಹ ಸಾಹಸ ನಿರ್ದೇಶನ ಹಾಗೂ ಜೀವನ್ ಅವರ ನೃತ್ಯ ನಿರ್ದೇಶನ ಈ ಚಿತ್ರಕ್ಕಿದೆ.

ಇತ್ತೀಚೆಗೆ ಬಿಡುಗಡೆಯಾಗಿ ಜನಪ್ರಿಯವಾದ “ಹೊಂದಿಸಿ ಬರೆಯಿರಿ” ಚಿತ್ರದಲ್ಲಿ ನಾಯಕ – ನಾಯಕಿಯಾಗಿ ನಟಿಸಿದ್ದ ನವೀನ್ ಶಂಕರ್ ಹಾಗೂ ಅರ್ಚನಾ ಜೋಯಿಸ್ “ಕ್ಷೇತ್ರಪತಿ” ಚಿತ್ರದಲ್ಲೂ ನಾಯಕ – ನಾಯಕಿಯಾಗಿ ನಟಿಸಿದ್ದಾರೆ. ಅಚ್ಯುತ್ ಕುಮಾರ್, ರಾಹುಲ್ ಐನಾಪುರ, ಕೃಷ್ಣ ಹೆಬ್ಬಾಳೆ, ಶೈಲಶ್ರೀ ಅರಸ್, ನಾಟ್ಯ ರಂಗ, ಹರ್ಷ ಅರ್ಜುನ್ ಮುಂತಾದವರು ಚಿತ್ರದ ತಾರಾಬಳಗದಲ್ಲಿದ್ದಾರೆ.

You Will  Love   Like  These

Chitra Suddhi
daali uttarakhand kannada movie

ಡಾಲಿ ಧನಂಜಯ “ಉತ್ತರ ಕಾಂಡ”ದ ನಾಯಕ.

ವಿಜಯ್ ಕಿರಗಂದೂರು ಅರ್ಪಿಸುವ, ಕೆ.ಆರ್.ಜಿ ಸ್ಟುಡಿಯೋಸ್ ಲಾಂಛನದಲ್ಲಿ ಕಾರ್ತಿಕ್ ಹಾಗೂ ಯೋಗಿ ಜಿ ರಾಜ್ ನಿರ್ಮಿಸುತ್ತಿರುವ ” ಉತ್ತರಕಾಂಡ” ಚಿತ್ರದ ನಾಯಕನಾಗಿ ಡಾಲಿ ಧನಂಜಯ ಅಭಿನಯಿಸುತ್ತಿದ್ದಾರೆ. ಈ ಹಿಂದೆ ಕೆ.ಆರ್.ಜಿ ಸ್ಟುಡಿಯೋಸ್ ನಿರ್ಮಾಣದಲ್ಲಿ ಡಾಲಿ ಧನಂಜಯ ನಾಯಕನಾಗಿ ನಟಿಸಿದ್ದ “ರತ್ನನ ಪ್ರಪಂಚ” ಚಿತ್ರ ಸಹ ಪ್ರಚಂಡ ಯಶಸ್ಸು ಕಂಡಿತ್ತು.…

News
VXplore Banking & Competitive Exams Coaching Academy

ಅದು ಕೆಂಗೇರಿಯಲ್ಲಿ ಹೊಸದಾಗಿ ಶುರುವಾದ ಸ್ಪರ್ಧಾತ್ಮಕ ಪರೀಕ್ಷೆಗಳ...

ಸಾವಿರಾರು ವಿದ್ಯಾರ್ಥಿಗಳಿಗೆ ಭವಿಷ್ಯ ಕಟ್ಟಿಕೊಟ್ಟ ಪ್ರತಿಷ್ಠಿತ ವಿದ್ಯಾ ಸಂಸ್ಥೆಯ ನಿರ್ದೇಶಕರಾದ  ಚಂದ್ರ ಮೂರ್ತಿ ಯವರು ಇದರ ಸಂಸ್ಥಾಪಕರು. ಉತ್ತಮ ಮಟ್ಟದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಭೇತಿ ನೀಡುವ ಕಾರಣದಿಂದ ಈ VXplore Banking & Competitive Exams Coaching Academy. ತರಭೇತಿ ಕೇಂದ್ರವನ್ನು ತೆರೆದಿದ್ದಾರೆ. ಅದು ಆಕಾಕ್ಷಿ ವಿಧ್ಯಾರ್ಥಿಗಳಿಗೆ ಅವರ…

Chitra Suddhi
In the movie "December 24". Boys from Kunigal Taluk

“ಡಿಸೆಂಬರ್ 24” ಚಿತ್ರದಲ್ಲಿ ಹಾವಳಿ ಕೊಡೋಕೆ ಕುಣಿಗಲ್...

“ಡಿಸೆಂಬರ್ 24” ಚಿತ್ರದಲ್ಲಿ ಅನಿಲ್ ಗೌಡ್ರು, ಕುಮಾರ್ ಗೌಡ್ರು ಹಾಗೂ ಬೆಟ್ಟೇಗೌಡ್ರು ಖಡಕ್ ಖಳನಾಯಕರಾಗಿ ಅಭಿನಯಿಸಿದ್ದು, ಈ ಚಿತ್ರದಲ್ಲಿ ಇವರು ತುಂಬಾ ವಿಭಿನ್ನವಾದ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಈ ಚಿತ್ರದಲ್ಲಿ ನಾಯಕರ ಪಾತ್ರ ಎಷ್ಟು ಮುಖ್ಯನೋ ಹಾಗೆ ಖಳನಾಯಕರ ಪಾತ್ರಗಳು ಅಷ್ಟೇ ಮುಖ್ಯ. ಅದರಂತೆ ಖಳನಾಯಕರ ಆರ್ಭಟ ಜೋರಾಗೆ ಇರಲಿದೆ…

Chitra Suddhi
90 bidi manig nadi song release

ನಾಳೆಯಿಂದ ನೈಂಟಿ ನಶೆ!

ಹಿರಿಯ ಹಾಸ್ಯ ನಟ ಬಿರಾದಾರ್ ಅಭಿನಯದ ಐನೂರನೇ ಚಿತ್ರ ಎಂಬ ಹಣೆಪಟ್ಟಿ ಹೊತ್ತುಕೊಂಡು ಆರಂಭದಿಂದಲೇ ಭರ್ಜರಿ ಸದ್ದು ಮಾಡುತ್ತಲೇ ಬಂದ ಚಿತ್ರ ’90 ಬಿಡಿ ಮನೀಗ್ ನಡಿ’. ಉತ್ತರ ಕರ್ನಾಟಕ ಶೈಲಿಯ ಕಾಮಿಡಿ ಕ್ರೈಂ ಥ್ರಿಲ್ಲರ್ ಕಥೆ ಎನ್ನುತ್ತಾ, ‘ಟೀಸರ್’ ಮೂಲಕ ಚಿತ್ರ ಭರವಸೆ ಮೂಡಿಸಿತ್ತು. ಇದೀಗ ಚಿತ್ರತಂಡ…

Chitra Suddhi
i am pregnant kannada movie censored ua

“ಐ ಆಮ್ ಪ್ರೆಗ್ನೆಂಟ್” ಚಿತ್ರವು ಸೆನ್ಸಾರ್ ಮಂಡಳಿಯಿಂದ...

“ಅನು ಸಿನಿಮಾಸ್” ಬ್ಯಾನರ್ ಅಡಿಯಲ್ಲಿ ತಯಾರಾಗುತ್ತಿರುವ “ಐ ಆಮ್ ಪ್ರೆಗ್ನೆಂಟ್” ಎಂಬ ಚಿತ್ರವನ್ನು ಸೆನ್ಸಾರ್ ಮಂಡಳಿಯಿಂದ ಉತ್ತಮ ಪ್ರತಿಕ್ರಿಯೆ ಪಡೆದಿದೆ . ಕೆಲವೇ ದಿನಗಳಲ್ಲಿ ಚಿತ್ರಮಂದಿರಕ್ಕೆ ಲಗ್ಗೆಯಿಡಲು ಚಿತ್ರತಂಡ ಎಲ್ಲ ತಯಾರಿ ಮಾಡಿಕೊಳ್ಳುತ್ತಿದ್ದಾರೆ . ಇದರಲ್ಲಿ ನುರಿತ ಕಲಾವಿದರು ಹಾಗೂ ನುರಿತ ತಂತ್ರಜ್ಞರು ಕೂಡ ಇದಕ್ಕೆ ಉತ್ತಮ ಬೆಂಬಲವನ್ನು…