ಡಾ.ಪ್ರಿಯಾಂಕಉಪೇಂದ್ರ ಈಗ ಅಭಿನಯಅಪ್ಸರೆ
’ಮಿಸ್ ನಂದಿನಿ’ ಚಿತ್ರದ ಟ್ರೇಲರ್ ಬಿಡುಗಡೆ

Ms. Nandini Official Trailer | Priyanka Upendra

’ಮಿಸ್ ನಂದಿನಿ’ ಚಿತ್ರದ ಟ್ರೇಲರ್ ಬಿಡುಗಡೆ ಸಮಾರಂಭದಲ್ಲಿ ಅಭಿಮಾನಿಗಳು ಡಾ.ಪ್ರಿಯಾಂಕಉಪೇಂದ್ರ ಅವರಿಗೆ ’ಅಭಿನಯ ಅಪ್ಸರೆ’ ಎಂದು ಬಿರುದು ನೀಡಿ ಗೌರವಿಸಿದರು. ಬಿರುದನ್ನು ಸ್ವೀಕರಿಸಿದ ಪ್ರಿಯಾಂಕಉಪೇಂದ್ರ ಮಾತನಾಡಿ ಸುಂದರ ಚಿತ್ರವಾಗಿದೆ. ಸರ್ಕಾರಿ ಶಾಲೆ ಶಿಕ್ಷಕಿಯಾಗಿ ಕಾಣಿಸಿಕೊಂಡಿದ್ದೇನೆ. ಇಂತಹ ಪಾತ್ರಕ್ಕೆ ನನ್ನನ್ನು ಆಯ್ಕೆ ಮಾಡಿಕೊಂಡಿರುವುದಕ್ಕೆ ತುಂಬಾ ಥಾಂಕ್ಸ್. ಕನ್ನಡ ಅಷ್ಟು ಸ್ಪಷ್ಟವಾಗಿ ಮಾತನಾಡಲು ಬಾರದಿದ್ದರೂ ನಿರ್ದೇಶಕರು ಸೆಟ್‌ನಲ್ಲಿ ಹೇಳಿಕೊಡುತ್ತಿದ್ದರು.Ms. Nandini Official Trailer | Priyanka Upendra

ಮಕ್ಕಳ ಜತೆ ನಟಿಸುವುದೇ ಒಂದು ರೀತಿಯ ಖುಷಿ ಸಿಗುತ್ತದೆ. ಅವರುಗಳ ಕಾಮಿಡಿ ಟ್ರ್ಯಾಕ್ ಚೆನ್ನಾಗಿ ಮೂಡಿಬಂದಿದೆ. ತುಂಬಾ ಸಿನಿಮಾಗಳಲ್ಲಿ ಮಾಡುತ್ತಿದ್ದರೂ ಇಂತಹ ಚಿತ್ರದಲ್ಲಿ ಅಭಿನಯಿಸಿರುವುದು ಸಂತಸ ತಂದಿದೆ. ಸರ್ಕಾರಿ ಶಾಲೆಯಲ್ಲೇ ಚಿತ್ರೀಕರಣ ಮಾಡಲಾಗಿದೆ. ಇಂತಹ ಚಿತ್ರಕ್ಕೆ ನಾವೆಲ್ಲರೂ ಪ್ರೋತ್ಸಾಹ ಕೊಡಬೇಕು. ಅಭಿಮಾನಿಗಳು ಪ್ರೀತಿಯಿಂದ ಬಿರುದನ್ನು ನೀಡಿದ್ದಾರೆ. ಅವರಿಂದಲೇ ಚಿತ್ರರಂಗದಲ್ಲಿ 25 ವರ್ಷ ಸೇವೆ ಸಲ್ಲಿಸಿ ಇಲ್ಲಿಯ ತನಕ ಬಂದಿರುವುದು ಅಂತ ಹೇಳಿದರು.Ms. Nandini Official Trailer | Priyanka Upendra

ಇಂದಿನ ಸರ್ಕಾರಿ ಶಾಲೆಯ ಸ್ಥಿತಿಗತಿಗಳು ಹಾಗೂ ಅಭಿವೃದ್ದಿ ಕುರಿತಂತೆ ಸಿನಿಮಾ ಮಾಡಿದ್ದಾರೆ. ಶಿಕ್ಷಣ ಉದಾರವಾಗಿರುವುದರಿಂದ ಖಾಸಗಿ ಶಾಲೆಯನ್ನು ವಿರೋಧಿಸುವ ಹಾಗಿಲ್ಲ. ಹಳ್ಳಿಯಲ್ಲಿ ಒಂದು ಖಾಸಗಿ ಶಾಲೆ ತೆರೆದರೆ, ಅದು ಹತ್ತು ಸರ್ಕಾರಿ ಶಾಲೆಯನ್ನು ಕಬಳಿಸುತ್ತದೆ. ಹಿಂದುಳಿದ, ದಲಿತ ವರ್ಗ ಇರುವ ಕಡೆ ಶಾಲೆಗಳು ಕುಂಠಿತವಾಗಿದೆ. ಇದರ ಬಗ್ಗೆ ಚಿಂತನೆ ನಡೆಸಬೇಕಾಗಿದೆ. ಶಿಕ್ಷಣ ಇಲಾಖೆ ಒಬ್ಬ ವಿದ್ಯಾರ್ಥಿಗೆ 4000 ಹಣವನ್ನು ಖರ್ಚು ಮಾಡುತ್ತಿದೆ. ಹಳ್ಳಿಯಲ್ಲಿ ಮಕ್ಕಳ ಸಂಖ್ಯೆ ಕಡಿಮೆ ಇರುವುದರಿಂದ ಶಾಲೆಯಲ್ಲಿ ಮಕ್ಕಳ ಕೊರತೆ ಅದು ಒಂದು ಕಾರಣವಾಗಿದೆ. ಎಲ್ಲವನ್ನು ಸರ್ಕಾರವೇ ನೋಡಿಕೊಳ್ಳಬೇಕು ಅಂದರೆ ಕಷ್ಟವಾಗುತ್ತದೆ. ಅಂತಹ ಪರಿಕಲ್ಪನೆಯನ್ನು ನಾವುಗಳು ಮೊದಲು ಬಿಡಬೇಕು.Ms. Nandini Official Trailer | Priyanka Upendra

ಶಾಲೆಯಲ್ಲಿ ಓದಿರತಕ್ಕಂಥ ವಿದ್ಯಾರ್ಥಿಗಳು ಶಾಲೆಯ ಬಗ್ಗೆ ಗಮನ ಹರಿಸಿದರೆ ಅಭಿವೃದ್ದಿಗೊಳ್ಳುತ್ತದೆ ಎಂದು ಕಡೂರು ಶಾಸಕ ಬೆಳ್ಳಿಪ್ರಕಾಶ್ ಅಭಿಪ್ರಾಯಪಟ್ಟರು. ಶ್ರೀ ವಿಜಯ್ ಫಿಲಿಂಸ್ ಮುಖಾಂತರ ನೀಲಕಂಠಸ್ವಾಮಿ ನಿರ್ಮಾಣ ಮಾಡುತ್ತಿದ್ದಾರೆ. ಆಶಾ ಸಹ ನಿರ್ಮಾಪಕರು. ಎಲ್ಲಾ ಮಕ್ಕಳು ಸರ್ಕಾರಿ ಶಾಲೆಯಲ್ಲೆ ಓದಬೇಕೆಂದು ಚಿತ್ರದಲ್ಲಿ ಹೇಳುವ ಪ್ರಯತ್ನ ಮಾಡಲಾಗಿದೆ. ಖಾಸಗಿ ಶಾಲೆಯಲ್ಲಿ ಇದ್ದಂತ ಗುಣಮಟ್ಟವು ಸರ್ಕಾರಿ ಶಾಲೆಯಲ್ಲಿ ಇರಬೇಕೆಂದು ಹೇಳಲಾಗಿದೆ. ಇದಕ್ಕೆ ಸರ್ಕಾರವು ಯಾವ ರೀತಿ ಸ್ಪಂದಿಸುತ್ತದೆ ಎನ್ನುವುದೇ ಚಿತ್ರದ ಸಾರಾಂಶ. ಕಾರವಾರ, ಬಾಗಲಕೋಟೆ, ಬೆಂಗಳೂರು ಕಡೆಗಳಲ್ಲಿ ಚಿತ್ರೀಕರಣ ನಡೆಸಲಾಗಿದೆ ಎಂಬುದಾಗಿ ಮಾಹಿತಿಯನ್ನು ನಿರ್ದೇಶಕ ಗುರುದತ್.ಎಸ್.ಆರ್ ನೀಡಿದರು.Ms. Nandini Official Trailer | Priyanka Upendra

ಮುಖ್ಯಮಂತ್ರಿಯಾಗಿ ಅಭಿನಯಿಸಿರುವ ಸಿದ್ಲಿಂಗುಶ್ರೀಧರ್, ಶಿಕ್ಷಕರಾಗಿರುವ ಅಪ್ಪಣ್ಣ, ರಘುಪಾಂಡೇಶ್ವರ್, ಅಧಿಕಾರಿಯಾಗಿರುವ ಯತಿರಾಜ್, ಶಾಸಕನಾಗಿ ಡ್ಯಾನಿಕುಟ್ಟಪ್ಪ, ವಕೀಲೆ ಲಕ್ಷೀಸಿದ್ದಯ್ಯ, ಚಿತ್ರಕ್ಕೆ ಸಾಹಿತ್ಯ ಮತ್ತು ಸಂಗೀತ ಒದಗಿಸಿರುವ ಸಾಯಿಸರ್ವೇಶ್ ಮುಂತಾದವರು ಅನುಭವಗಳನ್ನು ಹಂಚಿಕೊಂಡರು. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಬಾ.ಮ.ಹರೀಶ್, ನಟಿ,ನಿರ್ದೇಶಕಿ ಶೀತಲ್‌ಶೆಟ್ಟಿ ತಂಡಕ್ಕೆ ಶುಭ ಹಾರೈಸಲು ಆಗಮಿಸಿದ್ದರು. ’ಕನ್ನಡ ಬೆಳಸೋರ್ ಬೇಡ ಬಳಸೋರ್ ಬೇಕು’ ಎಂಬ ಅಡಿಬರಹ ಇರುವ ಚಿತ್ರವು ಸೆಪ್ಟಂಬರ್ ತಿಂಗಳಲ್ಲಿ ತೆರೆಕಾಣುವ ಸಾದ್ಯತೆ ಇದೆ.Ms. Nandini Official Trailer | Priyanka Upendra

You Will  Love   Like  These

Chitra Suddhi
daali uttarakhand kannada movie

ಡಾಲಿ ಧನಂಜಯ “ಉತ್ತರ ಕಾಂಡ”ದ ನಾಯಕ.

ವಿಜಯ್ ಕಿರಗಂದೂರು ಅರ್ಪಿಸುವ, ಕೆ.ಆರ್.ಜಿ ಸ್ಟುಡಿಯೋಸ್ ಲಾಂಛನದಲ್ಲಿ ಕಾರ್ತಿಕ್ ಹಾಗೂ ಯೋಗಿ ಜಿ ರಾಜ್ ನಿರ್ಮಿಸುತ್ತಿರುವ ” ಉತ್ತರಕಾಂಡ” ಚಿತ್ರದ ನಾಯಕನಾಗಿ ಡಾಲಿ ಧನಂಜಯ ಅಭಿನಯಿಸುತ್ತಿದ್ದಾರೆ. ಈ ಹಿಂದೆ ಕೆ.ಆರ್.ಜಿ ಸ್ಟುಡಿಯೋಸ್ ನಿರ್ಮಾಣದಲ್ಲಿ ಡಾಲಿ ಧನಂಜಯ ನಾಯಕನಾಗಿ ನಟಿಸಿದ್ದ “ರತ್ನನ ಪ್ರಪಂಚ” ಚಿತ್ರ ಸಹ ಪ್ರಚಂಡ ಯಶಸ್ಸು ಕಂಡಿತ್ತು.…

Chitra Suddhi
In the movie "December 24". Boys from Kunigal Taluk

“ಡಿಸೆಂಬರ್ 24” ಚಿತ್ರದಲ್ಲಿ ಹಾವಳಿ ಕೊಡೋಕೆ ಕುಣಿಗಲ್...

“ಡಿಸೆಂಬರ್ 24” ಚಿತ್ರದಲ್ಲಿ ಅನಿಲ್ ಗೌಡ್ರು, ಕುಮಾರ್ ಗೌಡ್ರು ಹಾಗೂ ಬೆಟ್ಟೇಗೌಡ್ರು ಖಡಕ್ ಖಳನಾಯಕರಾಗಿ ಅಭಿನಯಿಸಿದ್ದು, ಈ ಚಿತ್ರದಲ್ಲಿ ಇವರು ತುಂಬಾ ವಿಭಿನ್ನವಾದ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಈ ಚಿತ್ರದಲ್ಲಿ ನಾಯಕರ ಪಾತ್ರ ಎಷ್ಟು ಮುಖ್ಯನೋ ಹಾಗೆ ಖಳನಾಯಕರ ಪಾತ್ರಗಳು ಅಷ್ಟೇ ಮುಖ್ಯ. ಅದರಂತೆ ಖಳನಾಯಕರ ಆರ್ಭಟ ಜೋರಾಗೆ ಇರಲಿದೆ…

News
VXplore Banking & Competitive Exams Coaching Academy

ಅದು ಕೆಂಗೇರಿಯಲ್ಲಿ ಹೊಸದಾಗಿ ಶುರುವಾದ ಸ್ಪರ್ಧಾತ್ಮಕ ಪರೀಕ್ಷೆಗಳ...

ಸಾವಿರಾರು ವಿದ್ಯಾರ್ಥಿಗಳಿಗೆ ಭವಿಷ್ಯ ಕಟ್ಟಿಕೊಟ್ಟ ಪ್ರತಿಷ್ಠಿತ ವಿದ್ಯಾ ಸಂಸ್ಥೆಯ ನಿರ್ದೇಶಕರಾದ  ಚಂದ್ರ ಮೂರ್ತಿ ಯವರು ಇದರ ಸಂಸ್ಥಾಪಕರು. ಉತ್ತಮ ಮಟ್ಟದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಭೇತಿ ನೀಡುವ ಕಾರಣದಿಂದ ಈ VXplore Banking & Competitive Exams Coaching Academy. ತರಭೇತಿ ಕೇಂದ್ರವನ್ನು ತೆರೆದಿದ್ದಾರೆ. ಅದು ಆಕಾಕ್ಷಿ ವಿಧ್ಯಾರ್ಥಿಗಳಿಗೆ ಅವರ…

Chitra Suddhi
i am pregnant kannada movie censored ua

“ಐ ಆಮ್ ಪ್ರೆಗ್ನೆಂಟ್” ಚಿತ್ರವು ಸೆನ್ಸಾರ್ ಮಂಡಳಿಯಿಂದ...

“ಅನು ಸಿನಿಮಾಸ್” ಬ್ಯಾನರ್ ಅಡಿಯಲ್ಲಿ ತಯಾರಾಗುತ್ತಿರುವ “ಐ ಆಮ್ ಪ್ರೆಗ್ನೆಂಟ್” ಎಂಬ ಚಿತ್ರವನ್ನು ಸೆನ್ಸಾರ್ ಮಂಡಳಿಯಿಂದ ಉತ್ತಮ ಪ್ರತಿಕ್ರಿಯೆ ಪಡೆದಿದೆ . ಕೆಲವೇ ದಿನಗಳಲ್ಲಿ ಚಿತ್ರಮಂದಿರಕ್ಕೆ ಲಗ್ಗೆಯಿಡಲು ಚಿತ್ರತಂಡ ಎಲ್ಲ ತಯಾರಿ ಮಾಡಿಕೊಳ್ಳುತ್ತಿದ್ದಾರೆ . ಇದರಲ್ಲಿ ನುರಿತ ಕಲಾವಿದರು ಹಾಗೂ ನುರಿತ ತಂತ್ರಜ್ಞರು ಕೂಡ ಇದಕ್ಕೆ ಉತ್ತಮ ಬೆಂಬಲವನ್ನು…

Chitra Suddhi
90 bidi manig nadi song release

ನಾಳೆಯಿಂದ ನೈಂಟಿ ನಶೆ!

ಹಿರಿಯ ಹಾಸ್ಯ ನಟ ಬಿರಾದಾರ್ ಅಭಿನಯದ ಐನೂರನೇ ಚಿತ್ರ ಎಂಬ ಹಣೆಪಟ್ಟಿ ಹೊತ್ತುಕೊಂಡು ಆರಂಭದಿಂದಲೇ ಭರ್ಜರಿ ಸದ್ದು ಮಾಡುತ್ತಲೇ ಬಂದ ಚಿತ್ರ ’90 ಬಿಡಿ ಮನೀಗ್ ನಡಿ’. ಉತ್ತರ ಕರ್ನಾಟಕ ಶೈಲಿಯ ಕಾಮಿಡಿ ಕ್ರೈಂ ಥ್ರಿಲ್ಲರ್ ಕಥೆ ಎನ್ನುತ್ತಾ, ‘ಟೀಸರ್’ ಮೂಲಕ ಚಿತ್ರ ಭರವಸೆ ಮೂಡಿಸಿತ್ತು. ಇದೀಗ ಚಿತ್ರತಂಡ…