ಶ್ರೀ ಬಂಡಿ ಮಂಕಾಳಮ್ಮ ದೇವಸ್ಥಾನದಲ್ಲಿ ನಡೆಯಿತು ‘ಕಾಳಿ’ ಚಿತ್ರದ ಮುಹೂರ್ತ

Muhurta of the film 'Kali' was held at Sri Bandi Mankalamma temple

ಅಭಿಷೇಕ್​ ಅಂಬರೀಶ್​ ಮತ್ತು ಸಪ್ತಮಿ ಗೌಡ ಅಭಿನಯದಲ್ಲಿ ಎಸ್​. ಕೃಷ್ಣ ನಿರ್ದೇಶಿಸುತ್ತಿರುವ ‘ಕಾಳಿ’ ಚಿತ್ರದ ಮುಹೂರ್ತ, ಸೋಮವಾರ ಬೆಳಿಗ್ಗೆ ನಗರದ ಶ್ರೀ ಬಂಡಿ ಮಂಕಾಳಮ್ಮ ದೇವಸ್ಥಾನದಲ್ಲಿ ಯಶಸ್ವಿಯಾಗಿ ನೆರವೇರಿದೆ. Muhurta of the film 'Kali' was held at Sri Bandi Mankalamma temple

1990ರ ದಶಕದ ಕಾವೇರಿ ಗಲಭೆಯ ಹಿನ್ನೆಲೆಯಲ್ಲಿ ನಡೆಯುವ ‘ಕಾಳಿ’ ಚಿತ್ರವನ್ನು ಕೃಷ್ಣ ಅವರ ಪತ್ನಿ ಸ್ವಪ್ನಾ ಕೃಷ್ಣ ತಮ್ಮ RRR ಮೋಷನ್ ಪಿಕ್ಚರ್ಸ್ ಸಂಸ್ಥೆಯಡಿ ನಿರ್ಮಾಣ ಮಾಡುತ್ತಿದ್ದಾರೆ. ಇದು ಈ ಸಂಸ್ಥೆಯ ಮೂರನೆಯ ಚಿತ್ರವಾಗಿದೆ. ಸುದೀಪ್​ ಅಭಿನಯದ ‘ಪೈಲ್ವಾನ್​’ ಚಿತ್ರವನ್ನು ನಿರ್ಮಿಸುವ ಮೂಲಕ ಪ್ರಾರಂಭವಾದ RRR ಮೋಷನ್ ಪಿಕ್ಚರ್ಸ್ ಸಂಸ್ಥೆಯು, ಆ ನಂತರ ಪುನೀತ್​ ರಾಜ್​ಕುಮಾರ್​ ಅಭಿನಯದಲ್ಲಿ ಹೊಸ ಚಿತ್ರವೊಂದನ್ನು ಘೋಷಿಸಿತ್ತು. ಆದರೆ, ಪುನೀತ್​ ಅವರ ಅಕಾಲಿಕ ನಿಧನದಿಂದಾಗಿ, ಸಂಸ್ಥೆಯ ಎರಡನೇ ನಿರ್ಮಾಣವನ್ನು ಅವರಿಗೇ ಅರ್ಪಿಸಲಾಗುವುದು. ‘ಕಾಳಿ’ ಚಿತ್ರವು RRR ಮೋಷನ್ ಪಿಕ್ಚರ್ಸ್​ನ ಮೂರನೆಯ ಚಿತ್ರವಾಗಲಿದೆ. Muhurta of the film 'Kali' was held at Sri Bandi Mankalamma temple

ಇದಲ್ಲದೆ ಕಳೆದ 8 ವರ್ಷಗಳಿಂದ ಕನ್ನಡ ಕಿರುತೆರೆಯಲ್ಲಿ ಪ್ರಮುಖ ನಿರ್ಮಾಪರಾಗಿ ಗುರುತಿಸಿಕೊಂಡಿರುವ ಸ್ವಪ್ನ ಕೃಷ್ಣ, ಕನ್ನಡದ ನಂ.1 ಚಾನೆಲ್ ಆಗಿರುವ ‘ಜೀ ಕನ್ನಡ’ಕ್ಕಾಗಿ ಅನೇಕ ಯಶಸ್ವಿ ಧಾರಾವಾಹಿಗಳನ್ನು ನಿರ್ಮಿಸಿದ್ದಾರೆ. ಈಗ ಪ್ರಸಾರವಾಗುತ್ತಿರುವ ‘ಸತ್ಯ’ ಮತ್ತು ‘ಸೀತಾರಾಮ’ ಧಾರಾವಾಹಿಗಳು ಸಹ ಅವರ ಸಂಸ್ಥೆಯಿಂದ ನಿರ್ಮಾಣವಾಗುತ್ತಿರುವ ಧಾರಾವಾಹಿಗಳೇ. Muhurta of the film 'Kali' was held at Sri Bandi Mankalamma temple

ನಿರ್ದೇಶಕ ಕೃಷ್ಣ ಇದಕ್ಕೂ ಮುನ್ನ 25ಕ್ಕೂ ಹೆಚ್ಚು ಚಿತ್ರಗಳಿಗೆ ಛಾಯಾಗ್ರಾಹಕರಾಗಿ ಕೆಲಸ ಮಾಡಿದ್ದು, ರಾಜ್ಯ ಮತ್ತು ರಾಷ್ಟ್ರ ಮಟ್ಟದಲ್ಲಿ ಹಲವು ಪ್ರಶಸ್ತಿಗಳನ್ನು ತಮ್ಮದಾಗಿಸಿಕೊಂಡಿದ್ದಾರೆ. ‘ಮುಂಗಾರು ಮಳೆ’ ಚಿತ್ರಕ್ಕಾಗಿ ರಾಜ್ಯ ಸರ್ಕಾರದಿಂದ ಅತ್ಯುತ್ತಮ ಛಾಯಾಗ್ರಾಹಕ ಪ್ರಶಸ್ತಿಯನ್ನು ತಮ್ಮದಾಗಿಸಿಕೊಂಡ ಅವರು, 2014ರಲ್ಲಿ ಯಶ್ ಅಭಿನಯದ ಯಶಸ್ವಿ ಚಿತ್ರ ‘ಗಜಕೇಸರಿ’ ಮೂಲಕ ನಿರ್ದೇಶಕರಾದರು. ಆ ನಂತರ ಸುದೀಪ್​ ಅಭಿನಯದಲ್ಲಿ ‘ಹೆಬ್ಬುಲಿ’ ಮತ್ತು ‘ಪೈಲ್ವಾನ್​’ ಚಿತ್ರಗಳನ್ನು ನಿರ್ದೇಶಿಸಿರುವ ಕೃಷ್ಣ ಅವರ ನಾಲ್ಕನೇ ನಿರ್ದೇಶನದ ಚಿತ್ರ ಈ ‘ಕಾಳಿ’. Muhurta of the film 'Kali' was held at Sri Bandi Mankalamma temple

‘ಕಾಳಿ’ ಚಿತ್ರದಲ್ಲಿ ಅಂಬರೀಶ್ ಮತ್ತು ಸುಮಲತಾ ಅವರ ಪುತ್ರ ಅಭಿಷೇಕ್ ಅಂಬರೀಶ್ ನಾಯಕನಾಗಿ ನಟಿಸುತ್ತಿದ್ದು, ಇದು ಅವರ ಅಭಿನಯದ ಮೂರನೆಯ ಚಿತ್ರವಾಗಿದೆ. ‘ಕಾಂತಾರ’ ಖ್ಯಾತಿಯ ಸಪ್ತಮಿ ಗೌಡ ಕಾಳಿ ಚಿತ್ರದ ನಾಯಕಿಯಾಗಿ ನಟಿಸುತ್ತಿದ್ದಾರೆ. ಈ ಹಿಂದೆ ಕೃಷ್ಣ ನಿರ್ದೇಶನದ ‘ಹೆಬ್ಬುಲಿ’ ಮತ್ತು ‘ಪೈಲ್ವಾನ್’ ಚಿತ್ರಗಳಿಗೆ ಛಾಯಾಗ್ರಾಹಕರಾಗಿದ್ದ ಕರುಣಾಕರ್​, ಇಲ್ಲೂ ಛಾಯಾಗ್ರಾಹಕರಾಗಿ ಕೆಲಸ ಮಾಡುತ್ತಿದ್ದಾರೆ. ಇನ್ನು, ‘ಗೋಧಿ ಬಣ್ಣ ಸಾಧಾರಣ ಮೈಕಟ್ಟು’, ‘ಟಗರು’ ‘ಸಲಗ’ ಮುಂತಾದ ಚಿತ್ರಗಳಿಗೆ ಸಂಗೀತ ಸಂಯೋಜಿಸಿರುವ ಚರಣ್ ರಾಜ್ ಈ ಚಿತ್ರದ ಸಂಗೀತ ನಿರ್ದೇಶಕರು. ದೀಪು ಎಸ್ ಕುಮಾರ್ ಸಂಕಲನ ಮತ್ತು ‘ಕೆಜಿಎಫ್’ ಖ್ಯಾತಿಯ ಚಂದ್ರಮೌಳಿ ಈ ಚಿತ್ರಕ್ಕೆ ಸಂಭಾಷಣೆ ‘ಕಾಳಿ’ ಕಾಲಿಗೆ ಸಂಭಾಷಣೆ ಬರೆಯಲಿದ್ದಾರೆ. ಚಿತ್ರಕ್ಕೆ ಇರಲಿದೆ. Muhurta of the film 'Kali' was held at Sri Bandi Mankalamma temple

‘ಕಾಳಿ’ ಚಿತ್ರದಲ್ಲಿ ಅಭಿನಯಿಸುವ ಕಲಾವಿದರಿಗಾಗಿ ಡಿಸೆಂಬರ್​ನಲ್ಲಿ ವಿಶೇಷ ಕಾರ್ಯಾಗಾರವನ್ನು ಆಯೋಜಿಸಲಾಗಿದ್ದು, 2023ರ ಜನವರಿಯಿಂದ ಚಿತ್ರೀಕರಣ ಪ್ರಾರಂಭವಾಗಲಿದೆ.WhatsApp Image 2022 11 29 at 7.33.15 AM  Muhurta of the film 'Kali' was held at Sri Bandi Mankalamma temple  Muhurta of the film 'Kali' was held at Sri Bandi Mankalamma temple WhatsApp Image 2022 11 29 at 7.33.17 AM

You Will  Love   Like  These

Chitra Suddhi
daali uttarakhand kannada movie

ಡಾಲಿ ಧನಂಜಯ “ಉತ್ತರ ಕಾಂಡ”ದ ನಾಯಕ.

ವಿಜಯ್ ಕಿರಗಂದೂರು ಅರ್ಪಿಸುವ, ಕೆ.ಆರ್.ಜಿ ಸ್ಟುಡಿಯೋಸ್ ಲಾಂಛನದಲ್ಲಿ ಕಾರ್ತಿಕ್ ಹಾಗೂ ಯೋಗಿ ಜಿ ರಾಜ್ ನಿರ್ಮಿಸುತ್ತಿರುವ ” ಉತ್ತರಕಾಂಡ” ಚಿತ್ರದ ನಾಯಕನಾಗಿ ಡಾಲಿ ಧನಂಜಯ ಅಭಿನಯಿಸುತ್ತಿದ್ದಾರೆ. ಈ ಹಿಂದೆ ಕೆ.ಆರ್.ಜಿ ಸ್ಟುಡಿಯೋಸ್ ನಿರ್ಮಾಣದಲ್ಲಿ ಡಾಲಿ ಧನಂಜಯ ನಾಯಕನಾಗಿ ನಟಿಸಿದ್ದ “ರತ್ನನ ಪ್ರಪಂಚ” ಚಿತ್ರ ಸಹ ಪ್ರಚಂಡ ಯಶಸ್ಸು ಕಂಡಿತ್ತು.…

Chitra Suddhi
In the movie "December 24". Boys from Kunigal Taluk

“ಡಿಸೆಂಬರ್ 24” ಚಿತ್ರದಲ್ಲಿ ಹಾವಳಿ ಕೊಡೋಕೆ ಕುಣಿಗಲ್...

“ಡಿಸೆಂಬರ್ 24” ಚಿತ್ರದಲ್ಲಿ ಅನಿಲ್ ಗೌಡ್ರು, ಕುಮಾರ್ ಗೌಡ್ರು ಹಾಗೂ ಬೆಟ್ಟೇಗೌಡ್ರು ಖಡಕ್ ಖಳನಾಯಕರಾಗಿ ಅಭಿನಯಿಸಿದ್ದು, ಈ ಚಿತ್ರದಲ್ಲಿ ಇವರು ತುಂಬಾ ವಿಭಿನ್ನವಾದ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಈ ಚಿತ್ರದಲ್ಲಿ ನಾಯಕರ ಪಾತ್ರ ಎಷ್ಟು ಮುಖ್ಯನೋ ಹಾಗೆ ಖಳನಾಯಕರ ಪಾತ್ರಗಳು ಅಷ್ಟೇ ಮುಖ್ಯ. ಅದರಂತೆ ಖಳನಾಯಕರ ಆರ್ಭಟ ಜೋರಾಗೆ ಇರಲಿದೆ…

News
VXplore Banking & Competitive Exams Coaching Academy

ಅದು ಕೆಂಗೇರಿಯಲ್ಲಿ ಹೊಸದಾಗಿ ಶುರುವಾದ ಸ್ಪರ್ಧಾತ್ಮಕ ಪರೀಕ್ಷೆಗಳ...

ಸಾವಿರಾರು ವಿದ್ಯಾರ್ಥಿಗಳಿಗೆ ಭವಿಷ್ಯ ಕಟ್ಟಿಕೊಟ್ಟ ಪ್ರತಿಷ್ಠಿತ ವಿದ್ಯಾ ಸಂಸ್ಥೆಯ ನಿರ್ದೇಶಕರಾದ  ಚಂದ್ರ ಮೂರ್ತಿ ಯವರು ಇದರ ಸಂಸ್ಥಾಪಕರು. ಉತ್ತಮ ಮಟ್ಟದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಭೇತಿ ನೀಡುವ ಕಾರಣದಿಂದ ಈ VXplore Banking & Competitive Exams Coaching Academy. ತರಭೇತಿ ಕೇಂದ್ರವನ್ನು ತೆರೆದಿದ್ದಾರೆ. ಅದು ಆಕಾಕ್ಷಿ ವಿಧ್ಯಾರ್ಥಿಗಳಿಗೆ ಅವರ…

Chitra Suddhi
i am pregnant kannada movie censored ua

“ಐ ಆಮ್ ಪ್ರೆಗ್ನೆಂಟ್” ಚಿತ್ರವು ಸೆನ್ಸಾರ್ ಮಂಡಳಿಯಿಂದ...

“ಅನು ಸಿನಿಮಾಸ್” ಬ್ಯಾನರ್ ಅಡಿಯಲ್ಲಿ ತಯಾರಾಗುತ್ತಿರುವ “ಐ ಆಮ್ ಪ್ರೆಗ್ನೆಂಟ್” ಎಂಬ ಚಿತ್ರವನ್ನು ಸೆನ್ಸಾರ್ ಮಂಡಳಿಯಿಂದ ಉತ್ತಮ ಪ್ರತಿಕ್ರಿಯೆ ಪಡೆದಿದೆ . ಕೆಲವೇ ದಿನಗಳಲ್ಲಿ ಚಿತ್ರಮಂದಿರಕ್ಕೆ ಲಗ್ಗೆಯಿಡಲು ಚಿತ್ರತಂಡ ಎಲ್ಲ ತಯಾರಿ ಮಾಡಿಕೊಳ್ಳುತ್ತಿದ್ದಾರೆ . ಇದರಲ್ಲಿ ನುರಿತ ಕಲಾವಿದರು ಹಾಗೂ ನುರಿತ ತಂತ್ರಜ್ಞರು ಕೂಡ ಇದಕ್ಕೆ ಉತ್ತಮ ಬೆಂಬಲವನ್ನು…

Chitra Suddhi
90 bidi manig nadi song release

ನಾಳೆಯಿಂದ ನೈಂಟಿ ನಶೆ!

ಹಿರಿಯ ಹಾಸ್ಯ ನಟ ಬಿರಾದಾರ್ ಅಭಿನಯದ ಐನೂರನೇ ಚಿತ್ರ ಎಂಬ ಹಣೆಪಟ್ಟಿ ಹೊತ್ತುಕೊಂಡು ಆರಂಭದಿಂದಲೇ ಭರ್ಜರಿ ಸದ್ದು ಮಾಡುತ್ತಲೇ ಬಂದ ಚಿತ್ರ ’90 ಬಿಡಿ ಮನೀಗ್ ನಡಿ’. ಉತ್ತರ ಕರ್ನಾಟಕ ಶೈಲಿಯ ಕಾಮಿಡಿ ಕ್ರೈಂ ಥ್ರಿಲ್ಲರ್ ಕಥೆ ಎನ್ನುತ್ತಾ, ‘ಟೀಸರ್’ ಮೂಲಕ ಚಿತ್ರ ಭರವಸೆ ಮೂಡಿಸಿತ್ತು. ಇದೀಗ ಚಿತ್ರತಂಡ…