ಖ್ಯಾತ ಸಂಗೀತ ಸಂಯೋಜಕ ಅಮಿತ್ ತ್ರಿವೇದಿ ಅವರಿಂದ “ಉತ್ತರಕಾಂಡ”ಕ್ಕೆ ಸಂಗೀತ ಸಂಯೋಜನೆ

Music Composition for “Uttarakanda” by Amit Trivedi

ಖ್ಯಾತ ಹಿಂದಿ ಗಾಯಕ, ಸಂಗೀತ ನಿರ್ದೇಶಕ ಅಮಿತ್ ತ್ರಿವೇದಿ ಉತ್ತರಕಾಂಡ ಚಿತ್ರಕ್ಕೆ ಸಂಗೀತ ಸಂಯೋಜನೆ ಮಾಡಲಿದ್ದಾರೆ.

ಈ ಘೋಷಣೆಯ ಮೂಲಕ ಬಹು ನಿರೀಕ್ಷಿತ ಹಾಗೂ ತಾರಾಗಣದ ಚಿತ್ರ “ಉತ್ತರಕಾಂಡ” ಎಲ್ಲೆಡೆ ಸದ್ದು ಮಾಡುತ್ತಿದೆ. ಅಂತರ ರಾಷ್ಟ್ರೀಯ ಖ್ಯಾತಿಯ ಸಂಗೀತ ಸಂಯೋಜಕ ಅಮಿತ್ “ಉತ್ತರಕಾಂಡ”ಕ್ಕೆ ಸಂಗೀತ ಸಂಯೋಜನೆ ಮಾಡುತ್ತಿರುವುದು ಚಿತ್ರದ ಮೇಲಿನ ನಿರೀಕ್ಷೆಗಳನ್ನು ದುಪ್ಪಟ್ಟುಗೊಳಿಸಿದೆ. Music Composition for “Uttarakanda” by Amit Trivedi

Music Composition for “Uttarakanda” by Amit Trivedi
ಅಮಿತ್ ತ್ರಿವೇದಿ ಪ್ರಸ್ತುತ ಭಾರತೀಯ ಚಿತ್ರರಂಗದಲ್ಲಿ ಬಹು ಬೇಡಿಕೆಯ ಸಂಗೀತ ಸಂಯೋಜಕ ಹಾಗೂ ಗಾಯಕ. ಕೇವಲ ಹಿಂದಿ ಚಿತ್ರಗಳಷ್ಟೇ ಅಲ್ಲದೆ,‌ ತೆಲುಗು, ಮಲಯಾಳಂ ಚಿತ್ರಗಳಲ್ಲಿ ತಮ್ಮ ವಿಭಿನ್ನ ಸಂಗೀತ ಸಂಯೋಜನೆ ಶೈಲಿಯ ಮೂಲಕ ಛಾಪನ್ನು ಮೂಡಿಸಿದ್ದಾರೆ. ದೇವ್ ಡಿ, ಕ್ವೀನ್, ವೇಕ್ ಅಪ್ ಸಿಡ್, ಇಂಗ್ಲಿಷ್ ವಿಂಗ್ಲಿಷ್, ಕೈ ಪೋ ಚೆ, ಲೂಟೇರಾ, ಉಡ್ತಾ ಪಂಜಾಬ್, ಡಿಯರ್ ಜಿಂದಗಿ, ಸಿಕ್ರೆಟ್ ಸೂಪರ್ ಸ್ಟಾರ್, ಮನ್ಮರ್ಜಿಯಾನ್, ಅಂಧಾದುನ್, ಸೈ ರಾ‌ ನರಸಿಂಹ ರೆಡ್ಡಿ, ಜೂಬಿಲಿ ಎಂಬ ವೆಬ್ ಸೀರಿಸ್ ಮತ್ತು ಇತ್ತೀಚಿನ ಶೈತಾನ್ ಮುಂತಾದವುಗಳು ಇವರು ಸಂಗೀತ ಸಂಯೋಜನೆ ಮಾಡಿರುವ ಚಿತ್ರಗಳು. “ಉತ್ತರಕಾಂಡ”ದ ಪ್ರೋಮೋಗೆ ಸ್ಯಾಂಡಲ್ ವುಡ್ ನ ಖ್ಯಾತ ಸಂಗೀತ ನಿರ್ದೇಶಕ ಚರಣ್ ರಾಜ್ ಸಂಗೀತ ಸಂಯೋಜನೆ ಮಾಡಿದ್ದು,‌ ಸಂಪೂರ್ಣ ಚಿತ್ರಕ್ಕೆ ಅಮಿತ್ ತ್ರಿವೇದಿ ಸಂಗೀತ ಸಂಯೋಜನೆ ಮಾಡಲಿದ್ದಾರೆ.Music Composition for “Uttarakanda” by Amit Trivedi
ಈ ಕುರಿತು ಚಿತ್ರದ ನಿರ್ಮಾಪಕರು ಹಾಗೂ ನಿರ್ದೇಶಕ ರೋಹಿತ್ ಪದಕಿ ಮಾತನಾಡಿ, “ಉತ್ತರಕಾಂಡ ಚಿತ್ರದ ಮೂಲಕ ನಾವು ಉತ್ತರಕರ್ನಾಟಕದ ನಾಟಿ ಮತ್ತು ಹಳ್ಳಿಗಾಡಿನ ಕಥೆಯನ್ನು ಹೇಳಬಯಸುತ್ತೇವೆ. ಇಂತಹಾ ಸ್ಥಳೀಯ ಭಾವನೆಯನ್ನು ಉಂಟು ಮಾಡುವ ಕಥೆಗೆ ಅಮಿತ್ ತ್ರಿವೇದಿ ಅವರ ಸಂಗೀತ ಸಾಥ್ ನೀಡಲಿದೆ. ಅವರು ಈ ಚಿತ್ರಕ್ಕೆ ಸಂಗೀತ ಸಂಯೋಜನೆ ಮಾಡುವುದು ಚಿತ್ರದ ಮೆರುಗನ್ನು ಹೆಚ್ಚಿಸಲಿದೆ” ಎಂದು ಪ್ರಶಂಸೆ ವ್ಯಕ್ತಪಡಿಸಿದರು.Music Composition for “Uttarakanda” by Amit Trivedi
ಅಮಿತ್ ತ್ರಿವೇದಿ ಮಾತನಾಡಿ, ” ಈ ಚಿತ್ರದ ಕಥಾವಸ್ತು ಮತ್ತು ಭಾವನೆ ನನಗೆ ಸಂಪೂರ್ಣವಾಗಿ ಅರ್ಥವಾಗಿದೆ‌. ಚಿತ್ರಕ್ಕೆ ಸಂಗೀತ ಸಂಯೋಜನೆ ಮಾಡಲು ಉತ್ಸುಕನಾಗಿದ್ದೇನೆ” ಎಂದು ತಿಳಿಸಿದರು. “ಉತ್ತರಕಾಂಡ” ಕೆ.ಆರ್.ಜಿ ಸ್ಟೂಡಿಯೋಸ್ ಬ್ಯಾನರ್ ಅಡಿಯಲ್ಲಿ ಕಾರ್ತಿಕ್ ಗೌಡ ಮತ್ತು ಯೋಗಿ‌ ಜಿ ರಾಜ್ ನಿರ್ಮಾಣದ ಮತ್ತು ರೋಹಿತ್ ಪದಕಿ ನಿರ್ದೇಶನದ ಆಕ್ಷನ್ ಡ್ರಾಮಾ ಚಿತ್ರವಾಗಿದ್ದು,‌ಚಿತ್ರದಲ್ಲಿ ಕರುನಾಡ ಚಕ್ರವರ್ತಿ ಡಾ.ಶಿವರಾಜ್ ಕುಮಾರ್ ಮತ್ತು ನಟರಾಕ್ಷಸ ಡಾಲಿ‌ ಧನಂಜಯ ಮುಖ್ಯ ಭೂಮಿಕೆಯಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಚಿತ್ರ ತಂಡ ಈಗಾಗಲೇ ಚಿತ್ರದ ನಾಯಕಿಯ ಹುಡುಕಾಟದಲ್ಲಿದ್ದು, ಇದೇ ಏಪ್ರಿಲ್ 15ರಿಂದ ಚಿತ್ರೀಕರಣ ಆರಂಭಿಸಲಿದೆMusic Composition for “Uttarakanda” by Amit Trivedi

You Will  Love   Like  These

Chitra Suddhi
daali uttarakhand kannada movie

ಡಾಲಿ ಧನಂಜಯ “ಉತ್ತರ ಕಾಂಡ”ದ ನಾಯಕ.

ವಿಜಯ್ ಕಿರಗಂದೂರು ಅರ್ಪಿಸುವ, ಕೆ.ಆರ್.ಜಿ ಸ್ಟುಡಿಯೋಸ್ ಲಾಂಛನದಲ್ಲಿ ಕಾರ್ತಿಕ್ ಹಾಗೂ ಯೋಗಿ ಜಿ ರಾಜ್ ನಿರ್ಮಿಸುತ್ತಿರುವ ” ಉತ್ತರಕಾಂಡ” ಚಿತ್ರದ ನಾಯಕನಾಗಿ ಡಾಲಿ ಧನಂಜಯ ಅಭಿನಯಿಸುತ್ತಿದ್ದಾರೆ. ಈ ಹಿಂದೆ ಕೆ.ಆರ್.ಜಿ ಸ್ಟುಡಿಯೋಸ್ ನಿರ್ಮಾಣದಲ್ಲಿ ಡಾಲಿ ಧನಂಜಯ ನಾಯಕನಾಗಿ ನಟಿಸಿದ್ದ “ರತ್ನನ ಪ್ರಪಂಚ” ಚಿತ್ರ ಸಹ ಪ್ರಚಂಡ ಯಶಸ್ಸು ಕಂಡಿತ್ತು.…

Chitra Suddhi
In the movie "December 24". Boys from Kunigal Taluk

“ಡಿಸೆಂಬರ್ 24” ಚಿತ್ರದಲ್ಲಿ ಹಾವಳಿ ಕೊಡೋಕೆ ಕುಣಿಗಲ್...

“ಡಿಸೆಂಬರ್ 24” ಚಿತ್ರದಲ್ಲಿ ಅನಿಲ್ ಗೌಡ್ರು, ಕುಮಾರ್ ಗೌಡ್ರು ಹಾಗೂ ಬೆಟ್ಟೇಗೌಡ್ರು ಖಡಕ್ ಖಳನಾಯಕರಾಗಿ ಅಭಿನಯಿಸಿದ್ದು, ಈ ಚಿತ್ರದಲ್ಲಿ ಇವರು ತುಂಬಾ ವಿಭಿನ್ನವಾದ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಈ ಚಿತ್ರದಲ್ಲಿ ನಾಯಕರ ಪಾತ್ರ ಎಷ್ಟು ಮುಖ್ಯನೋ ಹಾಗೆ ಖಳನಾಯಕರ ಪಾತ್ರಗಳು ಅಷ್ಟೇ ಮುಖ್ಯ. ಅದರಂತೆ ಖಳನಾಯಕರ ಆರ್ಭಟ ಜೋರಾಗೆ ಇರಲಿದೆ…

News
VXplore Banking & Competitive Exams Coaching Academy

ಅದು ಕೆಂಗೇರಿಯಲ್ಲಿ ಹೊಸದಾಗಿ ಶುರುವಾದ ಸ್ಪರ್ಧಾತ್ಮಕ ಪರೀಕ್ಷೆಗಳ...

ಸಾವಿರಾರು ವಿದ್ಯಾರ್ಥಿಗಳಿಗೆ ಭವಿಷ್ಯ ಕಟ್ಟಿಕೊಟ್ಟ ಪ್ರತಿಷ್ಠಿತ ವಿದ್ಯಾ ಸಂಸ್ಥೆಯ ನಿರ್ದೇಶಕರಾದ  ಚಂದ್ರ ಮೂರ್ತಿ ಯವರು ಇದರ ಸಂಸ್ಥಾಪಕರು. ಉತ್ತಮ ಮಟ್ಟದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಭೇತಿ ನೀಡುವ ಕಾರಣದಿಂದ ಈ VXplore Banking & Competitive Exams Coaching Academy. ತರಭೇತಿ ಕೇಂದ್ರವನ್ನು ತೆರೆದಿದ್ದಾರೆ. ಅದು ಆಕಾಕ್ಷಿ ವಿಧ್ಯಾರ್ಥಿಗಳಿಗೆ ಅವರ…

Chitra Suddhi
90 bidi manig nadi song release

ನಾಳೆಯಿಂದ ನೈಂಟಿ ನಶೆ!

ಹಿರಿಯ ಹಾಸ್ಯ ನಟ ಬಿರಾದಾರ್ ಅಭಿನಯದ ಐನೂರನೇ ಚಿತ್ರ ಎಂಬ ಹಣೆಪಟ್ಟಿ ಹೊತ್ತುಕೊಂಡು ಆರಂಭದಿಂದಲೇ ಭರ್ಜರಿ ಸದ್ದು ಮಾಡುತ್ತಲೇ ಬಂದ ಚಿತ್ರ ’90 ಬಿಡಿ ಮನೀಗ್ ನಡಿ’. ಉತ್ತರ ಕರ್ನಾಟಕ ಶೈಲಿಯ ಕಾಮಿಡಿ ಕ್ರೈಂ ಥ್ರಿಲ್ಲರ್ ಕಥೆ ಎನ್ನುತ್ತಾ, ‘ಟೀಸರ್’ ಮೂಲಕ ಚಿತ್ರ ಭರವಸೆ ಮೂಡಿಸಿತ್ತು. ಇದೀಗ ಚಿತ್ರತಂಡ…

Chitra Suddhi
i am pregnant kannada movie censored ua

“ಐ ಆಮ್ ಪ್ರೆಗ್ನೆಂಟ್” ಚಿತ್ರವು ಸೆನ್ಸಾರ್ ಮಂಡಳಿಯಿಂದ...

“ಅನು ಸಿನಿಮಾಸ್” ಬ್ಯಾನರ್ ಅಡಿಯಲ್ಲಿ ತಯಾರಾಗುತ್ತಿರುವ “ಐ ಆಮ್ ಪ್ರೆಗ್ನೆಂಟ್” ಎಂಬ ಚಿತ್ರವನ್ನು ಸೆನ್ಸಾರ್ ಮಂಡಳಿಯಿಂದ ಉತ್ತಮ ಪ್ರತಿಕ್ರಿಯೆ ಪಡೆದಿದೆ . ಕೆಲವೇ ದಿನಗಳಲ್ಲಿ ಚಿತ್ರಮಂದಿರಕ್ಕೆ ಲಗ್ಗೆಯಿಡಲು ಚಿತ್ರತಂಡ ಎಲ್ಲ ತಯಾರಿ ಮಾಡಿಕೊಳ್ಳುತ್ತಿದ್ದಾರೆ . ಇದರಲ್ಲಿ ನುರಿತ ಕಲಾವಿದರು ಹಾಗೂ ನುರಿತ ತಂತ್ರಜ್ಞರು ಕೂಡ ಇದಕ್ಕೆ ಉತ್ತಮ ಬೆಂಬಲವನ್ನು…