ಮ್ಯೂಸಿಕ್ ಮಾಂತ್ರಿಕ ಮಣಿಕಾಂತ್ ಕದ್ರಿ ಸಂಗೀತ ಜರ್ನಿಗೆ ಎರಡು ದಶಕದ ಸಂಭ್ರಮ

Music maestro Manikanth Kadri celebrates two decades of music journey

ಸ್ಯಾಂಡಲ್ ವುಡ್ ಅಂಗಳದ ಮ್ಯೂಸಿಕ್ ಮಾಂತ್ರಿಕ ಮಣಿಕಾಂತ್ ಕದ್ರಿ ಸಂಗೀತ ನೀಡಿರೋ ಹಾಡುಗಳು ಯಾರಿಗೆ ಇಷ್ಟವಾಗೋದಿಲ್ಲ ಹೇಳಿ. ಹಿತವೆನಿಸುವ ಹಾಡು, ಮನಸ್ಸಿಗೆ ಮುದ ನೀಡೋ ಸಂಗೀತದ ಮೂಲಕ ಸದಾ ಎಲ್ಲರ ಮನಸೂರೆಗೊಳ್ಳುವ ಮಣಿಕಾಂತ್ ಕದ್ರಿ ಸ್ಯಾಂಡಲ್ ವುಡ್ ಅಂಗಳದಲ್ಲಿ ಎರಡು ದಶಕ ಪೂರೈಸಿದ್ದಾರೆ.Music maestro Manikanth Kadri celebrates two decades of music journey

ಯಾವುದೇ ಜಾನರ್ ಸಿನಿಮಾವಿರಲಿ ಮಣಿಕಾಂತ್ ಕದ್ರಿ ಸಂಗೀತ ಅಲ್ಲೊಂದು ಮ್ಯಾಜಿಕ್ ಮಾಡಿರುತ್ತೆ. ಹಾಡುಗಳು ಗುನುಗುವಂತೆ ಮಾಡುತ್ತೆ, ಮನಸ್ಸನ್ನು ತಲುಪುತ್ತೆ ಅದು ಇವರ ಮ್ಯೂಸಿಕ್ ಸ್ಪರ್ಶಕ್ಕಿರುವ ತಾಕತ್ತು. ‘ಪೃಥ್ವಿ’, ‘ಸವಾರಿ’, ‘ಸವಾರಿ 2’, ‘ಮದುವೆ ಮನೆ’, ‘ನಡುವೆ ಅಂತರವಿರಲಿ’, ‘ರನ್ ಆಂಟನಿ’ ಸಿನಿಮಾ ಹಾಡುಗಳು ಸೂಪರ್ ಹಿಟ್ ಆಗಿದ್ದು ಈಗಲೂ ಎಲ್ಲರ ಫೇವರೀಟ್ ಲಿಸ್ಟ್ ನಲ್ಲಿ ಮೊದಲ ಸಾಲಿನಲ್ಲಿವೆ.

‘ಗಣೇಶ’ ಸಿನಿಮಾ ಮೂಲಕ ಚಂದನವನಕ್ಕೆ ಸಂಗೀತ ನಿರ್ದೇಶಕನಾಗಿ ಹೆಜ್ಜೆ ಇಟ್ಟ ಮಣಿಕಾಂತ್ ಕದ್ರಿ ಕ್ರೇಜಿಲೋಕ, ಪೃಥ್ವಿ, ಸವಾರಿ, ಸವಾರಿ2, ರನ್ ಆಂಟನಿ, ನಡುವೆ ಅಂತರವಿರಲಿ, ಮೂಕಹಕ್ಕಿ, ಮಳೆಬಿಲ್ಲೆ, ಸ್ವಯಂವರ, ಜಾತ್ರೆ, ಮಿಸ್ಟರ್ ಗರಗಸ ಸೇರಿದಂತೆ ಹಲವು ಸಿನಿಮಾಗಳಿಗೆ ಸಂಗೀತ ನೀಡಿದ್ದಾರೆ. ತುಳು ಚಿತ್ರರಂಗಕ್ಕೂ ಇವರ ಕೊಡುಗೆ ಅಪಾರ. ಹದಿನೈದಕ್ಕೂ ಹೆಚ್ಚು ತುಳು ಸಿನಿಮಾಗಳಿಗೆ ಸಂಗೀತ ನೀಡಿರುವ ಮಣಿಕಾಂತ್ ಕದ್ರಿ ಹಲವು ಸೂಪರ್ ಹಿಟ್ ಹಾಡುಗಳನ್ನು ತುಳು ಚಿತ್ರರಂಗಕ್ಕೆ ನೀಡಿದ್ದಾರೆ. ಹೀಗೆ ಇಪತ್ತು ವರ್ಷಗಳಲ್ಲಿ ಸುಮಾರು ಎಪ್ಪತ್ತಕ್ಕೂ ಹೆಚ್ಚು ಸಿನಿಮಾಗಳಿಗೆ ಸಂಗೀತ ನಿರ್ದೇಶನ ಮಾಡಿದ್ದಾರೆ.Music maestro Manikanth Kadri celebrates two decades of music journey

ಇವರ ಸಂಗೀತ ನಿರ್ದೇಶನವಿರುವ ಹಲವು ಸಿನಿಮಾಗಳು ಬಿಡುಗಡೆಗೆ ರೆಡಿಯಾಗಿವೆ. ಡಾರ್ಲಿಂಗ್ ಕೃಷ್ಣ ಅಭಿನಯದ ‘ಮಿಸ್ಟರ್ ಬ್ಯಾಚುಲರ್’, ಬಿ.ಎಸ್.ಲಿಂಗದೇವರು ನಿರ್ದೇಶನದ ‘ವಿರಾಟಪುರ ವೈರಾಗಿ’, ರಾಜೇಂದ್ರ ಸಿಂಗ್ ಬಾಬು ನಿರ್ದೇಶನದ ‘ಬಿರ್ದುದ ಕಂಬಳ’, ಗುರುದೇಶಪಾಂಡೆ ನಿರ್ಮಾಣದ ‘ಪೆಂಟಗಾನ್’, ಕನ್ನಡ ಹಾಗೂ ತೆಲುಗಿನಲ್ಲಿ ನಿರ್ಮಾಣವಾಗಿರೋ ‘ಲೈನ್ ಮ್ಯಾನ್’ ಚಿತ್ರಗಳು ಬಿಡುಗಡೆಯಾಗಲು ರೆಡಿಯಾಗಿವೆ.

ಸಿನಿಮಾ ಸಂಗೀತ ನಿರ್ದೇಶನದ ಹೊರತಾಗಿ ತಂದೆ ಕದ್ರಿ ಗೋಪಾಲನಾಥ್ (ಖ್ಯಾತ ಸ್ಯಾಕ್ಸೋಫೋನ್ ವಾದಕ) ಹೆಸರಲ್ಲಿ ಟ್ರಸ್ಟ್ ತೆರೆದು ಯುವ ಕಲಾವಿದರಿಗೆ ವೇದಿಕೆ ಒದಗಿಸಿಕೊಡಲಾಗುತ್ತಿದೆ. ಇದರ ಜೊತೆಗೆ ನಶಿಸಿ ಹೋಗುತ್ತಿರುವ ಜಾನಪದ ಹಾಡುಗಳನ್ನು ಉಳಿಸಿಕೊಳ್ಳುವ ಕೆಲಸವೂ ಈ ಟ್ರಸ್ಟ್ ಮೂಲಕ ನಡೆಯುತ್ತಿದೆ.Music maestro Manikanth Kadri celebrates two decades of music journey

You Will  Love   Like  These

Chitra Suddhi
daali uttarakhand kannada movie

ಡಾಲಿ ಧನಂಜಯ “ಉತ್ತರ ಕಾಂಡ”ದ ನಾಯಕ.

ವಿಜಯ್ ಕಿರಗಂದೂರು ಅರ್ಪಿಸುವ, ಕೆ.ಆರ್.ಜಿ ಸ್ಟುಡಿಯೋಸ್ ಲಾಂಛನದಲ್ಲಿ ಕಾರ್ತಿಕ್ ಹಾಗೂ ಯೋಗಿ ಜಿ ರಾಜ್ ನಿರ್ಮಿಸುತ್ತಿರುವ ” ಉತ್ತರಕಾಂಡ” ಚಿತ್ರದ ನಾಯಕನಾಗಿ ಡಾಲಿ ಧನಂಜಯ ಅಭಿನಯಿಸುತ್ತಿದ್ದಾರೆ. ಈ ಹಿಂದೆ ಕೆ.ಆರ್.ಜಿ ಸ್ಟುಡಿಯೋಸ್ ನಿರ್ಮಾಣದಲ್ಲಿ ಡಾಲಿ ಧನಂಜಯ ನಾಯಕನಾಗಿ ನಟಿಸಿದ್ದ “ರತ್ನನ ಪ್ರಪಂಚ” ಚಿತ್ರ ಸಹ ಪ್ರಚಂಡ ಯಶಸ್ಸು ಕಂಡಿತ್ತು.…

Chitra Suddhi
In the movie "December 24". Boys from Kunigal Taluk

“ಡಿಸೆಂಬರ್ 24” ಚಿತ್ರದಲ್ಲಿ ಹಾವಳಿ ಕೊಡೋಕೆ ಕುಣಿಗಲ್...

“ಡಿಸೆಂಬರ್ 24” ಚಿತ್ರದಲ್ಲಿ ಅನಿಲ್ ಗೌಡ್ರು, ಕುಮಾರ್ ಗೌಡ್ರು ಹಾಗೂ ಬೆಟ್ಟೇಗೌಡ್ರು ಖಡಕ್ ಖಳನಾಯಕರಾಗಿ ಅಭಿನಯಿಸಿದ್ದು, ಈ ಚಿತ್ರದಲ್ಲಿ ಇವರು ತುಂಬಾ ವಿಭಿನ್ನವಾದ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಈ ಚಿತ್ರದಲ್ಲಿ ನಾಯಕರ ಪಾತ್ರ ಎಷ್ಟು ಮುಖ್ಯನೋ ಹಾಗೆ ಖಳನಾಯಕರ ಪಾತ್ರಗಳು ಅಷ್ಟೇ ಮುಖ್ಯ. ಅದರಂತೆ ಖಳನಾಯಕರ ಆರ್ಭಟ ಜೋರಾಗೆ ಇರಲಿದೆ…

News
VXplore Banking & Competitive Exams Coaching Academy

ಅದು ಕೆಂಗೇರಿಯಲ್ಲಿ ಹೊಸದಾಗಿ ಶುರುವಾದ ಸ್ಪರ್ಧಾತ್ಮಕ ಪರೀಕ್ಷೆಗಳ...

ಸಾವಿರಾರು ವಿದ್ಯಾರ್ಥಿಗಳಿಗೆ ಭವಿಷ್ಯ ಕಟ್ಟಿಕೊಟ್ಟ ಪ್ರತಿಷ್ಠಿತ ವಿದ್ಯಾ ಸಂಸ್ಥೆಯ ನಿರ್ದೇಶಕರಾದ  ಚಂದ್ರ ಮೂರ್ತಿ ಯವರು ಇದರ ಸಂಸ್ಥಾಪಕರು. ಉತ್ತಮ ಮಟ್ಟದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಭೇತಿ ನೀಡುವ ಕಾರಣದಿಂದ ಈ VXplore Banking & Competitive Exams Coaching Academy. ತರಭೇತಿ ಕೇಂದ್ರವನ್ನು ತೆರೆದಿದ್ದಾರೆ. ಅದು ಆಕಾಕ್ಷಿ ವಿಧ್ಯಾರ್ಥಿಗಳಿಗೆ ಅವರ…

Chitra Suddhi
90 bidi manig nadi song release

ನಾಳೆಯಿಂದ ನೈಂಟಿ ನಶೆ!

ಹಿರಿಯ ಹಾಸ್ಯ ನಟ ಬಿರಾದಾರ್ ಅಭಿನಯದ ಐನೂರನೇ ಚಿತ್ರ ಎಂಬ ಹಣೆಪಟ್ಟಿ ಹೊತ್ತುಕೊಂಡು ಆರಂಭದಿಂದಲೇ ಭರ್ಜರಿ ಸದ್ದು ಮಾಡುತ್ತಲೇ ಬಂದ ಚಿತ್ರ ’90 ಬಿಡಿ ಮನೀಗ್ ನಡಿ’. ಉತ್ತರ ಕರ್ನಾಟಕ ಶೈಲಿಯ ಕಾಮಿಡಿ ಕ್ರೈಂ ಥ್ರಿಲ್ಲರ್ ಕಥೆ ಎನ್ನುತ್ತಾ, ‘ಟೀಸರ್’ ಮೂಲಕ ಚಿತ್ರ ಭರವಸೆ ಮೂಡಿಸಿತ್ತು. ಇದೀಗ ಚಿತ್ರತಂಡ…

Chitra Suddhi
i am pregnant kannada movie censored ua

“ಐ ಆಮ್ ಪ್ರೆಗ್ನೆಂಟ್” ಚಿತ್ರವು ಸೆನ್ಸಾರ್ ಮಂಡಳಿಯಿಂದ...

“ಅನು ಸಿನಿಮಾಸ್” ಬ್ಯಾನರ್ ಅಡಿಯಲ್ಲಿ ತಯಾರಾಗುತ್ತಿರುವ “ಐ ಆಮ್ ಪ್ರೆಗ್ನೆಂಟ್” ಎಂಬ ಚಿತ್ರವನ್ನು ಸೆನ್ಸಾರ್ ಮಂಡಳಿಯಿಂದ ಉತ್ತಮ ಪ್ರತಿಕ್ರಿಯೆ ಪಡೆದಿದೆ . ಕೆಲವೇ ದಿನಗಳಲ್ಲಿ ಚಿತ್ರಮಂದಿರಕ್ಕೆ ಲಗ್ಗೆಯಿಡಲು ಚಿತ್ರತಂಡ ಎಲ್ಲ ತಯಾರಿ ಮಾಡಿಕೊಳ್ಳುತ್ತಿದ್ದಾರೆ . ಇದರಲ್ಲಿ ನುರಿತ ಕಲಾವಿದರು ಹಾಗೂ ನುರಿತ ತಂತ್ರಜ್ಞರು ಕೂಡ ಇದಕ್ಕೆ ಉತ್ತಮ ಬೆಂಬಲವನ್ನು…