“ಮೈ ನೇಮ್ ಇಸ್ ರಾಜ್”. ಡಾ||ರಾಜ್ ನೆನಪಲ್ಲಿ‌ ಸುಂದರ ಸಂಜೆ.

ಮನೋಜವಂ ಆತ್ರೇಯ ಹಾಡಿನ ಮೋಡಿಗೆ ಮನಸೋತ ಸಭಿಕರು.

ಕಳೆದ 24 ರಂದು ಡಾ||ರಾಜ್ ಜನ್ಮದಿನ. ಇದರ ಸವಿನೆನಪಿಗಾಗಿ “ಸರಿಗಮಪ” ಖ್ಯಾತಿಯ ಮರಿ ಅಣ್ಣವ್ರು ಅಂತಲೇ ಕರೆಸಿಕೊಳ್ಳುವ ಮನೋಜವಂ ಆತ್ರೇಯ, ಚೌಡಯ್ಯ ಮೆಮೋರಿಯಲ್ ಹಾಲ್ ನಲ್ಲಿ‌ “ಮೈ ನೇಮ್ ಇಸ್ ರಾಜ್” ಎಂಬ ಹೆಸರಿನ ಸಂಗೀತ ಸಂಜೆ ಏರ್ಪಡಿಸಿದರು.WhatsApp Image 2022 05 03 at 8.55.38 AM

ಮರಳೇಮಠದ ಶ್ರೀಗಳು ಸೇರಿದಂತೆ ಅನೇಕ ಸ್ವಾಮಿಗಳು, ರಾಜಕುಮಾರ್ ಅವರ ಸಾಕಷ್ಟು ಚಿತ್ರಗಳನ್ನು ನಿರ್ದೇಶಿಸಿ, ಅವರ ಒಡನಾಡಿಯಾಗಿದ್ದ ಹಿರಿಯ ನಿರ್ದೇಶಕ ಭಗವಾನ್, ಸಾಮಾಜಿಕ ಚಿಂತಕ ಚಕ್ರವರ್ತಿ ಸೂಲಿಬೆಲೆ, ಸಂಗೀತ ನಿರ್ದೇಶಕ ಸಾಧುಕೋಕಿಲ, ನಟರಾದ ಸಿಹಿಕಹಿ ಚಂದ್ರು ಹಾಗೂ ಸಿಹಿಕಹಿ ಗೀತ ಸೇರಿದಂತೆ ಸಾಕಷ್ಟು ಜನ ಗಣ್ಯರು ಹಾಗೂ ಅಪಾರ ಸಂಖ್ಯೆಯ ಸಭಿಕರು ಈ ಸುಂದರ ಸಮಾರಂಭಕ್ಕೆ ಸಾಕ್ಷಿಯಾದರು.WhatsApp Image 2022 05 03 at 8.55.37 AM 1

ಮೇಘನಾ ಹಾಗೂ ಅನುರಾಧ ಭಟ್ ಅವರ ಗಾಯನದಲ್ಲಿ‌ ತೆರೆದಿದೆ ಮನೆ ಓ ಬಾ ಅತಿಥಿ ಹಾಡಿನೊಂದಿಗೆ ಕಾರ್ಯಕ್ರಮ ಆರಂಭವಾಯಿತು. ರಾಜ್ ಅವರು ಹಾಡಿರುವ ಮಾಣಿಕ್ಯವೀಣಾ, ನಾ ನಿನ್ನ ಆಸೆ ಕಂಡು,ನಿನ್ನ ಕಂಗಳ ಬಿಸಿಯ ಹನಿಗಳು, ನಾದಮಯ, ಹೃದಯ ಸಮುದ್ರ ಕಲುಕಿ ಸೇರಿದಂತೆ ಜನಪ್ರಿಯ ಹಾಡುಗಳನ್ನು ಮನೋಜವಂ ಆತ್ರೇಯ ಆಯಾ ಹಾಡಿನ ವೇಷಭೂಷಣ ಧರಿಸಿ ಹೇಳುತ್ತಿದ್ದಾಗ ಅಲ್ಲಿದವರ ಆನಂದಕ್ಕೆ ಪಾರವೇ ಇರಲಿಲ್ಲ.WhatsApp Image 2022 05 03 at 8.55.37 AM

ಮನೋಜವಂ ಅಣ್ಣವ್ರ ಅದ್ಭುತ ಹಾಡುಗಳನ್ನು ಹಾಡುವುದರ ಮೂಲಕ ಎಲ್ಲರನ್ನೂ ಬೇರೊಂದು ಲೋಕಕ್ಕೆ ಕರೆದೊಯ್ದರು. ‌WhatsApp Image 2022 05 03 at 8.55.36 AM

ಈ ಕಾರ್ಯಕ್ರಮದಿಂದ ಬಂದ ಹಣವನ್ನು ವಿಶೇಷ ಮಕ್ಕಳನ್ನು ನೋಡಿಕೊಳ್ಳುತ್ತಿರುವ “ನವಚೇತನ” ಸಂಸ್ಥೆಗೆ ನೀಡುತ್ತಿರುವುದಾಗಿ ಮನೋಜವಂ ಹೇಳಿದರು. ಅಲ್ಲಿನ ಮಕ್ಕಳು ಸಹ ಈ ಕಾರ್ಯಕ್ರಮದಲ್ಲಿ ಭಾಗವಹಿಸಿದರು.WhatsApp Image 2022 05 03 at 8.55.36 AM 2

ನೆರೆದಿದ್ದ ಅತಿಥಿಗಳು ಡಾ||ರಾಜ್ ಅವರೊಂದಿಗಿನ ಒಡನಾಟವನ್ನು ನೆನಪಿಸಿಕೊಂಡು, ಮನೋಜವಂ ಆತ್ರೇಯ ಅವರ ಗಾಯನ ಹಾಗೂ ಆಯೋಜಿಸಿರುವ ಕಾರ್ಯಕ್ರಮವನ್ನು ಮುಕ್ತಕಂಠದಿಂದ ಶ್ಲಾಘಿಸಿದರು.

You Will  Love   Like  These

Chitra Suddhi
daali uttarakhand kannada movie

ಡಾಲಿ ಧನಂಜಯ “ಉತ್ತರ ಕಾಂಡ”ದ ನಾಯಕ.

ವಿಜಯ್ ಕಿರಗಂದೂರು ಅರ್ಪಿಸುವ, ಕೆ.ಆರ್.ಜಿ ಸ್ಟುಡಿಯೋಸ್ ಲಾಂಛನದಲ್ಲಿ ಕಾರ್ತಿಕ್ ಹಾಗೂ ಯೋಗಿ ಜಿ ರಾಜ್ ನಿರ್ಮಿಸುತ್ತಿರುವ ” ಉತ್ತರಕಾಂಡ” ಚಿತ್ರದ ನಾಯಕನಾಗಿ ಡಾಲಿ ಧನಂಜಯ ಅಭಿನಯಿಸುತ್ತಿದ್ದಾರೆ. ಈ ಹಿಂದೆ ಕೆ.ಆರ್.ಜಿ ಸ್ಟುಡಿಯೋಸ್ ನಿರ್ಮಾಣದಲ್ಲಿ ಡಾಲಿ ಧನಂಜಯ ನಾಯಕನಾಗಿ ನಟಿಸಿದ್ದ “ರತ್ನನ ಪ್ರಪಂಚ” ಚಿತ್ರ ಸಹ ಪ್ರಚಂಡ ಯಶಸ್ಸು ಕಂಡಿತ್ತು.…

Chitra Suddhi
In the movie "December 24". Boys from Kunigal Taluk

“ಡಿಸೆಂಬರ್ 24” ಚಿತ್ರದಲ್ಲಿ ಹಾವಳಿ ಕೊಡೋಕೆ ಕುಣಿಗಲ್...

“ಡಿಸೆಂಬರ್ 24” ಚಿತ್ರದಲ್ಲಿ ಅನಿಲ್ ಗೌಡ್ರು, ಕುಮಾರ್ ಗೌಡ್ರು ಹಾಗೂ ಬೆಟ್ಟೇಗೌಡ್ರು ಖಡಕ್ ಖಳನಾಯಕರಾಗಿ ಅಭಿನಯಿಸಿದ್ದು, ಈ ಚಿತ್ರದಲ್ಲಿ ಇವರು ತುಂಬಾ ವಿಭಿನ್ನವಾದ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಈ ಚಿತ್ರದಲ್ಲಿ ನಾಯಕರ ಪಾತ್ರ ಎಷ್ಟು ಮುಖ್ಯನೋ ಹಾಗೆ ಖಳನಾಯಕರ ಪಾತ್ರಗಳು ಅಷ್ಟೇ ಮುಖ್ಯ. ಅದರಂತೆ ಖಳನಾಯಕರ ಆರ್ಭಟ ಜೋರಾಗೆ ಇರಲಿದೆ…

News
VXplore Banking & Competitive Exams Coaching Academy

ಅದು ಕೆಂಗೇರಿಯಲ್ಲಿ ಹೊಸದಾಗಿ ಶುರುವಾದ ಸ್ಪರ್ಧಾತ್ಮಕ ಪರೀಕ್ಷೆಗಳ...

ಸಾವಿರಾರು ವಿದ್ಯಾರ್ಥಿಗಳಿಗೆ ಭವಿಷ್ಯ ಕಟ್ಟಿಕೊಟ್ಟ ಪ್ರತಿಷ್ಠಿತ ವಿದ್ಯಾ ಸಂಸ್ಥೆಯ ನಿರ್ದೇಶಕರಾದ  ಚಂದ್ರ ಮೂರ್ತಿ ಯವರು ಇದರ ಸಂಸ್ಥಾಪಕರು. ಉತ್ತಮ ಮಟ್ಟದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಭೇತಿ ನೀಡುವ ಕಾರಣದಿಂದ ಈ VXplore Banking & Competitive Exams Coaching Academy. ತರಭೇತಿ ಕೇಂದ್ರವನ್ನು ತೆರೆದಿದ್ದಾರೆ. ಅದು ಆಕಾಕ್ಷಿ ವಿಧ್ಯಾರ್ಥಿಗಳಿಗೆ ಅವರ…

Chitra Suddhi
i am pregnant kannada movie censored ua

“ಐ ಆಮ್ ಪ್ರೆಗ್ನೆಂಟ್” ಚಿತ್ರವು ಸೆನ್ಸಾರ್ ಮಂಡಳಿಯಿಂದ...

“ಅನು ಸಿನಿಮಾಸ್” ಬ್ಯಾನರ್ ಅಡಿಯಲ್ಲಿ ತಯಾರಾಗುತ್ತಿರುವ “ಐ ಆಮ್ ಪ್ರೆಗ್ನೆಂಟ್” ಎಂಬ ಚಿತ್ರವನ್ನು ಸೆನ್ಸಾರ್ ಮಂಡಳಿಯಿಂದ ಉತ್ತಮ ಪ್ರತಿಕ್ರಿಯೆ ಪಡೆದಿದೆ . ಕೆಲವೇ ದಿನಗಳಲ್ಲಿ ಚಿತ್ರಮಂದಿರಕ್ಕೆ ಲಗ್ಗೆಯಿಡಲು ಚಿತ್ರತಂಡ ಎಲ್ಲ ತಯಾರಿ ಮಾಡಿಕೊಳ್ಳುತ್ತಿದ್ದಾರೆ . ಇದರಲ್ಲಿ ನುರಿತ ಕಲಾವಿದರು ಹಾಗೂ ನುರಿತ ತಂತ್ರಜ್ಞರು ಕೂಡ ಇದಕ್ಕೆ ಉತ್ತಮ ಬೆಂಬಲವನ್ನು…

Chitra Suddhi
90 bidi manig nadi song release

ನಾಳೆಯಿಂದ ನೈಂಟಿ ನಶೆ!

ಹಿರಿಯ ಹಾಸ್ಯ ನಟ ಬಿರಾದಾರ್ ಅಭಿನಯದ ಐನೂರನೇ ಚಿತ್ರ ಎಂಬ ಹಣೆಪಟ್ಟಿ ಹೊತ್ತುಕೊಂಡು ಆರಂಭದಿಂದಲೇ ಭರ್ಜರಿ ಸದ್ದು ಮಾಡುತ್ತಲೇ ಬಂದ ಚಿತ್ರ ’90 ಬಿಡಿ ಮನೀಗ್ ನಡಿ’. ಉತ್ತರ ಕರ್ನಾಟಕ ಶೈಲಿಯ ಕಾಮಿಡಿ ಕ್ರೈಂ ಥ್ರಿಲ್ಲರ್ ಕಥೆ ಎನ್ನುತ್ತಾ, ‘ಟೀಸರ್’ ಮೂಲಕ ಚಿತ್ರ ಭರವಸೆ ಮೂಡಿಸಿತ್ತು. ಇದೀಗ ಚಿತ್ರತಂಡ…