ತೆರೆಗೆ ಬರಲಿ ಬೆಂಗಳೂರು ನಿರ್ಮಾತೃ ಕೆಂಪೇಗೌಡ ಸಿನಿಮಾ…ನಿರ್ದೇಶನ ಮಾಡುತ್ತಿರುವುದು ಯಾರು?

Nadaprabhu Kempegowda movie announcement

ನಾಡಪ್ರಭು ಕೆಂಪೇಗೌಡ ಸಿನಿಮಾ ಘೋಷಣೆ…ಆಕ್ಷನ್ ಕಟ್ ಹೇಳ್ತಿದ್ದಾರೆ ರಾಜ್ಯ ಪ್ರಶಸ್ತಿ ನಿರ್ದೇಶಕ ದಿನೇಶ್ ಬಾಬು

ಕನ್ನಡ ಸಿನಿಮಾ ರಂಗದಲ್ಲಿ ನಾಡಪ್ರಭು ಕೆಂಪೇಗೌಡರ ಜೀವನವನ್ನು ಆಧರಿಸಿದ ಸಂಪೂರ್ಣ ಸಿನಿಮಾ ಬಾರದೇ ಇದ್ದರೂ, ಕೆಲವು ಚಿತ್ರಗಳಲ್ಲಿ ಇವರ ಝಲಕ್‌ಗಳು ಕಾಣಿಸಿಕೊಂಡಿವೆ. ಅಷ್ಟೇ ಅಲ್ಲ ಹಾಡುಗಳಲ್ಲೂ ಮಿಂಚಿದ್ದಾರೆ. ಅಲ್ಲದೇ, ಕೆಂಪೇಗೌಡರ ಪ್ರತಿಮೆಯನ್ನು ಹಿನ್ನೆಲೆಯಾಗಿ ಇಟ್ಟುಕೊಂಡು ಹೆಣೆದಿರುವ ಹಲವು ದೃಶ್ಯಗಳನ್ನೂ ಕಾಣಬಹುದಾಗಿದೆ. ಆದರೀಗ ಬೆಂಗಳೂರಿನ ನಿರ್ಮಾತೃ ನಾಡಪ್ರಭು ಕೆಂಪೇಗೌಡರವರ ಜೀವನ ಚರಿತ್ರೆ ಸಿನಿಮಾವಾಗುತ್ತಿದೆ. ಬೆಂದಕಾಳೂರು ಕಟ್ಟಿದ ನಾಡಪ್ರಭುವಿನ‌ ಕಥೆಯನ್ನು ತೆರೆಗೆ ತರುವ ಕಾಲ ಕೂಡಿ ಬಂದಿದೆ. ಧರ್ಮಬೀರು ನಾಡಪ್ರಭು ಕೆಂಪೇಗೌಡ ಎಂಬ ಶೀರ್ಷಿಕೆಯಡಿ ಸಿನಿಮಾ ಘೋಷಣೆಯಾಗಿದೆ. Nadaprabhu Kempegowda movie announcement

Nadaprabhu Kempegowda movie announcement


ಸಿಲಿಕಾನ್ ಸಿಟಿ, ಗಾರ್ಡನ್ ಸಿಟಿ ಅಂತೆಲ್ಲಾ ಖ್ಯಾತಿ ಪಡೆದಿರುವ ಬೆಂಗಳೂರನ್ನು ಕಟ್ಟಿ ಬೆಳೆಸಿದ ನಾಡಪ್ರಭು ಕೆಂಪೇಗೌಡರ ಸಾಹಸ ಕಥೆಯನ್ನು ಸಿನಿಮಾ ರೂಪಕ್ಕೆ ಇಳಿಸುತ್ತಿರುವುದು ರಾಜ್ಯ ಪ್ರಶಸ್ತಿ ವಿಜೇತ ಖ್ಯಾತ ನಿರ್ದೇಶಕ ದಿನೇಶ್ ಬಾಬು.Nadaprabhu Kempegowda movie announcement

ಇನ್ಸ್‌ಪೆಕ್ಟರ್‌ ವಿಕ್ರಂ, ಅಭಿ ಸೇರಿದಂತೆ 50ಕ್ಕೂ ಹೆಚ್ಚು ಚಿತ್ರಗಳನ್ನು ನಿರ್ಮಿಸಿರುವ ದಿನೇಶ್ ಬಾಬು ಧರ್ಮಬೀರು ನಾಡಪ್ರಭು ಕೆಂಪೇಗೌಡ ಸಿನಿಮಾಗೆ ಆಕ್ಷನ್ ಕಟ್ ಹೇಳುತ್ತಿದ್ದಾರೆ. ಹಾಗಿದ್ರೆ ನಾಡಪ್ರಭು ಕೆಂಪೇಗೌಡರಾಗಿ ಬಣ್ಣ ಹಚ್ಚುತ್ತಿರುವವರು ಯಾರು ಅನ್ನೋದನ್ನು ಸದ್ಯಕ್ಕೆ ಚಿತ್ರತಂಡ ರಿವೀಲ್ ಮಾಡಿಲ್ಲ. ಜನಪ್ರಿಯ ನಟರೊಬ್ಬರು ಕೆಂಪೇಗೌಡರಾಗಿ ರಾರಾಜಿಸಲಿದ್ದಾರೆ ಎನ್ನುತ್ತದೆ ಚಿತ್ರತಂಡ. ಸದ್ಯ ಆ ನಟ ತಮ್ಮ ಪಾತ್ರದ ತಯಾರಿಯಲ್ಲಿ ಬ್ಯುಸಿಯಾಗಿದ್ದು, ಮುಂದಿನ ದಿನಗಳಲ್ಲಿ ಅವರನ್ನು ನಿಮ್ಮ ಮುಂದೆ ಪರಿಚಯಿಸುವುದಾಗಿ ಚಿತ್ರತಂಡ ತಿಳಿಸಿದೆ.Nadaprabhu Kempegowda movie announcement

ವೃತ್ತಿಯಲ್ಲಿ ವೈದ್ಯರಾಗಿರುವ ಕಿರಣ್ ತೋಟಂಬೈಲ್ ಸಿನಿಮಾ ಮೇಲಿನ ಪ್ರೀತಿಯಿಂದಾಗಿ ಈ ಚಿತ್ರ ನಿರ್ಮಾಣಕ್ಕೆ ಮುಂದಾಗಿದ್ದಾರೆ. ಕೆಂಪೇಗೌಡ ಮೆಡಿಕಲ್ ಕಾಲೇಜ್‌ನಲ್ಲಿ ವ್ಯಾಸಂಗ ಮಾಡುವಾಗಲೇ ಮುಂದೊಂದು ದಿನ ಕೆಂಪೇಗೌಡರ ಸಿನಿಮಾ ಮಾಡಬೇಕು ಅಂದುಕೊಂಡಿದ್ದರಂತೆ. ಅದರಂತೆ ಇಂದು ಧರ್ಮಬೀರು ನಾಡಪ್ರಭು ಕೆಂಪೇಗೌಡರ ಸಿನಿಮಾ ನಿಮ್ಮ ಮುಂದೆ ತರಲು ಸಜ್ಜಾಗಿದ್ದಾರೆ.Nadaprabhu Kempegowda movie announcement

ಧರ್ಮೇಂದ್ರ ಕುಮಾರ್ ಅರೇನಹಳ್ಳಿ ಕಥೆ ಬರೆದಿದ್ದು, ಸಂಕೇತ್ ಎಂವೈಎಸ್ ಈ ಸಿನಿಮಾಗೆ ಕ್ಯಾಮೆರಾ ಹಿಡಿಯುತ್ತಿದ್ದು, ಉಜ್ವಲ್ ಕುಲಕರ್ಣಿ ಸಂಕಲನ, ನಿರ್ಮಾಪಕರಾದ ಕಿರಣ್ ತೋಟಂಬೈಲ್ ಸಂಗೀತ ಒದಗಿಸುತ್ತಿದ್ದಾರೆ. ವಿ ನಾಗೇಂದ್ರ ಪ್ರಸಾದ್ ಹಾಗೂ ಸಂತೋಷ್ ನಾಯಕ್ ಸಾಹಿತ್ಯ ಹಾಡುಗಳಿಗಿದ್ದು, ಮಾಸ್ತಿ ಹಾಗೂ ರಘು‌ ನಿಡುವಳ್ಳಿ ಸಂಭಾಷಣೆ ಧರ್ಮಬೀರು ನಾಡಪ್ರಭು ಕೆಂಪೇಗೌಡ ಚಿತ್ರಕ್ಕಿದ್ದು, ಚೇತನ್ ರಾಜ್ ನಿರ್ಮಾಣ ನಿರ್ವಹಣೆಯನ್ನು ಮಾಡುತ್ತಿದ್ದಾರೆ. ಕನ್ನಡ ಹಾಗೂ‌‌‌ ಇಂಗ್ಲೀಷ್ ಭಾಷೆಯಲ್ಲಿ ಚಿತ್ರ‌ ನಿರ್ಮಾಣವಾಗಲಿದ್ದು, ಮೇ ಅಥವಾ ಜೂನ್ ತಿಂಗಳಲ್ಲಿ‌ ಮುಹೂರ್ತ ನಡೆಯಲಿದೆ. ಮುಹೂರ್ತ ಮುಗಿಸಿಕೊಂಡು ಚಿತ್ರತಂಡ ಶೂಟಿಂಗ್ ಅಖಾಡಕ್ಕೆ ಇಳಿಯಲಿದೆ.

You Will  Love   Like  These

Chitra Suddhi
daali uttarakhand kannada movie

ಡಾಲಿ ಧನಂಜಯ “ಉತ್ತರ ಕಾಂಡ”ದ ನಾಯಕ.

ವಿಜಯ್ ಕಿರಗಂದೂರು ಅರ್ಪಿಸುವ, ಕೆ.ಆರ್.ಜಿ ಸ್ಟುಡಿಯೋಸ್ ಲಾಂಛನದಲ್ಲಿ ಕಾರ್ತಿಕ್ ಹಾಗೂ ಯೋಗಿ ಜಿ ರಾಜ್ ನಿರ್ಮಿಸುತ್ತಿರುವ ” ಉತ್ತರಕಾಂಡ” ಚಿತ್ರದ ನಾಯಕನಾಗಿ ಡಾಲಿ ಧನಂಜಯ ಅಭಿನಯಿಸುತ್ತಿದ್ದಾರೆ. ಈ ಹಿಂದೆ ಕೆ.ಆರ್.ಜಿ ಸ್ಟುಡಿಯೋಸ್ ನಿರ್ಮಾಣದಲ್ಲಿ ಡಾಲಿ ಧನಂಜಯ ನಾಯಕನಾಗಿ ನಟಿಸಿದ್ದ “ರತ್ನನ ಪ್ರಪಂಚ” ಚಿತ್ರ ಸಹ ಪ್ರಚಂಡ ಯಶಸ್ಸು ಕಂಡಿತ್ತು.…

Chitra Suddhi
In the movie "December 24". Boys from Kunigal Taluk

“ಡಿಸೆಂಬರ್ 24” ಚಿತ್ರದಲ್ಲಿ ಹಾವಳಿ ಕೊಡೋಕೆ ಕುಣಿಗಲ್...

“ಡಿಸೆಂಬರ್ 24” ಚಿತ್ರದಲ್ಲಿ ಅನಿಲ್ ಗೌಡ್ರು, ಕುಮಾರ್ ಗೌಡ್ರು ಹಾಗೂ ಬೆಟ್ಟೇಗೌಡ್ರು ಖಡಕ್ ಖಳನಾಯಕರಾಗಿ ಅಭಿನಯಿಸಿದ್ದು, ಈ ಚಿತ್ರದಲ್ಲಿ ಇವರು ತುಂಬಾ ವಿಭಿನ್ನವಾದ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಈ ಚಿತ್ರದಲ್ಲಿ ನಾಯಕರ ಪಾತ್ರ ಎಷ್ಟು ಮುಖ್ಯನೋ ಹಾಗೆ ಖಳನಾಯಕರ ಪಾತ್ರಗಳು ಅಷ್ಟೇ ಮುಖ್ಯ. ಅದರಂತೆ ಖಳನಾಯಕರ ಆರ್ಭಟ ಜೋರಾಗೆ ಇರಲಿದೆ…

News
VXplore Banking & Competitive Exams Coaching Academy

ಅದು ಕೆಂಗೇರಿಯಲ್ಲಿ ಹೊಸದಾಗಿ ಶುರುವಾದ ಸ್ಪರ್ಧಾತ್ಮಕ ಪರೀಕ್ಷೆಗಳ...

ಸಾವಿರಾರು ವಿದ್ಯಾರ್ಥಿಗಳಿಗೆ ಭವಿಷ್ಯ ಕಟ್ಟಿಕೊಟ್ಟ ಪ್ರತಿಷ್ಠಿತ ವಿದ್ಯಾ ಸಂಸ್ಥೆಯ ನಿರ್ದೇಶಕರಾದ  ಚಂದ್ರ ಮೂರ್ತಿ ಯವರು ಇದರ ಸಂಸ್ಥಾಪಕರು. ಉತ್ತಮ ಮಟ್ಟದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಭೇತಿ ನೀಡುವ ಕಾರಣದಿಂದ ಈ VXplore Banking & Competitive Exams Coaching Academy. ತರಭೇತಿ ಕೇಂದ್ರವನ್ನು ತೆರೆದಿದ್ದಾರೆ. ಅದು ಆಕಾಕ್ಷಿ ವಿಧ್ಯಾರ್ಥಿಗಳಿಗೆ ಅವರ…

Chitra Suddhi
90 bidi manig nadi song release

ನಾಳೆಯಿಂದ ನೈಂಟಿ ನಶೆ!

ಹಿರಿಯ ಹಾಸ್ಯ ನಟ ಬಿರಾದಾರ್ ಅಭಿನಯದ ಐನೂರನೇ ಚಿತ್ರ ಎಂಬ ಹಣೆಪಟ್ಟಿ ಹೊತ್ತುಕೊಂಡು ಆರಂಭದಿಂದಲೇ ಭರ್ಜರಿ ಸದ್ದು ಮಾಡುತ್ತಲೇ ಬಂದ ಚಿತ್ರ ’90 ಬಿಡಿ ಮನೀಗ್ ನಡಿ’. ಉತ್ತರ ಕರ್ನಾಟಕ ಶೈಲಿಯ ಕಾಮಿಡಿ ಕ್ರೈಂ ಥ್ರಿಲ್ಲರ್ ಕಥೆ ಎನ್ನುತ್ತಾ, ‘ಟೀಸರ್’ ಮೂಲಕ ಚಿತ್ರ ಭರವಸೆ ಮೂಡಿಸಿತ್ತು. ಇದೀಗ ಚಿತ್ರತಂಡ…

Chitra Suddhi
i am pregnant kannada movie censored ua

“ಐ ಆಮ್ ಪ್ರೆಗ್ನೆಂಟ್” ಚಿತ್ರವು ಸೆನ್ಸಾರ್ ಮಂಡಳಿಯಿಂದ...

“ಅನು ಸಿನಿಮಾಸ್” ಬ್ಯಾನರ್ ಅಡಿಯಲ್ಲಿ ತಯಾರಾಗುತ್ತಿರುವ “ಐ ಆಮ್ ಪ್ರೆಗ್ನೆಂಟ್” ಎಂಬ ಚಿತ್ರವನ್ನು ಸೆನ್ಸಾರ್ ಮಂಡಳಿಯಿಂದ ಉತ್ತಮ ಪ್ರತಿಕ್ರಿಯೆ ಪಡೆದಿದೆ . ಕೆಲವೇ ದಿನಗಳಲ್ಲಿ ಚಿತ್ರಮಂದಿರಕ್ಕೆ ಲಗ್ಗೆಯಿಡಲು ಚಿತ್ರತಂಡ ಎಲ್ಲ ತಯಾರಿ ಮಾಡಿಕೊಳ್ಳುತ್ತಿದ್ದಾರೆ . ಇದರಲ್ಲಿ ನುರಿತ ಕಲಾವಿದರು ಹಾಗೂ ನುರಿತ ತಂತ್ರಜ್ಞರು ಕೂಡ ಇದಕ್ಕೆ ಉತ್ತಮ ಬೆಂಬಲವನ್ನು…