ಉಪ್ಪಿ ಅಭಿಮಾನಿ ನಟಿಸ್ತಿರೋ”ನಾನೇ ಹೀರೋ” ಚಿತ್ರಕ್ಕೆ ಚಾಲನೆ

Nanae Hero

ಉಪೇಂದ್ರ ಅಭಿಮಾನಿಯೊಬ್ಬ ನಟಿಸುತ್ತಿರುವ ಹಾಸ್ಯಪ್ರಧಾನ ಕಥಾಹಂದರ ಹೊಂದಿರುವ ಚಿತ್ರ “ನಾನೇ ಹೀರೋ”Nanae Hero . ಆರ್.ಕೆ.ಗಾಂಧಿ ಅವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ, ಬೃಂದ ವಿದ್ಯಾ ಪಿಕ್ಚರ್ಸ್ ಬ್ಯಾನರ್ ಅಡಿಯಲ್ಲಿ ಹಗದೂರು ಅಶೋಕ್ ರೆಡ್ಡಿ, ಮುತ್ಸಂದ್ರ ವೆಂಕಟರಾಮಯ್ಯ, ಸತ್ಯವಾನಾಗೇಶ್ ಅವರು ಜಂಟಿಯಾಗಿ ನಿರ್ಮಿಸುತ್ತಿರುವ ಈ ಚಿತ್ರದ ಮುಹೂರ್ತ ಸಮಾರಂಭ ಚಿಂತಾಮಣಿ ತಾಲ್ಲೂಕಿನ ನಲ್ಲಗುಟ್ಲಪಲ್ಲಿ ಸಪ್ತಮಾತೃಕೆಯರ ಸನ್ನಿಧಾನದಲ್ಲಿ ಇತ್ತೀಚೆಗೆ ನೆರವೇರಿತು.Nanae Hero ಚಿತ್ರದ ಪ್ರಥಮ ದೃಶ್ಯಕ್ಕೆ ಹಿರಿಯ ನಿರ್ಮಾಪಕ ಚಿಂತಾಮಣಿಯ ಬಿ. ಎನ್. ಎಸ್ .ಅವರು ಮೊದಲ ದೃಶ್ಯಕ್ಕೆ ಕ್ಲಾಪ್ ಮಾಡಿದರೆ, ಚೌಡದೇವನಹಳ್ಳಿಯ ಲಕ್ಷ್ಮಿನಾರಾಯಣ ರೆಡ್ಡಿ ಅವರು ಕ್ಯಾಮೆರಾ ಸ್ವಿಚ್ ಆನ್ ಮಾಡಿದರು.Nanae Hero

ಉಪ್ಪಿ ಅಭಿಮಾನಿಯೊಬ್ಬ ಚಿತ್ರರಂಗದಲ್ಲಿ ನಾಯಕನಾಗಬೇಕೆಂದು ಹೊರಟು, ಅದಕ್ಕಾಗಿ ಆತ ಏನೇನೆಲ್ಲಾ ಸಾಹಸ ಮಾಡುತ್ತಾನೆ ಎಂಬ ಕಥಾಹಂದರ ಈ ಚಿತ್ರದಲ್ಲಿದೆ. ನಿಮಗೇನ್ ಪ್ರಾಬ್ಲಮ್ಮು ಅನ್ನೋ ಟ್ಯಾಗ್ ಲೈನ್ ಇದಕ್ಕಿದೆ.
ಸಿನಿಮಾ ಇಂಡಸ್ಟ್ರಿ ಅಂದರೆ ಕೆಲವರಿಗೆ ಭಯದ ವಾತಾವರಣ ಸೃಷ್ಟಿಯಾಗಿದೆ. ಆ ಭಯಕ್ಕೆ ಕಾರಣಗಳೇನು ಎಂಬುದನ್ನು ಈ ಚಿತ್ರದ ಮೂಲಕNanae Hero ನಿರ್ದೇಶಕ ಆರ್.ಕೆ. ಗಾಂಧಿ ಅವರು ಹೇಳುತ್ತಿದ್ದಾರೆ.
ಈ. ಚಿತ್ರದ ಪ್ರಮುಖ ಪಾತ್ರಗಳಲ್ಲಿ ಹಗದೂರು ಅಶೋಕ್ ರೆಡ್ಡಿ, ಶೋಭ, ಶೋಭರಾಜ್, ಶಶಿಕುಮಾರ್.ಅನ್ಸರ್ ಬಾಬು, ಮಹಾಂತೇಶ ವಿರೂಪಾಕ್ಷಿ ಸಮಯ್ ಮುಂತಾದವರು ನಟಿಸುತ್ತಿದ್ದಾರೆ. ಪ್ರಮೋದ್ ಭಾರತೀಯ ಅವರ ಛಾಯಾಗ್ರಹಣ, ಎಂ. ಎಲ್. ರಾಜ ಅವರ ಸಂಗೀತ, ರಾಜೀವ್ ಕೃಷ್ಣ ಗಾಂಧಿ ಅವರ ಸಾಹಿತ್ಯ, ವಿನಯ್ ಅವರ ಸಂಕಲನ ಈ ಚಿತ್ರಕ್ಕಿದ್ದು ಇನ್ನುಳಿದ ಕಲಾವಿದ, ತಂತ್ರಜ್ಞರ ಆಯ್ಕೆ ಪ್ರಕ್ರಿಯೆ ನಡೆಯುತ್ತಿದೆ. ಹೊಸಕೋಟೆ, ಚಿಂತಾಮಣಿ ಮತ್ತು ಗಾಂಧಿನಗರದ ಹಲವು ಸಿನಿಮಾ ಕಛೇರಿಗಳಲ್ಲಿ ಒಂದೇ ಶೆಡ್ಯೂಲ್ ನಲ್ಲಿ ಚಿತ್ರದ ಚಿತ್ರೀಕರಣ ನಡೆಸಲು ಚಿತ್ರತಂಡ ಸಿದ್ದತೆ ಮಾಡಿಕೊಂಡಿದೆNanae Hero

You Will  Love   Like  These

Chitra Suddhi
daali uttarakhand kannada movie

ಡಾಲಿ ಧನಂಜಯ “ಉತ್ತರ ಕಾಂಡ”ದ ನಾಯಕ.

ವಿಜಯ್ ಕಿರಗಂದೂರು ಅರ್ಪಿಸುವ, ಕೆ.ಆರ್.ಜಿ ಸ್ಟುಡಿಯೋಸ್ ಲಾಂಛನದಲ್ಲಿ ಕಾರ್ತಿಕ್ ಹಾಗೂ ಯೋಗಿ ಜಿ ರಾಜ್ ನಿರ್ಮಿಸುತ್ತಿರುವ ” ಉತ್ತರಕಾಂಡ” ಚಿತ್ರದ ನಾಯಕನಾಗಿ ಡಾಲಿ ಧನಂಜಯ ಅಭಿನಯಿಸುತ್ತಿದ್ದಾರೆ. ಈ ಹಿಂದೆ ಕೆ.ಆರ್.ಜಿ ಸ್ಟುಡಿಯೋಸ್ ನಿರ್ಮಾಣದಲ್ಲಿ ಡಾಲಿ ಧನಂಜಯ ನಾಯಕನಾಗಿ ನಟಿಸಿದ್ದ “ರತ್ನನ ಪ್ರಪಂಚ” ಚಿತ್ರ ಸಹ ಪ್ರಚಂಡ ಯಶಸ್ಸು ಕಂಡಿತ್ತು.…

Chitra Suddhi
In the movie "December 24". Boys from Kunigal Taluk

“ಡಿಸೆಂಬರ್ 24” ಚಿತ್ರದಲ್ಲಿ ಹಾವಳಿ ಕೊಡೋಕೆ ಕುಣಿಗಲ್...

“ಡಿಸೆಂಬರ್ 24” ಚಿತ್ರದಲ್ಲಿ ಅನಿಲ್ ಗೌಡ್ರು, ಕುಮಾರ್ ಗೌಡ್ರು ಹಾಗೂ ಬೆಟ್ಟೇಗೌಡ್ರು ಖಡಕ್ ಖಳನಾಯಕರಾಗಿ ಅಭಿನಯಿಸಿದ್ದು, ಈ ಚಿತ್ರದಲ್ಲಿ ಇವರು ತುಂಬಾ ವಿಭಿನ್ನವಾದ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಈ ಚಿತ್ರದಲ್ಲಿ ನಾಯಕರ ಪಾತ್ರ ಎಷ್ಟು ಮುಖ್ಯನೋ ಹಾಗೆ ಖಳನಾಯಕರ ಪಾತ್ರಗಳು ಅಷ್ಟೇ ಮುಖ್ಯ. ಅದರಂತೆ ಖಳನಾಯಕರ ಆರ್ಭಟ ಜೋರಾಗೆ ಇರಲಿದೆ…

News
VXplore Banking & Competitive Exams Coaching Academy

ಅದು ಕೆಂಗೇರಿಯಲ್ಲಿ ಹೊಸದಾಗಿ ಶುರುವಾದ ಸ್ಪರ್ಧಾತ್ಮಕ ಪರೀಕ್ಷೆಗಳ...

ಸಾವಿರಾರು ವಿದ್ಯಾರ್ಥಿಗಳಿಗೆ ಭವಿಷ್ಯ ಕಟ್ಟಿಕೊಟ್ಟ ಪ್ರತಿಷ್ಠಿತ ವಿದ್ಯಾ ಸಂಸ್ಥೆಯ ನಿರ್ದೇಶಕರಾದ  ಚಂದ್ರ ಮೂರ್ತಿ ಯವರು ಇದರ ಸಂಸ್ಥಾಪಕರು. ಉತ್ತಮ ಮಟ್ಟದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಭೇತಿ ನೀಡುವ ಕಾರಣದಿಂದ ಈ VXplore Banking & Competitive Exams Coaching Academy. ತರಭೇತಿ ಕೇಂದ್ರವನ್ನು ತೆರೆದಿದ್ದಾರೆ. ಅದು ಆಕಾಕ್ಷಿ ವಿಧ್ಯಾರ್ಥಿಗಳಿಗೆ ಅವರ…

Chitra Suddhi
90 bidi manig nadi song release

ನಾಳೆಯಿಂದ ನೈಂಟಿ ನಶೆ!

ಹಿರಿಯ ಹಾಸ್ಯ ನಟ ಬಿರಾದಾರ್ ಅಭಿನಯದ ಐನೂರನೇ ಚಿತ್ರ ಎಂಬ ಹಣೆಪಟ್ಟಿ ಹೊತ್ತುಕೊಂಡು ಆರಂಭದಿಂದಲೇ ಭರ್ಜರಿ ಸದ್ದು ಮಾಡುತ್ತಲೇ ಬಂದ ಚಿತ್ರ ’90 ಬಿಡಿ ಮನೀಗ್ ನಡಿ’. ಉತ್ತರ ಕರ್ನಾಟಕ ಶೈಲಿಯ ಕಾಮಿಡಿ ಕ್ರೈಂ ಥ್ರಿಲ್ಲರ್ ಕಥೆ ಎನ್ನುತ್ತಾ, ‘ಟೀಸರ್’ ಮೂಲಕ ಚಿತ್ರ ಭರವಸೆ ಮೂಡಿಸಿತ್ತು. ಇದೀಗ ಚಿತ್ರತಂಡ…

Chitra Suddhi
i am pregnant kannada movie censored ua

“ಐ ಆಮ್ ಪ್ರೆಗ್ನೆಂಟ್” ಚಿತ್ರವು ಸೆನ್ಸಾರ್ ಮಂಡಳಿಯಿಂದ...

“ಅನು ಸಿನಿಮಾಸ್” ಬ್ಯಾನರ್ ಅಡಿಯಲ್ಲಿ ತಯಾರಾಗುತ್ತಿರುವ “ಐ ಆಮ್ ಪ್ರೆಗ್ನೆಂಟ್” ಎಂಬ ಚಿತ್ರವನ್ನು ಸೆನ್ಸಾರ್ ಮಂಡಳಿಯಿಂದ ಉತ್ತಮ ಪ್ರತಿಕ್ರಿಯೆ ಪಡೆದಿದೆ . ಕೆಲವೇ ದಿನಗಳಲ್ಲಿ ಚಿತ್ರಮಂದಿರಕ್ಕೆ ಲಗ್ಗೆಯಿಡಲು ಚಿತ್ರತಂಡ ಎಲ್ಲ ತಯಾರಿ ಮಾಡಿಕೊಳ್ಳುತ್ತಿದ್ದಾರೆ . ಇದರಲ್ಲಿ ನುರಿತ ಕಲಾವಿದರು ಹಾಗೂ ನುರಿತ ತಂತ್ರಜ್ಞರು ಕೂಡ ಇದಕ್ಕೆ ಉತ್ತಮ ಬೆಂಬಲವನ್ನು…