‘ವರಾಹ ರೂಪಮ್’ ಗಾಯಕನ ಮತ್ತೊಂದು ಕನ್ನಡ ಹಾಡು: ನಟ್ವರ್ ಲಾಲ್ ಗಾಗಿ ಮತ್ತೆ ಕನ್ನಡಕ್ಕೆ ಬಂದ ಸಾಯಿ ವಿಘ್ನೇಶ್

NatwarLal Song

‘ವರಾಹ ರೂಪಮ್’ ಗಾಯಕನ ಧ್ವನಿಯಲ್ಲಿ ಮತ್ತೊಂದು ಕನ್ನಡದ ಹಾಡು: ರೊಮ್ಯಾಂಟಿಕ್ ಹಾಡಿನಲ್ಲಿ ಮಿಂಚಿದ ತನುಷ್- ಸೊನಾಲ್ ನಟ್ವರ್ ಲಾಲ್‌ನ ರೊಮ್ಯಾಂಟಿಕ್ ಹಾಡಿಗೆ ಧ್ವನಿಯಾದ ‘ಕಾಂತಾರ’ ಗಾಯಕ NatwarLal SongNatwar Lal Song

ಮಡಮಕ್ಕಿ, ನಂಜುಂಡಿ ಕಲ್ಯಾಣ, ಚಿತ್ರಗಳಲ್ಲಿ ನಾಯಕನಾಗಿ ಮಿಂಚಿದ್ದ ನಟ ತನುಷ್ ಶಿವಣ್ಣ ಅಭಿನಯದ ಹೊಸ ಸಿನಿಮಾ ತೆರಿಗೆ ಬರಲು ಸಿದ್ಧವಾಗಿದೆ. ‘ಮಿ. ನಟ್ವರ್ ಲಾಲ್’ ಸಿನಿಮಾ ಮೂಲಕ ತನುಷ್ ಪ್ರೇಕ್ಷಕರ ಮುಂದೆ ಬರಲು ಸಜ್ಜಾಗಿದ್ದು ಚಿತ್ರದಲ್ಲಿ ಸೋನಲ್ ಮೆಂಟೇರೋ ನಾಯಕಿಯಾಗಿ ಕಾಣಿಸಿಕೊಂಡಿದ್ದಾರೆ. ಸದ್ಯ ಚಿತ್ರದಿಂದ ಎರಡನೇ ಹಾಡು ಬಿಡುಗಡೆಯಾಗಿದ್ದು ಪ್ರೇಕ್ಷಕರಿಂದ ಉತ್ತಮ ಪ್ರತಿಕ್ರಿಯೆ ಪಡೆದುಕೊಳ್ಳುತ್ತಿದೆ.NatwarLal Song

‘ಅಚ್ಚಚ್ಚೋ ಅಚ್ಚು ಮೆಚ್ಚಿವಳು..’ ಎನ್ನುವ ಸಾಲಿನಿಂದ ಆರಂಭವಾಗುವ ಈ ಹಾಡನ್ನು ‘ಕಾಂತಾರ’ ಸಿನಿಮಾದ ಸೂಪರ್ ಹಿಟ್ ‘ವರಾಹ ರೂಪಂ’ ಹಾಡನ್ನು ಹಾಡಿದಂತಹ ಸಾಯಿ ವಿಘ್ನೇಶ್ ಹಾಡಿದ್ದಾರೆ. ಕನ್ನಡದಲ್ಲಿ ಇದೇ ಮೊದಲ ಬಾರಿಗೆ ರೋಮ್ಯಾಂಟಿಕ್ ಹಾಡಿಗೆ ಸಾಯಿ ವಿಘ್ನೇಶ್ ಧ್ವನಿಯಾಗಿದ್ದಾರೆ…ಈ ರೋಮ್ಯಾಂಟಿಕ್ ಹಾಡನ್ನು ನಿರ್ದೇಶಕ ಭರ್ಜರಿ ಚೇತನ್ ಬರೆದಿದ್ದು ಧರ್ಮ ವಿಷ್ ಸಂಗೀತ ಸಂಯೋಜನೆ ಮಾಡಿದ್ದಾರೆ.NatwarLal Song

“ಮಿಸ್ಟರ್ ನಟ್ವರ್ ಲಾಲ್” ಸಿನಿಮಾವನ್ನ ಲವ ನಿರ್ದೇಶನ ಮಾಡಿದ್ದಾರೆ. ಅಂದಹಾಗೆ ಸಿನಿಮಾದಿಂದ ಈಗಾಗಲೇ ಟೀಸರ್ ಮತ್ತು ಮೊದಲ ಹಾಡು ಬಿಡುಗಡೆಯಾಗಿದ್ದು ಕುತೂಹಲ ಮೂಡಿಸಿತ್ತು. ಇದೀಗ ರಿಲೀಸ್ ಆಗಿರುವ ಎರಡನೇ ಹಾಡು ಚಿತ್ರದ ಮೇಲಿನ ಕುತೂಹಲವನ್ನು ದುಪ್ಪಟ್ಟು ಮಾಡಿದೆ. ಸದ್ಯ ಪ್ರಚಾರ ಕಾರ್ಯವನ್ನು ಶುರು ಮಾಡಿರುವ ಸಿನಿಮಾತಂಡ ಶೀಘ್ರದಲ್ಲೇ ಸಿನಿಮಾವನ್ನು ಬಿಡುಗಡೆ ಮಾಡಲು ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ.NatwarLal Song


ನಟ್ವರ್ ಲಾಲ್ ಸಿನಿಮಾದಲ್ಲಿ ದೊಡ್ಡ ತಾರಾ ಬಳಗವೇ ಇದ್ದು ತನುಷ್ ಹಾಗೂ ಸೋನಾಲ್ ಜೊತೆಯಲ್ಲಿ ನಾಗಭೂಷಣ್ ರಾಜೇಶ್ ನಟರಂಗ, ಕಾಕ್ರೋಚ್ ಸುದೀ, ಯಶ್ ಶೆಟ್ಟಿ ರಘುರಾಮನಕೊಪ್ಪ , ರಾಜೇಂದ್ರ ಕಾರಂತ್ ಹೀಗೆ ಸಾಕಷ್ಟು ಜನರು ಅಭಿನಯ ಮಾಡಿದ್ದಾರೆ.

ಮತ್ತೆ ಮತ್ತೆ ಟೀ ಬಿಸಿ ಮಾಡಿ ಕುಡಿಯುವುದು ಒಳ್ಳೆಯದಲ್ಲ! ಆರೋಗ್ಯಕ್ಕೆ ಎಷ್ಟು ಅಪಾಯಕಾರಿ ಗೊತ್ತಾ?

ಇನ್ನು ಚಿತ್ರವನ್ನ ತನುಷ್ ಶಿವಣ್ಣ ಅವರೇ ನಿರ್ಮಾಣ ಮಾಡಿದ್ದಾರೆ. ಸದ್ಯ ರೋಮ್ಯಾಂಟಿಕ್ ಹಾಡಿನಿಂದ ಸದ್ದು ಮಾಡುತ್ತಿರುವ ಮಿಸ್ಟರ್ ನಟ್ವರ್ ಲಾಲ್ ಸಿನಿಮಾ ಇನ್ನು ಕೆಲವೇ ದಿನಗಳಲ್ಲಿ ಪ್ರೇಕ್ಷಕರ ಮುಂದೆ ಬರಲಿದೆ.

You Will  Love   Like  These

Chitra Suddhi
daali uttarakhand kannada movie

ಡಾಲಿ ಧನಂಜಯ “ಉತ್ತರ ಕಾಂಡ”ದ ನಾಯಕ.

ವಿಜಯ್ ಕಿರಗಂದೂರು ಅರ್ಪಿಸುವ, ಕೆ.ಆರ್.ಜಿ ಸ್ಟುಡಿಯೋಸ್ ಲಾಂಛನದಲ್ಲಿ ಕಾರ್ತಿಕ್ ಹಾಗೂ ಯೋಗಿ ಜಿ ರಾಜ್ ನಿರ್ಮಿಸುತ್ತಿರುವ ” ಉತ್ತರಕಾಂಡ” ಚಿತ್ರದ ನಾಯಕನಾಗಿ ಡಾಲಿ ಧನಂಜಯ ಅಭಿನಯಿಸುತ್ತಿದ್ದಾರೆ. ಈ ಹಿಂದೆ ಕೆ.ಆರ್.ಜಿ ಸ್ಟುಡಿಯೋಸ್ ನಿರ್ಮಾಣದಲ್ಲಿ ಡಾಲಿ ಧನಂಜಯ ನಾಯಕನಾಗಿ ನಟಿಸಿದ್ದ “ರತ್ನನ ಪ್ರಪಂಚ” ಚಿತ್ರ ಸಹ ಪ್ರಚಂಡ ಯಶಸ್ಸು ಕಂಡಿತ್ತು.…

Chitra Suddhi
In the movie "December 24". Boys from Kunigal Taluk

“ಡಿಸೆಂಬರ್ 24” ಚಿತ್ರದಲ್ಲಿ ಹಾವಳಿ ಕೊಡೋಕೆ ಕುಣಿಗಲ್...

“ಡಿಸೆಂಬರ್ 24” ಚಿತ್ರದಲ್ಲಿ ಅನಿಲ್ ಗೌಡ್ರು, ಕುಮಾರ್ ಗೌಡ್ರು ಹಾಗೂ ಬೆಟ್ಟೇಗೌಡ್ರು ಖಡಕ್ ಖಳನಾಯಕರಾಗಿ ಅಭಿನಯಿಸಿದ್ದು, ಈ ಚಿತ್ರದಲ್ಲಿ ಇವರು ತುಂಬಾ ವಿಭಿನ್ನವಾದ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಈ ಚಿತ್ರದಲ್ಲಿ ನಾಯಕರ ಪಾತ್ರ ಎಷ್ಟು ಮುಖ್ಯನೋ ಹಾಗೆ ಖಳನಾಯಕರ ಪಾತ್ರಗಳು ಅಷ್ಟೇ ಮುಖ್ಯ. ಅದರಂತೆ ಖಳನಾಯಕರ ಆರ್ಭಟ ಜೋರಾಗೆ ಇರಲಿದೆ…

News
VXplore Banking & Competitive Exams Coaching Academy

ಅದು ಕೆಂಗೇರಿಯಲ್ಲಿ ಹೊಸದಾಗಿ ಶುರುವಾದ ಸ್ಪರ್ಧಾತ್ಮಕ ಪರೀಕ್ಷೆಗಳ...

ಸಾವಿರಾರು ವಿದ್ಯಾರ್ಥಿಗಳಿಗೆ ಭವಿಷ್ಯ ಕಟ್ಟಿಕೊಟ್ಟ ಪ್ರತಿಷ್ಠಿತ ವಿದ್ಯಾ ಸಂಸ್ಥೆಯ ನಿರ್ದೇಶಕರಾದ  ಚಂದ್ರ ಮೂರ್ತಿ ಯವರು ಇದರ ಸಂಸ್ಥಾಪಕರು. ಉತ್ತಮ ಮಟ್ಟದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಭೇತಿ ನೀಡುವ ಕಾರಣದಿಂದ ಈ VXplore Banking & Competitive Exams Coaching Academy. ತರಭೇತಿ ಕೇಂದ್ರವನ್ನು ತೆರೆದಿದ್ದಾರೆ. ಅದು ಆಕಾಕ್ಷಿ ವಿಧ್ಯಾರ್ಥಿಗಳಿಗೆ ಅವರ…

Chitra Suddhi
90 bidi manig nadi song release

ನಾಳೆಯಿಂದ ನೈಂಟಿ ನಶೆ!

ಹಿರಿಯ ಹಾಸ್ಯ ನಟ ಬಿರಾದಾರ್ ಅಭಿನಯದ ಐನೂರನೇ ಚಿತ್ರ ಎಂಬ ಹಣೆಪಟ್ಟಿ ಹೊತ್ತುಕೊಂಡು ಆರಂಭದಿಂದಲೇ ಭರ್ಜರಿ ಸದ್ದು ಮಾಡುತ್ತಲೇ ಬಂದ ಚಿತ್ರ ’90 ಬಿಡಿ ಮನೀಗ್ ನಡಿ’. ಉತ್ತರ ಕರ್ನಾಟಕ ಶೈಲಿಯ ಕಾಮಿಡಿ ಕ್ರೈಂ ಥ್ರಿಲ್ಲರ್ ಕಥೆ ಎನ್ನುತ್ತಾ, ‘ಟೀಸರ್’ ಮೂಲಕ ಚಿತ್ರ ಭರವಸೆ ಮೂಡಿಸಿತ್ತು. ಇದೀಗ ಚಿತ್ರತಂಡ…

Chitra Suddhi
i am pregnant kannada movie censored ua

“ಐ ಆಮ್ ಪ್ರೆಗ್ನೆಂಟ್” ಚಿತ್ರವು ಸೆನ್ಸಾರ್ ಮಂಡಳಿಯಿಂದ...

“ಅನು ಸಿನಿಮಾಸ್” ಬ್ಯಾನರ್ ಅಡಿಯಲ್ಲಿ ತಯಾರಾಗುತ್ತಿರುವ “ಐ ಆಮ್ ಪ್ರೆಗ್ನೆಂಟ್” ಎಂಬ ಚಿತ್ರವನ್ನು ಸೆನ್ಸಾರ್ ಮಂಡಳಿಯಿಂದ ಉತ್ತಮ ಪ್ರತಿಕ್ರಿಯೆ ಪಡೆದಿದೆ . ಕೆಲವೇ ದಿನಗಳಲ್ಲಿ ಚಿತ್ರಮಂದಿರಕ್ಕೆ ಲಗ್ಗೆಯಿಡಲು ಚಿತ್ರತಂಡ ಎಲ್ಲ ತಯಾರಿ ಮಾಡಿಕೊಳ್ಳುತ್ತಿದ್ದಾರೆ . ಇದರಲ್ಲಿ ನುರಿತ ಕಲಾವಿದರು ಹಾಗೂ ನುರಿತ ತಂತ್ರಜ್ಞರು ಕೂಡ ಇದಕ್ಕೆ ಉತ್ತಮ ಬೆಂಬಲವನ್ನು…