ಸೆಟ್ಟೇರಿತು ’ನಿದ್ರಾದೇವಿ Next Door’..ಪ್ರವೀರ್ ಶೆಟ್ಟಿ-ಶೈನ್ ಶೆಟ್ಟಿ ಹೊಸ ಚಿತ್ರಕ್ಕೆ ಕ್ರೇಜಿಸ್ಟಾರ್ ಕ್ಲಾಪ್..

ಸೈರನ್ ಸಿನಿಮಾ ಮೂಲಕ ಸ್ಯಾಂಡಲ್ ವುಡ್ ಗೆ ಎಂಟ್ರಿ ಕೊಟ್ಟಿದ್ದ ಪ್ರವೀರ್ ಶೆಟ್ಟಿ ಈಗ ಮತ್ತೊಂದು ವಿಭಿನ್ನ ಕಥೆ ಮೂಲಕ ಪ್ರೇಕ್ಷಕರನ್ನು ರಂಜಿಸಲು ಸಜ್ಜಾಗುತ್ತಿದೆ. ಅದರ ಮೊದಲ ಭಾಗವೆಂಬಂತೆ ಇಂದು ಬೆಂಗಳೂರಿನ ಬನಶಂಕರಿಯಲ್ಲಿರುವ ದೊಡ್ಡ ಗಣಪತಿ ದೇವಸ್ಥಾನದಲ್ಲಿ ಚಿತ್ರದ ಮುಹೂರ್ತ ಸಮಾರಂಭ ನಡೆದಿದೆ. ಕ್ರೇಜಿಸ್ಟಾರ್ ರವಿಚಂದ್ರನ್ ಪ್ರವೀರ್ ಶೆಟ್ಟಿಯ ಹೊಸ ಪ್ರಯತ್ನದ ’ನಿದ್ರಾದೇವಿ Next Door’ ಸಾಥ್ ಕೊಟ್ಟರು. ಚಿತ್ರಕ್ಕೆ ಕ್ಲಾಪ್ ಮಾಡಿದ ಕನಸುಗಾರ ಇಡೀ ತಂಡಕ್ಕೆ ಶುಭ ಹಾರೈಸಿದರು.'Nidradevi Next Door' muhurtham

ಯುವ ಪ್ರತಿಭೆ ಸುರಾಗ್ ಸಾಗರ್ ’ನಿದ್ರಾದೇವಿ Next Door’ ಸಿನಿಮಾಗೆ ಆಕ್ಷನ್ ಕಟ್ ಹೇಳುತ್ತಿದ್ದಾರೆ. ಪ್ರವೀರ್ ಶೆಟ್ಟಿ ಜೊತೆಗೆ ಶೈನ್ ಶೆಟ್ಟಿ ಕೂಡ ಪ್ರಮುಖ ಪಾತ್ರದಲ್ಲಿ ನಟಿಸುತ್ತಿದ್ದು, ರಿಷಿಕಾ ನಾಯಕ್ ನಾಯಕಿಯಾಗಿ ಬಣ್ಣ ಹಚ್ಚಿದ್ದಾರೆ. ಮುಹೂರ್ತ ಸಮಾರಂಭದ ಬಳಿಕ ಮಾತನಾಡಿದ ನಿರ್ದೇಶಕ ಸುರಾಗ್ ಸಾಗರ್, ರವಿ ಸರ್ ನಮ್ಮ ಸಿನಿಮಾಗೆ ಕ್ಲಾಪ್ ಮಾಡಿದ್ದು ಖುಷಿ ಕೊಟ್ಟಿದೆ. ಅವರು ವಿಭಿನ್ನ ಟೈಟಲ್ ಮೂಲಕ ಬರ್ತಾರೆ. ನಮ್ಮ ಟೈಟಲ್ ಕೂಡ ವಿಭಿನ್ನವಾಗಿದೆ. ಇದು ಕಾಕತಾಳೀಯ. ಇಬ್ಬರು ನಿದ್ದೆ ಇಲ್ಲದರ ಜರ್ನಿ. ಅವ್ರಿಗೆ ಯಾಕೆ ನಿದ್ದೆ ಬರಲ್ಲ. ಇದಕ್ಕೆ ಪರಿಹಾರ ಏನು. ಅದರೊಳಗೆ ಅವರು ಕಂಡುಕೊಳ್ಳುವ ಲವ್ ಸ್ಟೋರಿ. ಇದಕ್ಕೆಲ್ಲಾ ಸಿನಿಮಾ ನೋಡಬೇಕು ಎಂದರು.'Nidradevi Next Door' muhurtham


ನಿರ್ಮಾಪಕ ಜಯರಾಮ್ ದೇವಸಮುದ್ರ ಮಾತನಾಡಿ, ಪ್ರವೀಣ್ ಶೆಟ್ಟಿ ಅವರಿಗೋಸ್ಕರ್ ಈ ಪ್ರಾಜೆಕ್ಟ್ ಗೆ ಹಣ ಹಾಕುತ್ತಿದ್ದೇನೆ. ಕಥೆ ಬಹಳ ಚೆನ್ನಾಗಿದೆ. ನನಗೆ ಸುರಾಗ್ ಕಥೆ ಹೇಳಿದಾಗ ಫಸ್ಟ್ ಇಂಪ್ರೆಷನ್ ನಲ್ಲಿಯೇ ಇಷ್ಟವಾಯ್ತು. ಪ್ರತಿಯೊಬ್ಬರು ಲೈಫ್ ನಲ್ಲಿ ನಡೆಯುವ ಕೆಲ ಘಟನೆಗಳು ಜೀವನದಲ್ಲಿವೆ. ಕಾಮಿಡಿ ಜೊತೆಗೆ ಒಂದು ಸಂದೇಶ ಚಿತ್ರದಲ್ಲಿದೆ ಎಂದು ತಿಳಿಸಿದರು.'Nidradevi Next Door' muhurtham

ನಾಯಕ ಪ್ರವೀರ್ ಶೆಟ್ಟಿ ಮಾತನಾಡಿ, ನಿದ್ರೆ ಬರದಿರುವ ಹುಡುಗ ಏನೇನೂ ಕಷ್ಟಪಡುತ್ತಾನೆ. ಅದರ ಸುತ್ತ ನನ್ನ ಪಾತ್ರ ಸಾಗುತ್ತದೆ. ನನ್ನದು ಇಂಟ್ರೆಸ್ಟಿಂಗ್ ಪಾತ್ರ. ಈ ಹಿಂದಿನ ಚಿತ್ರಗಳಿಗೆ ಹೋಲಿಕೆ ಮಾಡಿದರೆ ಇದು ವಿಭಿನ್ನ ಪಾತ್ರ. ಕಳೆದೊಂದು ತಿಂಗಳಿನಿಂದ ರಿಹರ್ಸಲ್ ಮಾಡುತ್ತಿದ್ದೇವೆ ಎಂದರು.'Nidradevi Next Door' muhurtham

ನಾಯಕಿ ರಿಷಿಕಾ ನಾಯಕ್ ಮಾತನಾಡಿ, ಎರಡು ವರ್ಷದ ಹಿಂದೆಯೇ ನನಗೆ ನಿರ್ದೇಶಕರು ಸಿನಿಮಾದ ಕಥೆ ಹೇಳಿದ್ದರು. ಆಗ ಕ್ಯಾರಕ್ಟರ್ ಬೇರೆ ಇತ್ತು. ಈಗ ಕ್ಯಾರೆಕ್ಟರ್ ಬೇರೆ ಇದೆ. ಒಂದೊಳ್ಳೆ ತಂಡದ ಜೊತೆ ಕೆಲಸ ಮಾಡುತ್ತಿರುವುದು ಖುಷಿ ಕೊಟ್ಟಿದೆ ಎಂದು ತಿಳಿಸಿದರು.

ಯುರೋಪ್ ನ ಪ್ರೇಗ್ ಫಿಲ್ಮ್ ಸ್ಕೂಲ್ನಲ್ಲಿ ನಿರ್ದೇಶಕ ಪಟು ಕಲಿತಿರುವ ಸುರಾಗ್ ಸಾಗರ್ ಎಂಟ್ರೋಪಿ ಕಿರುಚಿತ್ರದ ಮೂಲಕ ಹಲವು ಪ್ರಶಸ್ತಿಗಳನ್ನು ಬಾಚಿಕೊಂಡಿದ್ದಾರೆ. ಇದೀಗ ಸುರಾಗ್ ’ನಿದ್ರಾದೇವಿ Next Door’ ಚಿತ್ರದ ಮೂಲಕ ಡೈರೆಕ್ಟರ್ ಕುರ್ಚಿ ಅಲಂಕರಿಸಿದ್ದು, ಚಿತ್ರಕ್ಕೆ ಆಕ್ಷನ್ ಕಟ್ ಹೇಳುತ್ತಿದ್ದಾರೆ. ಸುಧಾರಾಣಿ, ಶ್ರೀವತ್ಸ, ಕಾರ್ತಿಕ್ ಪತ್ತಾರ್ ಮತ್ತು ಅನುರಾಗ್ ಪಾಟೀಲ್ ಸೇರಿದಂತೆ ಇತರರು ತಾರಾಬಗಳದಲ್ಲಿ ಇದ್ದಾರೆ.'Nidradevi Next Door' muhurtham

ರಾಜು ಬೋನಗಾನಿ ಅವರ ರೋಡಿಯಂ ಎಂಟರ್ಟೈನ್ಮೆಂಟ್ ಸಹಯೋಗದೊಂದಿಗೆ ಸೂರಂ ಮೂವೀಸ್ ಬ್ಯಾನರ್ನಡಿಯಲ್ಲಿ ಜಯರಾಮ್ ದೇವಸಮುದ್ರ ನಿರ್ಮಿಸಿರುವ ಈ ಚಿತ್ರಕ್ಕೆ ಅಜಯ್ ಕುಲಕರ್ಣಿ ಅವರ ಛಾಯಾಗ್ರಹಣ ಮತ್ತು ನಕುಲ್ ಅಭ್ಯಂಕರ್ ಅವರ ಸಂಗೀತವಿದೆ. ಈ ತಿಂಗಳಾತ್ಯಂತಕ್ಕೆ ’ನಿದ್ರಾದೇವಿ Next Door’ ತಂಡ ಶೂಟಿಂಗ್ ಅಖಾಡಕ್ಕೆ ಧುಮುಕಲಿದೆ.

You Will  Love   Like  These

Chitra Suddhi
daali uttarakhand kannada movie

ಡಾಲಿ ಧನಂಜಯ “ಉತ್ತರ ಕಾಂಡ”ದ ನಾಯಕ.

ವಿಜಯ್ ಕಿರಗಂದೂರು ಅರ್ಪಿಸುವ, ಕೆ.ಆರ್.ಜಿ ಸ್ಟುಡಿಯೋಸ್ ಲಾಂಛನದಲ್ಲಿ ಕಾರ್ತಿಕ್ ಹಾಗೂ ಯೋಗಿ ಜಿ ರಾಜ್ ನಿರ್ಮಿಸುತ್ತಿರುವ ” ಉತ್ತರಕಾಂಡ” ಚಿತ್ರದ ನಾಯಕನಾಗಿ ಡಾಲಿ ಧನಂಜಯ ಅಭಿನಯಿಸುತ್ತಿದ್ದಾರೆ. ಈ ಹಿಂದೆ ಕೆ.ಆರ್.ಜಿ ಸ್ಟುಡಿಯೋಸ್ ನಿರ್ಮಾಣದಲ್ಲಿ ಡಾಲಿ ಧನಂಜಯ ನಾಯಕನಾಗಿ ನಟಿಸಿದ್ದ “ರತ್ನನ ಪ್ರಪಂಚ” ಚಿತ್ರ ಸಹ ಪ್ರಚಂಡ ಯಶಸ್ಸು ಕಂಡಿತ್ತು.…

Chitra Suddhi
In the movie "December 24". Boys from Kunigal Taluk

“ಡಿಸೆಂಬರ್ 24” ಚಿತ್ರದಲ್ಲಿ ಹಾವಳಿ ಕೊಡೋಕೆ ಕುಣಿಗಲ್...

“ಡಿಸೆಂಬರ್ 24” ಚಿತ್ರದಲ್ಲಿ ಅನಿಲ್ ಗೌಡ್ರು, ಕುಮಾರ್ ಗೌಡ್ರು ಹಾಗೂ ಬೆಟ್ಟೇಗೌಡ್ರು ಖಡಕ್ ಖಳನಾಯಕರಾಗಿ ಅಭಿನಯಿಸಿದ್ದು, ಈ ಚಿತ್ರದಲ್ಲಿ ಇವರು ತುಂಬಾ ವಿಭಿನ್ನವಾದ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಈ ಚಿತ್ರದಲ್ಲಿ ನಾಯಕರ ಪಾತ್ರ ಎಷ್ಟು ಮುಖ್ಯನೋ ಹಾಗೆ ಖಳನಾಯಕರ ಪಾತ್ರಗಳು ಅಷ್ಟೇ ಮುಖ್ಯ. ಅದರಂತೆ ಖಳನಾಯಕರ ಆರ್ಭಟ ಜೋರಾಗೆ ಇರಲಿದೆ…

News
VXplore Banking & Competitive Exams Coaching Academy

ಅದು ಕೆಂಗೇರಿಯಲ್ಲಿ ಹೊಸದಾಗಿ ಶುರುವಾದ ಸ್ಪರ್ಧಾತ್ಮಕ ಪರೀಕ್ಷೆಗಳ...

ಸಾವಿರಾರು ವಿದ್ಯಾರ್ಥಿಗಳಿಗೆ ಭವಿಷ್ಯ ಕಟ್ಟಿಕೊಟ್ಟ ಪ್ರತಿಷ್ಠಿತ ವಿದ್ಯಾ ಸಂಸ್ಥೆಯ ನಿರ್ದೇಶಕರಾದ  ಚಂದ್ರ ಮೂರ್ತಿ ಯವರು ಇದರ ಸಂಸ್ಥಾಪಕರು. ಉತ್ತಮ ಮಟ್ಟದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಭೇತಿ ನೀಡುವ ಕಾರಣದಿಂದ ಈ VXplore Banking & Competitive Exams Coaching Academy. ತರಭೇತಿ ಕೇಂದ್ರವನ್ನು ತೆರೆದಿದ್ದಾರೆ. ಅದು ಆಕಾಕ್ಷಿ ವಿಧ್ಯಾರ್ಥಿಗಳಿಗೆ ಅವರ…

Chitra Suddhi
90 bidi manig nadi song release

ನಾಳೆಯಿಂದ ನೈಂಟಿ ನಶೆ!

ಹಿರಿಯ ಹಾಸ್ಯ ನಟ ಬಿರಾದಾರ್ ಅಭಿನಯದ ಐನೂರನೇ ಚಿತ್ರ ಎಂಬ ಹಣೆಪಟ್ಟಿ ಹೊತ್ತುಕೊಂಡು ಆರಂಭದಿಂದಲೇ ಭರ್ಜರಿ ಸದ್ದು ಮಾಡುತ್ತಲೇ ಬಂದ ಚಿತ್ರ ’90 ಬಿಡಿ ಮನೀಗ್ ನಡಿ’. ಉತ್ತರ ಕರ್ನಾಟಕ ಶೈಲಿಯ ಕಾಮಿಡಿ ಕ್ರೈಂ ಥ್ರಿಲ್ಲರ್ ಕಥೆ ಎನ್ನುತ್ತಾ, ‘ಟೀಸರ್’ ಮೂಲಕ ಚಿತ್ರ ಭರವಸೆ ಮೂಡಿಸಿತ್ತು. ಇದೀಗ ಚಿತ್ರತಂಡ…

Chitra Suddhi
i am pregnant kannada movie censored ua

“ಐ ಆಮ್ ಪ್ರೆಗ್ನೆಂಟ್” ಚಿತ್ರವು ಸೆನ್ಸಾರ್ ಮಂಡಳಿಯಿಂದ...

“ಅನು ಸಿನಿಮಾಸ್” ಬ್ಯಾನರ್ ಅಡಿಯಲ್ಲಿ ತಯಾರಾಗುತ್ತಿರುವ “ಐ ಆಮ್ ಪ್ರೆಗ್ನೆಂಟ್” ಎಂಬ ಚಿತ್ರವನ್ನು ಸೆನ್ಸಾರ್ ಮಂಡಳಿಯಿಂದ ಉತ್ತಮ ಪ್ರತಿಕ್ರಿಯೆ ಪಡೆದಿದೆ . ಕೆಲವೇ ದಿನಗಳಲ್ಲಿ ಚಿತ್ರಮಂದಿರಕ್ಕೆ ಲಗ್ಗೆಯಿಡಲು ಚಿತ್ರತಂಡ ಎಲ್ಲ ತಯಾರಿ ಮಾಡಿಕೊಳ್ಳುತ್ತಿದ್ದಾರೆ . ಇದರಲ್ಲಿ ನುರಿತ ಕಲಾವಿದರು ಹಾಗೂ ನುರಿತ ತಂತ್ರಜ್ಞರು ಕೂಡ ಇದಕ್ಕೆ ಉತ್ತಮ ಬೆಂಬಲವನ್ನು…