ನಿಖಿಲ್ ಕುಮಾರ್ ಅಭಿನಯದ ನೂತನ ಚಿತ್ರ ಆರಂಭ .

Nikhil Kumar's new movie is starting.

ನಿಖಿಲ್ ಕುಮಾರ್ ನಾಯಕರಾಗಿ ನಟಿಸುತ್ತಿರುವ ನೂತನ ಚಿತ್ರದ ಮುಹೂರ್ತ ಸಮಾರಂಭ ಇತ್ತೀಚೆಗೆ ನೆರವೇರಿತು. ಮಾಜಿ ಪ್ರಧಾನ ಮಂತ್ರಿಗಳಾದ ಹೆಚ್ ಡಿ ದೇವೇಗೌಡ ಅವರು ಕಾರ್ಯಕ್ರಮಕ್ಕೆ ಆಗಮಿಸಿ ದೀಪ ಬೆಳಗುವ ಮೂಲಕ ಚಾಲನೆ ನೀಡಿದರು. ಮಾಜಿ ಮುಖ್ಯಮಂತ್ರಿಗಳಾದ ಹೆಚ್ ಡಿ ಕುಮಾರಸ್ವಾಮಿ ನೂತನ ಚಿತ್ರದ ಮೊದಲ ಸನ್ನಿವೇಶಕ್ಕೆ ಆರಂಭ ಫಲಕ ತೋರಿದರು.Nikhil Kumar's new movie is starting.

ದಕ್ಷಿಣ ಭಾರತದ ಹೆಸರಾಂತ ಚಿತ್ರ ನಿರ್ಮಾಣ ಸಂಸ್ಥೆ ಲೈಕಾ ಪ್ರೊಡಕ್ಷನ್ಸ್ ಸಂಸ್ಥೆ ಈಗ ಈ ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದೆ. ಈ ಚಿತ್ರದ ನಾಯಕನಾಗಿ ನಾನು ನಟಿಸುತ್ತಿದ್ದೇನೆ. ಲಕ್ಷ್ಮಣ್ ಅವರು ಈ ಚಿತ್ರದ ನಿರ್ದೇಶಕರು. ಈ ಹಿಂದೆ “ಸೀತಾರಾಮ ಕಲ್ಯಾಣ” ಚಿತ್ರದ ಆಡಿಯೋ ಬಿಡುಗಡೆ ಸಮಾರಂಭಕ್ಕೆ ಲೈಕಾ ಸಂಸ್ಥೆಯ ಸುಭಾಸ್ಕರನ್ ಅವರು ಆಗಮಿಸಿದ್ದರು. “ನಮ್ಮ ಸಂಸ್ಥೆಯ ನಿರ್ಮಾಣದ ಚಿತ್ರದಲ್ಲಿ ನೀವು ನಾಯಕರಾಗಿ ನಟಿಸಬೇಕು” ಎಂದು ಸುಭಾಸ್ಕರನ್ ಅವರು ಹೇಳಿದ್ದರು. ಈಗ ಚಿತ್ರ ಆರಂಭವಾಗುತ್ತಿದೆ. ಈ ಚಿತ್ರಕ್ಕಾಗಿ ನಿರ್ದೇಶಕರು ಒಂದು ವರ್ಷದಿಂದ ಬೆಂಗಳೂರಿನಲ್ಲೇ ಇದ್ದು ಕೆಲಸ ಮಾಡುತ್ತಿದ್ದಾರೆ. ಸದ್ಯದಲ್ಲೇ ಚಿತ್ರದ ಕುರಿತು ಹೆಚ್ಚಿನ ಮಾಹಿತಿ ನೀಡುವುದಾಗಿ ನಿಖಿಲ್ ಕುಮಾರ್ ತಿಳಿಸಿದರು.Nikhil Kumar's new movie is starting.

ತಮ್ಮ‌ ತಂಡವನ್ನು ಪರಿಚಯಿಸುತ್ತಾ ಮಾತು ಪ್ರಾರಂಭಿಸಿದ ನಿರ್ದೇಶಕ ಲಕ್ಷ್ಮಣ್, ಕನ್ನಡದಲ್ಲಿ ಇದು ನನ್ನ ಮೊದಲ ಚಿತ್ರ. ನಾನು ಬರೆದ ಕಥೆಯನ್ನು ಒಪ್ಪಿ ಚಿತ್ರ ನಿರ್ಮಾಣಕ್ಕೆ ಮುಂದಾಗಿರುವ ನಿರ್ಮಾಪಕರಿಗೆ ಹಾಗೂ ನಾಯಕ ನಿಖಿಲ್ ಕುಮಾರ್ ಅವರಿಗೆ ಧನ್ಯವಾದ. ಒಳ್ಳೆಯ ತಂಡದೊಂದಿಗೆ ಒಳ್ಳೆಯ ಚಿತ್ರ ನೀಡುವ ನಂಬಿಕೆ ಇದೆ. ಮುಂದಿನ ದಿನಗಳಲ್ಲಿ ಚಿತ್ರದ ಕುರಿತು ಹೆಚ್ಚಿನ ವಿವರಣೆ ನೀಡುತ್ತೇನೆ. ನಿಮ್ಮೆಲ್ಲರ ಹಾರೈಕೆ ಇರಲಿ ಎಂದರು.Nikhil Kumar's new movie is starting.

ಈ ಚಿತ್ರದಲ್ಲಿ ನಟಿಸುವಂತೆ ನಿಖಿಲ್ ಅವರು ಹೇಳಿದರು. ನಾನು ಕಥೆ ಕೇಳಿ ಒಪ್ಪಿಕೊಂಡೆ. ಕಥೆ ಚೆನ್ನಾಗಿದೆ ಎಂದು ನಟ ಕೋಮಲ್ ತಿಳಿಸಿದರು. ಲೈಕಾ ಪ್ರೊಡಕ್ಷನ್ಸ್ ಸಂಸ್ಥೆಯ ಮೂಲಕ ನಿರ್ಮಾಣವಾಗುತ್ತಿರುವ ಮೊದಲ ಕನ್ನಡ ಚಿತ್ರವಿದು. ಚಿತ್ರ ಯಶಸ್ವಿಯಾಗಲಿ ಎಂದು ಲೈಕಾ ಪ್ರೊಡಕ್ಷನ್ಸ್ ಮುಖ್ಯಸ್ಥರಾದ ಸುಭಾಸ್ಕರನ್ ಅವರು ಹಾರೈಸಿದರು.Nikhil Kumar's new movie is starting.

ನಾಯಕಿ ಯುಕ್ತಿ ತರೇಜ ಸಹ ನೂತನ ಚಿತ್ರದ ಕುರಿತು ಮಾತನಾಡಿದರು. ಹಲವಾರು ತಂತ್ರಜ್ಞರು ಹಾಗೂ ಗಣ್ಯರು ಮುಹೂರ್ತ ಸಮಾರಂಭದಲ್ಲಿ ಉಪಸ್ಥಿತರಿದ್ದರು.Nikhil Kumar's new movie is starting.

You Will  Love   Like  These

Chitra Suddhi
daali uttarakhand kannada movie

ಡಾಲಿ ಧನಂಜಯ “ಉತ್ತರ ಕಾಂಡ”ದ ನಾಯಕ.

ವಿಜಯ್ ಕಿರಗಂದೂರು ಅರ್ಪಿಸುವ, ಕೆ.ಆರ್.ಜಿ ಸ್ಟುಡಿಯೋಸ್ ಲಾಂಛನದಲ್ಲಿ ಕಾರ್ತಿಕ್ ಹಾಗೂ ಯೋಗಿ ಜಿ ರಾಜ್ ನಿರ್ಮಿಸುತ್ತಿರುವ ” ಉತ್ತರಕಾಂಡ” ಚಿತ್ರದ ನಾಯಕನಾಗಿ ಡಾಲಿ ಧನಂಜಯ ಅಭಿನಯಿಸುತ್ತಿದ್ದಾರೆ. ಈ ಹಿಂದೆ ಕೆ.ಆರ್.ಜಿ ಸ್ಟುಡಿಯೋಸ್ ನಿರ್ಮಾಣದಲ್ಲಿ ಡಾಲಿ ಧನಂಜಯ ನಾಯಕನಾಗಿ ನಟಿಸಿದ್ದ “ರತ್ನನ ಪ್ರಪಂಚ” ಚಿತ್ರ ಸಹ ಪ್ರಚಂಡ ಯಶಸ್ಸು ಕಂಡಿತ್ತು.…

Chitra Suddhi
In the movie "December 24". Boys from Kunigal Taluk

“ಡಿಸೆಂಬರ್ 24” ಚಿತ್ರದಲ್ಲಿ ಹಾವಳಿ ಕೊಡೋಕೆ ಕುಣಿಗಲ್...

“ಡಿಸೆಂಬರ್ 24” ಚಿತ್ರದಲ್ಲಿ ಅನಿಲ್ ಗೌಡ್ರು, ಕುಮಾರ್ ಗೌಡ್ರು ಹಾಗೂ ಬೆಟ್ಟೇಗೌಡ್ರು ಖಡಕ್ ಖಳನಾಯಕರಾಗಿ ಅಭಿನಯಿಸಿದ್ದು, ಈ ಚಿತ್ರದಲ್ಲಿ ಇವರು ತುಂಬಾ ವಿಭಿನ್ನವಾದ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಈ ಚಿತ್ರದಲ್ಲಿ ನಾಯಕರ ಪಾತ್ರ ಎಷ್ಟು ಮುಖ್ಯನೋ ಹಾಗೆ ಖಳನಾಯಕರ ಪಾತ್ರಗಳು ಅಷ್ಟೇ ಮುಖ್ಯ. ಅದರಂತೆ ಖಳನಾಯಕರ ಆರ್ಭಟ ಜೋರಾಗೆ ಇರಲಿದೆ…

News
VXplore Banking & Competitive Exams Coaching Academy

ಅದು ಕೆಂಗೇರಿಯಲ್ಲಿ ಹೊಸದಾಗಿ ಶುರುವಾದ ಸ್ಪರ್ಧಾತ್ಮಕ ಪರೀಕ್ಷೆಗಳ...

ಸಾವಿರಾರು ವಿದ್ಯಾರ್ಥಿಗಳಿಗೆ ಭವಿಷ್ಯ ಕಟ್ಟಿಕೊಟ್ಟ ಪ್ರತಿಷ್ಠಿತ ವಿದ್ಯಾ ಸಂಸ್ಥೆಯ ನಿರ್ದೇಶಕರಾದ  ಚಂದ್ರ ಮೂರ್ತಿ ಯವರು ಇದರ ಸಂಸ್ಥಾಪಕರು. ಉತ್ತಮ ಮಟ್ಟದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಭೇತಿ ನೀಡುವ ಕಾರಣದಿಂದ ಈ VXplore Banking & Competitive Exams Coaching Academy. ತರಭೇತಿ ಕೇಂದ್ರವನ್ನು ತೆರೆದಿದ್ದಾರೆ. ಅದು ಆಕಾಕ್ಷಿ ವಿಧ್ಯಾರ್ಥಿಗಳಿಗೆ ಅವರ…

Chitra Suddhi
i am pregnant kannada movie censored ua

“ಐ ಆಮ್ ಪ್ರೆಗ್ನೆಂಟ್” ಚಿತ್ರವು ಸೆನ್ಸಾರ್ ಮಂಡಳಿಯಿಂದ...

“ಅನು ಸಿನಿಮಾಸ್” ಬ್ಯಾನರ್ ಅಡಿಯಲ್ಲಿ ತಯಾರಾಗುತ್ತಿರುವ “ಐ ಆಮ್ ಪ್ರೆಗ್ನೆಂಟ್” ಎಂಬ ಚಿತ್ರವನ್ನು ಸೆನ್ಸಾರ್ ಮಂಡಳಿಯಿಂದ ಉತ್ತಮ ಪ್ರತಿಕ್ರಿಯೆ ಪಡೆದಿದೆ . ಕೆಲವೇ ದಿನಗಳಲ್ಲಿ ಚಿತ್ರಮಂದಿರಕ್ಕೆ ಲಗ್ಗೆಯಿಡಲು ಚಿತ್ರತಂಡ ಎಲ್ಲ ತಯಾರಿ ಮಾಡಿಕೊಳ್ಳುತ್ತಿದ್ದಾರೆ . ಇದರಲ್ಲಿ ನುರಿತ ಕಲಾವಿದರು ಹಾಗೂ ನುರಿತ ತಂತ್ರಜ್ಞರು ಕೂಡ ಇದಕ್ಕೆ ಉತ್ತಮ ಬೆಂಬಲವನ್ನು…

Chitra Suddhi
90 bidi manig nadi song release

ನಾಳೆಯಿಂದ ನೈಂಟಿ ನಶೆ!

ಹಿರಿಯ ಹಾಸ್ಯ ನಟ ಬಿರಾದಾರ್ ಅಭಿನಯದ ಐನೂರನೇ ಚಿತ್ರ ಎಂಬ ಹಣೆಪಟ್ಟಿ ಹೊತ್ತುಕೊಂಡು ಆರಂಭದಿಂದಲೇ ಭರ್ಜರಿ ಸದ್ದು ಮಾಡುತ್ತಲೇ ಬಂದ ಚಿತ್ರ ’90 ಬಿಡಿ ಮನೀಗ್ ನಡಿ’. ಉತ್ತರ ಕರ್ನಾಟಕ ಶೈಲಿಯ ಕಾಮಿಡಿ ಕ್ರೈಂ ಥ್ರಿಲ್ಲರ್ ಕಥೆ ಎನ್ನುತ್ತಾ, ‘ಟೀಸರ್’ ಮೂಲಕ ಚಿತ್ರ ಭರವಸೆ ಮೂಡಿಸಿತ್ತು. ಇದೀಗ ಚಿತ್ರತಂಡ…