ಹಿಂದಿಯಲ್ಲಿ ದಾಖಲೆ ಬರೆದ ನಿಖಿಲ್: 100 ಮಿಲಿಯನ್ ವೀಕ್ಷಣೆ ಕಂಡ ‘ರೈಡರ್’

Nikhil sets record in Hindi: 'Rider' hits 100 million views

ನಿಖಿಲ್ ‘ರೈಡರ್‌’ಗೆ ಹಿಂದಿ ಮಂದಿ ಫಿದಾ: ದಾಖಲೆ ವೀಕ್ಷಣೆ ಕಂಡ ಸಿನಿಮಾ
ಹಿಂದಿಯಲ್ಲೂ ಮಾರುಕಟ್ಟೆ ವಿಸ್ತರಿಸಿಕೊಂಡ ನಿಖಿಲ್ ಕುಮಾರ್: ದಾಖಲೆ ವೀಕ್ಷಣೆಕಂಡ ‘ರೈಡರ್’

‘ರೈಡರ್’ 2021 ರಲ್ಲಿ ತೆರೆಗೆ ಬಂದ ಸಿನಿಮಾ. ಸ್ಯಾಂಡಲ್‌ವುಡ್ ಯುವರಾಜ ನಿಖಿಲ್ ಕುಮಾರ್ ಹೀರೋ ಆಗಿ ಅಬ್ಬರಿಸಿದ್ದ ಮಾಸ್ ಚಿತ್ರ. ಇ ದುನಿಖಿಲ್ ನಟನೆಯ ನಾಲ್ಕನೆ ಸಿನಿಮಾ. ಅಷ್ಟಕ್ಕೂ ರೈಡರ್ ರಿಲೀಸ್ ಆಗಿ 2 ವರ್ಷಗಳ ಮೇಲಾಗಿದೆ. ಈಗ್ಯಾಕೆ ಆ ಸಿನಿಮಾದ ಬಗ್ಗೆ ಮಾತು ಅಂತೀರಾ? ‘ರೈಡರ್’ ಯೂಟ್ಯೂಬ್‌ನಲ್ಲಿ ದಾಖಲೆ ಬರೆದಿದೆ. ಹೌದು, ಯುವರಾಜನ ಸಿನಿಮಾ ಹಿಂದಿ ವರ್ಷನ್ ಯೂಟ್ಯೂಬ್ ನಲ್ಲಿ ಬರೋಬ್ಬರಿ 100 ಮಿಲಿಯನ್ ವೀಕ್ಷಣೆ ಕಂಡಿದೆ. ಈ ಮೂಲಕ ನಿಖಿಲ್ ಹಿಂದಿ ವಲಯದಲ್ಲೂ ಪ್ರಖ್ಯಾತಿಗಳಿಸಿದ್ದಾರೆ.Nikhil sets record in Hindi: 'Rider' hits 100 million views

ಕನ್ನಡ ಸಿನಿಮಾಗಳು ತನ್ನ ಸ್ವಂತ ನೆಲದಲ್ಲಿಯೇ ಈ ಪರಿ ವೀಕ್ಷಣೆಗಳಿಸುವುದು ತುಂಬ ವಿರಳ. ಹಾಗಿರುವಾಗ ನಿಖಿಲ್ ಸಿನಿಮಾ ಹಿಂದಿ ಭಾಷೆಯಲ್ಲಿ 100 ಮಿಲಿಯನ್ ವೀಕ್ಷಣೆ ಕಂಡಿರುವುದು ಸಂತಸದ ವಿಚಾರವಾಗಿದೆ. ಈ ದಾಖಲೆ ನೋಡಿದ್ರೆ ಸ್ಪಷ್ಟವಾಗಿ ಗೊತ್ತಾಗುತ್ತಿದೆ ನಿಖಿಲ್ ಅವರಿಗೆ ಕನ್ನಡದಲ್ಲಿ ಮಾತ್ರವಲ್ಲದೇ ಹಿಂದಿ ವಲಯದಲ್ಲೂ ಉತ್ತಮ ಮಾರುಕಟ್ಟೆ ಇದೆ, ಅಭಿಮಾನಿಗಳಿದ್ದಾರೆ ಎನ್ನುವುದು.Nikhil sets record in Hindi: 'Rider' hits 100 million views

ರೈಡರ್ ಕನ್ನಡದಲ್ಲಿ ಮಾತ್ರ ರಿಲೀಸ್ ಆದ ಸಿನಿಮಾ. ಬಳಿಕ ಈ ಚಿತ್ರ ಹಿಂದಿ ಭಾಷೆಗೆ ಡಬ್ ಆಗಿ ಬಿಡುಗಡೆಯಾಗಿದೆ. ನಿಖಿಲ್ ಅವರನ್ನು ಹಿಂದಿ ಮಂದಿ ಆನ್‌ಲೈನ್‌ನಲ್ಲಿಯೇ ನೋಡಿ ಸಂಭ್ರಮಿಸಿದ್ದಾರೆ ಎನ್ನುವುದಕ್ಕೆ 100 ಮಿಲಿಯನ್ ವೀಕ್ಷಣೆಯೇ ಸಾಕ್ಷಿ. ರೈಡರ್ ವಿಜಯ್ ಕುಮಾರ್ ಕೊಂಡ ಸಾರಥ್ಯದಲ್ಲಿ ಬಂದ ಸಿನಿಮಾ. ಔಟ್ ಅಂಡ್ ಔಟ್ ಮಾಸ್ ಎಂಟಟೈನರ್ ಚಿತ್ರ. ನಿಖಿಲ್ ಜೊತೆ ತಮಿಳು ಮತ್ತು ತೆಲುಗು ಸಿನಿಮಾಗಳಲ್ಲಿ ನಟಿಸಿದ್ದ ಕಾಶ್ಮೀರಾ ಪರದೇಶಿ ನಾಯಕಿಯಾಗಿ ಮಿಂಚಿದ್ದರು. ಈ ಮೂಲಕ ಕಾಶ್ಮೀರಾ ಮೊದಲ ಬಾರಿಗೆ ಕನ್ನಡ ಸಿನಿ ಪ್ರೇಕ್ಷಕರ ಮುಂದೆ ಬಂದಿದ್ದರು. ಅರ್ಜುನ್ ಜನ್ಯಾ ಸಂಗೀತ ಸಂಯೋಜನೆ ಮಾಡಿದ್ದರು.Nikhil sets record in Hindi: 'Rider' hits 100 million views

ಸದ್ಯ ನಿಖಿಲ್ ಹೊಸ ಸಿನಿಮಾ ಮೂಲಕ ಮತ್ತೆ ಅಭಿಮಾನಿಗಳ ಮುಂದೆ ಬರಲು ಸಜ್ಜಾಗಿದ್ದಾರೆ. 2 ವರ್ಷಗಳ ಬಳಿಕ ನಿಖಿಲ್ ಹೊಸ ಸಿನಿಮಾಗೆ ಸಹಿ ಮಾಡಿದ್ದು ಇತ್ತೀಚಿಗಷ್ಟೆ ಚಿತ್ರಕ್ಕೆ ಅದ್ದೂರಿ ಚಾಲನೆ ಕೂಡ ಸಿಕ್ಕಿದೆ. ಭಾರತದ ಪ್ರತಿಷ್ಠಿತ ಸಿನಿಮಾ ನಿರ್ಮಾಣ ಸಂಸ್ಥೆಗಳಲ್ಲಿ ಒಂದಾಗಿರುವ ಲೈಕಾ ಪ್ರೊಡಕ್ಷನ್ ನಿಖಿಲ್ ಸಿನಿಮಾಗೆ ಬಂಡವಾಳ ಹೂಡುತ್ತಿದ್ದಾರೆ. ತಮಿಳಿನ ಖ್ಯಾತ ನಿರ್ದೇಶಕ ಲಕ್ಷ್ಮಣ್ ಸಾರಥ್ಯದಲ್ಲಿ ಚಿತ್ರ ಮೂಡಿ ಬರುತ್ತಿದೆ. ಪ್ಯಾನ್ ಇಂಡಿಯಾ ಮಟ್ಟದಲ್ಲಿ ನಿಖಿಲ್ ಹೊಸ ಸಿನಿಮಾ ತಯಾರಾಗುತ್ತಿದೆ. ದಕ್ಷಿಣ ಭಾರತದ ಎಲ್ಲಾ ಭಾಷೆಯ ಜೊತೆಗೆ ಹಿಂದಿಯಲ್ಲೂ ರಿಲೀಸ್ ಆಗುತ್ತಿದೆ. ಒಂದಿಷ್ಟು ಗ್ಯಾಪ್‌ನ ಬಳಿಕ ನಿಖಿಲ್ ದೊಡ್ಡ ಮಟ್ಟದಲ್ಲಿ ಎಂಟ್ರಿ ಕೊಡುತ್ತಿದ್ದಾರೆ. ಈ ಸಿನಿಮಾ ಮೂಲಕ ನಿಖಿಲ್ ಪ್ಯಾನ್ ಇಂಡಿಯಾ ಮಟ್ಟದಲ್ಲಿ ಸದ್ದು ಮಾಡುವುದರಲ್ಲಿ ಯಾವುದೇ ಅನುಮಾನವಿಲ್ಲ.Nikhil sets record in Hindi: 'Rider' hits 100 million views

You Will  Love   Like  These

Chitra Suddhi
daali uttarakhand kannada movie

ಡಾಲಿ ಧನಂಜಯ “ಉತ್ತರ ಕಾಂಡ”ದ ನಾಯಕ.

ವಿಜಯ್ ಕಿರಗಂದೂರು ಅರ್ಪಿಸುವ, ಕೆ.ಆರ್.ಜಿ ಸ್ಟುಡಿಯೋಸ್ ಲಾಂಛನದಲ್ಲಿ ಕಾರ್ತಿಕ್ ಹಾಗೂ ಯೋಗಿ ಜಿ ರಾಜ್ ನಿರ್ಮಿಸುತ್ತಿರುವ ” ಉತ್ತರಕಾಂಡ” ಚಿತ್ರದ ನಾಯಕನಾಗಿ ಡಾಲಿ ಧನಂಜಯ ಅಭಿನಯಿಸುತ್ತಿದ್ದಾರೆ. ಈ ಹಿಂದೆ ಕೆ.ಆರ್.ಜಿ ಸ್ಟುಡಿಯೋಸ್ ನಿರ್ಮಾಣದಲ್ಲಿ ಡಾಲಿ ಧನಂಜಯ ನಾಯಕನಾಗಿ ನಟಿಸಿದ್ದ “ರತ್ನನ ಪ್ರಪಂಚ” ಚಿತ್ರ ಸಹ ಪ್ರಚಂಡ ಯಶಸ್ಸು ಕಂಡಿತ್ತು.…

Chitra Suddhi
In the movie "December 24". Boys from Kunigal Taluk

“ಡಿಸೆಂಬರ್ 24” ಚಿತ್ರದಲ್ಲಿ ಹಾವಳಿ ಕೊಡೋಕೆ ಕುಣಿಗಲ್...

“ಡಿಸೆಂಬರ್ 24” ಚಿತ್ರದಲ್ಲಿ ಅನಿಲ್ ಗೌಡ್ರು, ಕುಮಾರ್ ಗೌಡ್ರು ಹಾಗೂ ಬೆಟ್ಟೇಗೌಡ್ರು ಖಡಕ್ ಖಳನಾಯಕರಾಗಿ ಅಭಿನಯಿಸಿದ್ದು, ಈ ಚಿತ್ರದಲ್ಲಿ ಇವರು ತುಂಬಾ ವಿಭಿನ್ನವಾದ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಈ ಚಿತ್ರದಲ್ಲಿ ನಾಯಕರ ಪಾತ್ರ ಎಷ್ಟು ಮುಖ್ಯನೋ ಹಾಗೆ ಖಳನಾಯಕರ ಪಾತ್ರಗಳು ಅಷ್ಟೇ ಮುಖ್ಯ. ಅದರಂತೆ ಖಳನಾಯಕರ ಆರ್ಭಟ ಜೋರಾಗೆ ಇರಲಿದೆ…

News
VXplore Banking & Competitive Exams Coaching Academy

ಅದು ಕೆಂಗೇರಿಯಲ್ಲಿ ಹೊಸದಾಗಿ ಶುರುವಾದ ಸ್ಪರ್ಧಾತ್ಮಕ ಪರೀಕ್ಷೆಗಳ...

ಸಾವಿರಾರು ವಿದ್ಯಾರ್ಥಿಗಳಿಗೆ ಭವಿಷ್ಯ ಕಟ್ಟಿಕೊಟ್ಟ ಪ್ರತಿಷ್ಠಿತ ವಿದ್ಯಾ ಸಂಸ್ಥೆಯ ನಿರ್ದೇಶಕರಾದ  ಚಂದ್ರ ಮೂರ್ತಿ ಯವರು ಇದರ ಸಂಸ್ಥಾಪಕರು. ಉತ್ತಮ ಮಟ್ಟದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಭೇತಿ ನೀಡುವ ಕಾರಣದಿಂದ ಈ VXplore Banking & Competitive Exams Coaching Academy. ತರಭೇತಿ ಕೇಂದ್ರವನ್ನು ತೆರೆದಿದ್ದಾರೆ. ಅದು ಆಕಾಕ್ಷಿ ವಿಧ್ಯಾರ್ಥಿಗಳಿಗೆ ಅವರ…

Chitra Suddhi
i am pregnant kannada movie censored ua

“ಐ ಆಮ್ ಪ್ರೆಗ್ನೆಂಟ್” ಚಿತ್ರವು ಸೆನ್ಸಾರ್ ಮಂಡಳಿಯಿಂದ...

“ಅನು ಸಿನಿಮಾಸ್” ಬ್ಯಾನರ್ ಅಡಿಯಲ್ಲಿ ತಯಾರಾಗುತ್ತಿರುವ “ಐ ಆಮ್ ಪ್ರೆಗ್ನೆಂಟ್” ಎಂಬ ಚಿತ್ರವನ್ನು ಸೆನ್ಸಾರ್ ಮಂಡಳಿಯಿಂದ ಉತ್ತಮ ಪ್ರತಿಕ್ರಿಯೆ ಪಡೆದಿದೆ . ಕೆಲವೇ ದಿನಗಳಲ್ಲಿ ಚಿತ್ರಮಂದಿರಕ್ಕೆ ಲಗ್ಗೆಯಿಡಲು ಚಿತ್ರತಂಡ ಎಲ್ಲ ತಯಾರಿ ಮಾಡಿಕೊಳ್ಳುತ್ತಿದ್ದಾರೆ . ಇದರಲ್ಲಿ ನುರಿತ ಕಲಾವಿದರು ಹಾಗೂ ನುರಿತ ತಂತ್ರಜ್ಞರು ಕೂಡ ಇದಕ್ಕೆ ಉತ್ತಮ ಬೆಂಬಲವನ್ನು…

Chitra Suddhi
90 bidi manig nadi song release

ನಾಳೆಯಿಂದ ನೈಂಟಿ ನಶೆ!

ಹಿರಿಯ ಹಾಸ್ಯ ನಟ ಬಿರಾದಾರ್ ಅಭಿನಯದ ಐನೂರನೇ ಚಿತ್ರ ಎಂಬ ಹಣೆಪಟ್ಟಿ ಹೊತ್ತುಕೊಂಡು ಆರಂಭದಿಂದಲೇ ಭರ್ಜರಿ ಸದ್ದು ಮಾಡುತ್ತಲೇ ಬಂದ ಚಿತ್ರ ’90 ಬಿಡಿ ಮನೀಗ್ ನಡಿ’. ಉತ್ತರ ಕರ್ನಾಟಕ ಶೈಲಿಯ ಕಾಮಿಡಿ ಕ್ರೈಂ ಥ್ರಿಲ್ಲರ್ ಕಥೆ ಎನ್ನುತ್ತಾ, ‘ಟೀಸರ್’ ಮೂಲಕ ಚಿತ್ರ ಭರವಸೆ ಮೂಡಿಸಿತ್ತು. ಇದೀಗ ಚಿತ್ರತಂಡ…