ರಾಮ್ ಚರಣ್ ನಿರ್ಮಾಣದಲ್ಲಿ ನಿಖಿಲ್ ಸಿದಾರ್ಥ್ ನಟನೆ..’ದಿ ಇಂಡಿಯನ್ ಹೌಸ್’

Nikhil Siddharth in Ram Charan's production..'The Indian House'
ವಿ ಮೆಗಾ ಪಿಕ್ಚರ್ಸ್ ಹಾಗೂ ಅಭಿಷೇಕ್ ಅಗರ್ ವಾಲ್ ಆರ್ಟ್ ಜಂಟಿಯಾಗಿ ನಿರ್ಮಿಸುತ್ತಿರುವ ಚೊಚ್ಚಲ ಪ್ಯಾನ್ ಇಂಡಿಯಾ ಸಿನಿಮಾ ಅನೌನ್ಸ್..ರಾಮ್ ಚರಣ್ ನಿರ್ಮಾಣದಲ್ಲಿ ನಿಖಿಲ್ ಸಿದಾರ್ಥ್ ನಟನೆ..’ದಿ ಇಂಡಿಯನ್ ಹೌಸ್’ ಪವರ್ ಪ್ಯಾಕ್ಡ್ ಮೋಷನ್ ವಿಡಿಯೋ ರಿಲೀಸ್..Nikhil Siddharth in Ram Charan's production..'The Indian House'
 
ಗ್ಲೋಬಲ್ ಸ್ಟಾರ್ ರಾಮ್ ಚರಣ್ ”ವಿ ಮೆಗಾ ಪಿಕ್ಚರ್ಸ್” ಮೂಲಕ ಸಿನಿಮಾ ನಿರ್ಮಾಣಕ್ಕಿಳಿದಿದ್ದಾರೆ. ಮೆಗಾ ಸ್ಟಾರ್ ಕುಡಿಗೆ ಗೆಳೆಯ ಯುವಿ ಕ್ರಿಯೇಷನ್ ವಿಕ್ರಮ್ ರೆಡ್ಡಿ ಸಾಥ್ ಕೊಟ್ಟಿದ್ದಾರೆ. ಯುವ ಪ್ರತಿಭೆಗಳಿಗೆ ಅವಕಾಶ ನೀಡಲಿದೆಂದು ಪ್ರಾರಂಭಿಸಿರುವ ವಿ ಮೆಗಾ ಪಿಕ್ಚರ್ಸ್ ಜೊತೆ ಅಭಿಷೇಕ್ ಅಗರ್ ವಾಲ್ ಕೈ ಜೋಡಿಸಿದ್ದಾರೆ. ದಿ ಕಾಶ್ಮೀರಿ ಫೈಲ್ಸ್, ಕಾರ್ತಿಕೇಯ ಸಿನಿಮಾದಂತಹ ಪ್ಯಾನ್ ಇಂಡಿಯಾ ಹಿಟ್ ಸಿನಿಮಾ ಕೊಟ್ಟಿರುವ ಅಭಿಷೇಕ್ ಅಗರ್ ವಾಲ್ ಆರ್ಟ್ ಬ್ಯಾನರ್ ಹಾಗೂ ರಾಮ್ ಚರಣ್ ಸಾರಥ್ಯದ ವಿ ಮೆಗಾ ಪಿಕ್ಚರ್ಸ್ ಜಂಟಿಯಾಗಿ ನಿರ್ಮಾಣಕ್ಕಿಳಿದಿವೆ.
 
ಈ ಎರಡು ಸಂಸ್ಥೆಗಳ ಚೊಚ್ಚಲ ಪ್ಯಾನ್ ಇಂಡಿಯಾ ಚಿತ್ರ ಯಾವುದು ಎಂಬ ಕುತೂಹಲಕ್ಕೀಗ ತೆರೆ ಬಿದ್ದಿದೆ. ವಿ ಮೆಗಾ ಪಿಕ್ಚರ್ಸ್ ಹಾಗೂ ಅಭಿಷೇಕ್ ಅಗರ್ ವಾಲ್ ಆರ್ಟ್ ಬ್ಯಾನರ್ ನ ಚೊಚ್ಚಲ ಸಿನಿಮಾ ವೀರ ಸಾವರ್ಕರ್ 140ನೇ ಜನ್ಮೋತ್ಸವದ ಶುಭ ಸಂದರ್ಭದಲ್ಲಿ ಘೋಷಣೆ ಮಾಡಲಾಗಿದೆ. ಪವರ ಪ್ಯಾಕ್ಡ್ ವಿಡಿಯೋ ಮೂಲಕ ರಾಮ್ ತಮ್ಮ ನಿರ್ಮಾಣದ ಚೊಚ್ಚಲ ಪ್ಯಾನ್ ಇಂಡಿಯಾ ಚಿತ್ರ ಯಾವುದು ಎಂಬ ಪ್ರಶ್ನೆಗೆ ಉತ್ತರಕೊಟ್ಟಿದ್ದಾರೆ. ವಿ ಮೆಗಾ ಪಿಕ್ಚರ್ಸ್ ಹಾಗೂ ಅಭಿಷೇಕ್ ಅಗರ್ ವಾಲ್ ಆರ್ಟ್ ಬ್ಯಾನರ್ ಜಂಟಿಯಾಗಿ ದಿ ಇಂಡಿಯನ್ ಹೌಸ್ ಎಂಬ ಚಿತ್ರ ನಿರ್ಮಾಣ ಮಾಡುತ್ತಿದ್ದಾರೆ. ಕಾರ್ತಿಕೇಯ, ಕಾರ್ತಿಕೇಯ-೨ ನಂತಹ ಮೆಗಾ ಬ್ಲಾಕ್ ಬಸ್ಟರ್ ಸಿನಿಮಾಗಳ ಡೈನಾಮಿಕ್ ಹೀರೋ ನಿಖಿಲ್ ಸಿದ್ದಾರ್ಥ್ ನಾಯಕನಾಗಿ ದಿ ಇಂಡಿಯನ್ ಹೌಸ್ ನಲ್ಲಿ ಬಣ್ಣ ಹಚ್ಚಿದ್ದು, ಬಾಲಿವುಡ್ ದಂತಕಥೆ ಅನುಪಮ್ ಕೇರ್ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಯುವಪ್ರತಿಭೆ ರಾಮ್ ವಂಶಿ ಕೃಷ್ಣ ಈ ಸಿನಿಮಾಗೆ ಆಕ್ಷನ್ ಕಟ್ ಹೇಳಿದ್ದಾರೆ.Nikhil Siddharth in Ram Charan's production..'The Indian House'
 
ಭಾರತೀಯ ಇತಿಹಾಸದಲ್ಲಿ ಮರೆತುಹೋದ ಅಧ್ಯಾಯ, 1905ರಲ್ಲಿ ನಡೆದ ಲಂಡನ್ ಕ್ರಾಂತಿ ಜೊತೆ ಪ್ರೇಮಕಥೆಯಾಧಾರಿತ ಕಥಾಹಂದರ ಹೊಂದಿರುವ ದಿ ಇಂಡಿಯನ್ ಹೌಸ್ ಸಿನಿಮಾ ಮೂಲಕ ನಿಖಿಲ್ ಮತ್ತೊಂದು ಕಥೆಯನ್ನು ಬೆನ್ನಟ್ಟಿದ್ದಾರೆ. ಸ್ಪೈ ಸಿನಿಮಾಗಳಿಗೆ ಹೆಸರುವಾಸಿಯಾಗಿರುವ ನಿಖಿಲ್ ಸಿದ್ದಾರ್ಥ್ ಈ ಸಿನಿಮಾ ಮೂಲಕ ಮತ್ತೊಮ್ಮೆ ಮ್ಯಾಜಿಕ್ ಮಾಡುವ ತವಕದಲ್ಲಿದ್ದಾರೆ.

You Will  Love   Like  These

Chitra Suddhi
daali uttarakhand kannada movie

ಡಾಲಿ ಧನಂಜಯ “ಉತ್ತರ ಕಾಂಡ”ದ ನಾಯಕ.

ವಿಜಯ್ ಕಿರಗಂದೂರು ಅರ್ಪಿಸುವ, ಕೆ.ಆರ್.ಜಿ ಸ್ಟುಡಿಯೋಸ್ ಲಾಂಛನದಲ್ಲಿ ಕಾರ್ತಿಕ್ ಹಾಗೂ ಯೋಗಿ ಜಿ ರಾಜ್ ನಿರ್ಮಿಸುತ್ತಿರುವ ” ಉತ್ತರಕಾಂಡ” ಚಿತ್ರದ ನಾಯಕನಾಗಿ ಡಾಲಿ ಧನಂಜಯ ಅಭಿನಯಿಸುತ್ತಿದ್ದಾರೆ. ಈ ಹಿಂದೆ ಕೆ.ಆರ್.ಜಿ ಸ್ಟುಡಿಯೋಸ್ ನಿರ್ಮಾಣದಲ್ಲಿ ಡಾಲಿ ಧನಂಜಯ ನಾಯಕನಾಗಿ ನಟಿಸಿದ್ದ “ರತ್ನನ ಪ್ರಪಂಚ” ಚಿತ್ರ ಸಹ ಪ್ರಚಂಡ ಯಶಸ್ಸು ಕಂಡಿತ್ತು.…

Chitra Suddhi
In the movie "December 24". Boys from Kunigal Taluk

“ಡಿಸೆಂಬರ್ 24” ಚಿತ್ರದಲ್ಲಿ ಹಾವಳಿ ಕೊಡೋಕೆ ಕುಣಿಗಲ್...

“ಡಿಸೆಂಬರ್ 24” ಚಿತ್ರದಲ್ಲಿ ಅನಿಲ್ ಗೌಡ್ರು, ಕುಮಾರ್ ಗೌಡ್ರು ಹಾಗೂ ಬೆಟ್ಟೇಗೌಡ್ರು ಖಡಕ್ ಖಳನಾಯಕರಾಗಿ ಅಭಿನಯಿಸಿದ್ದು, ಈ ಚಿತ್ರದಲ್ಲಿ ಇವರು ತುಂಬಾ ವಿಭಿನ್ನವಾದ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಈ ಚಿತ್ರದಲ್ಲಿ ನಾಯಕರ ಪಾತ್ರ ಎಷ್ಟು ಮುಖ್ಯನೋ ಹಾಗೆ ಖಳನಾಯಕರ ಪಾತ್ರಗಳು ಅಷ್ಟೇ ಮುಖ್ಯ. ಅದರಂತೆ ಖಳನಾಯಕರ ಆರ್ಭಟ ಜೋರಾಗೆ ಇರಲಿದೆ…

News
VXplore Banking & Competitive Exams Coaching Academy

ಅದು ಕೆಂಗೇರಿಯಲ್ಲಿ ಹೊಸದಾಗಿ ಶುರುವಾದ ಸ್ಪರ್ಧಾತ್ಮಕ ಪರೀಕ್ಷೆಗಳ...

ಸಾವಿರಾರು ವಿದ್ಯಾರ್ಥಿಗಳಿಗೆ ಭವಿಷ್ಯ ಕಟ್ಟಿಕೊಟ್ಟ ಪ್ರತಿಷ್ಠಿತ ವಿದ್ಯಾ ಸಂಸ್ಥೆಯ ನಿರ್ದೇಶಕರಾದ  ಚಂದ್ರ ಮೂರ್ತಿ ಯವರು ಇದರ ಸಂಸ್ಥಾಪಕರು. ಉತ್ತಮ ಮಟ್ಟದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಭೇತಿ ನೀಡುವ ಕಾರಣದಿಂದ ಈ VXplore Banking & Competitive Exams Coaching Academy. ತರಭೇತಿ ಕೇಂದ್ರವನ್ನು ತೆರೆದಿದ್ದಾರೆ. ಅದು ಆಕಾಕ್ಷಿ ವಿಧ್ಯಾರ್ಥಿಗಳಿಗೆ ಅವರ…

Chitra Suddhi
90 bidi manig nadi song release

ನಾಳೆಯಿಂದ ನೈಂಟಿ ನಶೆ!

ಹಿರಿಯ ಹಾಸ್ಯ ನಟ ಬಿರಾದಾರ್ ಅಭಿನಯದ ಐನೂರನೇ ಚಿತ್ರ ಎಂಬ ಹಣೆಪಟ್ಟಿ ಹೊತ್ತುಕೊಂಡು ಆರಂಭದಿಂದಲೇ ಭರ್ಜರಿ ಸದ್ದು ಮಾಡುತ್ತಲೇ ಬಂದ ಚಿತ್ರ ’90 ಬಿಡಿ ಮನೀಗ್ ನಡಿ’. ಉತ್ತರ ಕರ್ನಾಟಕ ಶೈಲಿಯ ಕಾಮಿಡಿ ಕ್ರೈಂ ಥ್ರಿಲ್ಲರ್ ಕಥೆ ಎನ್ನುತ್ತಾ, ‘ಟೀಸರ್’ ಮೂಲಕ ಚಿತ್ರ ಭರವಸೆ ಮೂಡಿಸಿತ್ತು. ಇದೀಗ ಚಿತ್ರತಂಡ…

Chitra Suddhi
i am pregnant kannada movie censored ua

“ಐ ಆಮ್ ಪ್ರೆಗ್ನೆಂಟ್” ಚಿತ್ರವು ಸೆನ್ಸಾರ್ ಮಂಡಳಿಯಿಂದ...

“ಅನು ಸಿನಿಮಾಸ್” ಬ್ಯಾನರ್ ಅಡಿಯಲ್ಲಿ ತಯಾರಾಗುತ್ತಿರುವ “ಐ ಆಮ್ ಪ್ರೆಗ್ನೆಂಟ್” ಎಂಬ ಚಿತ್ರವನ್ನು ಸೆನ್ಸಾರ್ ಮಂಡಳಿಯಿಂದ ಉತ್ತಮ ಪ್ರತಿಕ್ರಿಯೆ ಪಡೆದಿದೆ . ಕೆಲವೇ ದಿನಗಳಲ್ಲಿ ಚಿತ್ರಮಂದಿರಕ್ಕೆ ಲಗ್ಗೆಯಿಡಲು ಚಿತ್ರತಂಡ ಎಲ್ಲ ತಯಾರಿ ಮಾಡಿಕೊಳ್ಳುತ್ತಿದ್ದಾರೆ . ಇದರಲ್ಲಿ ನುರಿತ ಕಲಾವಿದರು ಹಾಗೂ ನುರಿತ ತಂತ್ರಜ್ಞರು ಕೂಡ ಇದಕ್ಕೆ ಉತ್ತಮ ಬೆಂಬಲವನ್ನು…