‘ಓ ಮೈ ಲವ್’ ದೊಡ್ಡ ಮೈಲಿಗಲ್ಲು ಸಾಧಿಸಲಿ-ಭಾಸ್ಕರ್ ರಾವ್

ಸಖತ್ ಸೌಂಡು ಮಾಡುತ್ತಿದೆ ‘ನಿನ್ನ ಡ್ಯಾಡಿ’ ಸಾಂಗ್..!

ಸ್ಮೈಲ್ ಶ್ರೀನು ನಿರ್ದೇಶನದ ‘ಓ ಮೈ ಲವ್’ ದಿನದಿಂದ ದಿನಕ್ಕೆ ಕ್ರೇಜ಼್ ಹೆಚ್ಚುತ್ತಲೇ ಇದೆ. ಅಕ್ಷಿತ್ ಶಶಿಕುಮಾರ್ ಹಾಗೂ ಕೀರ್ತಿ ಕಲ್ಕೆರಿ ಪ್ರಮುಖ ಭೂಮಿಕೆಯಲ್ಲಿರುವ ಈ ಸಿನಿಮಾಕ್ಕೆ ಚಿತ್ರರಂಗದ ಘಟಾನುಘಟಿಗಳೆಲ್ಲಾ ಶುಭ ಹಾರೈಸಿರುವುದು ‘ಓ ಮೈ ಲವ್’ ಮೇಲೆ ಮತ್ತಷ್ಟು ಕುತೂಹಲ ಹೆಚ್ಚಾಗಿದೆ.WhatsApp Image 2022 05 25 at 10.00.15 AM

ರಿಯಲ್ ಸ್ಟಾರ್‌ ಉಪೇಂದ್ರ ಚಿತ್ರದ ಮೊದಲ ಹಾಡನ್ನು ಅನಾವರಣಗೊಳಿಸಿ ಚಿತ್ರತಂಡಕ್ಕೆ ಶುಭ ಹಾರೈಸಿದ್ದರು. ಅದರ ಬೆನ್ನಲ್ಲೇ ಹರಿಬಿಟ್ಟ 4ಕೆ ಟೀಸರ್ ವೀಕ್ಷಿಸಿದ ತೆಲುಗು ಚಿತ್ರರಂಗದ ಸಿನಿಮಾಬ್ರಹ್ಮ ಕೆ.ರಾಘವೇಂದ್ರರಾವ್ ‘ಓ ಮೈ ಲವ್’ ಕುರಿತು ಮೆಚ್ಚುಗೆಯ ಮಾತನಾಡುವುದರ ಜತೆಗೆ ನಿರ್ದೇಶಕ ಸ್ಮೈಲ್ ಶ್ರೀನು ಮೇಕಿಂಗ್ ಹಾಗೂ ಶ್ರಮಕ್ಕೆ ಶಹಬ್ಬಾಸ್ ಹೇಳಿ ಬೆನ್ನು ತಟ್ಟಿದ್ದರು. ಇದೀಗ ಮಾಜಿ ಪೊಲೀಸ್ ಆಯುಕ್ತರಾದ, ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್ ಸಹ ಚಿತ್ರದ ಕುರಿತು ಮೆಚ್ಚುಗೆಯ ಮಾತನಾಡಿದ್ದಾರೆ.WhatsApp Image 2022 05 25 at 10.00.16 AM

ಓ ಮೈ ಲವ್ ಚಿತ್ರದ ‘ನಿನ್ನ ಡ್ಯಾಡಿ ನಂಗೆ ಯಾವಾಗಿಂದ ಮಾವ ಆಗೋದು…’ ಎಂಬ ಹಾಡನ್ನು ಬಿಡುಗಡೆ ಮಾಡಿದ ಭಾಸ್ಕರ್ ರಾವ್, ಸಿನಿಮಾದ ಬಗ್ಗೆ ಪ್ರಶಂಸೆ ವ್ಯಕ್ತಪಡಿಸಿದ್ದಾರೆ. ‘ಕನ್ನಡ ಚಿತ್ರರಂಗದಲ್ಲಿ ಒಳ್ಳೊಳ್ಳೆ ಸಿನಿಮಾಗಳು ಬಂದು ಸೂಪರ್ ಹಿಟ್ ಆಗಿವೆ. ಸದ್ಯ ಚಂದನವನದಲ್ಲಿ ಕುಟುಂಬ ಸಮೇತರಾಗಿ ಕುಳಿತು ನೋಡುವ ಸಿನಿಮಾಗಳ ಅವಶ್ಯಕತೆಯಿದೆ. ಅದನ್ನು ‘ಓ ಮೈ ಲವ್’ ನೀಗಿಸುವ ಎಲ್ಲಾ ಲಕ್ಷಣಗಳಿವೆ. ಚಿತ್ರದ ಹಾಡು ಮತ್ತು ಟೀಸರ್ ಈಗಾಗಲೇ ಹಿಟ್ ಲಿಸ್ಟ್ ಸೇರಿವೆ. ಈ ಹಾಡು ಸಹ ದೊಡ್ಡ ಮಟ್ಟದಲ್ಲಿ ಹಿಟ್ ಆಗಲಿ. ಸಿನಿಮಾ ಕೂಡ ದೊಡ್ಡ ಮೈಲಿಗಲ್ಲು ಸಾಧಿಸಲಿ’ ಎಂದು ಶುಭ ಕೋರಿದ್ದಾರೆ.WhatsApp Image 2022 05 25 at 10.00.16 AM 2

ಸದ್ಯ ಸ್ಯಾಂಡಲ್’ವುಡ್’ನಲ್ಲಿ ಸಾಕಷ್ಟು ನಿರೀಕ್ಷೆ ಹುಟ್ಟು ಹಾಕಿರುವ ಸಿನಿಮಾಗಳ ಪೈಕಿ ‘ಓ ಮೈ ಲವ್’ ಮುಂಚೂಣಿಯಲ್ಲಿದೆ. ಕೆ.ಜಿ.ಎಫ್ ಬಳಿಕ ಚಿತ್ರಮಂದಿರಕ್ಕೆ ಪ್ರೇಕ್ಷಕರನ್ನು ಕರೆತರುವಲ್ಲಿ ಯಶಸ್ವಿಯಾಗಲಿದೆ ಎಂಬ ಭರವಸೆ ಮೂಡಿಸಿದೆ. ಸದ್ಯದಲ್ಲೇ ಬಿಡುಗಡೆಯಾಗಲಿರುವ ಈ ಸಿನಿಮಾಕ್ಕೆ ಕಥೆ ಬರೆದು ಜಿ.ಸಿ.ಬಿ ಪ್ರೊಡಕ್ಷನ್ಸ್ ಬ್ಯಾನರ್ ಅಡಿಯಲ್ಲಿ ಜಿ.ರಾಮಾಂಜಿನಿ ನಿರ್ಮಿಸಿದ್ದಾರೆ. ಚಿತ್ರಕಥೆ ಹಾಗೂ ಸಂಭಾಷಣೆ ಬರೆದು ಡೈರೆಕ್ಷನ್ ಮಾಡಿದ್ದಾರೆ ಸ್ಮೈಲ್ ಶ್ರೀನು.WhatsApp Image 2022 05 25 at 10.00.17 AM 1

ಚಿತ್ರದ ಎಲ್ಲಾ ಹಾಡುಗಳಿಗೆ ಡಾ.ವಿ.ನಾಗೇಂದ್ರ ಪ್ರಸಾದ್ ಸಾಹಿತ್ಯ ರಚಿಸಿದ್ದು ಚರಣ್ ಅರ್ಜುನ್ ಸಂಗೀತ ಸಂಯೋಜಿಸಿದ್ದಾರೆ. ಮುರಳಿ ನೃತ್ಯ ನಿರ್ದೇಶನ ಹಾಡುಗಳಿಗಿದೆ. ಎಸ್.ನಾರಾಯಣ್, ಸಾಧುಕೋಕಿಲ, ದೇವಗಿಲ್, ಟೆನ್ನಿಸ್ ಕೃಷ್ಣ, ಪವಿತ್ರಾ ಲೋಕೇಶ್ ಹಾಗೂ ಸಂಗೀತಾ, ದೀಪಿಕಾ ಆರಾಧ್ಯ, ಪೃಥ್ವಿರಾಜ್ , ಆನಂದ್, ಶಿಲ್ಪಾ ರವಿ, ಭಾಗ್ಯಶ್ರೀ, ರಾಮ್ ಕುಮಾರ್ ಸೇರಿದಂತೆ ಮೊದಲಾದವರು ಚಿತ್ರದ ತಾರಾಗಣದಲ್ಲಿದ್ದಾರೆ.WhatsApp Image 2022 05 25 at 10.00.18 AM

You Will  Love   Like  These

Chitra Suddhi
daali uttarakhand kannada movie

ಡಾಲಿ ಧನಂಜಯ “ಉತ್ತರ ಕಾಂಡ”ದ ನಾಯಕ.

ವಿಜಯ್ ಕಿರಗಂದೂರು ಅರ್ಪಿಸುವ, ಕೆ.ಆರ್.ಜಿ ಸ್ಟುಡಿಯೋಸ್ ಲಾಂಛನದಲ್ಲಿ ಕಾರ್ತಿಕ್ ಹಾಗೂ ಯೋಗಿ ಜಿ ರಾಜ್ ನಿರ್ಮಿಸುತ್ತಿರುವ ” ಉತ್ತರಕಾಂಡ” ಚಿತ್ರದ ನಾಯಕನಾಗಿ ಡಾಲಿ ಧನಂಜಯ ಅಭಿನಯಿಸುತ್ತಿದ್ದಾರೆ. ಈ ಹಿಂದೆ ಕೆ.ಆರ್.ಜಿ ಸ್ಟುಡಿಯೋಸ್ ನಿರ್ಮಾಣದಲ್ಲಿ ಡಾಲಿ ಧನಂಜಯ ನಾಯಕನಾಗಿ ನಟಿಸಿದ್ದ “ರತ್ನನ ಪ್ರಪಂಚ” ಚಿತ್ರ ಸಹ ಪ್ರಚಂಡ ಯಶಸ್ಸು ಕಂಡಿತ್ತು.…

Chitra Suddhi
In the movie "December 24". Boys from Kunigal Taluk

“ಡಿಸೆಂಬರ್ 24” ಚಿತ್ರದಲ್ಲಿ ಹಾವಳಿ ಕೊಡೋಕೆ ಕುಣಿಗಲ್...

“ಡಿಸೆಂಬರ್ 24” ಚಿತ್ರದಲ್ಲಿ ಅನಿಲ್ ಗೌಡ್ರು, ಕುಮಾರ್ ಗೌಡ್ರು ಹಾಗೂ ಬೆಟ್ಟೇಗೌಡ್ರು ಖಡಕ್ ಖಳನಾಯಕರಾಗಿ ಅಭಿನಯಿಸಿದ್ದು, ಈ ಚಿತ್ರದಲ್ಲಿ ಇವರು ತುಂಬಾ ವಿಭಿನ್ನವಾದ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಈ ಚಿತ್ರದಲ್ಲಿ ನಾಯಕರ ಪಾತ್ರ ಎಷ್ಟು ಮುಖ್ಯನೋ ಹಾಗೆ ಖಳನಾಯಕರ ಪಾತ್ರಗಳು ಅಷ್ಟೇ ಮುಖ್ಯ. ಅದರಂತೆ ಖಳನಾಯಕರ ಆರ್ಭಟ ಜೋರಾಗೆ ಇರಲಿದೆ…

News
VXplore Banking & Competitive Exams Coaching Academy

ಅದು ಕೆಂಗೇರಿಯಲ್ಲಿ ಹೊಸದಾಗಿ ಶುರುವಾದ ಸ್ಪರ್ಧಾತ್ಮಕ ಪರೀಕ್ಷೆಗಳ...

ಸಾವಿರಾರು ವಿದ್ಯಾರ್ಥಿಗಳಿಗೆ ಭವಿಷ್ಯ ಕಟ್ಟಿಕೊಟ್ಟ ಪ್ರತಿಷ್ಠಿತ ವಿದ್ಯಾ ಸಂಸ್ಥೆಯ ನಿರ್ದೇಶಕರಾದ  ಚಂದ್ರ ಮೂರ್ತಿ ಯವರು ಇದರ ಸಂಸ್ಥಾಪಕರು. ಉತ್ತಮ ಮಟ್ಟದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಭೇತಿ ನೀಡುವ ಕಾರಣದಿಂದ ಈ VXplore Banking & Competitive Exams Coaching Academy. ತರಭೇತಿ ಕೇಂದ್ರವನ್ನು ತೆರೆದಿದ್ದಾರೆ. ಅದು ಆಕಾಕ್ಷಿ ವಿಧ್ಯಾರ್ಥಿಗಳಿಗೆ ಅವರ…

Chitra Suddhi
i am pregnant kannada movie censored ua

“ಐ ಆಮ್ ಪ್ರೆಗ್ನೆಂಟ್” ಚಿತ್ರವು ಸೆನ್ಸಾರ್ ಮಂಡಳಿಯಿಂದ...

“ಅನು ಸಿನಿಮಾಸ್” ಬ್ಯಾನರ್ ಅಡಿಯಲ್ಲಿ ತಯಾರಾಗುತ್ತಿರುವ “ಐ ಆಮ್ ಪ್ರೆಗ್ನೆಂಟ್” ಎಂಬ ಚಿತ್ರವನ್ನು ಸೆನ್ಸಾರ್ ಮಂಡಳಿಯಿಂದ ಉತ್ತಮ ಪ್ರತಿಕ್ರಿಯೆ ಪಡೆದಿದೆ . ಕೆಲವೇ ದಿನಗಳಲ್ಲಿ ಚಿತ್ರಮಂದಿರಕ್ಕೆ ಲಗ್ಗೆಯಿಡಲು ಚಿತ್ರತಂಡ ಎಲ್ಲ ತಯಾರಿ ಮಾಡಿಕೊಳ್ಳುತ್ತಿದ್ದಾರೆ . ಇದರಲ್ಲಿ ನುರಿತ ಕಲಾವಿದರು ಹಾಗೂ ನುರಿತ ತಂತ್ರಜ್ಞರು ಕೂಡ ಇದಕ್ಕೆ ಉತ್ತಮ ಬೆಂಬಲವನ್ನು…

Chitra Suddhi
90 bidi manig nadi song release

ನಾಳೆಯಿಂದ ನೈಂಟಿ ನಶೆ!

ಹಿರಿಯ ಹಾಸ್ಯ ನಟ ಬಿರಾದಾರ್ ಅಭಿನಯದ ಐನೂರನೇ ಚಿತ್ರ ಎಂಬ ಹಣೆಪಟ್ಟಿ ಹೊತ್ತುಕೊಂಡು ಆರಂಭದಿಂದಲೇ ಭರ್ಜರಿ ಸದ್ದು ಮಾಡುತ್ತಲೇ ಬಂದ ಚಿತ್ರ ’90 ಬಿಡಿ ಮನೀಗ್ ನಡಿ’. ಉತ್ತರ ಕರ್ನಾಟಕ ಶೈಲಿಯ ಕಾಮಿಡಿ ಕ್ರೈಂ ಥ್ರಿಲ್ಲರ್ ಕಥೆ ಎನ್ನುತ್ತಾ, ‘ಟೀಸರ್’ ಮೂಲಕ ಚಿತ್ರ ಭರವಸೆ ಮೂಡಿಸಿತ್ತು. ಇದೀಗ ಚಿತ್ರತಂಡ…