ಪ್ರೀತಿ ಮಾಡೋದು ತಪ್ಪಲ್ಲ ಎಂಬ ಸಂದೇಶ ಹೊತ್ತು ಬರುತ್ತಿದೆ “ಒಲವೇ ಮಂದಾರ 2”

"Olave Mandara 2" is coming with a message that love is not wrong.

ಎಸ್ ಆರ್ ಪಾಟೀಲ್ ನಿರ್ದೇಶನದಲ್ಲಿ ಸನತ್ ನಾಯಕನಾಗಿ ನಟಿಸಿರುವ “ಒಲವೇ ಮಂದಾರ 2” ಚಿತ್ರ ತೆರೆಗೆ ಬರಲು ಸಿದ್ದವಾಗಿದೆ. ಚಿತ್ರದ ಕುರಿತು ಹೆಚ್ಚಿನ ಮಾಹಿತಿಯನ್ನು ಚಿತ್ರತಂಡದ ಸದಸ್ಯರು ಪತ್ರಿಕಾಗೋಷ್ಠಿಯಲ್ಲಿ ಹಂಚಿಕೊಂಡರು.

“ಒಲವೇ ಮಂದಾರ ೨” ಪರಿಶುದ್ಧ ಪ್ರೇಮಕಥೆ ಎಂದು ಮಾತು ಆರಂಭಿಸಿದ ನಿರ್ದೇಶಕ ಎಸ್.ಆರ್.ಪಾಟೀಲ್, ಈ ಪ್ರಪಂಚದಲ್ಲಿ ಪ್ರೀತಿ ಮಾಡುವವರನ್ನು ಅವರ ತಂದೆ ತಾಯಿ ತಮ್ಮ ಮಕ್ಕಳು ಕ್ರೈಮ್ ಮಾಡಿರುವ ಹಾಗೆ ನೋಡಲಾಗುತ್ತದೆ. ‌ಅದರಲ್ಲೂ ಹೆಚ್ಚಾಗಿ ಹೆಣ್ಣುಮಕ್ಕಳನ್ನು. ಇದು ತಪ್ಪು. ಒಬ್ಬರನೊಬ್ಬರು ಅರಿತುಕೊಂಡು‌ ಮಾಡುವ ಪ್ರೀತಿ ಯಾವತ್ತು ತಪ್ಪಲ್ಲ, ಹಾಗೆ ಪ್ರೀತಿ ಮಾಡಿದವರು ಕೊನೆಯ ಕ್ಷಣದವರೆಗೂ ತಮ್ಮ ಪ್ರೀತಿಯನ್ನು ಅವರ ತಂದೆ ತಾಯಿಗೆ ಒಪ್ಪಿಸಲು ಪ್ರಯತ್ನಿಸಬೇಕು ಹೊರತು ಬೇರೆ ನಿರ್ಧಾರ ತೆಗೆದುಕೊಳ್ಳಬಾರದು ಎಂಬ ಸಂದೇಶ ಈ ಚಿತ್ರದಲ್ಲಿದೆ. ನನಗೆ ಕೆಲವು ವರ್ಷಗಳ ಹಿಂದೆ ಬಿಡುಗಡೆಯಾದ “ಒಲವೇ ಮಂದಾರ” ಚಿತ್ರ ಇಷ್ಟ. ಹಾಗಾಗಿ ಶೀರ್ಷಿಕೆ ಇಟ್ಟಿದ್ದೇವೆ‌ ಹೊರತು, ಆ ಚಿತ್ರದ ಕಥೆಯೇ ಬೇರೆ. ನಮ್ಮ ಚಿತ್ರದ ಕಥೆಯೆ ಬೇರೆ. ಈಗಾಗಲೇ ಬಿಡುಗಡೆಯಾಗಿರುವ ಚಿತ್ರದ ಹಾಡುಗಳು ಹಿಟ್ ಆಗಿದ್ದು, ಚಿತ್ರ ಇದೇ ಸೆಪ್ಟೆಂಬರ್ 15 ರಂದು ತೆರೆಗೆ ಬರಲಿದೆ. ನಮ್ಮ ಚಿತ್ರವನ್ನು ಎಲ್ಲರೂ ನೋಡಿ ಪ್ರೋತ್ಸಾಹ ನೀಡಿ ಎಂದರು."Olave Mandara 2" is coming with a message that love is not wrong.

“ಕಮರೊಟ್ಟು ಚೆಕ್ ಪೋಸ್ಟ್” ಚಿತ್ರದ ಮೂಲಕ ಚಿತ್ರರಂಗ ಪ್ರವೇಶಿಸಿದ ನನಗೆ ಇದು ಎರಡನೇ ಚಿತ್ರ. ನಾಯ ನಟನಾಗಬೇಕೆಂಬುದು ನನ್ನಂತಹ ಮಧ್ಯಮ ವರ್ಗದ ಹುಡುಗನ ಕನಸು. ಆ ಕನಸನ್ನು ನನಸ್ಸಾಗಿಸಿದ ಎಲ್ಲರಿಗೂ ಧನ್ಯವಾದ. ನಿರ್ದೇಶಕರು ಒಳ್ಳೆಯ ಕಥೆ ಆಯ್ಕೆ ಮಾಡಿಕೊಂಡಿದ್ದಾರೆ. ನನ್ನ ಪಾತ್ರ ಕೂಡ ಚೆನ್ನಾಗಿದೆ ಎಂದು ನಾಯಕ ಸನತ್ ತಿಳಿಸಿದರು."Olave Mandara 2" is coming with a message that love is not wrong.

ನಿರ್ಮಾಪಕರಾದ ರಮೇಶ್ ಮರಗೋಳ, ಬಿ.ಎಂ.ಸತೀಶ್ ಹಾಗೂ ಸಹ ನಿರ್ಮಾಪಕರಾದ ಯಲ್ಲಾಲಿಂಗ ಮುಗುಟಿ ಹಾಗೂ ರಾಮದೇವ್ ರಾಥೋಡ್ ಚಿತ್ರ ನಿರ್ಮಾಣದ ಕುರಿತು ಮಾತನಾಡಿದರು. ಸಂಗೀತ ನಿರ್ದೇಶಕ ಡಾ ಕಿರಣ್ ತೋಟಂಬೈಲ್ ಹಾಡುಗಳ ಬಗ್ಗೆ ಹಾಗೂ ನಾಯಕಿ ಪ್ರಜ್ಞಾ ಭಟ್, ಅನುಪಾ ಸತೀಶ್, ಹಿರಿಯ ನಟಿ ಭವ್ಯ, ಡಿಂಗ್ರಿ ನಾಗರಾಜ ಕಾಮಿಡಿ ಕಿಲಾಡಿ ಮಡೆನೂರ ಮನು ,ಶಿವಾನಂದ ಸಿಂದಗಿ ಸೇರಿದಂತೆ ಅನೇಕ ಕಲಾವಿದರು ಚಿತ್ರದಲ್ಲಿನ ತಮ್ಮ ಪಾತ್ರದ ಕುರಿತು ಮಾತನಾಡಿದರು."Olave Mandara 2" is coming with a message that love is not wrong.

You Will  Love   Like  These

Chitra Suddhi
daali uttarakhand kannada movie

ಡಾಲಿ ಧನಂಜಯ “ಉತ್ತರ ಕಾಂಡ”ದ ನಾಯಕ.

ವಿಜಯ್ ಕಿರಗಂದೂರು ಅರ್ಪಿಸುವ, ಕೆ.ಆರ್.ಜಿ ಸ್ಟುಡಿಯೋಸ್ ಲಾಂಛನದಲ್ಲಿ ಕಾರ್ತಿಕ್ ಹಾಗೂ ಯೋಗಿ ಜಿ ರಾಜ್ ನಿರ್ಮಿಸುತ್ತಿರುವ ” ಉತ್ತರಕಾಂಡ” ಚಿತ್ರದ ನಾಯಕನಾಗಿ ಡಾಲಿ ಧನಂಜಯ ಅಭಿನಯಿಸುತ್ತಿದ್ದಾರೆ. ಈ ಹಿಂದೆ ಕೆ.ಆರ್.ಜಿ ಸ್ಟುಡಿಯೋಸ್ ನಿರ್ಮಾಣದಲ್ಲಿ ಡಾಲಿ ಧನಂಜಯ ನಾಯಕನಾಗಿ ನಟಿಸಿದ್ದ “ರತ್ನನ ಪ್ರಪಂಚ” ಚಿತ್ರ ಸಹ ಪ್ರಚಂಡ ಯಶಸ್ಸು ಕಂಡಿತ್ತು.…

Chitra Suddhi
In the movie "December 24". Boys from Kunigal Taluk

“ಡಿಸೆಂಬರ್ 24” ಚಿತ್ರದಲ್ಲಿ ಹಾವಳಿ ಕೊಡೋಕೆ ಕುಣಿಗಲ್...

“ಡಿಸೆಂಬರ್ 24” ಚಿತ್ರದಲ್ಲಿ ಅನಿಲ್ ಗೌಡ್ರು, ಕುಮಾರ್ ಗೌಡ್ರು ಹಾಗೂ ಬೆಟ್ಟೇಗೌಡ್ರು ಖಡಕ್ ಖಳನಾಯಕರಾಗಿ ಅಭಿನಯಿಸಿದ್ದು, ಈ ಚಿತ್ರದಲ್ಲಿ ಇವರು ತುಂಬಾ ವಿಭಿನ್ನವಾದ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಈ ಚಿತ್ರದಲ್ಲಿ ನಾಯಕರ ಪಾತ್ರ ಎಷ್ಟು ಮುಖ್ಯನೋ ಹಾಗೆ ಖಳನಾಯಕರ ಪಾತ್ರಗಳು ಅಷ್ಟೇ ಮುಖ್ಯ. ಅದರಂತೆ ಖಳನಾಯಕರ ಆರ್ಭಟ ಜೋರಾಗೆ ಇರಲಿದೆ…

News
VXplore Banking & Competitive Exams Coaching Academy

ಅದು ಕೆಂಗೇರಿಯಲ್ಲಿ ಹೊಸದಾಗಿ ಶುರುವಾದ ಸ್ಪರ್ಧಾತ್ಮಕ ಪರೀಕ್ಷೆಗಳ...

ಸಾವಿರಾರು ವಿದ್ಯಾರ್ಥಿಗಳಿಗೆ ಭವಿಷ್ಯ ಕಟ್ಟಿಕೊಟ್ಟ ಪ್ರತಿಷ್ಠಿತ ವಿದ್ಯಾ ಸಂಸ್ಥೆಯ ನಿರ್ದೇಶಕರಾದ  ಚಂದ್ರ ಮೂರ್ತಿ ಯವರು ಇದರ ಸಂಸ್ಥಾಪಕರು. ಉತ್ತಮ ಮಟ್ಟದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಭೇತಿ ನೀಡುವ ಕಾರಣದಿಂದ ಈ VXplore Banking & Competitive Exams Coaching Academy. ತರಭೇತಿ ಕೇಂದ್ರವನ್ನು ತೆರೆದಿದ್ದಾರೆ. ಅದು ಆಕಾಕ್ಷಿ ವಿಧ್ಯಾರ್ಥಿಗಳಿಗೆ ಅವರ…

Chitra Suddhi
i am pregnant kannada movie censored ua

“ಐ ಆಮ್ ಪ್ರೆಗ್ನೆಂಟ್” ಚಿತ್ರವು ಸೆನ್ಸಾರ್ ಮಂಡಳಿಯಿಂದ...

“ಅನು ಸಿನಿಮಾಸ್” ಬ್ಯಾನರ್ ಅಡಿಯಲ್ಲಿ ತಯಾರಾಗುತ್ತಿರುವ “ಐ ಆಮ್ ಪ್ರೆಗ್ನೆಂಟ್” ಎಂಬ ಚಿತ್ರವನ್ನು ಸೆನ್ಸಾರ್ ಮಂಡಳಿಯಿಂದ ಉತ್ತಮ ಪ್ರತಿಕ್ರಿಯೆ ಪಡೆದಿದೆ . ಕೆಲವೇ ದಿನಗಳಲ್ಲಿ ಚಿತ್ರಮಂದಿರಕ್ಕೆ ಲಗ್ಗೆಯಿಡಲು ಚಿತ್ರತಂಡ ಎಲ್ಲ ತಯಾರಿ ಮಾಡಿಕೊಳ್ಳುತ್ತಿದ್ದಾರೆ . ಇದರಲ್ಲಿ ನುರಿತ ಕಲಾವಿದರು ಹಾಗೂ ನುರಿತ ತಂತ್ರಜ್ಞರು ಕೂಡ ಇದಕ್ಕೆ ಉತ್ತಮ ಬೆಂಬಲವನ್ನು…

Chitra Suddhi
90 bidi manig nadi song release

ನಾಳೆಯಿಂದ ನೈಂಟಿ ನಶೆ!

ಹಿರಿಯ ಹಾಸ್ಯ ನಟ ಬಿರಾದಾರ್ ಅಭಿನಯದ ಐನೂರನೇ ಚಿತ್ರ ಎಂಬ ಹಣೆಪಟ್ಟಿ ಹೊತ್ತುಕೊಂಡು ಆರಂಭದಿಂದಲೇ ಭರ್ಜರಿ ಸದ್ದು ಮಾಡುತ್ತಲೇ ಬಂದ ಚಿತ್ರ ’90 ಬಿಡಿ ಮನೀಗ್ ನಡಿ’. ಉತ್ತರ ಕರ್ನಾಟಕ ಶೈಲಿಯ ಕಾಮಿಡಿ ಕ್ರೈಂ ಥ್ರಿಲ್ಲರ್ ಕಥೆ ಎನ್ನುತ್ತಾ, ‘ಟೀಸರ್’ ಮೂಲಕ ಚಿತ್ರ ಭರವಸೆ ಮೂಡಿಸಿತ್ತು. ಇದೀಗ ಚಿತ್ರತಂಡ…