ಗೃಹ ಸಚಿವರಿಂದ “ಓಮಿನಿ” ಟ್ರೇಲರ್ ಬಿಡುಗಡೆ

omni kannada movie

“ಓಮಿನಿ” ಕಾರು ಹೌದು. ಆದರೆ ಲ್ಯಾಟಿನ್ ಭಾಷೆಯಲ್ಲಿ “ಓಮಿನಿ” ಗೆ ಎಲ್ಲಾ ಎಂಬ ಅರ್ಥವಿದೆ. ಇತ್ತೀಚೆಗೆ ಈ ಚಿತ್ರದ ಟ್ರೇಲರ್ ಬಿಡುಗಡೆ ‌ಸಮಾರಂಭ ಅದ್ದೂರಿಯಾಗಿ ನಡೆಯಿತು. ಸನ್ಮಾನ್ಯ ಗೃಹಸಚಿವರಾದ ಅರಗ ಜ್ಞಾನೇಂದ್ರ ಈ ಚಿತ್ರದ ಟ್ರೇಲರ್ ಬಿಡುಗಡೆ ಮಾಡಿ ಶುಭ ಕೋರಿದರು.omni kannada movie

ತೀರ್ಥಹಳ್ಳಿ ಸುಂದರವಾದ ಊರು. ಅಲ್ಲಿನ ಗಾಳಿ, ನೀರಿಗೆ ಏನೋ ಅದ್ಭುತ ಶಕ್ತಿ ಇದೆ ಅನಿಸುತ್ತದೆ. ರಾಷ್ಟ್ರಕವಿ ಕುವೆಂಪು, ಮಾಜಿ ಮುಖ್ಯಮಂತ್ರಿ ಕಡಿದಾಳ್ ಮಂಜಪ್ಪ ಅವರು ಸೇರಿದಂತೆ ಅನೇಕ ಗಣ್ಯರು ನಮ್ಮ ತಾಲ್ಲೂಕಿನವರು ಎಂದು ಹೇಳಿಕೊಳ್ಳಲು ಹೆಮ್ಮೆಯಾಗುತ್ತದೆ. ಈ “ಓಮಿನಿ” ಚಿತ್ರದ ನಿರ್ದೇಶಕ ಮಂಜು ಕೂಡ ನಮ್ಮೂರಿನವರು. ಇವರೆಲ್ಲಾ ಬಂದು ನನ್ನನ್ನು ಸಮಾರಂಭಕ್ಕೆ ಆಹ್ವಾನಿಸಿದಾಗ ಬರಲ್ಲ ಎಂದು ಹೇಳಲು ಆಗಲಿಲ್ಲ. ಅವರೆಲ್ಲರ ಪ್ರೀತಿ ನನ್ನ ಇಲ್ಲಿಯವರೆಗೂ ಕರೆತಂದಿದೆ. ಚಿತ್ರಕ್ಕೆ ಒಳ್ಳೆಯದಾಗಲಿ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ಹಾರೈಸಿದರು.omni kannada movie

ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರಾದ ಭಾ.ಮ.ಹರೀಶ್, ರವಿಸಿಂಗ್ ಮುಂತಾದ ಗಣ್ಯರು ಸಮಾರಂಭದಲ್ಲಿ ಉಪಸ್ಥಿತರಿದ್ದರು.”ಓಮಿನಿ” ಎಂದರೆ ಲ್ಯಾಟಿನ್ ಭಾಷೆಯಲ್ಲಿ ಎಲ್ಲಾ ಎಂದು ಅರ್ಥ. ಆದರೆ “ಓಮಿನಿ” ಕಾರ್ ಸಹ ನಮ್ಮ ಚಿತ್ರದಲ್ಲಿ ಪ್ರಮುಖ ಪಾತ್ರವಹಿಸಿದೆ. ಇಂದು ಟ್ರೇಲರ್ ಬಿಡುಗಡೆಯಾಗಿದೆ. ಆಗಸ್ಟ್ 19 ರಂದು ಚಿತ್ರ ತೆರೆಗೆ ಬರಲಿದೆ‌. ಇದು ನನ್ನ ಪಾಲಿಗೆ ಅತೀ ದೊಡ್ಡ ಸಮಾರಂಭ. ನಮ್ಮೂರಿನವರೇ ಆದ ಸನ್ಮಾನ್ಯ‌ ಗೃಹ ಸಚಿವರು ಈ ಕಾರ್ಯಕ್ರಮಕ್ಕೆ ಬಂದಿದ್ದಾರೆ. ನನ್ನ ಬಾಯಲ್ಲಿ ಪದಗಳೇ ಹೊರಡುತ್ತಿಲ್ಲ.‌ ಗೃಹ ಸಚಿವರಿಗೆ ಎಷ್ಟು ಕಾರ್ಯದೊತ್ತಡ ಇರುತ್ತದೆ ಎಂಬುದು ಎಲ್ಲರಿಗೂ ಗೊತ್ತು. ಅಂತಹ ಬಿಡುವಿಲ್ಲದ ಕಾರ್ಯದೊತ್ತಡದ ನಡುವೆ ಈ ಕಾರ್ಯಕ್ರಮಕ್ಕೆ ಬಂದು ಹಾರೈಸಿರುವುದು ತುಂಬಾ ಸಂತೋಷವಾಗುತ್ತಿದೆ. ನಾನು ನಿರ್ದೇಶನದೊಂದಿಗೆ ಹಲವು ಜವಾಬ್ದಾರಿ ಹೊತ್ತುಕೊಂಡಿದ್ದೀನಿ. ಪ್ರಮುಖಪಾತ್ರದಲ್ಲೂ ಕಾಣಿಸಿಕೊಂಡಿದ್ದೀನಿ ಎಂದರು ನಿರ್ದೇಶಕ ಮಂಜು ಹೆದ್ದೂರ್.omni kannada movie

ಇದೊಂದು ವಿಭಿನ್ನ ಕಥೆಯ ಚಿತ್ರ. ಚಿತ್ರವೊಂದರಲ್ಲಿ ಚಿತ್ರವನ್ನು ತೋರಿಸುವ ಪ್ರಯತ್ನ ಮಾಡಿದ್ದೇವೆ. ಲವ್, ಸಸ್ಪೆನ್ಸ್, ಹಾರಾರ್ ಎಲ್ಲಾ‌ ಅಂಶಗಳು ನಮ್ಮ ಚಿತ್ರದಲ್ಲಿದೆ.‌ ನಮ್ಮ ಚಿತ್ರದಲ್ಲಿ “ಓಮಿನಿ” ಪ್ರಮುಖಪಾತ್ರ ವಹಿಸುತ್ತದೆ. ತೀರ್ಥಹಳ್ಳಿಯ ಸುಂದರ ಪರಿಸರದಲ್ಲೇ ಹೆಚ್ಚು ಚಿತ್ರೀಕರಣ ನಡೆದಿದೆ‌. ಅತೀ ದೊಡ್ಡದಾದ ದಾವಣಗೆರೆಯ ಗ್ಲಾಸ್ ಹೌಸ್ ನಲ್ಲಿ ಚಿತ್ರೀಕರಣವಾಗಿರುವುದು ವಿಶೇಷ. ಆಗಸ್ಟ್ 19 ರಂದು ರಾಜ್ಯಾದ್ಯಂತ “ಓಮಿನಿ” ಸಂಚಾರ ಆರಂಭವಾಗಲಿದೆ. ಇದು ನಾನು ನಾಯಕನಾಗಿ ನಟಿಸಿರುವ ಮೊದಲ ಚಿತ್ರ. ನೋಡಿ. ಹಾರೈಸಿ ಎಂದರು ನಾಯಕ ಸಿದ್ದು ಮೂಲಿಮನಿ.omni kannada movie

ಹಲವು ವರ್ಷಗಳ ನಂತರ ಕನ್ನಡ ಚಿತ್ರವೊಂದರಲ್ಲಿ ನಟಿಸಿದ್ದೇನೆ. ಒಳ್ಳೆಯ ಪಾತ್ರ‌ ನೀಡಿದ್ದಾರೆ.‌ ನಾನು ಮಲೆನಾಡ ಹುಡುಗಿ. ಅದೇ ಊರಿನ ಹುಡುಗಿ ಪಾತ್ರ ಸಿಕ್ಕಿರುವುದು ಖುಷಿಯಾಗಿದೆ ಎಂದರು ನಾಯಕಿ ಅಶ್ವಿನಿ ಚಂದ್ರಶೇಖರ್. ಗೀತರಚನೆಕಾರ ಪ್ರಮೋದ್ ಮರವಂತೆ ಸೇರಿದಂತೆ ಅನೇಕ ಚಿತ್ರತಂಡದ ಸದಸ್ಯರು ಹಾಗೂ ಗಣ್ಯರು “ಓಮಿನಿ” ಬಗ್ಗೆ ಮಾತನಾಡಿದರು.omni kannada movie

ಶ್ರೀ ಬೆಳ್ಳುಡಿ ಫಿಲಂಸ್ ಹಾಗೂ ಎಸ್ ಆರ್ ಗ್ರೂಪ್ಸ್ ಲಾಂಛನದಲ್ಲಿ ಈ ಚಿತ್ರ ನಿರ್ಮಾಣವಾಗಿದೆ. ಮಂಜು ಹೆದ್ದೂರ್ ಕಥೆ ಬರೆದು ನಿರ್ದೇಶನ ಮಾಡಿದ್ದಾರೆ. ಅರ್ಜುನ್ ರಾಮು ಸಂಗೀತ ನಿರ್ದೇಶನ ಹಾಗೂ ಎಂ.ಬಿ.ಅಳ್ಳಿಕಟ್ಟಿ ಛಾಯಾಗ್ರಹಣ ಈ ಚಿತ್ರಕ್ಕಿದೆ.

ಸಿದ್ದು ಮೂಲಿಮನಿ, ಪೂಜಾ ಜನಾರ್ದನ, ಅಶ್ವಿನಿ ಚಂದ್ರಶೇಖರ್, ಭರತ್‌ ಬೋಪ್ಪಣ್ಣ, ಮಂಜು ಹೆದ್ದೂರ್, ಆಕಾಂಕ್ಷ ಪಟಮಕ್ಕಿ, ಮೋಹನ್ ಜುನೇಜ, ಪ್ರಕಾಶ್ ತುಮ್ಮಿನಾಡು, ಮನಸ್ವಿತ್ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

Girki 3.5

You Will  Love   Like  These

Chitra Suddhi
daali uttarakhand kannada movie

ಡಾಲಿ ಧನಂಜಯ “ಉತ್ತರ ಕಾಂಡ”ದ ನಾಯಕ.

ವಿಜಯ್ ಕಿರಗಂದೂರು ಅರ್ಪಿಸುವ, ಕೆ.ಆರ್.ಜಿ ಸ್ಟುಡಿಯೋಸ್ ಲಾಂಛನದಲ್ಲಿ ಕಾರ್ತಿಕ್ ಹಾಗೂ ಯೋಗಿ ಜಿ ರಾಜ್ ನಿರ್ಮಿಸುತ್ತಿರುವ ” ಉತ್ತರಕಾಂಡ” ಚಿತ್ರದ ನಾಯಕನಾಗಿ ಡಾಲಿ ಧನಂಜಯ ಅಭಿನಯಿಸುತ್ತಿದ್ದಾರೆ. ಈ ಹಿಂದೆ ಕೆ.ಆರ್.ಜಿ ಸ್ಟುಡಿಯೋಸ್ ನಿರ್ಮಾಣದಲ್ಲಿ ಡಾಲಿ ಧನಂಜಯ ನಾಯಕನಾಗಿ ನಟಿಸಿದ್ದ “ರತ್ನನ ಪ್ರಪಂಚ” ಚಿತ್ರ ಸಹ ಪ್ರಚಂಡ ಯಶಸ್ಸು ಕಂಡಿತ್ತು.…

Chitra Suddhi
In the movie "December 24". Boys from Kunigal Taluk

“ಡಿಸೆಂಬರ್ 24” ಚಿತ್ರದಲ್ಲಿ ಹಾವಳಿ ಕೊಡೋಕೆ ಕುಣಿಗಲ್...

“ಡಿಸೆಂಬರ್ 24” ಚಿತ್ರದಲ್ಲಿ ಅನಿಲ್ ಗೌಡ್ರು, ಕುಮಾರ್ ಗೌಡ್ರು ಹಾಗೂ ಬೆಟ್ಟೇಗೌಡ್ರು ಖಡಕ್ ಖಳನಾಯಕರಾಗಿ ಅಭಿನಯಿಸಿದ್ದು, ಈ ಚಿತ್ರದಲ್ಲಿ ಇವರು ತುಂಬಾ ವಿಭಿನ್ನವಾದ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಈ ಚಿತ್ರದಲ್ಲಿ ನಾಯಕರ ಪಾತ್ರ ಎಷ್ಟು ಮುಖ್ಯನೋ ಹಾಗೆ ಖಳನಾಯಕರ ಪಾತ್ರಗಳು ಅಷ್ಟೇ ಮುಖ್ಯ. ಅದರಂತೆ ಖಳನಾಯಕರ ಆರ್ಭಟ ಜೋರಾಗೆ ಇರಲಿದೆ…

News
VXplore Banking & Competitive Exams Coaching Academy

ಅದು ಕೆಂಗೇರಿಯಲ್ಲಿ ಹೊಸದಾಗಿ ಶುರುವಾದ ಸ್ಪರ್ಧಾತ್ಮಕ ಪರೀಕ್ಷೆಗಳ...

ಸಾವಿರಾರು ವಿದ್ಯಾರ್ಥಿಗಳಿಗೆ ಭವಿಷ್ಯ ಕಟ್ಟಿಕೊಟ್ಟ ಪ್ರತಿಷ್ಠಿತ ವಿದ್ಯಾ ಸಂಸ್ಥೆಯ ನಿರ್ದೇಶಕರಾದ  ಚಂದ್ರ ಮೂರ್ತಿ ಯವರು ಇದರ ಸಂಸ್ಥಾಪಕರು. ಉತ್ತಮ ಮಟ್ಟದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಭೇತಿ ನೀಡುವ ಕಾರಣದಿಂದ ಈ VXplore Banking & Competitive Exams Coaching Academy. ತರಭೇತಿ ಕೇಂದ್ರವನ್ನು ತೆರೆದಿದ್ದಾರೆ. ಅದು ಆಕಾಕ್ಷಿ ವಿಧ್ಯಾರ್ಥಿಗಳಿಗೆ ಅವರ…

Chitra Suddhi
i am pregnant kannada movie censored ua

“ಐ ಆಮ್ ಪ್ರೆಗ್ನೆಂಟ್” ಚಿತ್ರವು ಸೆನ್ಸಾರ್ ಮಂಡಳಿಯಿಂದ...

“ಅನು ಸಿನಿಮಾಸ್” ಬ್ಯಾನರ್ ಅಡಿಯಲ್ಲಿ ತಯಾರಾಗುತ್ತಿರುವ “ಐ ಆಮ್ ಪ್ರೆಗ್ನೆಂಟ್” ಎಂಬ ಚಿತ್ರವನ್ನು ಸೆನ್ಸಾರ್ ಮಂಡಳಿಯಿಂದ ಉತ್ತಮ ಪ್ರತಿಕ್ರಿಯೆ ಪಡೆದಿದೆ . ಕೆಲವೇ ದಿನಗಳಲ್ಲಿ ಚಿತ್ರಮಂದಿರಕ್ಕೆ ಲಗ್ಗೆಯಿಡಲು ಚಿತ್ರತಂಡ ಎಲ್ಲ ತಯಾರಿ ಮಾಡಿಕೊಳ್ಳುತ್ತಿದ್ದಾರೆ . ಇದರಲ್ಲಿ ನುರಿತ ಕಲಾವಿದರು ಹಾಗೂ ನುರಿತ ತಂತ್ರಜ್ಞರು ಕೂಡ ಇದಕ್ಕೆ ಉತ್ತಮ ಬೆಂಬಲವನ್ನು…

Chitra Suddhi
90 bidi manig nadi song release

ನಾಳೆಯಿಂದ ನೈಂಟಿ ನಶೆ!

ಹಿರಿಯ ಹಾಸ್ಯ ನಟ ಬಿರಾದಾರ್ ಅಭಿನಯದ ಐನೂರನೇ ಚಿತ್ರ ಎಂಬ ಹಣೆಪಟ್ಟಿ ಹೊತ್ತುಕೊಂಡು ಆರಂಭದಿಂದಲೇ ಭರ್ಜರಿ ಸದ್ದು ಮಾಡುತ್ತಲೇ ಬಂದ ಚಿತ್ರ ’90 ಬಿಡಿ ಮನೀಗ್ ನಡಿ’. ಉತ್ತರ ಕರ್ನಾಟಕ ಶೈಲಿಯ ಕಾಮಿಡಿ ಕ್ರೈಂ ಥ್ರಿಲ್ಲರ್ ಕಥೆ ಎನ್ನುತ್ತಾ, ‘ಟೀಸರ್’ ಮೂಲಕ ಚಿತ್ರ ಭರವಸೆ ಮೂಡಿಸಿತ್ತು. ಇದೀಗ ಚಿತ್ರತಂಡ…