ಟ್ರೇಲರ್ ಮೂಲಕ ಜನಮನಸೆಳೆಯುತ್ತಿದೆ “once upon a time in ಜಮಾಲಿ ಗುಡ್ಡ”

"Once upon a time in Jamali Gudda" is attracting attention with its trailer.

ಡಾಲಿ ಅಭಿನಯದ ಈ ಚಿತ್ರ ಡಿಸೆಂಬರ್ 30 ರಂದು ತೆರೆಗೆ

ನಟ ರಾಕ್ಷಸ ಎಂದೇ ಖ್ಯಾತರಾಗಿರುವ ಡಾಲಿ ಧನಂಜಯ ವಿಭಿನ್ನ ಲುಕ್ ನಲ್ಲಿ ಕಾಣಿಸಿಕೊಂಡಿರುವ “once upon a time in ಜಮಾಲಿಗುಡ್ಡ” ಚಿತ್ರದ ಟ್ರೇಲರ್ ಬಿಡುಗಡೆಯಾಗಿದೆ. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಭಾ.ಮ.ಹರೀಶ್ ಟ್ರೇಲರ್ ಬಿಡುಗಡೆ ಮಾಡಿ ಶುಭ ಕೋರಿದರು."Once upon a time in Jamali Gudda" is attracting attention with its trailer.

ಈ ಚಿತ್ರ ಒಂದು ಕಾಲ್ಪನಿಕ ಪ್ರಪಂಚ. ಜೊತೆಗೆ ಭಾವನಾತ್ಮಕ ಪಯಣ ಕೂಡ. ಧನಂಜಯ ಹಾಗೂ ಬೇಬಿ‌ ಪ್ರಾಣ್ಯ ನಡುವಿನ ಸನ್ನಿವೇಶಗಳು ಸುಂದರವಾಗಿ ಮೂಡಿಬಂದಿದೆ. 95 – 96 ರ ಕಾಲಘಟ್ಟದಲ್ಲಿ ನಡೆಯುವ ಕಥೆಯಿದು. ಚಿಕ್ಕಮಗಳೂರಿನ ಬಾಬಾಬುಡನಗಿರಿಯ ಸೊಬಗು ಚಿತ್ರದ ಮತ್ತೊಂದು ಹೈಲೆಟ್. ಅಲ್ಲೇ ಹೆಚ್ವಿನ ಚಿತ್ರೀಕರಣ ನಡೆದಿದೆ. “ಜಮಾಲಿ ಗುಡ್ಡ” ಚಿತ್ರ ಉತ್ತಮವಾಗಿ ಮೂಡಿಬರಲು ನಿರ್ಮಾಪಕರು ಹಾಗೂ ಇಡೀ ಚಿತ್ರತಂಡದ ಸಹಕಾರ ಕಾರಣ ಎಂದರು ನಿರ್ದೇಶಕ ಕುಶಾಲ್ ಗೌಡ."Once upon a time in Jamali Gudda" is attracting attention with its trailer.

“ಜಮಾಲಿಗುಡ್ಡ” ಈ ವರ್ಷದ ನನ್ನ ನಟನೆಯ 6 ನೇ ಚಿತ್ರವಾಗಿ ಬಿಡುಗಡೆಯಾಗುತ್ತಿದೆ. ಇದೊಂದು ಫೀಲ್ ಗುಡ್ ಸಿನಿಮಾ.‌ ಕುಟುಂಬ ಸಮೇತರಾಗಿ ಬಂದು ನೋಡಬಹುದಾದ ಚಿತ್ರ. ಕುಶಾಲ್ ಗೌಡ ಅವರು ಈ ಚಿತ್ರಕ್ಕಾಗಿ ಫೇಸ್ ಬುಕ್ ಮೂಲಕ ನಿರ್ಮಾಪಕರನ್ನು ಹುಡುಕಿದರು. ಆಗ ಶ್ರೀಹರಿ ಸಿಕ್ಕರು. ನಾನು‌ ಕೂಡ ಬ್ಯುಸಿ ಇದ್ದೆ. ಆದರೆ, ಹೆಚ್ಚಿನ ಚಿತ್ರೀಕರಣ ಬಾಬಾಬುಡನಗಿರಿಯಲ್ಲೇ ನಡೆಯಬೇಕಿತ್ತು. ಅದರಲ್ಲೂ ಸೆಪ್ಟೆಂಬರ್-ಅಕ್ಟೋಬರ್ ತಿಂಗಳ ವಾತಾವರಣದಲ್ಲೇ ಚಿತ್ರೀಕರಣ ನಡೆಯಬೇಕಿಗಿದ್ದರಿಂದ ಬೇಗ ಈ ಚಿತ್ರೀಕರಣದಲ್ಲಿ ಪಾಲ್ಗೊಂಡೆ. ಛಾಯಾಗ್ರಾಹಕ ಕಾರ್ತಿಕ್ ಸೇರಿದಂತೆ ಇಡೀ ತಂತ್ರಜ್ಞರ ಕಾರ್ಯವೈಖರಿ ಹಾಗೂ ಅದಿತಿ ಪ್ರಭುದೇವ ಅವರ ಆದಿಯಾಗಿ ಎಲ್ಲಾ ಕಲಾವಿದರ ಅಭಿನಯ ಚೆನ್ನಾಗಿದೆ. ಚಿತ್ರ ಯಶಸ್ವಿಯಾಗಲಿ. ನಿರ್ಮಾಪಕರು ಮತ್ತಷ್ಟು ಚಿತ್ರ ನಿರ್ಮಾಣ ಮಾಡಲಿ ಎಂದರು ನಾಯಕ ಡಾಲಿ ಧನಂಜಯ."Once upon a time in Jamali Gudda" is attracting attention with its trailer.

ಈ ಚಿತ್ರ ನನ್ನ ವೃತ್ತಿಬದುಕಿನಲ್ಲಿ ಸದಾ ನೆನಪಿನಲ್ಲಿ ಉಳಿಯುವ ಸಿನಿಮಾವಾಗಲಿದೆ. ಈ ಚಿತ್ರದ ಭಾವನಾತ್ಮಕ ಸನ್ನಿವೇಶಗಳಲ್ಲಿ ನಾನು ಎಷ್ಟೋ ಕಡೆ ಸಹಜವಾಗಿ ಅತ್ತಿದ್ದು ಇದೆ. ಅಂತಹ ಅದ್ಭುತ ಸನ್ನಿವೇಶಗಳು ಈ ಚಿತ್ರದಲ್ಲಿದೆ. ಧನಂಜಯ್ ಸೇರಿದಂತೆ ಎಲ್ಲಾ ಕಲಾವಿದರ ಅಭಿನಯ ಚೆನ್ನಾಗಿದೆ. ನಿಮ್ಮೆಲ್ಲರ ಪ್ರೋತ್ಸಾಹ ನಮ್ಮ ಚಿತ್ರದ ಮೇಲಿರಲಿ ಎಂದರು ನಟಿ ಅದಿತಿ ಪ್ರಭುದೇವ.

ನಾನು ಮೂಲತಃ ಚಿತ್ರೋದ್ಯಮಿ ಅಲ್ಲ. ನಮ್ಮದೇ ಬೇರೆ ಉದ್ಯಮ ಇದೆ. ಆದರೆ ನನಗೆ ಇಪ್ಪತ್ತು ವರ್ಷಗಳ ಹಿಂದೆ ಚಿತ್ರದಲ್ಲಿ ಅಭಿನಯಿಸುವ ಆಸೆಯಿತ್ತು. ಅದು ಆಗಲಿಲ್ಲ. ಈಗ ನಿರ್ಮಾಪಕನಾಗಿದ್ದೇನೆ. ಡಿಸೆಂಬರ್ 30 ನಮ್ಮ ಚಿತ್ರ ತೆರೆಗೆ ಬರುತ್ತಿದೆ ನಿಮ್ಮೆಲ್ಲರ ಬೆಂಬಲವಿರಲಿ ಎಂದರು ನಿರ್ಮಾಪಕ ಶ್ರೀಹರಿ."Once upon a time in Jamali Gudda" is attracting attention with its trailer.

ಚಿತ್ರದಲ್ಲಿ ನಟಿಸಿರುವ ಯಶ್ ಶೆಟ್ಟಿ, ರುಶಿಕಾ, ದಿವ್ಯ, ಪ್ರಾಣ್ಯ, ಸಂತು, ಸಂಕಲನಕಾರ ಹರೀಶ್ ಕೊಮ್ಮೆ ಮುಂತಾದವರು ಚಿತ್ರದ ಬಗ್ಗೆ ಮಾತನಾಡಿದರು. ಕಾರ್ತಿಕ್ ಛಾಯಾಗ್ರಹಣ ಹಾಗೂ ಅರ್ಜುನ್ ಜನ್ಯ ಅವರ ಸಂಗೀತ ನಿರ್ದೇಶನವಿರುವ ಈ ಚಿತ್ರಕ್ಕೆ ಅನೂಪ್ ಸೀಳಿನ್ ಹಿನ್ನೆಲೆ ಸಂಗೀತ ನೀಡಿದ್ದಾರೆ."Once upon a time in Jamali Gudda" is attracting attention with its trailer.

You Will  Love   Like  These

Chitra Suddhi
daali uttarakhand kannada movie

ಡಾಲಿ ಧನಂಜಯ “ಉತ್ತರ ಕಾಂಡ”ದ ನಾಯಕ.

ವಿಜಯ್ ಕಿರಗಂದೂರು ಅರ್ಪಿಸುವ, ಕೆ.ಆರ್.ಜಿ ಸ್ಟುಡಿಯೋಸ್ ಲಾಂಛನದಲ್ಲಿ ಕಾರ್ತಿಕ್ ಹಾಗೂ ಯೋಗಿ ಜಿ ರಾಜ್ ನಿರ್ಮಿಸುತ್ತಿರುವ ” ಉತ್ತರಕಾಂಡ” ಚಿತ್ರದ ನಾಯಕನಾಗಿ ಡಾಲಿ ಧನಂಜಯ ಅಭಿನಯಿಸುತ್ತಿದ್ದಾರೆ. ಈ ಹಿಂದೆ ಕೆ.ಆರ್.ಜಿ ಸ್ಟುಡಿಯೋಸ್ ನಿರ್ಮಾಣದಲ್ಲಿ ಡಾಲಿ ಧನಂಜಯ ನಾಯಕನಾಗಿ ನಟಿಸಿದ್ದ “ರತ್ನನ ಪ್ರಪಂಚ” ಚಿತ್ರ ಸಹ ಪ್ರಚಂಡ ಯಶಸ್ಸು ಕಂಡಿತ್ತು.…

Chitra Suddhi
In the movie "December 24". Boys from Kunigal Taluk

“ಡಿಸೆಂಬರ್ 24” ಚಿತ್ರದಲ್ಲಿ ಹಾವಳಿ ಕೊಡೋಕೆ ಕುಣಿಗಲ್...

“ಡಿಸೆಂಬರ್ 24” ಚಿತ್ರದಲ್ಲಿ ಅನಿಲ್ ಗೌಡ್ರು, ಕುಮಾರ್ ಗೌಡ್ರು ಹಾಗೂ ಬೆಟ್ಟೇಗೌಡ್ರು ಖಡಕ್ ಖಳನಾಯಕರಾಗಿ ಅಭಿನಯಿಸಿದ್ದು, ಈ ಚಿತ್ರದಲ್ಲಿ ಇವರು ತುಂಬಾ ವಿಭಿನ್ನವಾದ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಈ ಚಿತ್ರದಲ್ಲಿ ನಾಯಕರ ಪಾತ್ರ ಎಷ್ಟು ಮುಖ್ಯನೋ ಹಾಗೆ ಖಳನಾಯಕರ ಪಾತ್ರಗಳು ಅಷ್ಟೇ ಮುಖ್ಯ. ಅದರಂತೆ ಖಳನಾಯಕರ ಆರ್ಭಟ ಜೋರಾಗೆ ಇರಲಿದೆ…

News
VXplore Banking & Competitive Exams Coaching Academy

ಅದು ಕೆಂಗೇರಿಯಲ್ಲಿ ಹೊಸದಾಗಿ ಶುರುವಾದ ಸ್ಪರ್ಧಾತ್ಮಕ ಪರೀಕ್ಷೆಗಳ...

ಸಾವಿರಾರು ವಿದ್ಯಾರ್ಥಿಗಳಿಗೆ ಭವಿಷ್ಯ ಕಟ್ಟಿಕೊಟ್ಟ ಪ್ರತಿಷ್ಠಿತ ವಿದ್ಯಾ ಸಂಸ್ಥೆಯ ನಿರ್ದೇಶಕರಾದ  ಚಂದ್ರ ಮೂರ್ತಿ ಯವರು ಇದರ ಸಂಸ್ಥಾಪಕರು. ಉತ್ತಮ ಮಟ್ಟದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಭೇತಿ ನೀಡುವ ಕಾರಣದಿಂದ ಈ VXplore Banking & Competitive Exams Coaching Academy. ತರಭೇತಿ ಕೇಂದ್ರವನ್ನು ತೆರೆದಿದ್ದಾರೆ. ಅದು ಆಕಾಕ್ಷಿ ವಿಧ್ಯಾರ್ಥಿಗಳಿಗೆ ಅವರ…

Chitra Suddhi
i am pregnant kannada movie censored ua

“ಐ ಆಮ್ ಪ್ರೆಗ್ನೆಂಟ್” ಚಿತ್ರವು ಸೆನ್ಸಾರ್ ಮಂಡಳಿಯಿಂದ...

“ಅನು ಸಿನಿಮಾಸ್” ಬ್ಯಾನರ್ ಅಡಿಯಲ್ಲಿ ತಯಾರಾಗುತ್ತಿರುವ “ಐ ಆಮ್ ಪ್ರೆಗ್ನೆಂಟ್” ಎಂಬ ಚಿತ್ರವನ್ನು ಸೆನ್ಸಾರ್ ಮಂಡಳಿಯಿಂದ ಉತ್ತಮ ಪ್ರತಿಕ್ರಿಯೆ ಪಡೆದಿದೆ . ಕೆಲವೇ ದಿನಗಳಲ್ಲಿ ಚಿತ್ರಮಂದಿರಕ್ಕೆ ಲಗ್ಗೆಯಿಡಲು ಚಿತ್ರತಂಡ ಎಲ್ಲ ತಯಾರಿ ಮಾಡಿಕೊಳ್ಳುತ್ತಿದ್ದಾರೆ . ಇದರಲ್ಲಿ ನುರಿತ ಕಲಾವಿದರು ಹಾಗೂ ನುರಿತ ತಂತ್ರಜ್ಞರು ಕೂಡ ಇದಕ್ಕೆ ಉತ್ತಮ ಬೆಂಬಲವನ್ನು…

Chitra Suddhi
90 bidi manig nadi song release

ನಾಳೆಯಿಂದ ನೈಂಟಿ ನಶೆ!

ಹಿರಿಯ ಹಾಸ್ಯ ನಟ ಬಿರಾದಾರ್ ಅಭಿನಯದ ಐನೂರನೇ ಚಿತ್ರ ಎಂಬ ಹಣೆಪಟ್ಟಿ ಹೊತ್ತುಕೊಂಡು ಆರಂಭದಿಂದಲೇ ಭರ್ಜರಿ ಸದ್ದು ಮಾಡುತ್ತಲೇ ಬಂದ ಚಿತ್ರ ’90 ಬಿಡಿ ಮನೀಗ್ ನಡಿ’. ಉತ್ತರ ಕರ್ನಾಟಕ ಶೈಲಿಯ ಕಾಮಿಡಿ ಕ್ರೈಂ ಥ್ರಿಲ್ಲರ್ ಕಥೆ ಎನ್ನುತ್ತಾ, ‘ಟೀಸರ್’ ಮೂಲಕ ಚಿತ್ರ ಭರವಸೆ ಮೂಡಿಸಿತ್ತು. ಇದೀಗ ಚಿತ್ರತಂಡ…