“ಓರಿಯೋ'” ಚಿತ್ರೀಕರಣ ಮುಕ್ತಾಯ ಹಂತದಲ್ಲಿ.

ವಿಭಿನ್ನ ಕಥಾವಸ್ತು ಹೊಂದಿರುವ ಈ ಚಿತ್ರಕ್ಕೆ ನಂದನ್ ಪ್ರಭು ನಿರ್ದೇಶನ.

ಬಿಎಂಟಿಸಿ ನಿರ್ವಾಹಕರಾಗಿದ್ದ ನಂದನ್‌ಪ್ರಭು ಈ ಹಿಂದೆ ‘ಪ್ರೀತಿಯ ಲೋಕ’ ಹಾಗೂ ‘ಲವ್ ಈಸ್ ಪಾಯಸನ್’ ಎಂಬ ಚಿತ್ರಗಳನ್ನು ನಿರ್ದೇಶಿಸಿದ್ದರು. ಆರೇಳು ವರ್ಷಗಳ ನಂತರ ನಂದನ್ ಪ್ರಭು ಮತ್ತೊಂದು ಚಿತ್ರವನ್ನು ನಿರ್ದೇಶಿಸಿ ತೆರೆಗೆ ತರುತ್ತಿದ್ದಾರೆ. ಆ ಚಿತ್ರದ ಹೆಸರು “ಓರಿಯೋ”.WhatsApp Image 2022 05 15 at 9.41.14 AM

ಈಗಾಗಲೇ ಚಿತ್ರದ ಮಾತಿನ ಭಾಗವನ್ನು ಪೂರ್ಣಗೊಳಿಸಿರುವ ನಂದನಪ್ರಭು ಒಂದು ಹಾಡಿನ ಚಿತ್ರೀಕರಣ ಮಾತ್ರವೇ ಬಾಕಿ ಉಳಿಸಿಕೊಂಡಿದ್ದಾರೆ.
ಚಿತ್ರದ ಕುರಿತು ಒಂದಷ್ಟು ಮಾಹಿತಿ ಹಂಚಿಕೊಳ್ಳಲು ಈಚೆಗೆ ಕರೆದಿದ್ದ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ನಂದನಪ್ರಭು, “ಓರಿಯೋ” ಪದಕ್ಕೆ ಒಂದೊಂದು ದೇಶದಲ್ಲಿ ಒಂದೊಂದು ಅರ್ಥವಿದೆ. ನಮ್ಮ ಚಿತ್ರಕ್ಕೆ ಇದೇ ಶೀರ್ಷಿಕೆ ಇಟ್ಟಿರುವ ಕಾರಣವೇನು? ಎಂದು ಚಿತ್ರ ನೋಡಿದಾಗ ಖಂಡಿತ ಗೊತ್ತಾಗುತ್ತದೆ. ಕಳೆದ ನವೆಂಬರ್‌ನಲ್ಲಿ ಶೂಟಿಂಗ್ ಆರಂಭಿಸಿ ಸಕಲೇಶಪುರ, ಮಡಿಕೇರಿ, ಬೆಂಗಳೂರು ಸುತ್ತಮುತ್ತ ಚಿತ್ರೀಕರಣ ನಡೆಸಿದ್ದೇವೆ. ಈಗಾಗಲೇ 2 ಹಾಡು ಹಾಗೂ 2 ಸಾಹಸ ದೃಶ್ಯಗಳ ಶೂಟಿಂಗ್ ಮುಗಿಸಿದ್ದು, ಒಂದು ಹಾಡಿನ ಚಿತ್ರೀಕರಣ ಮಾತ್ರವೇ ಬಾಕಿಯಿದೆ.WhatsApp Image 2022 05 15 at 9.41.12 AM

ತುಂಬಾ ಹಿಂದೆ ನಾನು, ಎಪಿಜೆ ಅಬ್ದುಲ್ ಕಲಾಂ(ರಾಷ್ಟಪತಿ ಆಗುವುದಕ್ಕಿಂತ ಮುಂಚೆ) ಅವರ ಕಾರು ಚಾಲಕನಾಗಿದ್ದೆ. ಅವರು ನನ್ನೊಂದಿಗೆ ಮಾತಾಡುವಾಗ ಒಂದಷ್ಟು ವಿಷಯಗಳನ್ನು ಹೇಳುತ್ತಿದ್ದರು, ಆ ಮಾತುಗಳೇ ನಾನು ಈ ಚಿತ್ರ ಮಾಡಲು ಸ್ಪೂರ್ತಿ. ನಾವು ಎಚ್ಚರ ತಪ್ಪಿದರೆ, ಮುಂದೊಂದು ದಿನ ಹೀಗೂ ಆಗಬಹುದು ಎಂಬ ಎಚ್ಚರಿಕೆಯ ಸಂದೇಶವನ್ನು ಇಡೀ ವಿಶ್ವಕ್ಕೆ ನೀಡುವಂಥ ವಿಭಿನ್ನ ಕಥಾಹಂದರ ಈ ಚಿತ್ರದಲ್ಲಿದೆ. ಹಾರರ್ ಜೊತೆಗೆ ಪರಿಸರ ಕಾಳಜಿಯ ಅಂಶವೂ ಇದರಲ್ಲಿದೆ. ಈಗ ಪೋಸ್ಟರಿನಲ್ಲಿ ತೋರಿಸಿರುವ ೫ ಹೆಡೆಯ ಹಾವಿಗೂ ಚಿತ್ರಕಥೆಗೂ ಸಂಬಂಧವಿದೆ ಎಂದು ನಂದನ್ ಪ್ರಭು ಹೇಳಿದರು.

ಚಿತ್ರದ ಮತ್ತೊಬ್ಬ ನಾಯಕ ಸುಚಿತ್ ಮಂಜುನಾಥ್ ಮಾತನಾಡಿ, ರಥಾವರ, ವೈರ ಹಾಗೂ ಪುಟಾಣಿ ಪಂಟ್ರು ಚಿತ್ರಗಳ ನಂತರ ನಾನು ಅಭಿನಯಿಸುತ್ತಿರುವ ಚಿತ್ರವಿದು. ಇದರಲ್ಲಿ ನಾನು ಒಬ್ಬ ಸಾಮಾನ್ಯ ಕ್ಯಾಬ್‌ ಡ್ರೈವರ್ ಪಾತ್ರ ನಿರ್ವಹಿಸಿದ್ದು, ಒಂದು ಸಂದರ್ಭದಲ್ಲಿ ಕಾಡಿಗೆ ಹೋಗಬೇಕಾಗುತ್ತದೆ. ಅಲ್ಲಿಂದಲೇ ಕಥೆ ಪ್ರಾರಂಭವಾಗುತ್ತದೆ, ಯುಕ್ತ ನನ್ನ ಜೋಡಿಯಾಗಿ ಕಾಣಿಸಿಕೊಂಡಿದ್ದಾರೆ ಎಂದರು.WhatsApp Image 2022 05 15 at 9.41.13 AM

ಚಿತ್ರದಲ್ಲಿ ಕಾಮಿಡಿ ಪಾತ್ರ ನಿರ್ವಹಿಸಿರುವ ಚಕ್ರವರ್ತಿ ಮಾತನಾಡಿ ತಾವು ಕೂಡ ಕ್ಯಾಬ್ ಚಾಲಕನ ಪಾತ್ರ ಮಾಡಿರುವುದಾಗಿ ಹೇಳಿದರು. ಸಂಗೀತ ನಿರ್ದೇಶಕ ಸಾಯಿಕಿರಣ್ ಚಿತ್ರದ ಬಗ್ಗೆ ಮಾತನಾಡುತ್ತ, ಇದು ನನ್ನ ಸಂಗೀತ ನೀಡುತ್ತಿರುವ 6 ನೇ ಚಿತ್ರ. ಇತ್ತೀಚೆಗಷ್ಟೇ ಪಾರ್ಟಿಸಾಂಗ್ ವೊಂದನ್ನು ಚಿತ್ರೀಕರಿಸಿದ್ದೇವೆ ಎಂದು ಹೇಳಿದರು.

ಸದ್ಯ ಚಿತ್ರದ ಎಡಿಟಿಂಗ್ ಕಾರ್ಯ ನಡೆಯುತ್ತಿದೆ. ಒರಿಯೋ ಚಿತ್ರಕ್ಕೆ ಕಥೆ, ಚಿತ್ರಕಥೆ. ಸಂಭಾಷಣೆಗಳನ್ನು ನಿರ್ದೇಶಕ ನಂದನ ಪ್ರಭು ಅವರೇ ಬರೆದಿದ್ದಾರೆ. ವಿಜಯಶ್ರೀ ಆರ್.ಎಂ. ಹಾಗೂ ವೈಶಾಲಿ ವೈ.ಜೆ. ಈ ಚಿತ್ರದ ನಿರ್ಮಾಪಕರು. ಬ್ಯಾಟಪ್ಪಗೌಡ, ಪ್ರಭಾಕರ್ ಅವರ ಛಾಯಾಗ್ರಹಣ ಈ ಚಿತ್ರಕ್ಕಿದೆ. ನಿತಿನ್‌ಗೌಡ ಹಾಗೂ ಶುಭಿ ನಾಯಕ, ನಾಯಕಿಯಾಗಿ ಕಾಣಿಸಿಕೊಂಡಿದ್ದಾರೆ.

You Will  Love   Like  These

Chitra Suddhi
daali uttarakhand kannada movie

ಡಾಲಿ ಧನಂಜಯ “ಉತ್ತರ ಕಾಂಡ”ದ ನಾಯಕ.

ವಿಜಯ್ ಕಿರಗಂದೂರು ಅರ್ಪಿಸುವ, ಕೆ.ಆರ್.ಜಿ ಸ್ಟುಡಿಯೋಸ್ ಲಾಂಛನದಲ್ಲಿ ಕಾರ್ತಿಕ್ ಹಾಗೂ ಯೋಗಿ ಜಿ ರಾಜ್ ನಿರ್ಮಿಸುತ್ತಿರುವ ” ಉತ್ತರಕಾಂಡ” ಚಿತ್ರದ ನಾಯಕನಾಗಿ ಡಾಲಿ ಧನಂಜಯ ಅಭಿನಯಿಸುತ್ತಿದ್ದಾರೆ. ಈ ಹಿಂದೆ ಕೆ.ಆರ್.ಜಿ ಸ್ಟುಡಿಯೋಸ್ ನಿರ್ಮಾಣದಲ್ಲಿ ಡಾಲಿ ಧನಂಜಯ ನಾಯಕನಾಗಿ ನಟಿಸಿದ್ದ “ರತ್ನನ ಪ್ರಪಂಚ” ಚಿತ್ರ ಸಹ ಪ್ರಚಂಡ ಯಶಸ್ಸು ಕಂಡಿತ್ತು.…

Chitra Suddhi
In the movie "December 24". Boys from Kunigal Taluk

“ಡಿಸೆಂಬರ್ 24” ಚಿತ್ರದಲ್ಲಿ ಹಾವಳಿ ಕೊಡೋಕೆ ಕುಣಿಗಲ್...

“ಡಿಸೆಂಬರ್ 24” ಚಿತ್ರದಲ್ಲಿ ಅನಿಲ್ ಗೌಡ್ರು, ಕುಮಾರ್ ಗೌಡ್ರು ಹಾಗೂ ಬೆಟ್ಟೇಗೌಡ್ರು ಖಡಕ್ ಖಳನಾಯಕರಾಗಿ ಅಭಿನಯಿಸಿದ್ದು, ಈ ಚಿತ್ರದಲ್ಲಿ ಇವರು ತುಂಬಾ ವಿಭಿನ್ನವಾದ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಈ ಚಿತ್ರದಲ್ಲಿ ನಾಯಕರ ಪಾತ್ರ ಎಷ್ಟು ಮುಖ್ಯನೋ ಹಾಗೆ ಖಳನಾಯಕರ ಪಾತ್ರಗಳು ಅಷ್ಟೇ ಮುಖ್ಯ. ಅದರಂತೆ ಖಳನಾಯಕರ ಆರ್ಭಟ ಜೋರಾಗೆ ಇರಲಿದೆ…

News
VXplore Banking & Competitive Exams Coaching Academy

ಅದು ಕೆಂಗೇರಿಯಲ್ಲಿ ಹೊಸದಾಗಿ ಶುರುವಾದ ಸ್ಪರ್ಧಾತ್ಮಕ ಪರೀಕ್ಷೆಗಳ...

ಸಾವಿರಾರು ವಿದ್ಯಾರ್ಥಿಗಳಿಗೆ ಭವಿಷ್ಯ ಕಟ್ಟಿಕೊಟ್ಟ ಪ್ರತಿಷ್ಠಿತ ವಿದ್ಯಾ ಸಂಸ್ಥೆಯ ನಿರ್ದೇಶಕರಾದ  ಚಂದ್ರ ಮೂರ್ತಿ ಯವರು ಇದರ ಸಂಸ್ಥಾಪಕರು. ಉತ್ತಮ ಮಟ್ಟದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಭೇತಿ ನೀಡುವ ಕಾರಣದಿಂದ ಈ VXplore Banking & Competitive Exams Coaching Academy. ತರಭೇತಿ ಕೇಂದ್ರವನ್ನು ತೆರೆದಿದ್ದಾರೆ. ಅದು ಆಕಾಕ್ಷಿ ವಿಧ್ಯಾರ್ಥಿಗಳಿಗೆ ಅವರ…

Chitra Suddhi
i am pregnant kannada movie censored ua

“ಐ ಆಮ್ ಪ್ರೆಗ್ನೆಂಟ್” ಚಿತ್ರವು ಸೆನ್ಸಾರ್ ಮಂಡಳಿಯಿಂದ...

“ಅನು ಸಿನಿಮಾಸ್” ಬ್ಯಾನರ್ ಅಡಿಯಲ್ಲಿ ತಯಾರಾಗುತ್ತಿರುವ “ಐ ಆಮ್ ಪ್ರೆಗ್ನೆಂಟ್” ಎಂಬ ಚಿತ್ರವನ್ನು ಸೆನ್ಸಾರ್ ಮಂಡಳಿಯಿಂದ ಉತ್ತಮ ಪ್ರತಿಕ್ರಿಯೆ ಪಡೆದಿದೆ . ಕೆಲವೇ ದಿನಗಳಲ್ಲಿ ಚಿತ್ರಮಂದಿರಕ್ಕೆ ಲಗ್ಗೆಯಿಡಲು ಚಿತ್ರತಂಡ ಎಲ್ಲ ತಯಾರಿ ಮಾಡಿಕೊಳ್ಳುತ್ತಿದ್ದಾರೆ . ಇದರಲ್ಲಿ ನುರಿತ ಕಲಾವಿದರು ಹಾಗೂ ನುರಿತ ತಂತ್ರಜ್ಞರು ಕೂಡ ಇದಕ್ಕೆ ಉತ್ತಮ ಬೆಂಬಲವನ್ನು…

Chitra Suddhi
90 bidi manig nadi song release

ನಾಳೆಯಿಂದ ನೈಂಟಿ ನಶೆ!

ಹಿರಿಯ ಹಾಸ್ಯ ನಟ ಬಿರಾದಾರ್ ಅಭಿನಯದ ಐನೂರನೇ ಚಿತ್ರ ಎಂಬ ಹಣೆಪಟ್ಟಿ ಹೊತ್ತುಕೊಂಡು ಆರಂಭದಿಂದಲೇ ಭರ್ಜರಿ ಸದ್ದು ಮಾಡುತ್ತಲೇ ಬಂದ ಚಿತ್ರ ’90 ಬಿಡಿ ಮನೀಗ್ ನಡಿ’. ಉತ್ತರ ಕರ್ನಾಟಕ ಶೈಲಿಯ ಕಾಮಿಡಿ ಕ್ರೈಂ ಥ್ರಿಲ್ಲರ್ ಕಥೆ ಎನ್ನುತ್ತಾ, ‘ಟೀಸರ್’ ಮೂಲಕ ಚಿತ್ರ ಭರವಸೆ ಮೂಡಿಸಿತ್ತು. ಇದೀಗ ಚಿತ್ರತಂಡ…