ಬಿಡುಗಡೆಗೂ ಮುನ್ನವೇ ‘ಪದವಿಪೂರ್ವ’ ಚಿತ್ರತಂಡ… ಮತ್ತೊಂದು ಚಿತ್ರ ಅನೌನ್ಸ್

ಯೋಗರಾಜ್ ಸಿನಿಮಾಸ್ ಹಾಗು ರವಿ ಶಾಮನೂರ್ ಫಿಲಂಸ್‌ ಜಂಟಿಯಾಗಿ ನಿರ್ಮಿಸುತ್ತಿರುವ ‘ಪದವಿಪೂರ್ವ’ ಸಿನಿಮಾದ ಬಗ್ಗೆ ಅದಾಗಲೇ ಸಾಕಷ್ಟು ಸುದ್ದಿಗಳನ್ನು ಕೇಳಿರುತ್ತೀರಿ. ಈ ಚಿತ್ರವನ್ನು ಭಟ್ಟರ ತಂಡದ ಪ್ರಮುಖ ಸದಸ್ಯ ಹರಿಪ್ರಸಾದ್ ಜಯಣ್ಣ ನಿರ್ದೇಶಿಸುತ್ತಿದ್ದಾರೆ ಎನ್ನುವುದು ಕೂಡ ನಿಮಗೆಲ್ಲ ತಿಳಿದಿರುವ ವಿಚಾರ. ಆದರೆ ಈಗ ‘ಪದವಿಪೂರ್ವ’ ಚಿತ್ರ ಇನ್ನೂ ಪೋಸ್ಟ್ ಪ್ರೊಡಕ್ಷನ್ ಹಂತದಲ್ಲಿರುವಾಗಲೇ ನಿರ್ಮಾಣ ಸಂಸ್ಥೆ ಇದೇ ನಿರ್ದೇಶಕರೊಡನೆ ಮತ್ತೊಂದು ಚಿತ್ರ ಅನೌನ್ಸ್ ಮಾಡಿದೆ. ಹೌದು, ಪೋಸ್ಟ್ ಪ್ರೊಡಕ್ಷನ್ ಕಾರ್ಯದ ನಡುವೆ ಸಿನಿಮಾ ವೀಕ್ಷಣೆ ಮಾಡಿರುವ ನಿರ್ಮಾಪಕರಲ್ಲೊಬ್ಬರಾದ ವಿಕಟಕವಿ ಯೋಗರಾಜ್ ಭಟ್ಟರು, ತಮ್ಮ ತಂಡದ ನೆಚ್ಚಿನ ಸದ್ಯಸ್ಯ, ನಿರ್ದೇಶಕ ಹರಿಪ್ರಸಾದ್ ಜಯಣ್ಣ ಅವರ ಕಾರ್ಯವೈಖರಿಯನ್ನು ಮೆಚ್ಚಿ ಮತ್ತೊಂದು ಸಿನಿಮಾ ನಿರ್ಮಾಣ ಮಾಡಲು ತಯಾರಾಗಿದ್ದಾರೆ ಎನ್ನಲಾಗಿದೆ. ಸಿನಿಮಾದ ಮತ್ತೊಬ್ಬ ನಿರ್ಮಾಪಕರಾದ ರವಿ ಶಾಮನೂರ್ ಅವರೂ ಸಹ ಭಟ್ಟರ ನಿರ್ಮಾಣ ಸಂಸ್ಥೆಯೊಡನೆ ಮತ್ತೊಮ್ಮೆ ಸಹಭಾಗಿತ್ವ ವಹಿಸಲು ಖುಷಿಯಿಂದ ಒಪ್ಪಿಕೊಂಡಿದ್ದಾರಂತೆ.

ಅಕ್ಟೋಬರ್ ತಿಂಗಳಿನಲ್ಲಿ ಸೆಟ್ಟೇರಲಿರುವ ಈ ಹೊಸ ಚಿತ್ರಕ್ಕೂ ‘ಪದವಿಪೂರ್ವ’ ಸಿನಿಮಾದಲ್ಲಿ ನಾಯಕನಾಗಿ ನಟಿಸಿದ್ದ ಯುವ ನಟ ಪೃಥ್ವಿ ಶಾಮನೂರ್ ಅವರೇ ನಾಯಕನಾಗಿ ಮುಂದುವರೆಯಲಿದ್ದಾರೆ. ಪೃಥ್ವಿ ಈಗಾಗಲೇ ಯೋಗರಾಜ್ ಭಟ್ಟರ ಮುಂಬರಲಿರುವ ‘ಗರಡಿ’ ಸಿನಿಮಾದಲ್ಲೂ ಪ್ರಮುಖ ಪಾತ್ರವೊಂದನ್ನು ನಿರ್ವಹಿಸಿದ್ದಾರೆ. ಭಟ್ಟರ ಕ್ಯಾಂಪ್‌ನಲ್ಲಿ ಸತತವಾಗಿ ಅವಕಾಶ ಗಿಟ್ಟಿಸುವುದು ಅಷ್ಟು ಸುಲಭದ ಮಾತಲ್ಲ. ತನ್ನ ಅಸಾಧಾರಣ ಪ್ರತಿಭೆಯಿಂದ ಭಟ್ಟರನ್ನು ಹಾಗು ತಂಡವನ್ನು ಮೋಡಿ ಮಾಡಿರುವ ಈ ಯುವ ನಟನ ಅಭಿನಯ ಕೌಶಲ್ಯಕ್ಕೆ ನಮ್ಮದೊಂದು ಸಲಾಂ.WhatsApp Image 2022 06 18 at 1.09.28 PM

ಚಿತ್ರತಂಡ ಈ ಬಾರಿಯೂ ಮತ್ತಷ್ಟು ಹೊಸ ಪ್ರತಿಭೆಗಳ ಹುಡುಕಾಟ ನಡೆಸಲಿದೆ. ಕಳೆದ ಬಾರಿಯಂತೆ ಈ ಬಾರಿಯೂ ಆಡಿಶನ್ ಮೂಲಕ ಅಪ್ಪಟ ದೇಸಿ ಪ್ರತಿಭೆಗಳನ್ನು ಗುರುತಿಸಿ ಅವಕಾಶ ನೀಡುವುದಾಗಿ ಚಿತ್ರತಂಡ ಹೇಳಿಕೊಂಡಿದೆ. ಇನ್ನುಳಿದಂತೆ ‘ಪದವಿಪೂರ್ವ’ ಚಿತ್ರಕ್ಕಾಗಿ ದುಡಿದಿದ್ದ ಉತ್ಸಾಹಿ ಯುವ ತಂತ್ರಜ್ಞರ ತಂಡದ ಬಹುತೇಕ ಸದಸ್ಯರೇ ಸೆಟ್ಟೇರಲಿರುವ ಹೊಸ ಸಿನಿಮಾದಲ್ಲೂ ತಮ್ಮ ಕೈಚಳಕ ತೋರಲಿದ್ದಾರೆ ಎಂದು ನಿರ್ದೇಶಕ ಹರಿಪ್ರಸಾದ್ ಜಯಣ್ಣ ತಿಳಿಸಿದ್ದಾರೆ.

Work hard in silence, Let success make the noise ಎನ್ನುವಂತೆ, ತಮ್ಮ ಅಚ್ಚುಕಟ್ಟಾದ ಕೆಲಸದಿಂದ ಗುರುತಿಸಿಕೊಂಡು, ಅದೇ ನಿರ್ಮಾಣ ಸಂಸ್ಥೆಗಳೊಡನೆ ಮತ್ತೊಂದು ಚಿತ್ರದ ಅವಕಾಶ ಪಡೆದುಕೊಂಡ ನಾಯಕ ನಟ ಪೃಥ್ವಿ ಶಾಮನೂರ್ ಮತ್ತು ನಿರ್ದೇಶಕ ಹರಿಪ್ರಸಾದ್ ಜಯಣ್ಣ ಹಾಗು ತಂಡಕ್ಕೆ ಆಲ್ ದಿ ಬೆಸ್ಟ್.

You Will  Love   Like  These

Chitra Suddhi
daali uttarakhand kannada movie

ಡಾಲಿ ಧನಂಜಯ “ಉತ್ತರ ಕಾಂಡ”ದ ನಾಯಕ.

ವಿಜಯ್ ಕಿರಗಂದೂರು ಅರ್ಪಿಸುವ, ಕೆ.ಆರ್.ಜಿ ಸ್ಟುಡಿಯೋಸ್ ಲಾಂಛನದಲ್ಲಿ ಕಾರ್ತಿಕ್ ಹಾಗೂ ಯೋಗಿ ಜಿ ರಾಜ್ ನಿರ್ಮಿಸುತ್ತಿರುವ ” ಉತ್ತರಕಾಂಡ” ಚಿತ್ರದ ನಾಯಕನಾಗಿ ಡಾಲಿ ಧನಂಜಯ ಅಭಿನಯಿಸುತ್ತಿದ್ದಾರೆ. ಈ ಹಿಂದೆ ಕೆ.ಆರ್.ಜಿ ಸ್ಟುಡಿಯೋಸ್ ನಿರ್ಮಾಣದಲ್ಲಿ ಡಾಲಿ ಧನಂಜಯ ನಾಯಕನಾಗಿ ನಟಿಸಿದ್ದ “ರತ್ನನ ಪ್ರಪಂಚ” ಚಿತ್ರ ಸಹ ಪ್ರಚಂಡ ಯಶಸ್ಸು ಕಂಡಿತ್ತು.…

Chitra Suddhi
In the movie "December 24". Boys from Kunigal Taluk

“ಡಿಸೆಂಬರ್ 24” ಚಿತ್ರದಲ್ಲಿ ಹಾವಳಿ ಕೊಡೋಕೆ ಕುಣಿಗಲ್...

“ಡಿಸೆಂಬರ್ 24” ಚಿತ್ರದಲ್ಲಿ ಅನಿಲ್ ಗೌಡ್ರು, ಕುಮಾರ್ ಗೌಡ್ರು ಹಾಗೂ ಬೆಟ್ಟೇಗೌಡ್ರು ಖಡಕ್ ಖಳನಾಯಕರಾಗಿ ಅಭಿನಯಿಸಿದ್ದು, ಈ ಚಿತ್ರದಲ್ಲಿ ಇವರು ತುಂಬಾ ವಿಭಿನ್ನವಾದ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಈ ಚಿತ್ರದಲ್ಲಿ ನಾಯಕರ ಪಾತ್ರ ಎಷ್ಟು ಮುಖ್ಯನೋ ಹಾಗೆ ಖಳನಾಯಕರ ಪಾತ್ರಗಳು ಅಷ್ಟೇ ಮುಖ್ಯ. ಅದರಂತೆ ಖಳನಾಯಕರ ಆರ್ಭಟ ಜೋರಾಗೆ ಇರಲಿದೆ…

News
VXplore Banking & Competitive Exams Coaching Academy

ಅದು ಕೆಂಗೇರಿಯಲ್ಲಿ ಹೊಸದಾಗಿ ಶುರುವಾದ ಸ್ಪರ್ಧಾತ್ಮಕ ಪರೀಕ್ಷೆಗಳ...

ಸಾವಿರಾರು ವಿದ್ಯಾರ್ಥಿಗಳಿಗೆ ಭವಿಷ್ಯ ಕಟ್ಟಿಕೊಟ್ಟ ಪ್ರತಿಷ್ಠಿತ ವಿದ್ಯಾ ಸಂಸ್ಥೆಯ ನಿರ್ದೇಶಕರಾದ  ಚಂದ್ರ ಮೂರ್ತಿ ಯವರು ಇದರ ಸಂಸ್ಥಾಪಕರು. ಉತ್ತಮ ಮಟ್ಟದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಭೇತಿ ನೀಡುವ ಕಾರಣದಿಂದ ಈ VXplore Banking & Competitive Exams Coaching Academy. ತರಭೇತಿ ಕೇಂದ್ರವನ್ನು ತೆರೆದಿದ್ದಾರೆ. ಅದು ಆಕಾಕ್ಷಿ ವಿಧ್ಯಾರ್ಥಿಗಳಿಗೆ ಅವರ…

Chitra Suddhi
i am pregnant kannada movie censored ua

“ಐ ಆಮ್ ಪ್ರೆಗ್ನೆಂಟ್” ಚಿತ್ರವು ಸೆನ್ಸಾರ್ ಮಂಡಳಿಯಿಂದ...

“ಅನು ಸಿನಿಮಾಸ್” ಬ್ಯಾನರ್ ಅಡಿಯಲ್ಲಿ ತಯಾರಾಗುತ್ತಿರುವ “ಐ ಆಮ್ ಪ್ರೆಗ್ನೆಂಟ್” ಎಂಬ ಚಿತ್ರವನ್ನು ಸೆನ್ಸಾರ್ ಮಂಡಳಿಯಿಂದ ಉತ್ತಮ ಪ್ರತಿಕ್ರಿಯೆ ಪಡೆದಿದೆ . ಕೆಲವೇ ದಿನಗಳಲ್ಲಿ ಚಿತ್ರಮಂದಿರಕ್ಕೆ ಲಗ್ಗೆಯಿಡಲು ಚಿತ್ರತಂಡ ಎಲ್ಲ ತಯಾರಿ ಮಾಡಿಕೊಳ್ಳುತ್ತಿದ್ದಾರೆ . ಇದರಲ್ಲಿ ನುರಿತ ಕಲಾವಿದರು ಹಾಗೂ ನುರಿತ ತಂತ್ರಜ್ಞರು ಕೂಡ ಇದಕ್ಕೆ ಉತ್ತಮ ಬೆಂಬಲವನ್ನು…

Chitra Suddhi
90 bidi manig nadi song release

ನಾಳೆಯಿಂದ ನೈಂಟಿ ನಶೆ!

ಹಿರಿಯ ಹಾಸ್ಯ ನಟ ಬಿರಾದಾರ್ ಅಭಿನಯದ ಐನೂರನೇ ಚಿತ್ರ ಎಂಬ ಹಣೆಪಟ್ಟಿ ಹೊತ್ತುಕೊಂಡು ಆರಂಭದಿಂದಲೇ ಭರ್ಜರಿ ಸದ್ದು ಮಾಡುತ್ತಲೇ ಬಂದ ಚಿತ್ರ ’90 ಬಿಡಿ ಮನೀಗ್ ನಡಿ’. ಉತ್ತರ ಕರ್ನಾಟಕ ಶೈಲಿಯ ಕಾಮಿಡಿ ಕ್ರೈಂ ಥ್ರಿಲ್ಲರ್ ಕಥೆ ಎನ್ನುತ್ತಾ, ‘ಟೀಸರ್’ ಮೂಲಕ ಚಿತ್ರ ಭರವಸೆ ಮೂಡಿಸಿತ್ತು. ಇದೀಗ ಚಿತ್ರತಂಡ…