“ಪದವಿಪೂರ್ವ” ಹಾಡುಗಳ ಧ್ವನಿ ಮುದ್ರಣ ಕಾರ್ಯ ಶುರು

ಯೋಗರಾಜ್ ಸಿನೆಮಾಸ್ ಹಾಗು ರವಿ ಶಾಮನೂರ್ ಫಿಲಂಸ್ ಜಂಟಿಯಾಗಿ ನಿರ್ಮಿಸಿ, ಹರಿಪ್ರಸಾದ್ ಜಯಣ್ಣ ನಿರ್ದೇಶನದಲ್ಲಿ ಮೂಡಿಬರುತ್ತಿರುವ ‘ಪದವಿಪೂರ್ವ’ ಚಿತ್ರ ಅದಾಗಲೇ ಅನೇಕ ಕಾರಣಗಳಿಗಾಗಿ ಸದ್ದು ಮಾಡುತ್ತಿದೆ. ಒಂದೆಡೆ ಹೊಸ ಪ್ರತಿಭೆಗಳ ದಂಡೇ ಇರುವ ಈ ಚಿತ್ರದಲ್ಲಿ ಹಿರಿ ಮತ್ತು ಕಿರುತೆರೆಯ ಹೆಸರಾಂತ ನಟರುಗಳು ಅತಿಥಿ ಪಾತ್ರಗಳಲ್ಲಿ ಕಾಣಿಸಿಕೊಂಡು ಸದ್ದು ಮಾಡಿತ್ತು. ಸಾಕಷ್ಟು ಕಾರಣಗಳಿಂದಾಗಿ ಶೂಟಿಂಗ್‌ ಶುರುವಾದ ದಿನದಿಂದಲೂ ಕುತೂಹಲ ಮೂಡಿಸಿರುವ ಈ ಚಿತ್ರದಿಂದ ಈಗ ಮತ್ತೊಂದು ವಿಶೇಷ ಸುದ್ದಿ ಹೊರಬಿದ್ದಿದೆ.

ಅದೇನೆಂದರೆ, ಸಂಗೀತ ಮಾಂತ್ರಿಕ ಅರ್ಜುನ್ ಜನ್ಯ ಸಾರಥ್ಯದಲ್ಲಿ ಚಿತ್ರದ ಹಾಡುಗಳ ಧ್ವನಿ ಮುದ್ರಣ ಕಾರ್ಯ ಶುರುವಾಗಿದ್ದು, ವಿಕಟಕವಿ ಯೋಗರಾಜ್ ಭಟ್ ರಚಿಸಿರುವ ‘ಫ್ರೆಂಡ್‌ಶಿಪ್ಪೆ ಜೀವನ’ ಎಂಬ ಅದ್ಭುತ ಸಾಲುಗಳಿಗೆ ಕನ್ನಡದ ಹೆಮ್ಮೆಯ ಗಾಯಕ ‘ವಿಜಯ್ ಪ್ರಕಾಶ್’ ದನಿಯಾಗಿದ್ದಾರೆ. ವಿಶೇಷ ಏನೂ ಅಂದ್ರೆ, ಈ ಹಾಡನ್ನು ರೆಕಾರ್ಡ್ ಮಾಡುವಾಗ ವಿಜಯ್ ಪ್ರಕಾಶ್ ಅವರು ಪದೇ ಪದೇ ಭಾವುಕರಾಗಿ ತಮ್ಮ ಹಳೆಯ ದಿನಗಳನ್ನು ನೆನಪು ಮಾಡಿಕೊಂಡಿದ್ದಾರೆ. ಸ್ನೇಹದ ಮಹತ್ವ ಸಾರುವ ಭಟ್ಟರ ಸಾಹಿತ್ಯವನ್ನು ಬಹಳವಾಗಿ ಮೆಚ್ಚಿ ಕೊಂಡಾಡಿದ್ದಾರೆ. ವಿಜಯ್ ಪ್ರಕಾಶ್ ಆವರ ಪ್ರತಿಕ್ರಿಯೆಯಿಂದ ಚಿತ್ರತಂಡ ಫುಲ್ ಥ್ರಿಲ್ ಆಗಿದ್ದು, ಹಾಡನ್ನು ಆದಷ್ಟು ಬೇಗ ಸಿನಿಪ್ರೇಮಿಗಳ ಮುಂದಿಡುವ ಉತ್ಸಾಹದಲ್ಲಿದೆ.WhatsApp Image 2022 06 01 at 5.16.28 PM

ಚಿತ್ರದ ಚಿತ್ರೀಕರಣ ಬಹುತೇಕ ಪೂರ್ಣಗೊಂಡಿದ್ದು, ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ಭರದಿಂದ ಸಾಗುತ್ತಿವೆ. ಹೊಸಬರ ದಂಡೇ ಇರುವ ಈ ಚಿತ್ರಕ್ಕೆ ಯುವ ಪ್ರತಿಭೆ ಪೃಥ್ವಿ ಶಾಮನೂರು ನಾಯಕನಾದರೆ, ಅಂಜಲಿ ಅನೀಶ್ ಮತ್ತು ಯಶ ಶಿವಕುಮಾರ್ ನಾಯಕಿಯಾಗಿ ಅಭಿನಯಿಸಿದ್ದಾರೆ.
ಖ್ಯಾತ ಛಾಯಾಗ್ರಾಹಕ ಸಂತೋಷ್ ರೈ ಪಾತಾಜೆ ಚಿತ್ರದ ಕ್ಯಾಮೆರಾ ಹೊಣೆ ಹೊತ್ತಿದ್ದಾರೆ. ಪಂಚತಂತ್ರ ಖ್ಯಾತಿಯ ಮಧು ತುಂಬಕೆರೆ ಸಂಕಲನದ ಜವಾಬ್ದಾರಿ ನಿರ್ವಹಿಸುತ್ತಿದ್ದಾರೆ. ಚಿತ್ರ ಈ ವರ್ಷವೇ ತೆರೆಕಾಣಲಿದ್ದು, ಯೋಗರಾಜ್ ಭಟ್ ಬ್ಯಾನರಿನಡಿಯಲ್ಲಿ ಮೂಡಿಬರುತ್ತಿರುವುದರಿಂದ ಸಿನಿ ಹಾಗು ಪ್ರೇಕ್ಷಕ ವಲಯದಲ್ಲಿ ‘ಪದವಿಪೂರ್ವ’ ಸಾಕಷ್ಟು ನಿರೀಕ್ಷೆ ಹುಟ್ಟುಹಾಕಿದೆ.

You Will  Love   Like  These

Chitra Suddhi
daali uttarakhand kannada movie

ಡಾಲಿ ಧನಂಜಯ “ಉತ್ತರ ಕಾಂಡ”ದ ನಾಯಕ.

ವಿಜಯ್ ಕಿರಗಂದೂರು ಅರ್ಪಿಸುವ, ಕೆ.ಆರ್.ಜಿ ಸ್ಟುಡಿಯೋಸ್ ಲಾಂಛನದಲ್ಲಿ ಕಾರ್ತಿಕ್ ಹಾಗೂ ಯೋಗಿ ಜಿ ರಾಜ್ ನಿರ್ಮಿಸುತ್ತಿರುವ ” ಉತ್ತರಕಾಂಡ” ಚಿತ್ರದ ನಾಯಕನಾಗಿ ಡಾಲಿ ಧನಂಜಯ ಅಭಿನಯಿಸುತ್ತಿದ್ದಾರೆ. ಈ ಹಿಂದೆ ಕೆ.ಆರ್.ಜಿ ಸ್ಟುಡಿಯೋಸ್ ನಿರ್ಮಾಣದಲ್ಲಿ ಡಾಲಿ ಧನಂಜಯ ನಾಯಕನಾಗಿ ನಟಿಸಿದ್ದ “ರತ್ನನ ಪ್ರಪಂಚ” ಚಿತ್ರ ಸಹ ಪ್ರಚಂಡ ಯಶಸ್ಸು ಕಂಡಿತ್ತು.…

News
VXplore Banking & Competitive Exams Coaching Academy

ಅದು ಕೆಂಗೇರಿಯಲ್ಲಿ ಹೊಸದಾಗಿ ಶುರುವಾದ ಸ್ಪರ್ಧಾತ್ಮಕ ಪರೀಕ್ಷೆಗಳ...

ಸಾವಿರಾರು ವಿದ್ಯಾರ್ಥಿಗಳಿಗೆ ಭವಿಷ್ಯ ಕಟ್ಟಿಕೊಟ್ಟ ಪ್ರತಿಷ್ಠಿತ ವಿದ್ಯಾ ಸಂಸ್ಥೆಯ ನಿರ್ದೇಶಕರಾದ  ಚಂದ್ರ ಮೂರ್ತಿ ಯವರು ಇದರ ಸಂಸ್ಥಾಪಕರು. ಉತ್ತಮ ಮಟ್ಟದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಭೇತಿ ನೀಡುವ ಕಾರಣದಿಂದ ಈ VXplore Banking & Competitive Exams Coaching Academy. ತರಭೇತಿ ಕೇಂದ್ರವನ್ನು ತೆರೆದಿದ್ದಾರೆ. ಅದು ಆಕಾಕ್ಷಿ ವಿಧ್ಯಾರ್ಥಿಗಳಿಗೆ ಅವರ…

Chitra Suddhi
In the movie "December 24". Boys from Kunigal Taluk

“ಡಿಸೆಂಬರ್ 24” ಚಿತ್ರದಲ್ಲಿ ಹಾವಳಿ ಕೊಡೋಕೆ ಕುಣಿಗಲ್...

“ಡಿಸೆಂಬರ್ 24” ಚಿತ್ರದಲ್ಲಿ ಅನಿಲ್ ಗೌಡ್ರು, ಕುಮಾರ್ ಗೌಡ್ರು ಹಾಗೂ ಬೆಟ್ಟೇಗೌಡ್ರು ಖಡಕ್ ಖಳನಾಯಕರಾಗಿ ಅಭಿನಯಿಸಿದ್ದು, ಈ ಚಿತ್ರದಲ್ಲಿ ಇವರು ತುಂಬಾ ವಿಭಿನ್ನವಾದ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಈ ಚಿತ್ರದಲ್ಲಿ ನಾಯಕರ ಪಾತ್ರ ಎಷ್ಟು ಮುಖ್ಯನೋ ಹಾಗೆ ಖಳನಾಯಕರ ಪಾತ್ರಗಳು ಅಷ್ಟೇ ಮುಖ್ಯ. ಅದರಂತೆ ಖಳನಾಯಕರ ಆರ್ಭಟ ಜೋರಾಗೆ ಇರಲಿದೆ…

Chitra Suddhi
90 bidi manig nadi song release

ನಾಳೆಯಿಂದ ನೈಂಟಿ ನಶೆ!

ಹಿರಿಯ ಹಾಸ್ಯ ನಟ ಬಿರಾದಾರ್ ಅಭಿನಯದ ಐನೂರನೇ ಚಿತ್ರ ಎಂಬ ಹಣೆಪಟ್ಟಿ ಹೊತ್ತುಕೊಂಡು ಆರಂಭದಿಂದಲೇ ಭರ್ಜರಿ ಸದ್ದು ಮಾಡುತ್ತಲೇ ಬಂದ ಚಿತ್ರ ’90 ಬಿಡಿ ಮನೀಗ್ ನಡಿ’. ಉತ್ತರ ಕರ್ನಾಟಕ ಶೈಲಿಯ ಕಾಮಿಡಿ ಕ್ರೈಂ ಥ್ರಿಲ್ಲರ್ ಕಥೆ ಎನ್ನುತ್ತಾ, ‘ಟೀಸರ್’ ಮೂಲಕ ಚಿತ್ರ ಭರವಸೆ ಮೂಡಿಸಿತ್ತು. ಇದೀಗ ಚಿತ್ರತಂಡ…

Chitra Suddhi
i am pregnant kannada movie censored ua

“ಐ ಆಮ್ ಪ್ರೆಗ್ನೆಂಟ್” ಚಿತ್ರವು ಸೆನ್ಸಾರ್ ಮಂಡಳಿಯಿಂದ...

“ಅನು ಸಿನಿಮಾಸ್” ಬ್ಯಾನರ್ ಅಡಿಯಲ್ಲಿ ತಯಾರಾಗುತ್ತಿರುವ “ಐ ಆಮ್ ಪ್ರೆಗ್ನೆಂಟ್” ಎಂಬ ಚಿತ್ರವನ್ನು ಸೆನ್ಸಾರ್ ಮಂಡಳಿಯಿಂದ ಉತ್ತಮ ಪ್ರತಿಕ್ರಿಯೆ ಪಡೆದಿದೆ . ಕೆಲವೇ ದಿನಗಳಲ್ಲಿ ಚಿತ್ರಮಂದಿರಕ್ಕೆ ಲಗ್ಗೆಯಿಡಲು ಚಿತ್ರತಂಡ ಎಲ್ಲ ತಯಾರಿ ಮಾಡಿಕೊಳ್ಳುತ್ತಿದ್ದಾರೆ . ಇದರಲ್ಲಿ ನುರಿತ ಕಲಾವಿದರು ಹಾಗೂ ನುರಿತ ತಂತ್ರಜ್ಞರು ಕೂಡ ಇದಕ್ಕೆ ಉತ್ತಮ ಬೆಂಬಲವನ್ನು…