ಮುಂದಿನ ತಿಂಗಳು ಪದ್ಮಾವತಿ ತೆರೆಗೆ

ರಾವ್‌ ಅಂಡ್ ರಾವ್ ಸಿನಿಮಾಸ್ ಲಾಂಛನದಲ್ಲಿ ದಾಮೋದರ್‌ ಪಾರಗೆ ಮತ್ತು ನಾಮದೇವ ಭಟ್ಟರ್ ಸೇರಿ ನಿರ್ಮಿಸಿರುವ ‘ಪದ್ಮಾವತಿ’ ಚಿತ್ರ ಇದೀಗ ಬಿಡುಗಡೆಗೆ ಸಿದ್ದವಾಗಿದೆ. ಈಗಾಗಲೇ ಚಿತ್ರಕ್ಕೆ ಸೆನ್ಸಾರ್ ಮಂಡಳಿಯಿಂದ ಯು ಸರ್ಟಿಫಿಕೇಟ್ ಸಿಕ್ಕಿದೆ. ವಿಕ್ರಮ್ ಆರ್ಯ ಹಾಗೂ ದಾಮೋದರ್
ಪಾರಗೆ ಈ ಚಿತ್ರದ ಇಬ್ಬರು ನಾಯಕರಾಗಿ ಅಭಿನಯಿದ್ದಾರೆ. ಪದ್ಮಾವತಿ
ಚಿತ್ರದಲ್ಲಿ ಹೆಣ್ಣಿನ ಮನದ ಭಾವನೆಗಳನ್ನು ಆಕೆಯ ತಪ್ಪು,
ಒಪ್ಪುಗಳನ್ನು ಹೇಳುವಂತಹ ವಿಶಿಷ್ಠವಾದ ಕಥಾಹಂದರವಿದ್ದು,
ಇದರ ಜೊತೆಗೆ ಒಂದು ಪಕ್ಕಾ ಲವ್ ಸ್ಟೋರಿಯನ್ನೂ ಕೂಡ ಈ ಚಿತ್ರ
ಒಳಗೊಂಡಿದೆ.WhatsApp Image 2022 06 14 at 9.28.28 AM

ಜೊತೆಗೆ ಇದೊಂದು ಮಹಿಳಾಪ್ರಧಾನ ಚಿತ್ರವೂ ಆಗಿದೆ. ಬಿಡುಗಡೆಗೆ ಸಿದ್ದವಾಗಿರುವ ಈ ಚಿತ್ರವನ್ನು ಜುಲೈ ತಿಂಗಳಲ್ಲಿ ರಾಜ್ಯಾದ್ಯಂತ ರಿಲೀಸ್ ಮಾಡುವುದಾಗಿ ನಿರ್ಮಾಪಕ ವಿಕ್ರಮ್ ಆರ್ಯ ಅವರು ತಿಳಿಸಿದ್ದಾರೆ.WhatsApp Image 2022 06 14 at 9.28.26 AM 1

ಮಿಥುನ್ ಚಂದ್ರಶೇಖರ್ ಅವರ ಕಥೆ ಚಿತ್ರಕಥೆ ಹಾಗೂ ನಿರ್ದೇಶನದಲ್ಲಿ ಮೂಡಿಬಂದಿರುವ ಈ ಚಿತ್ರಕ್ಕೆ ಶೋಯಬ್ ಅಹಮ್ಮದ್ ಅವರ ಛಾಯಾಗ್ರಹಣವಿದೆ. ಚಿತ್ರದ ೮ ಹಾಡುಗಳಿಗ ದಿನೇಶ್‌ಕುಮಾರ್ ಅವರ ಸಂಗೀತ ಸಂಯೋಜನೆಯಿದೆ. ಈಶ್ವರ್ ಅವರ ಸಂಕಲನ, ಥ್ರಿಲ್ಲರ್ ಮಂಜು ಅವರ ಸಾಹಸ, ತ್ರಿಭುವನ್ ಅವರ ನೃತ್ಯನಿರ್ದೇಶನ, ಪ್ರೇಮ್‌ಸಾಯಿ ಅವರ ಸಾಹಿತ್ಯ, ಲತ ಎಸ್. ಅವರ ಕಥೆ, ಚಿತ್ರಕತೆ ಈ ಚಿತ್ರಕ್ಕಿದೆ. ವಿಕ್ರಮ್ ಆರ್ಯ, ಸಾಕ್ಷಿ ಮೇಘನಾ, ದಾಮೋದರ್ ಪಾರಗೆ, ರಾಘವ ಕಲಾಲ್, ನಭಿರಸುಲ್, ಸುರೇಶ್, ಸ್ವಾಮಿಗೌಡ, ಅಭಿಲಾಷ್, ಶರಣ್ ಗಿನ್‌ಕೇರಿ, ಶಿವಮೊಗ್ಗ ರಾಮಣ್ಣ, ಕೀರ್ತಿ ಸಿ.ಎನ್, ರಾಜೇಶ್ವರಿ ಪಾಂಡೆ, ಅರ್ಚನಾ ಶೆಟ್ಟಿ ಇನ್ನು ಮುಂತಾದವರ ತಾರಾಬಳಗ ಈ ಚಿತ್ರಕ್ಕಿದೆ.

You Will  Love   Like  These

Chitra Suddhi
daali uttarakhand kannada movie

ಡಾಲಿ ಧನಂಜಯ “ಉತ್ತರ ಕಾಂಡ”ದ ನಾಯಕ.

ವಿಜಯ್ ಕಿರಗಂದೂರು ಅರ್ಪಿಸುವ, ಕೆ.ಆರ್.ಜಿ ಸ್ಟುಡಿಯೋಸ್ ಲಾಂಛನದಲ್ಲಿ ಕಾರ್ತಿಕ್ ಹಾಗೂ ಯೋಗಿ ಜಿ ರಾಜ್ ನಿರ್ಮಿಸುತ್ತಿರುವ ” ಉತ್ತರಕಾಂಡ” ಚಿತ್ರದ ನಾಯಕನಾಗಿ ಡಾಲಿ ಧನಂಜಯ ಅಭಿನಯಿಸುತ್ತಿದ್ದಾರೆ. ಈ ಹಿಂದೆ ಕೆ.ಆರ್.ಜಿ ಸ್ಟುಡಿಯೋಸ್ ನಿರ್ಮಾಣದಲ್ಲಿ ಡಾಲಿ ಧನಂಜಯ ನಾಯಕನಾಗಿ ನಟಿಸಿದ್ದ “ರತ್ನನ ಪ್ರಪಂಚ” ಚಿತ್ರ ಸಹ ಪ್ರಚಂಡ ಯಶಸ್ಸು ಕಂಡಿತ್ತು.…

Chitra Suddhi
In the movie "December 24". Boys from Kunigal Taluk

“ಡಿಸೆಂಬರ್ 24” ಚಿತ್ರದಲ್ಲಿ ಹಾವಳಿ ಕೊಡೋಕೆ ಕುಣಿಗಲ್...

“ಡಿಸೆಂಬರ್ 24” ಚಿತ್ರದಲ್ಲಿ ಅನಿಲ್ ಗೌಡ್ರು, ಕುಮಾರ್ ಗೌಡ್ರು ಹಾಗೂ ಬೆಟ್ಟೇಗೌಡ್ರು ಖಡಕ್ ಖಳನಾಯಕರಾಗಿ ಅಭಿನಯಿಸಿದ್ದು, ಈ ಚಿತ್ರದಲ್ಲಿ ಇವರು ತುಂಬಾ ವಿಭಿನ್ನವಾದ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಈ ಚಿತ್ರದಲ್ಲಿ ನಾಯಕರ ಪಾತ್ರ ಎಷ್ಟು ಮುಖ್ಯನೋ ಹಾಗೆ ಖಳನಾಯಕರ ಪಾತ್ರಗಳು ಅಷ್ಟೇ ಮುಖ್ಯ. ಅದರಂತೆ ಖಳನಾಯಕರ ಆರ್ಭಟ ಜೋರಾಗೆ ಇರಲಿದೆ…

News
VXplore Banking & Competitive Exams Coaching Academy

ಅದು ಕೆಂಗೇರಿಯಲ್ಲಿ ಹೊಸದಾಗಿ ಶುರುವಾದ ಸ್ಪರ್ಧಾತ್ಮಕ ಪರೀಕ್ಷೆಗಳ...

ಸಾವಿರಾರು ವಿದ್ಯಾರ್ಥಿಗಳಿಗೆ ಭವಿಷ್ಯ ಕಟ್ಟಿಕೊಟ್ಟ ಪ್ರತಿಷ್ಠಿತ ವಿದ್ಯಾ ಸಂಸ್ಥೆಯ ನಿರ್ದೇಶಕರಾದ  ಚಂದ್ರ ಮೂರ್ತಿ ಯವರು ಇದರ ಸಂಸ್ಥಾಪಕರು. ಉತ್ತಮ ಮಟ್ಟದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಭೇತಿ ನೀಡುವ ಕಾರಣದಿಂದ ಈ VXplore Banking & Competitive Exams Coaching Academy. ತರಭೇತಿ ಕೇಂದ್ರವನ್ನು ತೆರೆದಿದ್ದಾರೆ. ಅದು ಆಕಾಕ್ಷಿ ವಿಧ್ಯಾರ್ಥಿಗಳಿಗೆ ಅವರ…

Chitra Suddhi
i am pregnant kannada movie censored ua

“ಐ ಆಮ್ ಪ್ರೆಗ್ನೆಂಟ್” ಚಿತ್ರವು ಸೆನ್ಸಾರ್ ಮಂಡಳಿಯಿಂದ...

“ಅನು ಸಿನಿಮಾಸ್” ಬ್ಯಾನರ್ ಅಡಿಯಲ್ಲಿ ತಯಾರಾಗುತ್ತಿರುವ “ಐ ಆಮ್ ಪ್ರೆಗ್ನೆಂಟ್” ಎಂಬ ಚಿತ್ರವನ್ನು ಸೆನ್ಸಾರ್ ಮಂಡಳಿಯಿಂದ ಉತ್ತಮ ಪ್ರತಿಕ್ರಿಯೆ ಪಡೆದಿದೆ . ಕೆಲವೇ ದಿನಗಳಲ್ಲಿ ಚಿತ್ರಮಂದಿರಕ್ಕೆ ಲಗ್ಗೆಯಿಡಲು ಚಿತ್ರತಂಡ ಎಲ್ಲ ತಯಾರಿ ಮಾಡಿಕೊಳ್ಳುತ್ತಿದ್ದಾರೆ . ಇದರಲ್ಲಿ ನುರಿತ ಕಲಾವಿದರು ಹಾಗೂ ನುರಿತ ತಂತ್ರಜ್ಞರು ಕೂಡ ಇದಕ್ಕೆ ಉತ್ತಮ ಬೆಂಬಲವನ್ನು…

Chitra Suddhi
90 bidi manig nadi song release

ನಾಳೆಯಿಂದ ನೈಂಟಿ ನಶೆ!

ಹಿರಿಯ ಹಾಸ್ಯ ನಟ ಬಿರಾದಾರ್ ಅಭಿನಯದ ಐನೂರನೇ ಚಿತ್ರ ಎಂಬ ಹಣೆಪಟ್ಟಿ ಹೊತ್ತುಕೊಂಡು ಆರಂಭದಿಂದಲೇ ಭರ್ಜರಿ ಸದ್ದು ಮಾಡುತ್ತಲೇ ಬಂದ ಚಿತ್ರ ’90 ಬಿಡಿ ಮನೀಗ್ ನಡಿ’. ಉತ್ತರ ಕರ್ನಾಟಕ ಶೈಲಿಯ ಕಾಮಿಡಿ ಕ್ರೈಂ ಥ್ರಿಲ್ಲರ್ ಕಥೆ ಎನ್ನುತ್ತಾ, ‘ಟೀಸರ್’ ಮೂಲಕ ಚಿತ್ರ ಭರವಸೆ ಮೂಡಿಸಿತ್ತು. ಇದೀಗ ಚಿತ್ರತಂಡ…