ಮಹಿಳಾ ಪ್ರಧಾನ ಚಿತ್ರ ಪದ್ಮಾವತಿ

ತಲೆ ಬಾಚ್ಕೋಳ್ಳಿ ಪೌಡ್ರು ಹಾಕ್ಕೋಳ್ಳಿ ಚಿತ್ರದಲ್ಲಿ ನಟಿಸಿ ನಿರ್ಮಾಣ ಮಾಡಿದ್ದ ವಿಕ್ರಂಆರ್ಯ ಗ್ಯಾಪ್ ನಂತರ ಮಿಲಿಟರಿ ಅಧಿಕಾರಿಯಾಗಿ ನಾಯಕ ಮತ್ತು ನಾಮದೇವಭಟ್ಟರ್ ಹೆಸರಿನಲ್ಲಿ ನಿರ್ಮಾಪಕರಾಗಿ ಅಭಿನಯಿಸಿರುವ ’ಪದ್ಮಾವತಿ’ ಚಿತ್ರದ ಧ್ವನಿಸಾಂದ್ರಿಕೆಯನ್ನು ಲಹರಿವೇಲು ಬಿಡುಗಡೆ ಮಾಡಿ ತಂಡಕ್ಕೆ ಶುಭ ಹಾರೈಸಿದರು. ಮತ್ತೋಂದು ಮುಖ್ಯ ಪಾತ್ರದಲ್ಲಿ ದಾಮೋದರ್‌ಪಾರಗೆ ಅಭಿನಯ ಹಾಗೂ ನಿರ್ಮಾಣದಲ್ಲಿ ಪಾಲುದಾರರು. ಹಿರಿಯ ನಿರ್ದೇಶಕರುಗಳ ಗರಡಿಯಲ್ಲಿ ಪಳಗಿರುವ ಮಿಥುನ್‌ಚಂದ್ರಶೇಖರ್ ಚಿತ್ರಕತೆ, ಸಂಭಾಷಣೆ ಬರೆದು ಮೊದಲಬಾರಿ ನಿರ್ದೇಶನ ಮಾಡಿದ್ದಾರೆ.

padmavathi kannada movieತಪ್ಪೇ ಮಾಡಬೇಡಿ, ಮಾಡುವ ತಪ್ಪನ್ನು ತಪ್ಪು ತಪ್ಪಾಗಿ ಮಾಡಬೇಡಿ, ತಪ್ಪು ಮಾಡಿದ ಮೇಲೆ ತಪ್ಪದೆ ತಪ್ಪಾಯಿತು ಎಂದು ಒಪ್ಪಿಕೊಳ್ಳಿ. ಎಲ್ಲೋ ಒಂದು ಕಡೆ ತಿಳಿಯದೆ ಇರೋ ವಯಸ್ಸಿನಲ್ಲಿ ತಪ್ಪುಗಳನ್ನು ಮಾಡುವುದು ಸಹಜ. ಅದನ್ನು ಹಲವಾರು ವರ್ಷಗಳ ನಂತರ ಹೆಣ್ಣು ಸರಿಪಡಿಸಿಕೊಳ್ಳುವ ದಾರಿಯಲ್ಲಿ ತನ್ನ ಹಳೆಯ ನೆನಪುಗಳನ್ನು ಕೆದಕಿಕೊಂಡು ಹೋಗುತ್ತಾಳೆ. ಅಲ್ಲಿಂದ ಅವಳ ಹಾದಿ ಯಾವ ಮಟ್ಟಕ್ಕೆ ಹೋಗುತ್ತದೆ ಎಂಬುದನ್ನು ಹೇಳಲಾಗಿದೆ. ಜೊತೆಗೆ ತಾಯಿ ಮಗನ ಸೆಂಟಿಮೆಂಟ್ ಅಂಶಗಳು ಇರಲಿದೆ. ಶಿವಳ್ಳಿಬೆಟ್ಟ, ಸಾಗರ, ಹೊಸನಗರ,ಚಿಕ್ಕಮಗಳೂರು, ಶಿವಮೊಗ್ಗ, ಬೆಂಗಳೂರು ಕಡೆಗಳಲ್ಲಿ 51 ದಿನಗಳ ಕಾಲ ಚಿತ್ರೀಕರಣ ನಡೆಸಲಾಗಿದೆ.padmavathi kannada movie ಯುವತಿ,ಮಧ್ಯವಯಸ್ಸಿನ ಮಹಿಳೆ ಮತ್ತು ೪೬ ವರ್ಷದವಳಾಗಿ ಮೂರು ಶೇಡ್‌ಗಳಲ್ಲಿ ಕಾಣಿಸಿಕೊಂಡಿರುವ ನಾಯಕಿ ಸಾಕ್ಷಿಮೇಘನಾ ಈಗ ಮೇಘನಾರಾಮ್ ಅಂತ ನಾಮಕರಣ ಮಾಡಿಕೊಂಡಿದ್ದಾರೆ. ಉಳಿದಂತೆ ಸುರೇಶ್‌ಸ್ವಾಮಿರಾವ್, ಕವಿತಪ್ರಿಯಾ, ರಾಘವಕುಮಾರ್, ಅಭಿಲಾಶ್.ಬಿ.ಹೊಸನಗರ, ಶಿವಮೊಗ್ಗ ರಾಮಣ್ಣ, ಅರ್ಚನಾಶೆಟ್ಟಿ, ರಾಜೇಶ್ವರಿಪಾಂಡೆ, ಶರಣ್‌ಗಿನಕೇರಿ ಮುಂತಾದವರ ತಾರಗಣವಿದೆ. ಪುಟ್ಟರಾಜಗವಾಯಿ ಆಶ್ರಮದ ವಿದ್ಯಾರ್ಥಿಯಾಗಿದ್ದ ಶರಣ್‌ಕುಮಾರ್ ಗಜೇಂದ್ರಗಡ ನಾಲ್ಕು ಹಾಡುಗಳಿಗೆ ಸಾಹಿತ್ಯ ರಚಿಸಿದ್ದಾರೆ.padmavathi kannada movie

ಜ್ಯೂ.ಎಸ್.ಜಾನಕಿ ಎಂದೇ ಖ್ಯಾತರಾಗಿರುವ ಕೊಪ್ಪಳದ ಗಂಗಮ್ಮ ಒಂದು ಗೀತೆಗೆ ಧ್ವನಿಯಾಗಿದ್ದಾರೆ. ಸಂಗೀತ ದಿನೇಶ್‌ಕುಮಾರ್, ಛಾಯಾಗ್ರಹಣ ಕೆ.ಎಂ.ಶೋಯಿಬ್‌ಅಹ್ಮದ್, ಕತೆ ಲತಾ.ಎಸ್, ಸಂಕಲನ ಈಶ್ವರ್, ಸಾಹಸ ಥ್ರಿಲ್ಲರ್‌ಮಂಜು, ನೃತ್ಯ ಸಂಯೋಜಿಸಿರುವ ತ್ರಿಭುವನ್ ಹಾಡಿನಲ್ಲಿ ಕಾಣಿಸಿಕೊಂಡಿದ್ದಾರೆ. ರಾವ್ ಅಂಡ್ ರಾವ್ಸ್ ಸಿನಿಮಾಸ್ ಮುಖಾಂತರ ಸಿದ್ದಗೊಂಡಿರುವ ಚಿತ್ರವು ಜುಲೈ 15ರಂದು ತೆರೆಗೆ ಬರುವ ಸಾಧ್ಯತೆ ಇದೆ. ಇದಕ್ಕೂ ಮುನ್ನ ಸಾಹಸ ದೃಶ್ಯ ಹಾಗೂ ನಾಲ್ಕು ಹಾಡುಗಳನ್ನು ತೋರಿಸಲಾಯಿತು.WhatsApp Image 2022 07 02 at 10.17.09 PM 1

You Will  Love   Like  These

Chitra Suddhi
daali uttarakhand kannada movie

ಡಾಲಿ ಧನಂಜಯ “ಉತ್ತರ ಕಾಂಡ”ದ ನಾಯಕ.

ವಿಜಯ್ ಕಿರಗಂದೂರು ಅರ್ಪಿಸುವ, ಕೆ.ಆರ್.ಜಿ ಸ್ಟುಡಿಯೋಸ್ ಲಾಂಛನದಲ್ಲಿ ಕಾರ್ತಿಕ್ ಹಾಗೂ ಯೋಗಿ ಜಿ ರಾಜ್ ನಿರ್ಮಿಸುತ್ತಿರುವ ” ಉತ್ತರಕಾಂಡ” ಚಿತ್ರದ ನಾಯಕನಾಗಿ ಡಾಲಿ ಧನಂಜಯ ಅಭಿನಯಿಸುತ್ತಿದ್ದಾರೆ. ಈ ಹಿಂದೆ ಕೆ.ಆರ್.ಜಿ ಸ್ಟುಡಿಯೋಸ್ ನಿರ್ಮಾಣದಲ್ಲಿ ಡಾಲಿ ಧನಂಜಯ ನಾಯಕನಾಗಿ ನಟಿಸಿದ್ದ “ರತ್ನನ ಪ್ರಪಂಚ” ಚಿತ್ರ ಸಹ ಪ್ರಚಂಡ ಯಶಸ್ಸು ಕಂಡಿತ್ತು.…

Chitra Suddhi
In the movie "December 24". Boys from Kunigal Taluk

“ಡಿಸೆಂಬರ್ 24” ಚಿತ್ರದಲ್ಲಿ ಹಾವಳಿ ಕೊಡೋಕೆ ಕುಣಿಗಲ್...

“ಡಿಸೆಂಬರ್ 24” ಚಿತ್ರದಲ್ಲಿ ಅನಿಲ್ ಗೌಡ್ರು, ಕುಮಾರ್ ಗೌಡ್ರು ಹಾಗೂ ಬೆಟ್ಟೇಗೌಡ್ರು ಖಡಕ್ ಖಳನಾಯಕರಾಗಿ ಅಭಿನಯಿಸಿದ್ದು, ಈ ಚಿತ್ರದಲ್ಲಿ ಇವರು ತುಂಬಾ ವಿಭಿನ್ನವಾದ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಈ ಚಿತ್ರದಲ್ಲಿ ನಾಯಕರ ಪಾತ್ರ ಎಷ್ಟು ಮುಖ್ಯನೋ ಹಾಗೆ ಖಳನಾಯಕರ ಪಾತ್ರಗಳು ಅಷ್ಟೇ ಮುಖ್ಯ. ಅದರಂತೆ ಖಳನಾಯಕರ ಆರ್ಭಟ ಜೋರಾಗೆ ಇರಲಿದೆ…

News
VXplore Banking & Competitive Exams Coaching Academy

ಅದು ಕೆಂಗೇರಿಯಲ್ಲಿ ಹೊಸದಾಗಿ ಶುರುವಾದ ಸ್ಪರ್ಧಾತ್ಮಕ ಪರೀಕ್ಷೆಗಳ...

ಸಾವಿರಾರು ವಿದ್ಯಾರ್ಥಿಗಳಿಗೆ ಭವಿಷ್ಯ ಕಟ್ಟಿಕೊಟ್ಟ ಪ್ರತಿಷ್ಠಿತ ವಿದ್ಯಾ ಸಂಸ್ಥೆಯ ನಿರ್ದೇಶಕರಾದ  ಚಂದ್ರ ಮೂರ್ತಿ ಯವರು ಇದರ ಸಂಸ್ಥಾಪಕರು. ಉತ್ತಮ ಮಟ್ಟದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಭೇತಿ ನೀಡುವ ಕಾರಣದಿಂದ ಈ VXplore Banking & Competitive Exams Coaching Academy. ತರಭೇತಿ ಕೇಂದ್ರವನ್ನು ತೆರೆದಿದ್ದಾರೆ. ಅದು ಆಕಾಕ್ಷಿ ವಿಧ್ಯಾರ್ಥಿಗಳಿಗೆ ಅವರ…

Chitra Suddhi
i am pregnant kannada movie censored ua

“ಐ ಆಮ್ ಪ್ರೆಗ್ನೆಂಟ್” ಚಿತ್ರವು ಸೆನ್ಸಾರ್ ಮಂಡಳಿಯಿಂದ...

“ಅನು ಸಿನಿಮಾಸ್” ಬ್ಯಾನರ್ ಅಡಿಯಲ್ಲಿ ತಯಾರಾಗುತ್ತಿರುವ “ಐ ಆಮ್ ಪ್ರೆಗ್ನೆಂಟ್” ಎಂಬ ಚಿತ್ರವನ್ನು ಸೆನ್ಸಾರ್ ಮಂಡಳಿಯಿಂದ ಉತ್ತಮ ಪ್ರತಿಕ್ರಿಯೆ ಪಡೆದಿದೆ . ಕೆಲವೇ ದಿನಗಳಲ್ಲಿ ಚಿತ್ರಮಂದಿರಕ್ಕೆ ಲಗ್ಗೆಯಿಡಲು ಚಿತ್ರತಂಡ ಎಲ್ಲ ತಯಾರಿ ಮಾಡಿಕೊಳ್ಳುತ್ತಿದ್ದಾರೆ . ಇದರಲ್ಲಿ ನುರಿತ ಕಲಾವಿದರು ಹಾಗೂ ನುರಿತ ತಂತ್ರಜ್ಞರು ಕೂಡ ಇದಕ್ಕೆ ಉತ್ತಮ ಬೆಂಬಲವನ್ನು…

Chitra Suddhi
90 bidi manig nadi song release

ನಾಳೆಯಿಂದ ನೈಂಟಿ ನಶೆ!

ಹಿರಿಯ ಹಾಸ್ಯ ನಟ ಬಿರಾದಾರ್ ಅಭಿನಯದ ಐನೂರನೇ ಚಿತ್ರ ಎಂಬ ಹಣೆಪಟ್ಟಿ ಹೊತ್ತುಕೊಂಡು ಆರಂಭದಿಂದಲೇ ಭರ್ಜರಿ ಸದ್ದು ಮಾಡುತ್ತಲೇ ಬಂದ ಚಿತ್ರ ’90 ಬಿಡಿ ಮನೀಗ್ ನಡಿ’. ಉತ್ತರ ಕರ್ನಾಟಕ ಶೈಲಿಯ ಕಾಮಿಡಿ ಕ್ರೈಂ ಥ್ರಿಲ್ಲರ್ ಕಥೆ ಎನ್ನುತ್ತಾ, ‘ಟೀಸರ್’ ಮೂಲಕ ಚಿತ್ರ ಭರವಸೆ ಮೂಡಿಸಿತ್ತು. ಇದೀಗ ಚಿತ್ರತಂಡ…