’ಪರಿಶುದ್ಧಂ’ ಚಿತ್ರದ ಧ್ವನಿಸಾಂದ್ರಿಕೆ, ಟ್ರೇಲರ್ ಮತ್ತು ಮೇಕಿಂಗ್ ಬಿಡುಗಡೆ

parisudham kannada movie

ವಿಭಿನ್ನ ಕಥಾಹಂದರ ಹೊಂದಿರುವ ’ಪರಿಶುದ್ಧಂ’ ಚಿತ್ರದ ಧ್ವನಿಸಾಂದ್ರಿಕೆ, ಟ್ರೇಲರ್ ಮತ್ತು ಮೇಕಿಂಗ್ ಬಿಡುಗಡೆ ಕಾರ್ಯಕ್ರಮವು ಕಲಾವಿದರ ಸಂಘದಲ್ಲಿ ಅದ್ದೂರಿಯಾಗಿ ನಡೆಯಿತು. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಬಾ.ಮಾ.ಹರೀಶ್ ಕಾರ್ಯಕ್ರಮಕ್ಕೆ ಚಾಲನೆ ನೀಡಿ ತಂಡಕ್ಕೆ ಶುಭ ಹಾರೈಸಿದರು.
ಸರದಿಯಂತೆ ಮೊದಲು ಮಾತನಾಡಿದ ಆರೋನ್ ಕಾರ್ತಿಕ್‌ವೆಂಕಟೇಶ್ ಚಿತ್ರಕ್ಕೆ ಕಥೆ, ಸಾಹಿತ್ಯ, ಸಂಗೀತ ಜತೆಗೆ ನಿರ್ದೇಶನದ ಜವಬ್ದಾರಿಯನ್ನು ಹೊತ್ತುಕೊಂಡಿದ್ದು, ನಿರ್ಮಾಣದಲ್ಲಿ ಪಾಲುದಾರನಾಗಿದ್ದೇನೆ.parisudham kannada movie

ಮದುವೆ ಅನ್ನುವ ಪದ್ದತಿ ಪರಿಶುದ್ದವಾದದು. ಗಂಡಹೆಂಡತಿ ಸಂಬಂಧದಲ್ಲಿ ಮೂರನೇ ವ್ಯಕ್ತಿ ಪ್ರವೇಶ ಆಗಬಾರದೆಂದು ಸಂದೇಶದಲ್ಲಿ ಹೇಳಲಾಗಿದೆ. ಇದನ್ನು ಕಮರ್ಷಿಯಲ್ ರೀತಿಯಲ್ಲಿ ತೋರಿಸಲಾಗಿದೆ. ನಟಿ ಕಲ್ಪನಾರಂತೆ ಸ್ಪರ್ಶಾರೇಖಾ ತೂಕದ ಪಾತ್ರವನ್ನು ನಿರ್ವಹಿಸಿದ್ದಾರೆ. ಅತಿಥಿ ಪಾತ್ರದಲ್ಲಿ ಎಂ.ಡಿ.ಕೌಶಿಕ್ ಕೊನೆ ದೃಶ್ಯದಲ್ಲಿ ಬರಲಿದ್ದು, ಭಾಗ-೨ರಲ್ಲಿ ಇವರಿಂದಲೇ ಸಿನಿಮಾವು ಶುರುವಾಗುತ್ತದೆ. ಬೆಂಗಳೂರು, ಮಂಗಳೂರು, ತುಮಕೂರು, ಬ್ಯಾಂಕಾಕ್ ಕಡೆಗಳಲ್ಲಿ ಚಿತ್ರೀಕರಣ ನಡೆಸಲಾಗಿದೆ. ಚಿತ್ರದಲ್ಲಿ ಇಂಗ್ಲೀಷ್ ಗೀತೆಯೊಂದು ಇರಲಿದ್ದು, ಇದನ್ನು ಗ್ರ್ಯಾಮಿ ಪ್ರಶಸ್ತಿಗೆ ಕಳುಹಿಸಲಾಗುವುದು. ಎರಡೇ ಸ್ವರದಲ್ಲಿ ’ಕ’ ಅಕ್ಷರದೊಂದಿಗೆ ಹಾಡನ್ನು ಬರೆಯಲಾಗಿದ್ದು ಎಂ.ಡಿ.ಪಲ್ಲವಿ ಧ್ವನಿಯಾಗಿದ್ದಾರೆಂದು ಸಿನಿಮಾದ ಕುರಿತಂತೆ ಮಾಹಿತಿ ನೀಡಿದರು.parisudham kannada movie

ನಿರ್ದೇಶರು ವೇಗವಾಗಿ ಕಥೆ ಹೇಳಿದಾಗ ಮತ್ತೋಮ್ಮೆ ಹೇಳಿ ಅಂತ ಕೋರಿಕೊಂಡೆ. ಇಂತಹ ಪಾತ್ರ ಮಾಡೋಕೆ ನನ್ನಿಂದ ಆಗುತ್ತಾ ಎಂಬ ಗೊಂದಲದಲ್ಲಿದ್ದೆ. ಆದರೂ ಧೈರ್ಯದಿಂದ ಮಾಡಿದೆ. ಇಂತಹ ಅವಕಾಶವನ್ನು ನೀಡಿದ್ದಕ್ಕೆ ಥ್ಯಾಂಕ್ಸ್. ಪ್ರತಿಯೊಂದು ಫ್ರೇಮ್ ಚೆನ್ನಾಗಿ ಬಂದಿದೆ. ಕನ್ನಡ ಚಿತ್ರರಂಗದಲ್ಲಿ ಗುರುತಿಸಿಕೊಳ್ಳಬೇಕಾದರೆ, ಬೇರೆ ಭಾಷೆಯಲ್ಲಿ ಸುತ್ತಾಡಿಕೊಂಡು ಬಂದರೆ ಮಾತ್ರ ಇಲ್ಲಿ ಸ್ವಾಗತ ಸಿಗುತ್ತದೆ. ಅದು ಈಗ ಬದಲಾವಣೆಯಾಗುತ್ತಿದೆ ಎಂದು ಸ್ವಶಾರೇಖಾ ಅಭಿಪ್ರಾಯಪಟ್ಟರು.parisudham kannada movie

’ಅಮೃತಘಳಿಗೆ’ ಸಿನಿಮಾದ ಮೂಲಕ ಕಾರ್ತಿಕ್‌ವೆಂಕಟೇಶ್ ಪರಿಚಯವಾಗಿದ್ದು, ಇದರಲ್ಲಿ ನಟಿಯಾಗಿ ಕಾಣಿಸಿಕೊಂಡು ಒಂದು ಹಾಡಿನಲ್ಲಿ ಬರುತ್ತೇನಂದು ನೀತು ಹೇಳಿದರು. ರೋಹನ್‌ಕಿಡಿಯಾರ್ ಬಂಡವಾಳ ಹೂಡುವ ಜತೆಗೆ ಸ್ವರ್ಶಾರೇಖಾ ಅವರಿಗೆ ಜೋಡಿಯಾಗಿ ನಟಿಸಿದ್ದಾರೆ. ಕುಮಾರ್‌ರಾಥೋಡ್ ನಿರ್ಮಾಪಕರಲ್ಲಿ ಒಬ್ಬರಾಗಿದ್ದಾರೆ.parisudham kannada movie

ಮತ್ತೋಂದು ಮುಖ್ಯ ಪಾತ್ರದಲ್ಲಿ ನಟಿಸಿರುವ ದಿಶಾಪೂವಯ್ಯ ಗೈರುಹಾಜರಿದ್ದರು. ಉಳಿದಂತೆ ಭಾರ್ಗವ್, ಅರ್ಚನಾ, ವಿಕ್ಟರಿವಾಸು, ಕುರಿರಂಗ, ಮೈಸೂರುರಮಾನಂದ್, ರಾಜ್‌ಚರಣ್, ದುಬೈರಫೀಕ್, ಎಂ.ಡಿ.ಕೌಶಿಕ್ ಪಾತ್ರದ ಪರಿಚಯ ಮಾಡಿಕೊಂಡರು.parisudham kannada movie

You Will  Love   Like  These

Chitra Suddhi
daali uttarakhand kannada movie

ಡಾಲಿ ಧನಂಜಯ “ಉತ್ತರ ಕಾಂಡ”ದ ನಾಯಕ.

ವಿಜಯ್ ಕಿರಗಂದೂರು ಅರ್ಪಿಸುವ, ಕೆ.ಆರ್.ಜಿ ಸ್ಟುಡಿಯೋಸ್ ಲಾಂಛನದಲ್ಲಿ ಕಾರ್ತಿಕ್ ಹಾಗೂ ಯೋಗಿ ಜಿ ರಾಜ್ ನಿರ್ಮಿಸುತ್ತಿರುವ ” ಉತ್ತರಕಾಂಡ” ಚಿತ್ರದ ನಾಯಕನಾಗಿ ಡಾಲಿ ಧನಂಜಯ ಅಭಿನಯಿಸುತ್ತಿದ್ದಾರೆ. ಈ ಹಿಂದೆ ಕೆ.ಆರ್.ಜಿ ಸ್ಟುಡಿಯೋಸ್ ನಿರ್ಮಾಣದಲ್ಲಿ ಡಾಲಿ ಧನಂಜಯ ನಾಯಕನಾಗಿ ನಟಿಸಿದ್ದ “ರತ್ನನ ಪ್ರಪಂಚ” ಚಿತ್ರ ಸಹ ಪ್ರಚಂಡ ಯಶಸ್ಸು ಕಂಡಿತ್ತು.…

Chitra Suddhi
In the movie "December 24". Boys from Kunigal Taluk

“ಡಿಸೆಂಬರ್ 24” ಚಿತ್ರದಲ್ಲಿ ಹಾವಳಿ ಕೊಡೋಕೆ ಕುಣಿಗಲ್...

“ಡಿಸೆಂಬರ್ 24” ಚಿತ್ರದಲ್ಲಿ ಅನಿಲ್ ಗೌಡ್ರು, ಕುಮಾರ್ ಗೌಡ್ರು ಹಾಗೂ ಬೆಟ್ಟೇಗೌಡ್ರು ಖಡಕ್ ಖಳನಾಯಕರಾಗಿ ಅಭಿನಯಿಸಿದ್ದು, ಈ ಚಿತ್ರದಲ್ಲಿ ಇವರು ತುಂಬಾ ವಿಭಿನ್ನವಾದ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಈ ಚಿತ್ರದಲ್ಲಿ ನಾಯಕರ ಪಾತ್ರ ಎಷ್ಟು ಮುಖ್ಯನೋ ಹಾಗೆ ಖಳನಾಯಕರ ಪಾತ್ರಗಳು ಅಷ್ಟೇ ಮುಖ್ಯ. ಅದರಂತೆ ಖಳನಾಯಕರ ಆರ್ಭಟ ಜೋರಾಗೆ ಇರಲಿದೆ…

News
VXplore Banking & Competitive Exams Coaching Academy

ಅದು ಕೆಂಗೇರಿಯಲ್ಲಿ ಹೊಸದಾಗಿ ಶುರುವಾದ ಸ್ಪರ್ಧಾತ್ಮಕ ಪರೀಕ್ಷೆಗಳ...

ಸಾವಿರಾರು ವಿದ್ಯಾರ್ಥಿಗಳಿಗೆ ಭವಿಷ್ಯ ಕಟ್ಟಿಕೊಟ್ಟ ಪ್ರತಿಷ್ಠಿತ ವಿದ್ಯಾ ಸಂಸ್ಥೆಯ ನಿರ್ದೇಶಕರಾದ  ಚಂದ್ರ ಮೂರ್ತಿ ಯವರು ಇದರ ಸಂಸ್ಥಾಪಕರು. ಉತ್ತಮ ಮಟ್ಟದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಭೇತಿ ನೀಡುವ ಕಾರಣದಿಂದ ಈ VXplore Banking & Competitive Exams Coaching Academy. ತರಭೇತಿ ಕೇಂದ್ರವನ್ನು ತೆರೆದಿದ್ದಾರೆ. ಅದು ಆಕಾಕ್ಷಿ ವಿಧ್ಯಾರ್ಥಿಗಳಿಗೆ ಅವರ…

Chitra Suddhi
i am pregnant kannada movie censored ua

“ಐ ಆಮ್ ಪ್ರೆಗ್ನೆಂಟ್” ಚಿತ್ರವು ಸೆನ್ಸಾರ್ ಮಂಡಳಿಯಿಂದ...

“ಅನು ಸಿನಿಮಾಸ್” ಬ್ಯಾನರ್ ಅಡಿಯಲ್ಲಿ ತಯಾರಾಗುತ್ತಿರುವ “ಐ ಆಮ್ ಪ್ರೆಗ್ನೆಂಟ್” ಎಂಬ ಚಿತ್ರವನ್ನು ಸೆನ್ಸಾರ್ ಮಂಡಳಿಯಿಂದ ಉತ್ತಮ ಪ್ರತಿಕ್ರಿಯೆ ಪಡೆದಿದೆ . ಕೆಲವೇ ದಿನಗಳಲ್ಲಿ ಚಿತ್ರಮಂದಿರಕ್ಕೆ ಲಗ್ಗೆಯಿಡಲು ಚಿತ್ರತಂಡ ಎಲ್ಲ ತಯಾರಿ ಮಾಡಿಕೊಳ್ಳುತ್ತಿದ್ದಾರೆ . ಇದರಲ್ಲಿ ನುರಿತ ಕಲಾವಿದರು ಹಾಗೂ ನುರಿತ ತಂತ್ರಜ್ಞರು ಕೂಡ ಇದಕ್ಕೆ ಉತ್ತಮ ಬೆಂಬಲವನ್ನು…

Chitra Suddhi
90 bidi manig nadi song release

ನಾಳೆಯಿಂದ ನೈಂಟಿ ನಶೆ!

ಹಿರಿಯ ಹಾಸ್ಯ ನಟ ಬಿರಾದಾರ್ ಅಭಿನಯದ ಐನೂರನೇ ಚಿತ್ರ ಎಂಬ ಹಣೆಪಟ್ಟಿ ಹೊತ್ತುಕೊಂಡು ಆರಂಭದಿಂದಲೇ ಭರ್ಜರಿ ಸದ್ದು ಮಾಡುತ್ತಲೇ ಬಂದ ಚಿತ್ರ ’90 ಬಿಡಿ ಮನೀಗ್ ನಡಿ’. ಉತ್ತರ ಕರ್ನಾಟಕ ಶೈಲಿಯ ಕಾಮಿಡಿ ಕ್ರೈಂ ಥ್ರಿಲ್ಲರ್ ಕಥೆ ಎನ್ನುತ್ತಾ, ‘ಟೀಸರ್’ ಮೂಲಕ ಚಿತ್ರ ಭರವಸೆ ಮೂಡಿಸಿತ್ತು. ಇದೀಗ ಚಿತ್ರತಂಡ…