ವಿನಯ್ ರಾಜ್ ಕುಮಾರ್ ಅಭಿನಯದ ‘ಪೆಪೆ’ ಸಿನಿಮಾ ಶೂಟಿಂಗ್ ಕಂಪ್ಲೀಟ್

pepe kannada movie shooting completed

ನಟ ವಿನಯ್ ರಾಜ್ ಕುಮಾರ್ ಅಭಿನಯದ ಬಹು ನಿರೀಕ್ಷಿತ ಸಿನಿಮಾ ‘ಪೆಪೆ’. ಟೈಟಲ್ ಮೂಲಕವೇ ಕುತೂಹಲ ಹುಟ್ಟು ಹಾಕಿರುವ ಈ ಚಿತ್ರದ ಟೀಸರ್ ಝಲಕ್ ಕಂಡು ಪ್ರೇಕ್ಷಕರು ಮೆಚ್ಚುಗೆ ವ್ಯಕ್ತಪಡಿಸಿದ್ರು. ಸಾಕಷ್ಟು ಉತ್ತಮ ರೆಸ್ಪಾನ್ಸ್ ಟೀಸರ್ ಪಡೆದುಕೊಂಡಿತ್ತು. ಹೀಗೆ ಆರಂಭದಿಂದಲೂ ಸಿನಿರಸಿಕರಲ್ಲಿ ನಿರೀಕ್ಷೆ ಹುಟ್ಟು ಹಾಕಿರುವ ‘ಪೆಪೆ’ ಚಿತ್ರದ ಚಿತ್ರೀಕರಣ ಕಂಪ್ಲೀಟ್ ಆಗಿದ್ದು, ಚಿತ್ರೀಕರಣಕ್ಕೆ ಕುಂಬಳಕಾಯಿ ಒಡೆಯಲಾಗಿದೆ.pepe kannada movie shooting completed

ಶ್ರೀಲೇಶ್ ಎಸ್ ನಾಯರ್ ನಿರ್ದೇಶನಲ್ಲಿ ಮೂಡಿ ಬರ್ತಿರುವ ‘ಪೆಪೆ’ ಚಿತ್ರದ ಚಿತ್ರೀಕರಣ ಕಂಪ್ಲೀಟ್ ಆಗಿದೆ. ಇಷ್ಟು ದಿನ ಚಿತ್ರೀಕರಣದಲ್ಲಿ ಬ್ಯುಸಿಯಾಗಿದ್ದ ಚಿತ್ರತಂಡ ಸಕಲೇಶಪುರದಲ್ಲಿ ನಡೆದ ಕ್ಲೈಮ್ಯಾಕ್ಸ್ ಸೀನ್ ಶೂಟಿಂಗ್ ಬಳಿಕ ಚಿತ್ರೀಕರಣಕ್ಕೆ ಕುಂಬಳಕಾಯಿ ಒಡೆದಿದೆ. ಸಾಹಸ ನಿರ್ದೇಶಕ ರವಿವರ್ಮಾ ಕಂಪೋಸ್ ಮಾಡಿದ ಕ್ಲೈಮ್ಯಾಕ್ಸ್ ಫೈಟಿಂಗ್ ಸೀನ್ ಸೆರೆ ಹಿಡಿಯುವ ಮೂಲಕ ‘ಪೆಪೆ’ ಚಿತ್ರೀಕರಣಕ್ಕೆ ಶುಭಂ ಹೇಳಲಾಗಿದೆ.pepe kannada movie shooting completed

ಆರಂಭದಿಂದ ಒಂದೇ ರೀತಿ ಸಿನಿಮಾಗಳಿಗೆ ಮೊರೆ ಹೋಗದೇ ಪ್ರತಿ ಸಿನಿಮಾದಲ್ಲೂ ವಿಭಿನ್ನತೆ ಕಾಪಾಡಿಕೊಂಡು ಬರ್ತಿರುವ ವಿನಯ್ ರಾಜ್ ಕುಮಾರ್ ಚಿತ್ರದಲ್ಲಿ ಗ್ಯಾಂಗ್ ಲೀಡರ್ ಪಾತ್ರಕ್ಕೆ ಬಣ್ಣ ಹಚ್ಚಿದ್ದಾರೆ. ಟೀಸರ್, ಪೋಸ್ಟರ್ ಝಲಕ್ ನಲ್ಲಿ ವಿನಯ್ ಕಂಡು ದೊಡ್ಮನೆ ಅಭಿಮಾನಿಗಳು, ಸಿನಿರಸಿಕರು ಥ್ರಿಲ್ ಆಗಿದ್ದು, ಚಿತ್ರದ ಮೇಲೆ ನಿರೀಕ್ಷೆ ಇಟ್ಟುಕೊಂಡಿದ್ದಾರೆ.pepe kannada movie shooting completed

ಚಿತ್ರದಲ್ಲಿ ಮೆದಿನಿ ಕೆಳಮನಿ, ಯಶ್ ಶೆಟ್ಟಿ, ಕಾಜಲ್ ಕುಂದರ್, ಅರುಣಾ ಬಾಲರಾಜ್, ನವೀನ್ ಡಿ ಪಡಿಲ್, ಬಾಲಾ ರಾಜ್ವಾಡಿ ಒಳಗೊಂಡ ತಾರಾಬಳಗವಿದೆ. ಅಭಿಷೇಕ್ ಕಾಸರಗೋಡು ಕ್ಯಾಮೆರಾ ವರ್ಕ್, ಪೂರ್ಣಚಂದ್ರ ತೇಜಸ್ವಿ ಸಂಗೀತ ನಿರ್ದೇಶನ ಚಿತ್ರಕ್ಕಿದೆ. ಕೊಡಗು, ಸಕಲೇಶಪುರದಲ್ಲಿ ಸಿನಿಮಾ ಸೆರೆ ಹಿಡಿಯಲಾಗಿದೆ. ಚಿತ್ರವನ್ನು ಉದಯ್ ಮತ್ತು ಶ್ರೀರಾಮ್ ಬಂಡವಾಳ ಹೂಡಿ ನಿರ್ಮಾಣ ಮಾಡಿದ್ದಾರೆ.

2018ರಲ್ಲಿ ತೆರೆಕಂಡ ಅನಂತು v/s ನುಸ್ರುತ್ ಸಿನಿಮಾ ಬಳಿಕ ವಿನಯ್ ರಾಜ್ ಕುಮಾರ್ ಯಾವುದೇ ಸಿನಿಮಾ ತೆರೆಕಂಡಿಲ್ಲ. ‘ಪೆಪೆ’ ಜೊತೆಗೆ ‘ಗ್ರಾಮಾಯಣ’, ‘ಅದೊಂದಿತ್ತು ಕಾಲ’ ಸಿನಿಮಾಗಳಲ್ಲೂ ವಿನಯ್ ಬ್ಯುಸಿಯಾಗಿದ್ದಾರೆ.

You Will  Love   Like  These

Chitra Suddhi
daali uttarakhand kannada movie

ಡಾಲಿ ಧನಂಜಯ “ಉತ್ತರ ಕಾಂಡ”ದ ನಾಯಕ.

ವಿಜಯ್ ಕಿರಗಂದೂರು ಅರ್ಪಿಸುವ, ಕೆ.ಆರ್.ಜಿ ಸ್ಟುಡಿಯೋಸ್ ಲಾಂಛನದಲ್ಲಿ ಕಾರ್ತಿಕ್ ಹಾಗೂ ಯೋಗಿ ಜಿ ರಾಜ್ ನಿರ್ಮಿಸುತ್ತಿರುವ ” ಉತ್ತರಕಾಂಡ” ಚಿತ್ರದ ನಾಯಕನಾಗಿ ಡಾಲಿ ಧನಂಜಯ ಅಭಿನಯಿಸುತ್ತಿದ್ದಾರೆ. ಈ ಹಿಂದೆ ಕೆ.ಆರ್.ಜಿ ಸ್ಟುಡಿಯೋಸ್ ನಿರ್ಮಾಣದಲ್ಲಿ ಡಾಲಿ ಧನಂಜಯ ನಾಯಕನಾಗಿ ನಟಿಸಿದ್ದ “ರತ್ನನ ಪ್ರಪಂಚ” ಚಿತ್ರ ಸಹ ಪ್ರಚಂಡ ಯಶಸ್ಸು ಕಂಡಿತ್ತು.…

Chitra Suddhi
In the movie "December 24". Boys from Kunigal Taluk

“ಡಿಸೆಂಬರ್ 24” ಚಿತ್ರದಲ್ಲಿ ಹಾವಳಿ ಕೊಡೋಕೆ ಕುಣಿಗಲ್...

“ಡಿಸೆಂಬರ್ 24” ಚಿತ್ರದಲ್ಲಿ ಅನಿಲ್ ಗೌಡ್ರು, ಕುಮಾರ್ ಗೌಡ್ರು ಹಾಗೂ ಬೆಟ್ಟೇಗೌಡ್ರು ಖಡಕ್ ಖಳನಾಯಕರಾಗಿ ಅಭಿನಯಿಸಿದ್ದು, ಈ ಚಿತ್ರದಲ್ಲಿ ಇವರು ತುಂಬಾ ವಿಭಿನ್ನವಾದ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಈ ಚಿತ್ರದಲ್ಲಿ ನಾಯಕರ ಪಾತ್ರ ಎಷ್ಟು ಮುಖ್ಯನೋ ಹಾಗೆ ಖಳನಾಯಕರ ಪಾತ್ರಗಳು ಅಷ್ಟೇ ಮುಖ್ಯ. ಅದರಂತೆ ಖಳನಾಯಕರ ಆರ್ಭಟ ಜೋರಾಗೆ ಇರಲಿದೆ…

News
VXplore Banking & Competitive Exams Coaching Academy

ಅದು ಕೆಂಗೇರಿಯಲ್ಲಿ ಹೊಸದಾಗಿ ಶುರುವಾದ ಸ್ಪರ್ಧಾತ್ಮಕ ಪರೀಕ್ಷೆಗಳ...

ಸಾವಿರಾರು ವಿದ್ಯಾರ್ಥಿಗಳಿಗೆ ಭವಿಷ್ಯ ಕಟ್ಟಿಕೊಟ್ಟ ಪ್ರತಿಷ್ಠಿತ ವಿದ್ಯಾ ಸಂಸ್ಥೆಯ ನಿರ್ದೇಶಕರಾದ  ಚಂದ್ರ ಮೂರ್ತಿ ಯವರು ಇದರ ಸಂಸ್ಥಾಪಕರು. ಉತ್ತಮ ಮಟ್ಟದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಭೇತಿ ನೀಡುವ ಕಾರಣದಿಂದ ಈ VXplore Banking & Competitive Exams Coaching Academy. ತರಭೇತಿ ಕೇಂದ್ರವನ್ನು ತೆರೆದಿದ್ದಾರೆ. ಅದು ಆಕಾಕ್ಷಿ ವಿಧ್ಯಾರ್ಥಿಗಳಿಗೆ ಅವರ…

Chitra Suddhi
i am pregnant kannada movie censored ua

“ಐ ಆಮ್ ಪ್ರೆಗ್ನೆಂಟ್” ಚಿತ್ರವು ಸೆನ್ಸಾರ್ ಮಂಡಳಿಯಿಂದ...

“ಅನು ಸಿನಿಮಾಸ್” ಬ್ಯಾನರ್ ಅಡಿಯಲ್ಲಿ ತಯಾರಾಗುತ್ತಿರುವ “ಐ ಆಮ್ ಪ್ರೆಗ್ನೆಂಟ್” ಎಂಬ ಚಿತ್ರವನ್ನು ಸೆನ್ಸಾರ್ ಮಂಡಳಿಯಿಂದ ಉತ್ತಮ ಪ್ರತಿಕ್ರಿಯೆ ಪಡೆದಿದೆ . ಕೆಲವೇ ದಿನಗಳಲ್ಲಿ ಚಿತ್ರಮಂದಿರಕ್ಕೆ ಲಗ್ಗೆಯಿಡಲು ಚಿತ್ರತಂಡ ಎಲ್ಲ ತಯಾರಿ ಮಾಡಿಕೊಳ್ಳುತ್ತಿದ್ದಾರೆ . ಇದರಲ್ಲಿ ನುರಿತ ಕಲಾವಿದರು ಹಾಗೂ ನುರಿತ ತಂತ್ರಜ್ಞರು ಕೂಡ ಇದಕ್ಕೆ ಉತ್ತಮ ಬೆಂಬಲವನ್ನು…

Chitra Suddhi
90 bidi manig nadi song release

ನಾಳೆಯಿಂದ ನೈಂಟಿ ನಶೆ!

ಹಿರಿಯ ಹಾಸ್ಯ ನಟ ಬಿರಾದಾರ್ ಅಭಿನಯದ ಐನೂರನೇ ಚಿತ್ರ ಎಂಬ ಹಣೆಪಟ್ಟಿ ಹೊತ್ತುಕೊಂಡು ಆರಂಭದಿಂದಲೇ ಭರ್ಜರಿ ಸದ್ದು ಮಾಡುತ್ತಲೇ ಬಂದ ಚಿತ್ರ ’90 ಬಿಡಿ ಮನೀಗ್ ನಡಿ’. ಉತ್ತರ ಕರ್ನಾಟಕ ಶೈಲಿಯ ಕಾಮಿಡಿ ಕ್ರೈಂ ಥ್ರಿಲ್ಲರ್ ಕಥೆ ಎನ್ನುತ್ತಾ, ‘ಟೀಸರ್’ ಮೂಲಕ ಚಿತ್ರ ಭರವಸೆ ಮೂಡಿಸಿತ್ತು. ಇದೀಗ ಚಿತ್ರತಂಡ…