‘ಪೊನ್ನಿಯಿನ್ ಸೆಲ್ವನ್’ ಸೀಕ್ವೆಲ್ 2 ತೆರೆಗೆ ಬರಲು ಮುಹೂರ್ತ ಫಿಕ್ಸ್ -2023 ಏಪ್ರಿಲ್ 28ಕ್ಕೆ ಸಿನಿಮಾ ರಿಲೀಸ್

'Ponniyin Selvan' Sequel 2 release date fixed - 2023 Movie release on April 28

ಐತಿಹಾಸಿಕ ಸ್ಟೋರಿ, ಸ್ಟಾರ್ ಡೈರೆಕ್ಟರ್, ಸ್ಟಾರ್ ತಾರಾಗಣ, ಅದ್ದೂರಿ ಮೇಕಿಂಗ್, ಸಂಗೀತ ಮಾಂತ್ರಿಕನ ಮ್ಯೂಸಿಕ್ ಇದೆಲ್ಲವೂ ಒಳಗೊಂಡ ಸಿನಿಮಾವೇ ‘ಪೊನ್ನಿಯಿನ್ ಸೆಲ್ವನ್’. ಸೆಪ್ಟೆಂಬರ್ 30ರಂದು ಮೊದಲ ಸೀಕ್ವೆಲ್ ರಿಲೀಸ್ ಆಗಿ ವರ್ಲ್ಡ್ ವೈಡ್ ಸೂಪರ್ ಸಕ್ಸಸ್ ಕಂಡ ಚಿತ್ರದಿಂದ ಹೊಸ ಅಪ್ಡೇಟ್ ಹೊರಬಿದ್ದಿದೆ. ‘ಪೊನ್ನಿಯಿನ್ ಸೆಲ್ವನ್’ ಸೀಕ್ವೆಲ್ 2 ಬಿಡುಗಡೆಗೆ ಮುಹೂರ್ತ ಫಿಕ್ಸ್ ಆಗಿದ್ದು 2023 ಏಪ್ರಿಲ್ 28ಕ್ಕೆ ಸಿನಿಮಾ ವರ್ಲ್ಡ್ ವೈಡ್ ರಿಲೀಸ್ ಆಗ್ತಿದೆ.'Ponniyin Selvan' Sequel 2 release date fixed - 2023 Movie release on April 28

ಭಾರತೀಯ ಚಿತ್ರರಂಗದ ಖ್ಯಾತ ನಿರ್ದೇಶಕ ಮಣಿರತ್ನಂ ಡ್ರೀಮ್ ಪ್ರಾಜೆಕ್ಟ್ ‘ಪೊನ್ನಿಯಿನ್ ಸೆಲ್ವನ್’. ಕಾರ್ತಿ, ಐಶ್ವರ್ಯಾ ರೈ, ಚಿಯಾನ್ ವಿಕ್ರಮ್, ಜಯಂ ರವಿ, ತ್ರಿಶಾ, ಶರತ್ ಕುಮಾರ್, ಪ್ರಕಾಶ್ ರಾಜ್ ರಂತ ದಿಗ್ಗಜ ಕಲಾವಿದರ ಸಮಾಗಮವಿರುವ ಈ ಚಿತ್ರ ಪ್ರೇಕ್ಷಕ ಮಹಾಶಯರಿಂದಲೂ ಬಹುಪರಾಕ್ ಪಡೆದುಕೊಂಡಿತ್ತು. ಮಣಿರತ್ನಂ ನಿರ್ದೇಶನ ಒಂದು ಶಕ್ತಿಯಾದ್ರೆ, ಎ.ಆರ್.ರೆಹಮಾನ್ ಮ್ಯೂಸಿಕ್, ರವಿವರ್ಮನ್ ಕ್ಯಾಮೆರಾ ವರ್ಕ್, ಸ್ಟಾರ್ ಹಾಗೂ ಅನುಭವಿ ಕಲಾವಿದರ ನಟನೆ, ಅದ್ದೂರಿ ಮೇಕಿಂಗ್ ಎಲ್ಲವೂ ತೆರೆ ಮೇಲೆ ಕಮಾಲ್ ಮಾಡಿತ್ತು. ಎಲ್ಲೆಡೆ ಚಿತ್ರಕ್ಕೆ ಸಿಕ್ಕ ರೆಸ್ಪಾನ್ಸ್ ಚಿತ್ರತಂಡದ ಸಂಭ್ರಮವನ್ನು ಇಮ್ಮಡಿಗೊಳಿಸಿತ್ತು. ಇದೀಗ ಮತ್ತೊಮ್ಮೆ ತೆರೆ ಮೇಲೆ ಮ್ಯಾಜಿಕ್ ಸೃಷ್ಟಿಸಲು ಚಿತ್ರತಂಡ ರೆಡಿಯಾಗಿದೆ. ಸೀಕ್ವಲ್ 2 ಬಿಡುಗಡೆ ದಿನಾಂಕವನ್ನು ಅನೌನ್ಸ್ ಮಾಡಿದೆ.'Ponniyin Selvan' Sequel 2 release date fixed - 2023 Movie release on April 28

ಲೇಖಕ ಹಾಗೂ ಸ್ವಾತಂತ್ರ್ಯ ಹೋರಾಟಗಾರ ಕಲ್ಕಿ ಕೃಷ್ಣಮೂರ್ತಿ ಬರೆದ ‘ಪೊನ್ನಿಯಿನ್ ಸೆಲ್ವನ್’ ಐತಿಹಾಸಿಕ ಕಾದಂಬರಿ ಆಧಾರಿತ ಚಿತ್ರವಿದು. ಸೆಪ್ಟೆಂಬರ್ 30ರಲ್ಲಿ ತೆರೆಕಂಡ ಮೊದಲ ಭಾಗ ವರ್ಲ್ ವೈಡ್ ಅಭೂತ ಪೂರ್ವ ರೆಸ್ಪಾನ್ಸ್ ಪಡೆದುಕೊಂಡಿತ್ತು. ಇದೀಗ ಆ ಗೆಲುವಿನ ಸಂಭ್ರಮದಲ್ಲೇ ಎರಡನೇ ಸೀಕ್ವೆಲ್ ಬಿಡುಗಡೆಗೆ ದಿನಾಂಕ ಫಿಕ್ಸ್ ಮಾಡಿದೆ ಚಿತ್ರತಂಡ. ಏಪ್ರಿಲ್ 28ಕ್ಕೆ ‘ಪೊನ್ನಿಯಿನ್ ಸೆಲ್ವನ್’ ಸೀಕ್ವೆಲ್ 2 ತೆರೆ ಮೇಲೆ ಮ್ಯಾಜಿಕ್ ಸೃಷ್ಟಿಸಲು ಬರಲಿದೆ. ಲೈಕಾ ಪ್ರೊಡಕ್ಷನ್ಸ್ ಮತ್ತು ಮದ್ರಾಸ್ ಟಾಕೀಸ್ ಬ್ಯಾನರ್ ನಡಿ ಈ ಅದ್ದೂರಿ ಸಿನಿಮಾ ನಿರ್ಮಾಣವಾಗಿದ್ದು, ಶ್ರೀಕರ್ ಪ್ರಸಾದ್ ಸಂಕಲನ ಚಿತ್ರಕ್ಕಿದೆ.'Ponniyin Selvan' Sequel 2 release date fixed - 2023 Movie release on April 28

You Will  Love   Like  These

Chitra Suddhi
daali uttarakhand kannada movie

ಡಾಲಿ ಧನಂಜಯ “ಉತ್ತರ ಕಾಂಡ”ದ ನಾಯಕ.

ವಿಜಯ್ ಕಿರಗಂದೂರು ಅರ್ಪಿಸುವ, ಕೆ.ಆರ್.ಜಿ ಸ್ಟುಡಿಯೋಸ್ ಲಾಂಛನದಲ್ಲಿ ಕಾರ್ತಿಕ್ ಹಾಗೂ ಯೋಗಿ ಜಿ ರಾಜ್ ನಿರ್ಮಿಸುತ್ತಿರುವ ” ಉತ್ತರಕಾಂಡ” ಚಿತ್ರದ ನಾಯಕನಾಗಿ ಡಾಲಿ ಧನಂಜಯ ಅಭಿನಯಿಸುತ್ತಿದ್ದಾರೆ. ಈ ಹಿಂದೆ ಕೆ.ಆರ್.ಜಿ ಸ್ಟುಡಿಯೋಸ್ ನಿರ್ಮಾಣದಲ್ಲಿ ಡಾಲಿ ಧನಂಜಯ ನಾಯಕನಾಗಿ ನಟಿಸಿದ್ದ “ರತ್ನನ ಪ್ರಪಂಚ” ಚಿತ್ರ ಸಹ ಪ್ರಚಂಡ ಯಶಸ್ಸು ಕಂಡಿತ್ತು.…

Chitra Suddhi
In the movie "December 24". Boys from Kunigal Taluk

“ಡಿಸೆಂಬರ್ 24” ಚಿತ್ರದಲ್ಲಿ ಹಾವಳಿ ಕೊಡೋಕೆ ಕುಣಿಗಲ್...

“ಡಿಸೆಂಬರ್ 24” ಚಿತ್ರದಲ್ಲಿ ಅನಿಲ್ ಗೌಡ್ರು, ಕುಮಾರ್ ಗೌಡ್ರು ಹಾಗೂ ಬೆಟ್ಟೇಗೌಡ್ರು ಖಡಕ್ ಖಳನಾಯಕರಾಗಿ ಅಭಿನಯಿಸಿದ್ದು, ಈ ಚಿತ್ರದಲ್ಲಿ ಇವರು ತುಂಬಾ ವಿಭಿನ್ನವಾದ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಈ ಚಿತ್ರದಲ್ಲಿ ನಾಯಕರ ಪಾತ್ರ ಎಷ್ಟು ಮುಖ್ಯನೋ ಹಾಗೆ ಖಳನಾಯಕರ ಪಾತ್ರಗಳು ಅಷ್ಟೇ ಮುಖ್ಯ. ಅದರಂತೆ ಖಳನಾಯಕರ ಆರ್ಭಟ ಜೋರಾಗೆ ಇರಲಿದೆ…

News
VXplore Banking & Competitive Exams Coaching Academy

ಅದು ಕೆಂಗೇರಿಯಲ್ಲಿ ಹೊಸದಾಗಿ ಶುರುವಾದ ಸ್ಪರ್ಧಾತ್ಮಕ ಪರೀಕ್ಷೆಗಳ...

ಸಾವಿರಾರು ವಿದ್ಯಾರ್ಥಿಗಳಿಗೆ ಭವಿಷ್ಯ ಕಟ್ಟಿಕೊಟ್ಟ ಪ್ರತಿಷ್ಠಿತ ವಿದ್ಯಾ ಸಂಸ್ಥೆಯ ನಿರ್ದೇಶಕರಾದ  ಚಂದ್ರ ಮೂರ್ತಿ ಯವರು ಇದರ ಸಂಸ್ಥಾಪಕರು. ಉತ್ತಮ ಮಟ್ಟದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಭೇತಿ ನೀಡುವ ಕಾರಣದಿಂದ ಈ VXplore Banking & Competitive Exams Coaching Academy. ತರಭೇತಿ ಕೇಂದ್ರವನ್ನು ತೆರೆದಿದ್ದಾರೆ. ಅದು ಆಕಾಕ್ಷಿ ವಿಧ್ಯಾರ್ಥಿಗಳಿಗೆ ಅವರ…

Chitra Suddhi
90 bidi manig nadi song release

ನಾಳೆಯಿಂದ ನೈಂಟಿ ನಶೆ!

ಹಿರಿಯ ಹಾಸ್ಯ ನಟ ಬಿರಾದಾರ್ ಅಭಿನಯದ ಐನೂರನೇ ಚಿತ್ರ ಎಂಬ ಹಣೆಪಟ್ಟಿ ಹೊತ್ತುಕೊಂಡು ಆರಂಭದಿಂದಲೇ ಭರ್ಜರಿ ಸದ್ದು ಮಾಡುತ್ತಲೇ ಬಂದ ಚಿತ್ರ ’90 ಬಿಡಿ ಮನೀಗ್ ನಡಿ’. ಉತ್ತರ ಕರ್ನಾಟಕ ಶೈಲಿಯ ಕಾಮಿಡಿ ಕ್ರೈಂ ಥ್ರಿಲ್ಲರ್ ಕಥೆ ಎನ್ನುತ್ತಾ, ‘ಟೀಸರ್’ ಮೂಲಕ ಚಿತ್ರ ಭರವಸೆ ಮೂಡಿಸಿತ್ತು. ಇದೀಗ ಚಿತ್ರತಂಡ…

Chitra Suddhi
i am pregnant kannada movie censored ua

“ಐ ಆಮ್ ಪ್ರೆಗ್ನೆಂಟ್” ಚಿತ್ರವು ಸೆನ್ಸಾರ್ ಮಂಡಳಿಯಿಂದ...

“ಅನು ಸಿನಿಮಾಸ್” ಬ್ಯಾನರ್ ಅಡಿಯಲ್ಲಿ ತಯಾರಾಗುತ್ತಿರುವ “ಐ ಆಮ್ ಪ್ರೆಗ್ನೆಂಟ್” ಎಂಬ ಚಿತ್ರವನ್ನು ಸೆನ್ಸಾರ್ ಮಂಡಳಿಯಿಂದ ಉತ್ತಮ ಪ್ರತಿಕ್ರಿಯೆ ಪಡೆದಿದೆ . ಕೆಲವೇ ದಿನಗಳಲ್ಲಿ ಚಿತ್ರಮಂದಿರಕ್ಕೆ ಲಗ್ಗೆಯಿಡಲು ಚಿತ್ರತಂಡ ಎಲ್ಲ ತಯಾರಿ ಮಾಡಿಕೊಳ್ಳುತ್ತಿದ್ದಾರೆ . ಇದರಲ್ಲಿ ನುರಿತ ಕಲಾವಿದರು ಹಾಗೂ ನುರಿತ ತಂತ್ರಜ್ಞರು ಕೂಡ ಇದಕ್ಕೆ ಉತ್ತಮ ಬೆಂಬಲವನ್ನು…