“ಅಬ್ಬರ” ಚಿತ್ರೀಕರಣ ಮುಕ್ತಾಯ ಮೂರು ವಿಭಿನ್ನ ಗೆಟಪ್ ನಲ್ಲಿ ಪ್ರಜ್ವಲ್ ದೇವರಾಜ್.

ಜೂನ್ 2ರ ಗುರುವಾರ ಬೆಂಗಳೂರಿನ ನಾಗರಬಾವಿಯ ಮಾದೇಶ್ವರ ದೇವಾಲಯದಲ್ಲಿ ಕುಂಬಳಕಾಯಿ ಒಡೆಯುವ ಭಾಗವಾಗಿ  ಚಿತ್ರೀಕರಣ ಹಮ್ಮಿಕೊಳ್ಳಲಾಗಿತ್ತು.WhatsApp Image 2022 06 02 at 2.27.24 PM

 ಡೈನಾಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್ , ನಿರ್ದೇಶಕ ರಾಮ್ ನಾರಾಯಣ್, ನಿರ್ಮಾಪಕ ಬಸವರಾಜ್ ಮಂಚಯ್ಯ ಹಾಗೂ ನಟಿಯರಾದ ರಾಶಿ ಪೊನ್ನಪ್ಪ, ನಿಮಿಕಾ ರತ್ನಾಕರ್ ಮತ್ತು ಲೇಖಾಚಂದ್ರ ಕಾಣಿಸಿಕೊಂಡರು.WhatsApp Image 2022 06 02 at 2.27.55 PM

ಟೈಸನ್, ಕ್ರ್ಯಾಕ್ ಹಾಗೂ ಇತರ ಚಿತ್ರಗಳನ್ನು ನಿರ್ದೇಶನ ಮಾಡಿರುವ  ರಾಮ್‍ನಾರಾಯಣ್ ಇದೀಗ ಡೈನಾಮಿಕ್‍ ಪ್ರಿನ್ಸ್ ಪ್ರಜ್ವಲ್ ದೇವರಾಜ್ ಜೊತೆ ಸೇರಿ ಅಬ್ಬರ ಎಂಬ ಚಿತ್ರ ಮಾಡುತ್ತಿದ್ದು, C&M ಮೂವೀಸ್ ಲಾಂಛನದಲ್ಲಿ ಬಸವರಾಜ್ ಮಂಚಯ್ಯ ನಿರ್ಮಾಣ ಮಾಡುತ್ತಿದ್ದಾರೆ.WhatsApp Image 2022 06 02 at 6.32.40 AM

ಪ್ರಜ್ವಲ್ ಮೊದಲಬಾರಿಗೆ ಮೂರು ವಿಭಿನ್ನ ಪಾತ್ರಗಳಲ್ಲಿ ಕಾಣಿಸಿ ಕೊಳ್ಳುತ್ತಿದ್ದು, ರಾಶಿ ಪೊನ್ನಪ್ಪ, ನಿಮಿಕಾ ರತ್ನಾಕರ್ ಹಾಗೂ ಲೇಖಾಚಂದ್ರ ಜೊತೆಗಿದ್ದಾರೆ. ಚಿತ್ರದ ಕೊನೆಯ ಹಂತದ  ಚಿತ್ರೀಕರಣವು ಬ್ಯಾಂಕಾಕ್ ಮತ್ತು ಪಟಾಯ ದಲ್ಲಿ ನಡೆಯಿತು. RD7A5948 1 scaled

ಮಾದೇಶ್ವರ  ದೇವಸ್ಥಾನದ ಆವರಣದಲ್ಲೇ ಕುಂಬಳಕಾಯಿ ಒಡೆಯಬೇಕೆಂಬ ಆಶಯದಲ್ಲಿ ಇಲ್ಲಿ ಕೊನೆಯ ಹಂತದ ಚಿತ್ರೀಕರಣ ನಡೆಸಲಾಯಿತು ಎಂಬ ವಿವರ ಕೊಟ್ಟರು ನಿರ್ದೇಶಕ ರಾಮ್ ನಾರಾಯಣ್.RD7A7698 1 scaled

ಜುಲೈ ವೇಳೆಗೆ ಅಬ್ಬರದಿಂದಲೇ ಬರಬೇಕು ಎಂಬುದು ನಮ್ಮ ಉದ್ದೇಶ ಎಂದು ಹೇಳಿಕೊಂಡರು ನಿರ್ಮಾಪಕ ಬಸವರಾಜ ಮಂಚಯ್ಯ. ಈ ಚಿತ್ರ ನನಗೆ ಬಹಳ ವಿಶೇಷವೇ.. ಏಕೆಂದರೆ ಮೂರು ಶೆಡ್ ಗಳಿವೆ ಜೊತೆಗೆ ಕಾಮಿಡಿ, ಆಕ್ಷನ್, ಡ್ರಾಮಾ ಎಲ್ಲವೂ ಇದೆ ಎಂಬುದೆ ಹೆಗ್ಗಳಿಕೆ ಎಂದರು ಪ್ರಜ್ವಲ್ ದೇವರಾಜ್.RD7A8635 1 scaled

ರವಿಶಂಕರ್ ಎರಡು ಶೆಡ್ ಗಳಲ್ಲಿ ಕಾಣಿಸಿಕೊಂಡಿದ್ದಾರೆ. ಇನ್ನುಳಿದಂತೆ
ಶೋಭರಾಜ್, ಶಂಕರ್ ಅಶ್ವಥ್, ವಿಕ್ಟರಿವಾಸು, ಪ್ರಶಾಂತ್ ನಟನ, ಅರಸು ಮಹಾರಾಜ್, ಮೋಹನ್ ಜುನೇಜ, ಉಮೇಶ್, ಗೋವಿಂದೇಗೌಡ, ವಿಜಯ್ ಚೆಂಡೂರ್, ಮೂಗ್ ಸುರೇಶ್, ಸಲ್ಮಾನ್, ಮಮತಾ ರಾಹುತ್, ಖುಷಿ ಹಾಗೂ ಇತರರು ನಟಿಸಿದ್ದಾರೆ.WhatsApp Image 2022 06 02 at 2.27.53 PM

ರವಿ ಬಸ್ರೂರ್ ಸಂಗೀತವಿದೆ. ಯೋಗರಾಜ್ ಭಟ್, ಪತ್ರಕರ್ತ ವಿಜಯ್ ಭರಮಸಾಗರ ಸಾಹಿತ್ಯ ಬರೆದಿದ್ದಾರೆ. ಜೆ.ಕೆ.ಗಣೇಶ್ ಛಾಯಾಗ್ರಹಣ, ವೆಂಕಟೇಶ್ ಯುಡಿವಿ ಸಂಕಲನ, ವಿನೋದ್, ಪಳನಿರಾಜ, ಮಾಸ್‍ಮಾದ ಸಾಹಸ, ರಾಮು, ಮೋಹನ್, ಕಲೈ ನೃತ್ಯನಿರ್ದೇಶನ ಚಿತ್ರಕ್ಕಿದೆ ಎಂಬ ವಿವರಗಳು ಬಂದವು.WhatsApp Image 2022 06 02 at 2.27.43 PM

You Will  Love   Like  These

Chitra Suddhi
daali uttarakhand kannada movie

ಡಾಲಿ ಧನಂಜಯ “ಉತ್ತರ ಕಾಂಡ”ದ ನಾಯಕ.

ವಿಜಯ್ ಕಿರಗಂದೂರು ಅರ್ಪಿಸುವ, ಕೆ.ಆರ್.ಜಿ ಸ್ಟುಡಿಯೋಸ್ ಲಾಂಛನದಲ್ಲಿ ಕಾರ್ತಿಕ್ ಹಾಗೂ ಯೋಗಿ ಜಿ ರಾಜ್ ನಿರ್ಮಿಸುತ್ತಿರುವ ” ಉತ್ತರಕಾಂಡ” ಚಿತ್ರದ ನಾಯಕನಾಗಿ ಡಾಲಿ ಧನಂಜಯ ಅಭಿನಯಿಸುತ್ತಿದ್ದಾರೆ. ಈ ಹಿಂದೆ ಕೆ.ಆರ್.ಜಿ ಸ್ಟುಡಿಯೋಸ್ ನಿರ್ಮಾಣದಲ್ಲಿ ಡಾಲಿ ಧನಂಜಯ ನಾಯಕನಾಗಿ ನಟಿಸಿದ್ದ “ರತ್ನನ ಪ್ರಪಂಚ” ಚಿತ್ರ ಸಹ ಪ್ರಚಂಡ ಯಶಸ್ಸು ಕಂಡಿತ್ತು.…

Chitra Suddhi
In the movie "December 24". Boys from Kunigal Taluk

“ಡಿಸೆಂಬರ್ 24” ಚಿತ್ರದಲ್ಲಿ ಹಾವಳಿ ಕೊಡೋಕೆ ಕುಣಿಗಲ್...

“ಡಿಸೆಂಬರ್ 24” ಚಿತ್ರದಲ್ಲಿ ಅನಿಲ್ ಗೌಡ್ರು, ಕುಮಾರ್ ಗೌಡ್ರು ಹಾಗೂ ಬೆಟ್ಟೇಗೌಡ್ರು ಖಡಕ್ ಖಳನಾಯಕರಾಗಿ ಅಭಿನಯಿಸಿದ್ದು, ಈ ಚಿತ್ರದಲ್ಲಿ ಇವರು ತುಂಬಾ ವಿಭಿನ್ನವಾದ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಈ ಚಿತ್ರದಲ್ಲಿ ನಾಯಕರ ಪಾತ್ರ ಎಷ್ಟು ಮುಖ್ಯನೋ ಹಾಗೆ ಖಳನಾಯಕರ ಪಾತ್ರಗಳು ಅಷ್ಟೇ ಮುಖ್ಯ. ಅದರಂತೆ ಖಳನಾಯಕರ ಆರ್ಭಟ ಜೋರಾಗೆ ಇರಲಿದೆ…

News
VXplore Banking & Competitive Exams Coaching Academy

ಅದು ಕೆಂಗೇರಿಯಲ್ಲಿ ಹೊಸದಾಗಿ ಶುರುವಾದ ಸ್ಪರ್ಧಾತ್ಮಕ ಪರೀಕ್ಷೆಗಳ...

ಸಾವಿರಾರು ವಿದ್ಯಾರ್ಥಿಗಳಿಗೆ ಭವಿಷ್ಯ ಕಟ್ಟಿಕೊಟ್ಟ ಪ್ರತಿಷ್ಠಿತ ವಿದ್ಯಾ ಸಂಸ್ಥೆಯ ನಿರ್ದೇಶಕರಾದ  ಚಂದ್ರ ಮೂರ್ತಿ ಯವರು ಇದರ ಸಂಸ್ಥಾಪಕರು. ಉತ್ತಮ ಮಟ್ಟದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಭೇತಿ ನೀಡುವ ಕಾರಣದಿಂದ ಈ VXplore Banking & Competitive Exams Coaching Academy. ತರಭೇತಿ ಕೇಂದ್ರವನ್ನು ತೆರೆದಿದ್ದಾರೆ. ಅದು ಆಕಾಕ್ಷಿ ವಿಧ್ಯಾರ್ಥಿಗಳಿಗೆ ಅವರ…

Chitra Suddhi
i am pregnant kannada movie censored ua

“ಐ ಆಮ್ ಪ್ರೆಗ್ನೆಂಟ್” ಚಿತ್ರವು ಸೆನ್ಸಾರ್ ಮಂಡಳಿಯಿಂದ...

“ಅನು ಸಿನಿಮಾಸ್” ಬ್ಯಾನರ್ ಅಡಿಯಲ್ಲಿ ತಯಾರಾಗುತ್ತಿರುವ “ಐ ಆಮ್ ಪ್ರೆಗ್ನೆಂಟ್” ಎಂಬ ಚಿತ್ರವನ್ನು ಸೆನ್ಸಾರ್ ಮಂಡಳಿಯಿಂದ ಉತ್ತಮ ಪ್ರತಿಕ್ರಿಯೆ ಪಡೆದಿದೆ . ಕೆಲವೇ ದಿನಗಳಲ್ಲಿ ಚಿತ್ರಮಂದಿರಕ್ಕೆ ಲಗ್ಗೆಯಿಡಲು ಚಿತ್ರತಂಡ ಎಲ್ಲ ತಯಾರಿ ಮಾಡಿಕೊಳ್ಳುತ್ತಿದ್ದಾರೆ . ಇದರಲ್ಲಿ ನುರಿತ ಕಲಾವಿದರು ಹಾಗೂ ನುರಿತ ತಂತ್ರಜ್ಞರು ಕೂಡ ಇದಕ್ಕೆ ಉತ್ತಮ ಬೆಂಬಲವನ್ನು…

Chitra Suddhi
90 bidi manig nadi song release

ನಾಳೆಯಿಂದ ನೈಂಟಿ ನಶೆ!

ಹಿರಿಯ ಹಾಸ್ಯ ನಟ ಬಿರಾದಾರ್ ಅಭಿನಯದ ಐನೂರನೇ ಚಿತ್ರ ಎಂಬ ಹಣೆಪಟ್ಟಿ ಹೊತ್ತುಕೊಂಡು ಆರಂಭದಿಂದಲೇ ಭರ್ಜರಿ ಸದ್ದು ಮಾಡುತ್ತಲೇ ಬಂದ ಚಿತ್ರ ’90 ಬಿಡಿ ಮನೀಗ್ ನಡಿ’. ಉತ್ತರ ಕರ್ನಾಟಕ ಶೈಲಿಯ ಕಾಮಿಡಿ ಕ್ರೈಂ ಥ್ರಿಲ್ಲರ್ ಕಥೆ ಎನ್ನುತ್ತಾ, ‘ಟೀಸರ್’ ಮೂಲಕ ಚಿತ್ರ ಭರವಸೆ ಮೂಡಿಸಿತ್ತು. ಇದೀಗ ಚಿತ್ರತಂಡ…