ಪ್ರಮೋದ್ ಶೆಟ್ಟಿ ಹುಟ್ಟುಹಬ್ಬಕ್ಕೆ ‘ಕರಿಕಾನು ಗುಡ್ಡದ ಮೇಲೊಂದು ಅಧಿಕ ಪ್ರಸಂಗ’ ಸಿನಿಮಾದ ಫಸ್ಟ್ ಲುಕ್ ಉಡುಗೊರೆ

Pramod Shetty's first look gift of the movie 'Karikanu Gudda Meyodu Adhik Sanga' for his birthday.

ಸ್ಯಾಂಡಲ್‌ವುಡ್‌ನ ಭರವಸೆಯ ಕಲಾವಿದರಲ್ಲಿ ಪ್ರಮೋದ್ ಶೆಟ್ಟಿ ಕೂಡ ಒಬ್ಬರು. ಉಳಿದವರು ಕಂಡಂತೆ, ಕಿರಿಕ್ ಪಾರ್ಟಿ, ರಿಕ್ಕಿ, ಬೆಲ್ ಬಾಟಂ, ಅವನೇ ಶ್ರೀಮನ್ನಾರಾಯಣ, ತೂತುಮಡಿಕೆ, ಕಾಂತಾರ ಹೀಗೆ ಹಲವು ಸಿನಿಮಾಗಳಲ್ಲಿ ಬಣ್ಣ ಹಚ್ಚಿದ್ದಾರೆ. ರಿಷಬ್ ಶೆಟ್ಟಿ ನಿರ್ಮಾಣದ ‘ಲಾಫಿಂಗ್ ಬುದ್ಧ’ ಅನ್ನೋ ಸಿನಿಮಾದಲ್ಲಿ ಹೀರೋ ಆಗಿಯೂ ಕಾಣಿಸಿಕೊಳ್ಳುತ್ತಿದ್ದಾರೆ. ಸದ್ಯ ಪ್ರಮೋದ್ ಶೆಟ್ಟಿ ಹೊಸದೊಂದು ಸಿನಿಮಾವನ್ನು ಒಪ್ಪಿಕೊಂಡಿದ್ದಾರೆ. ಈ ಚಿತ್ರಕ್ಕೆ ‘ಕರಿಕಾನು ಗುಡ್ಡದ ಮೇಲೊಂದು ಅಧಿಕ ಪ್ರಸಂಗ’ ಎಂಬ ಶೀರ್ಷಿಕೆ ಇಡಲಾಗಿದೆ. ಇಂದು ಪ್ರಮೋದ್ ಶೆಟ್ಟಿ ಹುಟ್ಟುಹಬ್ಬ..ಅವರ ಜನ್ಮದಿನದ ಅಂಗವಾಗಿ ‘ಕರಿಕಾನು ಗುಡ್ಡದ ಮೇಲೊಂದು ಅಧಿಕ ಪ್ರಸಂಗ’ ಫಸ್ಟ್ ಲುಕ್ ರಿಲಿಸ್ ಮಾಡಲಾಗಿದೆ.Pramod Shetty's first look gift of the movie 'Karikanu Gudda Meyodu Adhik Sanga' for his birthday.

‘ಕರಿಕಾನು ಗುಡ್ಡದ ಮೇಲೊಂದು ಅಧಿಕ ಪ್ರಸಂಗ’ ಚಿತ್ರವು ಒಂದು ಊರಿನಲ್ಲಿ ಆದ ಅಪಾರ್ಥವೂ ಅನಾಹುತವಾಗಿ, ಅನಾಹುತವು ಅಧಿಕ ಪ್ರಸಂಗವಾಗಿ ನಡೆಯುವ ಘಟನೆಗಳ ಸುತ್ತ ಸಿನಿಮಾ ಸಾಗುತ್ತದೆ. ವಡ್ಡಾರಾಧಕ ಹಾಗೂ ಶಬರಿ ಎನ್ನುವ ಎರಡು ಕಿರು ಚಿತ್ರಗಳನ್ನು ನಿರ್ದೇಶಿಸಿದ್ದ ಯುವ ಪ್ರತಿಭೆ ಅನೀಶ್ ಶರ್ಮ ಆಕ್ಷನ್ ಕಟ್ ಹೇಳಿದ್ದಾರೆ. ರಾಘು ಶಿವಮೊಗ್ಗ, ಕಿರಣ್ ನಾಯಕ್, ಮಂಜುನಾಥ್ ಹೆಗಡೆ, ಕೆಜಿ ಕೃಷ್ಣಮೂರ್ತಿ ಚಂದ್ರಕಲಾ ಚಿತ್ರದ ಭಾಗವಾಗಿದ್ದಾರೆ.Pramod Shetty's first look gift of the movie 'Karikanu Gudda Meyodu Adhik Sanga' for his birthday.

ಶಿವಮೊಗ್ಗ ಜಿಲ್ಲೆಯ ಇಡುವಾಣಿ ಎನ್ನುವ ಒಂದು ಹಳ್ಳಿಯಲ್ಲಿ ಚಿತ್ರವನ್ನು ಚಿತ್ತರಿಸಿದ್ದು ಇಡೀ ಊರಿಗೆ ಊರನ್ನೇ ಸಿನಿಮಾ ಸೆಟ್ಟನ್ನಾಗಿಸಿಕೊಂಡು ಊರು ಜನಗಳನ್ನೇ ಉಪಯೋಗಿಸಿಕೊಂಡು ಚಿತ್ರವನ್ನು ಚಿತ್ರೀಕರಿಸಲಾಗಿದೆ. ಸುಮತ್ ಶರ್ಮಾ ಛಾಯಾಗ್ರಹಣ, ಸಂಜೀವ್ ಜಾಗೀರ್ದಾರ್ ಸಂಕಲನ, ಚೇತನ್ ಕುಮಾರ್ ಸಂಗೀತ ಕರಿಕಾನು ಗುಡ್ಡದ ಮೇಲೊಂದು ಅಧಿಕ ಪ್ರಸಂಗ’ ಚಿತ್ರಕ್ಕಿದೆ. ಗನ್ನಿ ಬ್ಯಾಗ್ ಸ್ಟುಡಿಯೋ ಪ್ರೊಡಕ್ಷನ್ ನಡಿ ಚಿತ್ತರಂಜನ್ ಕಶ್ಯಪ್, ವಲ್ಲಭ್ ಸೂರಿ, ಸುನಿತ್ ಹಲಗೇರಿ ನಿರ್ಮಾಣ ಮಾಡಿದ್ದು, ಊರ್ ಮನೆ ಪ್ರೊಡಕ್ಷನ್ ನಿರ್ಮಾಣದಲ್ಲಿ ಸಾಥ್ ಕೊಟ್ಟಿದೆ. ಈಗಾಗಲೇ ಚಿತ್ರೀಕರಣ ಮುಗಿಸಿರುವ ಚಿತ್ರತಂಡ ಪೋಸ್ಟ್ ಪ್ರೊಡಕ್ಷನ್ ಕೆಲಸದಲ್ಲಿ ಬ್ಯುಸಿಯಾಗಿದೆ.Pramod Shetty's first look gift of the movie 'Karikanu Gudda Meyodu Adhik Sanga' for his birthday.

You Will  Love   Like  These

Chitra Suddhi
daali uttarakhand kannada movie

ಡಾಲಿ ಧನಂಜಯ “ಉತ್ತರ ಕಾಂಡ”ದ ನಾಯಕ.

ವಿಜಯ್ ಕಿರಗಂದೂರು ಅರ್ಪಿಸುವ, ಕೆ.ಆರ್.ಜಿ ಸ್ಟುಡಿಯೋಸ್ ಲಾಂಛನದಲ್ಲಿ ಕಾರ್ತಿಕ್ ಹಾಗೂ ಯೋಗಿ ಜಿ ರಾಜ್ ನಿರ್ಮಿಸುತ್ತಿರುವ ” ಉತ್ತರಕಾಂಡ” ಚಿತ್ರದ ನಾಯಕನಾಗಿ ಡಾಲಿ ಧನಂಜಯ ಅಭಿನಯಿಸುತ್ತಿದ್ದಾರೆ. ಈ ಹಿಂದೆ ಕೆ.ಆರ್.ಜಿ ಸ್ಟುಡಿಯೋಸ್ ನಿರ್ಮಾಣದಲ್ಲಿ ಡಾಲಿ ಧನಂಜಯ ನಾಯಕನಾಗಿ ನಟಿಸಿದ್ದ “ರತ್ನನ ಪ್ರಪಂಚ” ಚಿತ್ರ ಸಹ ಪ್ರಚಂಡ ಯಶಸ್ಸು ಕಂಡಿತ್ತು.…

Chitra Suddhi
In the movie "December 24". Boys from Kunigal Taluk

“ಡಿಸೆಂಬರ್ 24” ಚಿತ್ರದಲ್ಲಿ ಹಾವಳಿ ಕೊಡೋಕೆ ಕುಣಿಗಲ್...

“ಡಿಸೆಂಬರ್ 24” ಚಿತ್ರದಲ್ಲಿ ಅನಿಲ್ ಗೌಡ್ರು, ಕುಮಾರ್ ಗೌಡ್ರು ಹಾಗೂ ಬೆಟ್ಟೇಗೌಡ್ರು ಖಡಕ್ ಖಳನಾಯಕರಾಗಿ ಅಭಿನಯಿಸಿದ್ದು, ಈ ಚಿತ್ರದಲ್ಲಿ ಇವರು ತುಂಬಾ ವಿಭಿನ್ನವಾದ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಈ ಚಿತ್ರದಲ್ಲಿ ನಾಯಕರ ಪಾತ್ರ ಎಷ್ಟು ಮುಖ್ಯನೋ ಹಾಗೆ ಖಳನಾಯಕರ ಪಾತ್ರಗಳು ಅಷ್ಟೇ ಮುಖ್ಯ. ಅದರಂತೆ ಖಳನಾಯಕರ ಆರ್ಭಟ ಜೋರಾಗೆ ಇರಲಿದೆ…

News
VXplore Banking & Competitive Exams Coaching Academy

ಅದು ಕೆಂಗೇರಿಯಲ್ಲಿ ಹೊಸದಾಗಿ ಶುರುವಾದ ಸ್ಪರ್ಧಾತ್ಮಕ ಪರೀಕ್ಷೆಗಳ...

ಸಾವಿರಾರು ವಿದ್ಯಾರ್ಥಿಗಳಿಗೆ ಭವಿಷ್ಯ ಕಟ್ಟಿಕೊಟ್ಟ ಪ್ರತಿಷ್ಠಿತ ವಿದ್ಯಾ ಸಂಸ್ಥೆಯ ನಿರ್ದೇಶಕರಾದ  ಚಂದ್ರ ಮೂರ್ತಿ ಯವರು ಇದರ ಸಂಸ್ಥಾಪಕರು. ಉತ್ತಮ ಮಟ್ಟದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಭೇತಿ ನೀಡುವ ಕಾರಣದಿಂದ ಈ VXplore Banking & Competitive Exams Coaching Academy. ತರಭೇತಿ ಕೇಂದ್ರವನ್ನು ತೆರೆದಿದ್ದಾರೆ. ಅದು ಆಕಾಕ್ಷಿ ವಿಧ್ಯಾರ್ಥಿಗಳಿಗೆ ಅವರ…

Chitra Suddhi
i am pregnant kannada movie censored ua

“ಐ ಆಮ್ ಪ್ರೆಗ್ನೆಂಟ್” ಚಿತ್ರವು ಸೆನ್ಸಾರ್ ಮಂಡಳಿಯಿಂದ...

“ಅನು ಸಿನಿಮಾಸ್” ಬ್ಯಾನರ್ ಅಡಿಯಲ್ಲಿ ತಯಾರಾಗುತ್ತಿರುವ “ಐ ಆಮ್ ಪ್ರೆಗ್ನೆಂಟ್” ಎಂಬ ಚಿತ್ರವನ್ನು ಸೆನ್ಸಾರ್ ಮಂಡಳಿಯಿಂದ ಉತ್ತಮ ಪ್ರತಿಕ್ರಿಯೆ ಪಡೆದಿದೆ . ಕೆಲವೇ ದಿನಗಳಲ್ಲಿ ಚಿತ್ರಮಂದಿರಕ್ಕೆ ಲಗ್ಗೆಯಿಡಲು ಚಿತ್ರತಂಡ ಎಲ್ಲ ತಯಾರಿ ಮಾಡಿಕೊಳ್ಳುತ್ತಿದ್ದಾರೆ . ಇದರಲ್ಲಿ ನುರಿತ ಕಲಾವಿದರು ಹಾಗೂ ನುರಿತ ತಂತ್ರಜ್ಞರು ಕೂಡ ಇದಕ್ಕೆ ಉತ್ತಮ ಬೆಂಬಲವನ್ನು…

Chitra Suddhi
90 bidi manig nadi song release

ನಾಳೆಯಿಂದ ನೈಂಟಿ ನಶೆ!

ಹಿರಿಯ ಹಾಸ್ಯ ನಟ ಬಿರಾದಾರ್ ಅಭಿನಯದ ಐನೂರನೇ ಚಿತ್ರ ಎಂಬ ಹಣೆಪಟ್ಟಿ ಹೊತ್ತುಕೊಂಡು ಆರಂಭದಿಂದಲೇ ಭರ್ಜರಿ ಸದ್ದು ಮಾಡುತ್ತಲೇ ಬಂದ ಚಿತ್ರ ’90 ಬಿಡಿ ಮನೀಗ್ ನಡಿ’. ಉತ್ತರ ಕರ್ನಾಟಕ ಶೈಲಿಯ ಕಾಮಿಡಿ ಕ್ರೈಂ ಥ್ರಿಲ್ಲರ್ ಕಥೆ ಎನ್ನುತ್ತಾ, ‘ಟೀಸರ್’ ಮೂಲಕ ಚಿತ್ರ ಭರವಸೆ ಮೂಡಿಸಿತ್ತು. ಇದೀಗ ಚಿತ್ರತಂಡ…