ಪ್ರಶಾಂತ್ ವರ್ಮಾ ನಿರ್ದೇಶನದ ‘ಹನು-ಮಾನ್’ ಟೀಸರ್ ರಿಲೀಸ್ – ಪ್ರೈಮ್ ಶೋ ಎಂಟಟೈನ್ಮೆಂಟ್ ನಿರ್ಮಾಣದ ಬಿಗ್ ಬಜೆಟ್ ಸಿನಿಮಾ

prasanth varma director movie hanuman trailer released

ಪ್ರಶಾಂತ್ ವರ್ಮಾ ಆಕ್ಷನ್ ಕಟ್ ಹೇಳಿರುವ ತೇಜ ಸಜ್ಜ ನಟನೆಯ ಬಹು ನಿರೀಕ್ಷಿತ ತೆಲುಗು ಸಿನಿಮಾ ‘ಹನು-ಮಾನ್’ ಟೀಸರ್ ಬಿಡುಗಡೆಯಾಗಿದೆ. ಪ್ರೈಮ್ ಶೋ ಎಂಟಟೈನ್ಮೆಂಟ್ ಬ್ಯಾನರ್ ನಿರ್ಮಾಣದಲ್ಲಿ ಮೂಡಿ ಬರ್ತಿರುವ ಬಿಗ್ ಬಜೆಟ್ ಪ್ಯಾನ್ ಇಂಡಿಯಾ ಸಿನಿಮಾ ಇದಾಗಿದೆ. ಟೀಸರ್ ಝಲಕ್ ಮೂಲಕ ಪ್ರೇಕ್ಷಕರೆದುರು ಬಂದಿರುವ ‘ಹನು – ಮಾನ್’ ಎಲ್ಲರ ಗಮನ ಸೆಳೆಯುತ್ತಿದೆ.prasanth varma director movie hanuman trailer released

ನಿರ್ದೇಶಕ ಪ್ರಶಾಂತ್ ವರ್ಮಾ ಭಾರತದ ಮೊದಲ ಸೂಪರ್ ಹೀರೋ ‘ಹನು-ಮಾನ್’ ಬಗ್ಗೆ ಕಥೆ ಹೆಣೆದು ಪ್ಯಾನ್ ಇಂಡಿಯಾ ನಿರ್ದೇಶಕನಾಗಿ ಹೊರ ಹೊಮ್ಮುತ್ತಿದ್ದಾರೆ. ಚಿತ್ರದಲ್ಲಿ ನಾಯಕ ನಟನಾಗಿ ಪ್ರತಿಭಾವಂತ ನಟ ತೇಜ ಸಜ್ಜ ನಟಿಸುತ್ತಿದ್ದು, ಚಿತ್ರಕ್ಕಾಗಿ ಭರ್ಜರಿ ತಯಾರಿ ನಡೆಸಿರೋದು ಟೀಸರ್ ಝಲಕ್ ನೋಡಿದಾಗಲೇ ತಿಳಿದು ಬರುತ್ತೆ. ಚಿತ್ರದಲ್ಲಿ ನಾಯಕಿಯಾಗಿ ಅಮೃತಾ ಐಯ್ಯರ್ ನಟಿಸಿದ್ದಾರೆ. ಬಿಡುಗಡೆಯಾಗಿರುವ ಟೀಸರ್ ಸಖತ್ ಪ್ರಾಮಿಸಿಂಗ್ ಆಗಿದ್ದು, ನಾಯಕ ನಟ ತೇಜ ಸಜ್ಜ ಲುಕ್, ಚಿತ್ರದ ಮೇಕಿಂಗ್, ಕ್ಯಾಮೆರಾ ವರ್ಕ್, ಮ್ಯೂಸಿಕ್ ಎಲ್ಲವೂ ಗಮನ ಸೆಳೆಯುತ್ತಿದೆ.

ವರಲಕ್ಷಿ ಶರತ್ ಕುಮಾರ್, ವಿನಯ್ ರೈ, ರಾಜ್ ದೀಪಕ್ ಶೆಟ್ಟಿ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಗೆಟಪ್ ಶ್ರೀನು, ಸತ್ಯ ಒಳಗೊಂಡ ಸ್ಟಾರ್ ಕಲಾವಿದರ ತಾರಾಬಳಗ ಚಿತ್ರದಲ್ಲಿದೆ. ಯುವ ಹಾಗೂ ಪ್ರತಿಭಾವಂತ ಸಂಗೀತ ನಿರ್ದೇಶಕರಾದ ಗೌರಹರಿ, ಅನುದೀಪ್ ದೇವ್ ಮತ್ತು ಕೃಷ್ಣ ಸೌರಭ್ ಸಂಗೀತ ನಿರ್ದೇಶನ, ದಶರಧಿ ಶಿವೇಂದ್ರ ಕ್ಯಾಮೆರಾ ವರ್ಕ್, ಎಸ್. ಬಿ ರಾಜು ತಲರಿ ಸಂಕಲನ ಚಿತ್ರಕ್ಕಿದೆ.prasanth varma director movie hanuman trailer released

ಕೆ. ನಿರಂಜನ್ ರೆಡ್ಡಿ ಪ್ರೈಮ್ ಶೋ ಎಂಟಟೈನ್ಮೆಂಟ್ ಬ್ಯಾನರ್ ನಡಿ ಅದ್ದೂರಿಯಾಗಿ, ಬಿಗ್ ಬಜೆಟ್ ನಲ್ಲಿ ‘ಹನು-ಮಾನ್’ ಚಿತ್ರ ನಿರ್ಮಾಣ ಮಾಡಿದ್ದಾರೆ. ಚಿತ್ರೀಕರಣ ಮುಗಿಸಿ ಪೋಸ್ಟ್ ಪ್ರೊಡಕ್ಷನ್ ಕೆಲಸದಲ್ಲಿ ಬ್ಯುಸಿಯಾಗಿರುವ ಸಿನಿಮಾ ತಂಡ ಸದ್ಯದಲ್ಲೇ ರಿಲೀಸ್ ಡೇಟ್ ಅನೌನ್ಸ್ ಮಾಡಲಿದೆ.

You Will  Love   Like  These

Chitra Suddhi
daali uttarakhand kannada movie

ಡಾಲಿ ಧನಂಜಯ “ಉತ್ತರ ಕಾಂಡ”ದ ನಾಯಕ.

ವಿಜಯ್ ಕಿರಗಂದೂರು ಅರ್ಪಿಸುವ, ಕೆ.ಆರ್.ಜಿ ಸ್ಟುಡಿಯೋಸ್ ಲಾಂಛನದಲ್ಲಿ ಕಾರ್ತಿಕ್ ಹಾಗೂ ಯೋಗಿ ಜಿ ರಾಜ್ ನಿರ್ಮಿಸುತ್ತಿರುವ ” ಉತ್ತರಕಾಂಡ” ಚಿತ್ರದ ನಾಯಕನಾಗಿ ಡಾಲಿ ಧನಂಜಯ ಅಭಿನಯಿಸುತ್ತಿದ್ದಾರೆ. ಈ ಹಿಂದೆ ಕೆ.ಆರ್.ಜಿ ಸ್ಟುಡಿಯೋಸ್ ನಿರ್ಮಾಣದಲ್ಲಿ ಡಾಲಿ ಧನಂಜಯ ನಾಯಕನಾಗಿ ನಟಿಸಿದ್ದ “ರತ್ನನ ಪ್ರಪಂಚ” ಚಿತ್ರ ಸಹ ಪ್ರಚಂಡ ಯಶಸ್ಸು ಕಂಡಿತ್ತು.…

Chitra Suddhi
In the movie "December 24". Boys from Kunigal Taluk

“ಡಿಸೆಂಬರ್ 24” ಚಿತ್ರದಲ್ಲಿ ಹಾವಳಿ ಕೊಡೋಕೆ ಕುಣಿಗಲ್...

“ಡಿಸೆಂಬರ್ 24” ಚಿತ್ರದಲ್ಲಿ ಅನಿಲ್ ಗೌಡ್ರು, ಕುಮಾರ್ ಗೌಡ್ರು ಹಾಗೂ ಬೆಟ್ಟೇಗೌಡ್ರು ಖಡಕ್ ಖಳನಾಯಕರಾಗಿ ಅಭಿನಯಿಸಿದ್ದು, ಈ ಚಿತ್ರದಲ್ಲಿ ಇವರು ತುಂಬಾ ವಿಭಿನ್ನವಾದ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಈ ಚಿತ್ರದಲ್ಲಿ ನಾಯಕರ ಪಾತ್ರ ಎಷ್ಟು ಮುಖ್ಯನೋ ಹಾಗೆ ಖಳನಾಯಕರ ಪಾತ್ರಗಳು ಅಷ್ಟೇ ಮುಖ್ಯ. ಅದರಂತೆ ಖಳನಾಯಕರ ಆರ್ಭಟ ಜೋರಾಗೆ ಇರಲಿದೆ…

News
VXplore Banking & Competitive Exams Coaching Academy

ಅದು ಕೆಂಗೇರಿಯಲ್ಲಿ ಹೊಸದಾಗಿ ಶುರುವಾದ ಸ್ಪರ್ಧಾತ್ಮಕ ಪರೀಕ್ಷೆಗಳ...

ಸಾವಿರಾರು ವಿದ್ಯಾರ್ಥಿಗಳಿಗೆ ಭವಿಷ್ಯ ಕಟ್ಟಿಕೊಟ್ಟ ಪ್ರತಿಷ್ಠಿತ ವಿದ್ಯಾ ಸಂಸ್ಥೆಯ ನಿರ್ದೇಶಕರಾದ  ಚಂದ್ರ ಮೂರ್ತಿ ಯವರು ಇದರ ಸಂಸ್ಥಾಪಕರು. ಉತ್ತಮ ಮಟ್ಟದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಭೇತಿ ನೀಡುವ ಕಾರಣದಿಂದ ಈ VXplore Banking & Competitive Exams Coaching Academy. ತರಭೇತಿ ಕೇಂದ್ರವನ್ನು ತೆರೆದಿದ್ದಾರೆ. ಅದು ಆಕಾಕ್ಷಿ ವಿಧ್ಯಾರ್ಥಿಗಳಿಗೆ ಅವರ…

Chitra Suddhi
i am pregnant kannada movie censored ua

“ಐ ಆಮ್ ಪ್ರೆಗ್ನೆಂಟ್” ಚಿತ್ರವು ಸೆನ್ಸಾರ್ ಮಂಡಳಿಯಿಂದ...

“ಅನು ಸಿನಿಮಾಸ್” ಬ್ಯಾನರ್ ಅಡಿಯಲ್ಲಿ ತಯಾರಾಗುತ್ತಿರುವ “ಐ ಆಮ್ ಪ್ರೆಗ್ನೆಂಟ್” ಎಂಬ ಚಿತ್ರವನ್ನು ಸೆನ್ಸಾರ್ ಮಂಡಳಿಯಿಂದ ಉತ್ತಮ ಪ್ರತಿಕ್ರಿಯೆ ಪಡೆದಿದೆ . ಕೆಲವೇ ದಿನಗಳಲ್ಲಿ ಚಿತ್ರಮಂದಿರಕ್ಕೆ ಲಗ್ಗೆಯಿಡಲು ಚಿತ್ರತಂಡ ಎಲ್ಲ ತಯಾರಿ ಮಾಡಿಕೊಳ್ಳುತ್ತಿದ್ದಾರೆ . ಇದರಲ್ಲಿ ನುರಿತ ಕಲಾವಿದರು ಹಾಗೂ ನುರಿತ ತಂತ್ರಜ್ಞರು ಕೂಡ ಇದಕ್ಕೆ ಉತ್ತಮ ಬೆಂಬಲವನ್ನು…

Chitra Suddhi
90 bidi manig nadi song release

ನಾಳೆಯಿಂದ ನೈಂಟಿ ನಶೆ!

ಹಿರಿಯ ಹಾಸ್ಯ ನಟ ಬಿರಾದಾರ್ ಅಭಿನಯದ ಐನೂರನೇ ಚಿತ್ರ ಎಂಬ ಹಣೆಪಟ್ಟಿ ಹೊತ್ತುಕೊಂಡು ಆರಂಭದಿಂದಲೇ ಭರ್ಜರಿ ಸದ್ದು ಮಾಡುತ್ತಲೇ ಬಂದ ಚಿತ್ರ ’90 ಬಿಡಿ ಮನೀಗ್ ನಡಿ’. ಉತ್ತರ ಕರ್ನಾಟಕ ಶೈಲಿಯ ಕಾಮಿಡಿ ಕ್ರೈಂ ಥ್ರಿಲ್ಲರ್ ಕಥೆ ಎನ್ನುತ್ತಾ, ‘ಟೀಸರ್’ ಮೂಲಕ ಚಿತ್ರ ಭರವಸೆ ಮೂಡಿಸಿತ್ತು. ಇದೀಗ ಚಿತ್ರತಂಡ…