ಪ್ರಥಮ್ ಅಭಿನಯದ “ಫಸ್ಟ್ ನೈಟ್ ವಿತ್ ದೆವ್ವ” ಚಿತ್ರಕ್ಕೆ ಚಾಲನೆ .

Pratham starrer First Night with Devva

“ಬಿಗ್ ಬಾಸ್” ಮೂಲಕ ಜನಪ್ರಿಯರಾದ ನಟ ಪ್ರಥಮ್ ನಾಯಕನಾಗಿ ಅಭಿನಯಿಸುತ್ತಿರುವ, ಪಿ.ವಿ.ಆರ್ ಸ್ವಾಮಿ ಗೂಗಾರದೊಡ್ಡಿ ನಿರ್ದೇಶನದ “ಫಸ್ಟ್ ನೈಟ್ ವಿತ್ ದೆವ್ವ” ಚಿತ್ರದ ಮುಹೂರ್ತ ಸಮಾರಂಭ ಬಂಡೆ ಮಹಾಂಕಾಳಿ ದೇವಸ್ಥಾನದಲ್ಲಿ ನೆರವೇರಿತು. ಹಿರಿಯನಟ ಶ್ರೀನಿವಾಸಮೂರ್ತಿ ಚಿತ್ರದ ಮೊದಲ ಸನ್ನಿವೇಶಕ್ಕೆ ಆರಂಭ ಫಲಕ ತೋರಿದರು. ನಂತರ ಪತ್ರಿಕಾಗೋಷ್ಠಿಯಲ್ಲಿ ಚಿತ್ರತಂಡದ ಸದಸ್ಯರು ಮಾತನಾಡಿದರು.Pratham starrer First Night with Devva

“ಫಸ್ಟ್ ನೈಟ್ ವಿತ್ ದೆವ್ವ” ಹಾರಾರ್ ವಿತ್ ಕಾಮಿಡಿ ಜಾನರ್ ನ ಚಿತ್ರ ಎಂದು ಮಾತನಾಡಿದ ನಾಯಕ ಪ್ರಥಮ್, ಈ ಚಿತ್ರಕ್ಕೆ ನಾನೇ ಕಥೆ ಬರೆದಿದ್ದೇನೆ. ನಾನು ಈ ಚಿತ್ರಕ್ಕೆ ಕಥೆ ಬರೆಯಲು “ವಿಕ್ರಮ್ ಮತ್ತು ಬೇತಾಳ” ಕಥೆ ಸ್ಪೂರ್ತಿ. ಸಾಕಷ್ಟು ಹಾರಾರ್ ಚಿತ್ರ ಬಂದಿದೆ. ಆದರೆ ನಾವು ಸ್ವಲ್ಪ ವಿಭಿನ್ನವಾಗಿ ತೋರಿಸುತ್ತಿದ್ದೇವೆ‌. ನಿಖಿತ ಅವರು ನನ್ನ ಪತ್ನಿ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಹಿರಿಯ ನಟರಾದ ಶ್ರೀನಿವಾಸಮೂರ್ತಿ, ಸಂಗೀತಾ, ಹರೀಶ್ ರಾಜ್, ತನುಜಾ ಮುಂತಾದವರು ಪ್ರಮುಖ ತಾರಾಬಳಗದಲ್ಲಿದ್ದಾರೆ. ಮಾನ್ಯ ಸಿಂಗ್ ದೆವ್ವದ ಪಾತ್ರ ಮಾಡುತ್ತಿದ್ದಾರೆ. ನನ್ನ ಸ್ನೇಹಿತ ನವೀನ್ ಈ ಚಿತ್ರ ನಿರ್ಮಿಸುತ್ತಿದ್ದಾರೆ ಎಂದು ತಿಳಿಸಿದರು.Pratham starrer First Night with Devva

ಪ್ರಥಮ್ ಬರೆದಿರುವ ಕಥೆ ಚೆನ್ನಾಗಿದೆ. ನಾನು ಛಾಯಾಗ್ರಹಣದೊಂದಿಗೆ ನಿರ್ದೇಶನವನ್ನು ಮಾಡುತ್ತಿದ್ದೇನೆ‌. ಇಂದಿನಿಂದ ಬೆಂಗಳೂರಿನಲ್ಲಿ ಚಿತ್ರೀಕರಣ ಆರಂಭವಾಗಿದೆ. ಹಾಡಿನ ಚಿತ್ರೀಕರಣ ಹೊರದೇಶದಲ್ಲಿ ನಡೆಯಲಿದೆ ಎಂದರು ನಿರ್ದೇಶಕ ಪಿ.ವಿ.ಆರ್ ಸ್ವಾಮಿ.

ಪ್ರೀತಿಸುವವರನ್ನು ಪಡೆಯುವುದು ಕಠಿಣ , ಅದಕ್ಕೂ ಕಠಿಣ ಕೆಡದಂತೆ ಪ್ರೀತಿಯ ಕಾಯ್ದುಕೊಂಡು ಹೋಗುವುದು

Pratham starrer First Night with Devva

ಚಿತ್ರದ ನಾಯಕಿರಾದ ನಿಖಿತ ಹಾಗೂ ಮಾನ್ಯ ಸಿಂಗ್, ಪ್ರಮುಖಪಾತ್ರದಲ್ಲಿ ಅಭಿನಯಿಸುತ್ತಿರುವ ಶ್ರೀನಿವಾಸಮೂರ್ತಿ, ಸಂಗೀತ, ಹರೀಶ್ ರಾಜ್ ತಮ್ಮ ಪಾತ್ರದ ಕುರಿತು ಮಾಹಿತಿ ನೀಡಿದರು. ಸಂಗೀತ ನಿರ್ದೇಶಕ ಅದ್ವಿಕ್ ವರ್ಮ ಹಾಗೂ ಸಂಭಾಷಣೆ ಬರೆದು ಸಂಕಲನ ಕಾರ್ಯವನ್ನು ಮಾಡುತ್ತಿರುವ ನಾಗೇಶ್ ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.Pratham starrer First Night with Devva

You Will  Love   Like  These

Chitra Suddhi
daali uttarakhand kannada movie

ಡಾಲಿ ಧನಂಜಯ “ಉತ್ತರ ಕಾಂಡ”ದ ನಾಯಕ.

ವಿಜಯ್ ಕಿರಗಂದೂರು ಅರ್ಪಿಸುವ, ಕೆ.ಆರ್.ಜಿ ಸ್ಟುಡಿಯೋಸ್ ಲಾಂಛನದಲ್ಲಿ ಕಾರ್ತಿಕ್ ಹಾಗೂ ಯೋಗಿ ಜಿ ರಾಜ್ ನಿರ್ಮಿಸುತ್ತಿರುವ ” ಉತ್ತರಕಾಂಡ” ಚಿತ್ರದ ನಾಯಕನಾಗಿ ಡಾಲಿ ಧನಂಜಯ ಅಭಿನಯಿಸುತ್ತಿದ್ದಾರೆ. ಈ ಹಿಂದೆ ಕೆ.ಆರ್.ಜಿ ಸ್ಟುಡಿಯೋಸ್ ನಿರ್ಮಾಣದಲ್ಲಿ ಡಾಲಿ ಧನಂಜಯ ನಾಯಕನಾಗಿ ನಟಿಸಿದ್ದ “ರತ್ನನ ಪ್ರಪಂಚ” ಚಿತ್ರ ಸಹ ಪ್ರಚಂಡ ಯಶಸ್ಸು ಕಂಡಿತ್ತು.…

Chitra Suddhi
In the movie "December 24". Boys from Kunigal Taluk

“ಡಿಸೆಂಬರ್ 24” ಚಿತ್ರದಲ್ಲಿ ಹಾವಳಿ ಕೊಡೋಕೆ ಕುಣಿಗಲ್...

“ಡಿಸೆಂಬರ್ 24” ಚಿತ್ರದಲ್ಲಿ ಅನಿಲ್ ಗೌಡ್ರು, ಕುಮಾರ್ ಗೌಡ್ರು ಹಾಗೂ ಬೆಟ್ಟೇಗೌಡ್ರು ಖಡಕ್ ಖಳನಾಯಕರಾಗಿ ಅಭಿನಯಿಸಿದ್ದು, ಈ ಚಿತ್ರದಲ್ಲಿ ಇವರು ತುಂಬಾ ವಿಭಿನ್ನವಾದ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಈ ಚಿತ್ರದಲ್ಲಿ ನಾಯಕರ ಪಾತ್ರ ಎಷ್ಟು ಮುಖ್ಯನೋ ಹಾಗೆ ಖಳನಾಯಕರ ಪಾತ್ರಗಳು ಅಷ್ಟೇ ಮುಖ್ಯ. ಅದರಂತೆ ಖಳನಾಯಕರ ಆರ್ಭಟ ಜೋರಾಗೆ ಇರಲಿದೆ…

News
VXplore Banking & Competitive Exams Coaching Academy

ಅದು ಕೆಂಗೇರಿಯಲ್ಲಿ ಹೊಸದಾಗಿ ಶುರುವಾದ ಸ್ಪರ್ಧಾತ್ಮಕ ಪರೀಕ್ಷೆಗಳ...

ಸಾವಿರಾರು ವಿದ್ಯಾರ್ಥಿಗಳಿಗೆ ಭವಿಷ್ಯ ಕಟ್ಟಿಕೊಟ್ಟ ಪ್ರತಿಷ್ಠಿತ ವಿದ್ಯಾ ಸಂಸ್ಥೆಯ ನಿರ್ದೇಶಕರಾದ  ಚಂದ್ರ ಮೂರ್ತಿ ಯವರು ಇದರ ಸಂಸ್ಥಾಪಕರು. ಉತ್ತಮ ಮಟ್ಟದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಭೇತಿ ನೀಡುವ ಕಾರಣದಿಂದ ಈ VXplore Banking & Competitive Exams Coaching Academy. ತರಭೇತಿ ಕೇಂದ್ರವನ್ನು ತೆರೆದಿದ್ದಾರೆ. ಅದು ಆಕಾಕ್ಷಿ ವಿಧ್ಯಾರ್ಥಿಗಳಿಗೆ ಅವರ…

Chitra Suddhi
90 bidi manig nadi song release

ನಾಳೆಯಿಂದ ನೈಂಟಿ ನಶೆ!

ಹಿರಿಯ ಹಾಸ್ಯ ನಟ ಬಿರಾದಾರ್ ಅಭಿನಯದ ಐನೂರನೇ ಚಿತ್ರ ಎಂಬ ಹಣೆಪಟ್ಟಿ ಹೊತ್ತುಕೊಂಡು ಆರಂಭದಿಂದಲೇ ಭರ್ಜರಿ ಸದ್ದು ಮಾಡುತ್ತಲೇ ಬಂದ ಚಿತ್ರ ’90 ಬಿಡಿ ಮನೀಗ್ ನಡಿ’. ಉತ್ತರ ಕರ್ನಾಟಕ ಶೈಲಿಯ ಕಾಮಿಡಿ ಕ್ರೈಂ ಥ್ರಿಲ್ಲರ್ ಕಥೆ ಎನ್ನುತ್ತಾ, ‘ಟೀಸರ್’ ಮೂಲಕ ಚಿತ್ರ ಭರವಸೆ ಮೂಡಿಸಿತ್ತು. ಇದೀಗ ಚಿತ್ರತಂಡ…

Chitra Suddhi
i am pregnant kannada movie censored ua

“ಐ ಆಮ್ ಪ್ರೆಗ್ನೆಂಟ್” ಚಿತ್ರವು ಸೆನ್ಸಾರ್ ಮಂಡಳಿಯಿಂದ...

“ಅನು ಸಿನಿಮಾಸ್” ಬ್ಯಾನರ್ ಅಡಿಯಲ್ಲಿ ತಯಾರಾಗುತ್ತಿರುವ “ಐ ಆಮ್ ಪ್ರೆಗ್ನೆಂಟ್” ಎಂಬ ಚಿತ್ರವನ್ನು ಸೆನ್ಸಾರ್ ಮಂಡಳಿಯಿಂದ ಉತ್ತಮ ಪ್ರತಿಕ್ರಿಯೆ ಪಡೆದಿದೆ . ಕೆಲವೇ ದಿನಗಳಲ್ಲಿ ಚಿತ್ರಮಂದಿರಕ್ಕೆ ಲಗ್ಗೆಯಿಡಲು ಚಿತ್ರತಂಡ ಎಲ್ಲ ತಯಾರಿ ಮಾಡಿಕೊಳ್ಳುತ್ತಿದ್ದಾರೆ . ಇದರಲ್ಲಿ ನುರಿತ ಕಲಾವಿದರು ಹಾಗೂ ನುರಿತ ತಂತ್ರಜ್ಞರು ಕೂಡ ಇದಕ್ಕೆ ಉತ್ತಮ ಬೆಂಬಲವನ್ನು…