ಹೊಸಪೇಟೆಯಲ್ಲಿ ಅದ್ದೂರಿಯಾಗಿ ನೆರವೇರಿತು ಹೊಂಬಾಳೆ ಫಿಲಂಸ್ ನಿರ್ಮಾಣದ “ಯುವ” ಚಿತ್ರದ ಪ್ರೀ ರಿಲೀಸ್ ಇವೆಂಟ್ .

pre-release event of Yuva

ಯುವ ರಾಜಕುಮಾರ್ ನಾಯಕರಾಗಿ ನಟಿಸಿರುವ ಈ ಚಿತ್ರಕ್ಕೆ ಸಂತೋಷ್ ಆನಂದರಾಮ್ ನಿರ್ದೇಶನ . pre-release event of Yuva

“ರಾಜಕುಮಾರ”, “ಕೆಜಿಎಫ್”, ” ಕಾಂತಾರ” ದಂತಹ ಜನಪ್ರಿಯ ಚಿತ್ರಗಳನ್ನು ನಿರ್ಮಾಣ ಮಾಡಿರುವ ಹೊಂಬಾಳೆ ಫಿಲಂಸ್ ಮೂಲಕ ವಿಜಯ್ ಕಿರಗಂದೂರ್ ಅವರು ನಿರ್ಮಿಸಿರುವ “ಯುವ” ಚಿತ್ರದ ಪ್ರೀ ರಿಲೀಸ್ ಇವೆಂಟ್ ಇತ್ತೀಚಿಗೆ ಹೊಸಪೇಟೆಯಲ್ಲಿ ಅದ್ದೂರಿಯಾಗಿ ನೆರವೇರಿತು. ಯುವ ರಾಜಕುಮಾರ್ ಈ ಚಿತ್ರದ ಮೂಲಕ ನಾಯಕರಾಗಿ ಚಿತ್ರರಂಗ ಪ್ರವೇಶಿಸುತ್ತಿದ್ದಾರೆ. ಸಂತೋಷ್ ಆನಂದರಾಮ್ ನಿರ್ದೇಶಿಸಿದ್ದಾರೆ.pre-release event of Yuva

ಹೊಸಪೇಟೆಯ ಪುನೀತ್ ರಾಜಕುಮಾರ್ ಮೈದಾನದಲ್ಲಿ ಅದ್ದೂರಿಯಾಗಿ ಈ ವರ್ಣರಂಜಿತ ಸಮಾರಂಭ ನಡೆಯಿತು. ರಾಘವೇಂದ್ರ ರಾಜಕುಮಾರ್, ಮಂಗಳ ರಾಘವೇಂದ್ರ ರಾಜಕುಮಾರ್, ಅಶ್ವಿನಿ ಪುನೀತ್ ರಾಜಕುಮಾರ್, ವಿನಯ್ ರಾಜಕುಮಾರ್, ನಿರ್ಮಾಪಕ ವಿಜಯ್ ಕಿರಗಂದೂರ್, ನಿರ್ದೇಶಕ ಸಂತೋಷ್ ಆನಂದರಾಮ್, ನಾಯಕ ಯುವ ರಾಜಕುಮಾರ್, ಚಿತ್ರದಲ್ಲಿ ನಟಿಸಿರುವ ಅಚ್ಯುತಕುಮಾರ್, ಸುಧಾರಾಣಿ, ಹಿತ, ಗಿರಿರಾಜ್, ರಾಘು ಶಿವಮೊಗ್ಗ ಮುಂತಾದವರು ಭಾಗವಹಿಸಿದ್ದರು. ಚಿತ್ರದ ಅನೇಕ ತಂತ್ರಜ್ಞರು ಸಹ ಉಪಸ್ಥಿತರಿದ್ದರು.pre-release event of Yuva

“ಯುವ” ಚಿತ್ರ ಆಗಲು ಅಶ್ವಿನಿ ಪುನೀತ್ ರಾಜಕುಮಾರ್ ಅವರೆ ಕಾರಣ.‌ ಅವರು ವಿಜಯ್ ಕಿರಗಂದೂರ್ ಅವರಿಗೆ ಫೋನ್ ಮಾಡಿ ನಮ್ಮ ಗುರು(ಯುವ ರಾಜಕುಮಾರ್)” ವನ್ನು ನಿಮ್ಮ ಸಂಸ್ಥೆಯ ಮೂಲಕ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿಸಿ ಎಂದರು. ವಿಜಯ್ ಕಿರಗಂದೂರ್ ಅವರು ಒಪ್ಪಿ ಈ ಚಿತ್ರ ನಿರ್ಮಾಣ ಮಾಡಿದರು. ಯುವ ರಾಜಕುಮಾರ್ ಕೂಡ ಈ ಚಿತ್ರಕ್ಕಾಗಿ ಸಾಕಷ್ಟು ಶ್ರಮ ಪಟ್ಟಿದ್ದಾರೆ. ಯುವ ಅವರು ಓಡುವ ಸನ್ನಿವೇಶವನ್ನು ಚಿತ್ರದ ಮೊದಲ ಸನ್ನಿವೇಶವಾಗಿ ಚಿತ್ರಿಸಿಕೊಳ್ಳಲಾಗಿದೆ. ಕಾರಣ, ಯುವ ಅವರು ಯಾವಾಗಲೂ ಚಿತ್ರರಂಗದಲ್ಲಿ ಓಡುವ ಕುದುರೆಯಾಗಿರಲಿ ಎಂದು. ಇನ್ನು ನನ್ನ ಚಿತ್ರತಂಡದ ಸಹಕಾರದಿಂದ ಈ ಚಿತ್ರ ಉತ್ತಮವಾಗಿ ಮೂಡಿ ಬಂದಿದೆ. ಇದೇ ಮಾರ್ಚ್ 29 ರಂದು ಚಿತ್ರ ಬಿಡುಗಡೆಯಾಗಲಿದೆ. ಎಲ್ಲರೂ ಬಂದು ಚಿತ್ರ ನೋಡಿ ಪ್ರೋತ್ಸಾಹಿಸಿ. ಈ ಸಂದರ್ಭದಲ್ಲಿ ನಾನು ನಿರ್ಮಾಪಕ ವಿಜಯ್ ಕಿರಗಂದೂರ್ ಅವರಿಗೆ, ಅಶ್ವಿನಿ ಪುನೀತ್ ರಾಜಕುಮಾರ್ ಅವರಿಗೆ, ನನ್ನ ತಂಡಕ್ಕೆ ಹಾಗೂ ವಿಶೇಷವಾಗಿ ಪುನೀತ್ ರಾಜಕುಮಾರ್ ಅವರ ಅಭಿಮಾನಿಗಳಿಗೆ ಧನ್ಯವಾದ ತಿಳಿಸುತ್ತೇನೆ ಎಂದರು ನಿರ್ದೇಶಕ ಸಂತೋಷ್ ಆನಂದರಾಮ್.pre-release event of Yuva

ನಾನು ಮೊದಲು ನನ್ನ‌ ಚಿಕ್ಕಪ್ಪ ಪುನೀತ್ ರಾಜಕುಮಾರ್ ಹಾಗೂ ಚಿಕ್ಕಮ್ಮ ಪುನೀತ್ ರಾಜಕುಮಾರ್ ಅವರಿಗೆ ಧನ್ಯವಾದ ತಿಳಿಸುತ್ತೇನೆ ಎಂದು ಮಾತನಾಡಿದ ಯುವ ರಾಜಕುಮಾರ್, ಏಕೆಂದರೆ ನನ್ನನ್ನು ನಾಯಕನನ್ನಾಗಿ ಮಾಡಿ ಎಂದು ಅವರಿಬ್ಬರು ಹೊಂಬಾಳೆ ಫಿಲಂಸ್ ನ ವಿಜಯ್ ಕಿರಗಂದೂರ್ ಸರ್ ಗೆ ಹೇಳಿದ್ದಾರೆ. ಅವರಿಂದಲೇ ಸಾಕಷ್ಟು ಹಿಟ್ ಚಿತ್ರಗಳನ್ನು ಕೊಟ್ಟಿರುವ ಹೊಂಬಾಳೆ ಫಿಲಂಸ್ ನಿರ್ಮಾಣದ ಚಿತ್ರದಲ್ಲಿ ನಟಿಸಲು ಸಾಧ್ಯವಾಗಿದೆ. ನಿರ್ಮಾಪಕರಾದ ವಿಜಯ್ ಕಿರಗಂದೂರ್ ಹಾಗೂ ನಿರ್ದೇಶಕ ಸಂತೋಷ್ ಆನಂದರಾಮ್ ಅವರಿಗೂ ನಾನು ಚಿರ ಋಣಿ. ಈ ಚಿತ್ರಕ್ಕಾಗಿ ಸಾಕಷ್ಟು ತಯಾರಿ ಮಾಡಿಕೊಂಡಿದ್ದೆ. ಹಿರಿಯ ನಟರಾದ ಅಚ್ಯುತಕುಮಾರ್, ಸುಧಾರಾಣಿ ಮುಂತಾದವರಿಂದ ಸಾಕಷ್ಟು ಕಲಿತಿದ್ದೇನೆ‌. ನಾಯಕಿಯಾಗಿ ಸಪ್ತಮಿ ಗೌಡ ಅಭಿನಯಿಸಿದ್ದಾರೆ. ಇಡೀ ತಂಡದ ಶ್ರಮದಿಂದ ಚಿತ್ರ ಚೆನ್ನಾಗಿ ಬಂದಿದೆ. ನನ್ನ ಮೊದಲ ಚಿತ್ರಕ್ಕೆ ನಿಮ್ಮೆಲ್ಲರ ಹಾರೈಕೆ ಇರಲಿ ಎಂದರು.pre-release event of Yuva

ರಾಘವೇಂದ್ರ ರಾಜಕುಮಾರ್, ಅಶ್ವಿನಿ ಪುನೀತ್ ರಾಜಕುಮಾರ್, ವಿನಯ್ ರಾಜಕುಮಾರ್ ಮುಂತಾದವರು “ಯುವ” ಚಿತ್ರ ಯಶಸ್ವಿಯಾಗಲಿ ಎಂದು ಹಾರೈಸಿದರು. ಈ ಸಮಾರಂಭದಲ್ಲಿ ಕರ್ನಾಟಕದ ಹೆಸರಾಂತ ಕಲಾವಿದರ ಗಾಯನ, ನೃತ್ಯ ಮುಂತಾದ ಮನೋರಂಜನಾ ಕಾರ್ಯಕ್ರಮಗಳು ಸಹ ಅದ್ಭುತವಾಗಿ ಮೂಡಿಬಂತುpre-release event of Yuva

You Will  Love   Like  These

Chitra Suddhi
daali uttarakhand kannada movie

ಡಾಲಿ ಧನಂಜಯ “ಉತ್ತರ ಕಾಂಡ”ದ ನಾಯಕ.

ವಿಜಯ್ ಕಿರಗಂದೂರು ಅರ್ಪಿಸುವ, ಕೆ.ಆರ್.ಜಿ ಸ್ಟುಡಿಯೋಸ್ ಲಾಂಛನದಲ್ಲಿ ಕಾರ್ತಿಕ್ ಹಾಗೂ ಯೋಗಿ ಜಿ ರಾಜ್ ನಿರ್ಮಿಸುತ್ತಿರುವ ” ಉತ್ತರಕಾಂಡ” ಚಿತ್ರದ ನಾಯಕನಾಗಿ ಡಾಲಿ ಧನಂಜಯ ಅಭಿನಯಿಸುತ್ತಿದ್ದಾರೆ. ಈ ಹಿಂದೆ ಕೆ.ಆರ್.ಜಿ ಸ್ಟುಡಿಯೋಸ್ ನಿರ್ಮಾಣದಲ್ಲಿ ಡಾಲಿ ಧನಂಜಯ ನಾಯಕನಾಗಿ ನಟಿಸಿದ್ದ “ರತ್ನನ ಪ್ರಪಂಚ” ಚಿತ್ರ ಸಹ ಪ್ರಚಂಡ ಯಶಸ್ಸು ಕಂಡಿತ್ತು.…

News
VXplore Banking & Competitive Exams Coaching Academy

ಅದು ಕೆಂಗೇರಿಯಲ್ಲಿ ಹೊಸದಾಗಿ ಶುರುವಾದ ಸ್ಪರ್ಧಾತ್ಮಕ ಪರೀಕ್ಷೆಗಳ...

ಸಾವಿರಾರು ವಿದ್ಯಾರ್ಥಿಗಳಿಗೆ ಭವಿಷ್ಯ ಕಟ್ಟಿಕೊಟ್ಟ ಪ್ರತಿಷ್ಠಿತ ವಿದ್ಯಾ ಸಂಸ್ಥೆಯ ನಿರ್ದೇಶಕರಾದ  ಚಂದ್ರ ಮೂರ್ತಿ ಯವರು ಇದರ ಸಂಸ್ಥಾಪಕರು. ಉತ್ತಮ ಮಟ್ಟದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಭೇತಿ ನೀಡುವ ಕಾರಣದಿಂದ ಈ VXplore Banking & Competitive Exams Coaching Academy. ತರಭೇತಿ ಕೇಂದ್ರವನ್ನು ತೆರೆದಿದ್ದಾರೆ. ಅದು ಆಕಾಕ್ಷಿ ವಿಧ್ಯಾರ್ಥಿಗಳಿಗೆ ಅವರ…

Chitra Suddhi
In the movie "December 24". Boys from Kunigal Taluk

“ಡಿಸೆಂಬರ್ 24” ಚಿತ್ರದಲ್ಲಿ ಹಾವಳಿ ಕೊಡೋಕೆ ಕುಣಿಗಲ್...

“ಡಿಸೆಂಬರ್ 24” ಚಿತ್ರದಲ್ಲಿ ಅನಿಲ್ ಗೌಡ್ರು, ಕುಮಾರ್ ಗೌಡ್ರು ಹಾಗೂ ಬೆಟ್ಟೇಗೌಡ್ರು ಖಡಕ್ ಖಳನಾಯಕರಾಗಿ ಅಭಿನಯಿಸಿದ್ದು, ಈ ಚಿತ್ರದಲ್ಲಿ ಇವರು ತುಂಬಾ ವಿಭಿನ್ನವಾದ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಈ ಚಿತ್ರದಲ್ಲಿ ನಾಯಕರ ಪಾತ್ರ ಎಷ್ಟು ಮುಖ್ಯನೋ ಹಾಗೆ ಖಳನಾಯಕರ ಪಾತ್ರಗಳು ಅಷ್ಟೇ ಮುಖ್ಯ. ಅದರಂತೆ ಖಳನಾಯಕರ ಆರ್ಭಟ ಜೋರಾಗೆ ಇರಲಿದೆ…

Chitra Suddhi
90 bidi manig nadi song release

ನಾಳೆಯಿಂದ ನೈಂಟಿ ನಶೆ!

ಹಿರಿಯ ಹಾಸ್ಯ ನಟ ಬಿರಾದಾರ್ ಅಭಿನಯದ ಐನೂರನೇ ಚಿತ್ರ ಎಂಬ ಹಣೆಪಟ್ಟಿ ಹೊತ್ತುಕೊಂಡು ಆರಂಭದಿಂದಲೇ ಭರ್ಜರಿ ಸದ್ದು ಮಾಡುತ್ತಲೇ ಬಂದ ಚಿತ್ರ ’90 ಬಿಡಿ ಮನೀಗ್ ನಡಿ’. ಉತ್ತರ ಕರ್ನಾಟಕ ಶೈಲಿಯ ಕಾಮಿಡಿ ಕ್ರೈಂ ಥ್ರಿಲ್ಲರ್ ಕಥೆ ಎನ್ನುತ್ತಾ, ‘ಟೀಸರ್’ ಮೂಲಕ ಚಿತ್ರ ಭರವಸೆ ಮೂಡಿಸಿತ್ತು. ಇದೀಗ ಚಿತ್ರತಂಡ…

Chitra Suddhi
i am pregnant kannada movie censored ua

“ಐ ಆಮ್ ಪ್ರೆಗ್ನೆಂಟ್” ಚಿತ್ರವು ಸೆನ್ಸಾರ್ ಮಂಡಳಿಯಿಂದ...

“ಅನು ಸಿನಿಮಾಸ್” ಬ್ಯಾನರ್ ಅಡಿಯಲ್ಲಿ ತಯಾರಾಗುತ್ತಿರುವ “ಐ ಆಮ್ ಪ್ರೆಗ್ನೆಂಟ್” ಎಂಬ ಚಿತ್ರವನ್ನು ಸೆನ್ಸಾರ್ ಮಂಡಳಿಯಿಂದ ಉತ್ತಮ ಪ್ರತಿಕ್ರಿಯೆ ಪಡೆದಿದೆ . ಕೆಲವೇ ದಿನಗಳಲ್ಲಿ ಚಿತ್ರಮಂದಿರಕ್ಕೆ ಲಗ್ಗೆಯಿಡಲು ಚಿತ್ರತಂಡ ಎಲ್ಲ ತಯಾರಿ ಮಾಡಿಕೊಳ್ಳುತ್ತಿದ್ದಾರೆ . ಇದರಲ್ಲಿ ನುರಿತ ಕಲಾವಿದರು ಹಾಗೂ ನುರಿತ ತಂತ್ರಜ್ಞರು ಕೂಡ ಇದಕ್ಕೆ ಉತ್ತಮ ಬೆಂಬಲವನ್ನು…