ಪುರಿ ಜಗನ್ನಾಥ್ ಹಾಗೂ ರಾಮ್ ಪೋತಿನೇನಿ ಸಿನಿಮಾದ ಅಪ್ ಡೇಟ್…ಸೆಟ್ಟೇರಿದ ಡಬಲ್ ಇಸ್ಮಾರ್ಟ್….2024ರ ಶಿವರಾತ್ರಿಗೆ ಚಿತ್ರ ರಿಲೀಸ್

Puri Jagannath and Ram Pothineni movie update... set double smart

ಉಸ್ತಾದ್ ರಾಮ್ ಪೋತಿನೇನಿ ಹಾಗೂ ಸೆನ್ಸೇಷನಲ್ ಡೈರೆಕ್ಟರ್ ಪುರಿ ಜಗನ್ನಾಥ್ ಮತ್ತೊಮ್ಮೆ ಒಂದಾಗಿರುವುದು ಗೊತ್ತೇ ಇದೆ. ಇಸ್ಮಾರ್ಟ್ ಶಂಕರ್ ಸಿನಿಮಾ ಮೂಲಕ ಮೋಡಿ ಮಾಡಿದ್ದ ಈ ಡೆಡ್ಲಿ ಕಾಂಬಿನೇಷನ್ ನಾಲ್ಕು ವರ್ಷದ ಬಳಿಕ ಸೀಕ್ವೆಲ್ ಗೆ ಕೈ ಹಾಕಿದ್ದಾರೆ. ರಾಮ್ ಹುಟ್ಟುಹಬ್ಬದ ಪ್ರಯುಕ್ತ ಟೈಟಲ್ ಹಾಗೂ ರಿಲೀಸ್ ಡೇಟ್ ಅನೌನ್ಸ್ ಮಾಡಲಾಗಿತ್ತು. ಇಂದು ಹೈದ್ರಾಬಾದ್ ನಲ್ಲಿ ಸಿನಿಮಾದ ಮುಹೂರ್ತ ಸಮಾರಂಭ ನೆರವೇರಿಸಲಾಗಿದೆ. ಚಾರ್ಮಿ ಡಬಲ್ ಇಸ್ಮಾರ್ಟ್ ಸಿನಿಮಾಗೆ ಕ್ಲಾಪ್ ಮಾಡಿದರೆ, ನಿರ್ದೇಶಕ ಪುರಿ ಜಗನ್ನಾಥ್ ಮೊದಲ ಶಾಟ್ ಗೆ ಆಕ್ಷನ್ ಕಟ್ ಹೇಳಿದರು.Puri Jagannath and Ram Pothineni movie update... set double smart

ಡಬಲ್ ಮಾಸ್ ಹಾಗೂ ಡಬಲ್ ಮನರಂಜನೆ ನೀಡಲು ಸಜ್ಜಾಗಿರುವ ಪುರಿ ಜಗನ್ನಾಥ್ ಡಬಲ್ ಇಸ್ಮಾರ್ಟ್ ಸಿನಿಮಾದ ಶೂಟಿಂಗ್ ಇದೇ ತಿಂಗಳ 12ರಿಂದ ಶುರುವಾಗಲಿದೆ. ಮುಂದಿನ ವರ್ಷ ಅಂದ್ರೆ 2024‌ ಮಾರ್ಚ್ 8 ರಂದು ಶಿವರಾತ್ರಿ ಹಬ್ಬಕ್ಕೆ ಈ ಚಿತ್ರ ತೆರೆಗೆ ಬರಲಿದೆ.Puri Jagannath and Ram Pothineni movie update... set double smart

ಪುರಿ ಜಗನ್ನಾಥ್ ಕಥೆ ಬರೆದು ನಿರ್ದೇಶಿಸುತ್ತಿರುವ ಡಬಲ್ ಇಸ್ಮಾರ್ಟ್ ಸಿನಿಮಾವನ್ನು ಪುರಿ ಕನೆಕ್ಟ್ಸ್ ನಡಿ ಚಾರ್ಮಿ ಕೌರ್ ಹಾಗೂ ಪುರಿ ಜಗನ್ನಾಥ್ ನಿರ್ಮಿಸುತ್ತಿದ್ದಾರೆ. ಲೈಗರ್ ಸಿನಿಮಾದಲ್ಲಿ ಖಳನಾಯಕ ಘರ್ಜಿಸಿದ್ದ ವಿಷು ರೆಡ್ಡಿ ಪುರಿ ಕನೆಕ್ಟ್ ಸಿಇಒ ಆಗಿ ಕೆಲಸ ಮಾಡುತ್ತಿದ್ದಾರೆ. ಭಾರೀ ಬಜೆಟ್ ನಲ್ಲಿ ತಯಾರಾಗುತ್ತಿರುವ ಈ ಸಿನಿಮಾ ತಾಂತ್ರಿಕವಾಗಿ ಶ್ರೀಮಂತಿಕೆಯಿಂದ ಕೂಡಿರಲಿದೆ.Puri Jagannath and Ram Pothineni movie update... set double smart

ಮುಂದಿನ ವರ್ಷದ ಶಿವರಾತ್ರಿ ಹಬ್ಬಕ್ಕೆ ಬಿಡುಗಡೆಯಾಗಲಿರುವ ಈ ಚಿತ್ರ ತೆಲುಗು, ತಮಿಳು, ಕನ್ನಡ, ಹಿಂದಿ ಹಾಗೂ‌ ಮಲಯಾಳಂ ಭಾಷೆಯಲ್ಲಿ ಮೂಡಿ ಬರಲಿದೆ. ಉಳಿದ ತಾರಾಬಳಗ ಹಾಗೂ ತಾಂತ್ರಿಕ ವರ್ಗದ ಮಾಹಿತಿಯನ್ನು ಶೀಘ್ರದಲ್ಲೇ ಘೋಷಣೆ ಮಾಡುವುದಾಗಿ ಚಿತ್ರತಂಡ ತಿಳಿಸಿದೆ.

You Will  Love   Like  These

Chitra Suddhi
daali uttarakhand kannada movie

ಡಾಲಿ ಧನಂಜಯ “ಉತ್ತರ ಕಾಂಡ”ದ ನಾಯಕ.

ವಿಜಯ್ ಕಿರಗಂದೂರು ಅರ್ಪಿಸುವ, ಕೆ.ಆರ್.ಜಿ ಸ್ಟುಡಿಯೋಸ್ ಲಾಂಛನದಲ್ಲಿ ಕಾರ್ತಿಕ್ ಹಾಗೂ ಯೋಗಿ ಜಿ ರಾಜ್ ನಿರ್ಮಿಸುತ್ತಿರುವ ” ಉತ್ತರಕಾಂಡ” ಚಿತ್ರದ ನಾಯಕನಾಗಿ ಡಾಲಿ ಧನಂಜಯ ಅಭಿನಯಿಸುತ್ತಿದ್ದಾರೆ. ಈ ಹಿಂದೆ ಕೆ.ಆರ್.ಜಿ ಸ್ಟುಡಿಯೋಸ್ ನಿರ್ಮಾಣದಲ್ಲಿ ಡಾಲಿ ಧನಂಜಯ ನಾಯಕನಾಗಿ ನಟಿಸಿದ್ದ “ರತ್ನನ ಪ್ರಪಂಚ” ಚಿತ್ರ ಸಹ ಪ್ರಚಂಡ ಯಶಸ್ಸು ಕಂಡಿತ್ತು.…

Chitra Suddhi
In the movie "December 24". Boys from Kunigal Taluk

“ಡಿಸೆಂಬರ್ 24” ಚಿತ್ರದಲ್ಲಿ ಹಾವಳಿ ಕೊಡೋಕೆ ಕುಣಿಗಲ್...

“ಡಿಸೆಂಬರ್ 24” ಚಿತ್ರದಲ್ಲಿ ಅನಿಲ್ ಗೌಡ್ರು, ಕುಮಾರ್ ಗೌಡ್ರು ಹಾಗೂ ಬೆಟ್ಟೇಗೌಡ್ರು ಖಡಕ್ ಖಳನಾಯಕರಾಗಿ ಅಭಿನಯಿಸಿದ್ದು, ಈ ಚಿತ್ರದಲ್ಲಿ ಇವರು ತುಂಬಾ ವಿಭಿನ್ನವಾದ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಈ ಚಿತ್ರದಲ್ಲಿ ನಾಯಕರ ಪಾತ್ರ ಎಷ್ಟು ಮುಖ್ಯನೋ ಹಾಗೆ ಖಳನಾಯಕರ ಪಾತ್ರಗಳು ಅಷ್ಟೇ ಮುಖ್ಯ. ಅದರಂತೆ ಖಳನಾಯಕರ ಆರ್ಭಟ ಜೋರಾಗೆ ಇರಲಿದೆ…

News
VXplore Banking & Competitive Exams Coaching Academy

ಅದು ಕೆಂಗೇರಿಯಲ್ಲಿ ಹೊಸದಾಗಿ ಶುರುವಾದ ಸ್ಪರ್ಧಾತ್ಮಕ ಪರೀಕ್ಷೆಗಳ...

ಸಾವಿರಾರು ವಿದ್ಯಾರ್ಥಿಗಳಿಗೆ ಭವಿಷ್ಯ ಕಟ್ಟಿಕೊಟ್ಟ ಪ್ರತಿಷ್ಠಿತ ವಿದ್ಯಾ ಸಂಸ್ಥೆಯ ನಿರ್ದೇಶಕರಾದ  ಚಂದ್ರ ಮೂರ್ತಿ ಯವರು ಇದರ ಸಂಸ್ಥಾಪಕರು. ಉತ್ತಮ ಮಟ್ಟದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಭೇತಿ ನೀಡುವ ಕಾರಣದಿಂದ ಈ VXplore Banking & Competitive Exams Coaching Academy. ತರಭೇತಿ ಕೇಂದ್ರವನ್ನು ತೆರೆದಿದ್ದಾರೆ. ಅದು ಆಕಾಕ್ಷಿ ವಿಧ್ಯಾರ್ಥಿಗಳಿಗೆ ಅವರ…

Chitra Suddhi
i am pregnant kannada movie censored ua

“ಐ ಆಮ್ ಪ್ರೆಗ್ನೆಂಟ್” ಚಿತ್ರವು ಸೆನ್ಸಾರ್ ಮಂಡಳಿಯಿಂದ...

“ಅನು ಸಿನಿಮಾಸ್” ಬ್ಯಾನರ್ ಅಡಿಯಲ್ಲಿ ತಯಾರಾಗುತ್ತಿರುವ “ಐ ಆಮ್ ಪ್ರೆಗ್ನೆಂಟ್” ಎಂಬ ಚಿತ್ರವನ್ನು ಸೆನ್ಸಾರ್ ಮಂಡಳಿಯಿಂದ ಉತ್ತಮ ಪ್ರತಿಕ್ರಿಯೆ ಪಡೆದಿದೆ . ಕೆಲವೇ ದಿನಗಳಲ್ಲಿ ಚಿತ್ರಮಂದಿರಕ್ಕೆ ಲಗ್ಗೆಯಿಡಲು ಚಿತ್ರತಂಡ ಎಲ್ಲ ತಯಾರಿ ಮಾಡಿಕೊಳ್ಳುತ್ತಿದ್ದಾರೆ . ಇದರಲ್ಲಿ ನುರಿತ ಕಲಾವಿದರು ಹಾಗೂ ನುರಿತ ತಂತ್ರಜ್ಞರು ಕೂಡ ಇದಕ್ಕೆ ಉತ್ತಮ ಬೆಂಬಲವನ್ನು…

Chitra Suddhi
90 bidi manig nadi song release

ನಾಳೆಯಿಂದ ನೈಂಟಿ ನಶೆ!

ಹಿರಿಯ ಹಾಸ್ಯ ನಟ ಬಿರಾದಾರ್ ಅಭಿನಯದ ಐನೂರನೇ ಚಿತ್ರ ಎಂಬ ಹಣೆಪಟ್ಟಿ ಹೊತ್ತುಕೊಂಡು ಆರಂಭದಿಂದಲೇ ಭರ್ಜರಿ ಸದ್ದು ಮಾಡುತ್ತಲೇ ಬಂದ ಚಿತ್ರ ’90 ಬಿಡಿ ಮನೀಗ್ ನಡಿ’. ಉತ್ತರ ಕರ್ನಾಟಕ ಶೈಲಿಯ ಕಾಮಿಡಿ ಕ್ರೈಂ ಥ್ರಿಲ್ಲರ್ ಕಥೆ ಎನ್ನುತ್ತಾ, ‘ಟೀಸರ್’ ಮೂಲಕ ಚಿತ್ರ ಭರವಸೆ ಮೂಡಿಸಿತ್ತು. ಇದೀಗ ಚಿತ್ರತಂಡ…