50ನೇ ಹೆಜ್ಜೆಯಲ್ಲಿ ಪುರುಷೋತ್ತಮ

ಕುಟುಂಬ ಸಮೇತ ನೋಡಬಹುದಾದ ಚಿತ್ರ ’ಪುರುಷೋತ್ತಮ’ ಯಶಸ್ವಿ 50 ದಿನಗಳನ್ನು ಪೂರೈಸಿದೆ. ಇದಕ್ಕಾಗಿ ನಾಯಕ ಮತ್ತು ನಿರ್ಮಾಪಕ ಜಿಮ್‌ರವಿ ಕಾರ್ಯಕ್ರಮವನ್ನು ಏರ್ಪಾಟು ಮಾಡಿದ್ದರು. ಇತ್ತೀಚೆಗಷ್ಟೇ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯಿಂದ ನೂತನವಾಗಿ ಆಯ್ಕೆಯಾದ ಅಧ್ಯಕ್ಷರು ಹಾಗೂ ಪದಾಧಿಕಾರಿಗಳಿಗೆ ಸನ್ಮಾನ ಮಾಡಲಾಯಿತು.WhatsApp Image 2022 06 27 at 5.51.15 PM

ಈ ಸಂದರ್ಭದಲ್ಲಿ ಅಧ್ಯಕ್ಷರಾದ ಬಾ.ಮ.ಹರೀಶ್ ಮಾತನಾಡಿ ಜಿಮ್ ರವಿರವರು ಬಹುಕಾಲದ ಗೆಳಯ. ಪರದೆ ಮೇಲೆ ಹೀರೋ ಅಲ್ಲದೆ ಯಾವಗಲೂ ಬೆಂಗಳೂರಿಗೆ ಹೀರೋ. ರವಿ ಅಂತ ಕರೆಯುವಾಗ ಗೊತ್ತಿಲ್ಲದಯೇ ಜಿಮ್ ಅಂತ ಸೇರಿಸಿಕೊಳ್ಳುತ್ತೇವೆ. ಅಂತಹ ಹೊಗಳಿಕೆಯನ್ನು ಸಂಪಾದಿಸಿದ್ದಾರೆ. ಮುಂದೆ ಇನ್ನಷ್ಟು ಎತ್ತರಕ್ಕೆ ಬೆಳೆಯಲಿ ಎಂದರು. ಕಾರ್ಯದರ್ಶಿ ಹಾಗೂ ನಟ ಜೈಜಗದೀಶ್ ನನಗೆ ರವಿ ಸಂಬಂದಿಕರಾಗುತ್ತೇಂದು ಹೇಳಿಕೊಂಡರು.WhatsApp Image 2022 06 27 at 5.51.13 PM

ಸಂಗೀತ ಸಂಯೋಜಕ ಶ್ರೀಧರ್‌ಸಂಭ್ರಮ್ ಗಾಯಕರುಗಳಿಂದ ಗೀತೆಯ ಸಾಲುಗಳನ್ನು ಹಾಡಿಸಿದರು. ಕತೆ ನನ್ನದಲ್ಲ ಅದಕ್ಕಾಗಿ ಇಲ್ಲಿಯವರೆಗೂ ಹೆಚ್ಚು ಮಾತನಾಡಿಲ್ಲ. ಯುವಕರು ಡ್ರಗ್ಸ್ ತೆಗೆದುಕೊಂಡರೆ ಏನೇನು ಅನಾಹುತಗಳು ಆಗುತ್ತದೆ ಎಂಬುದನ್ನು ಹೇಳಲಾಗಿದೆ ಎಂದು ಕಡಿಮೆ ಸಮಯ ತೆಗೆದುಕೊಂಡುದ್ದು ನಿರ್ದೇಶಕ ಎಸ್.ವಿ.ಅಮರ್‌ನಾಥ್. ನಾಯಕಿ ಅಪೂರ್ವ, ಸಂಕಲನಕಾರ ಅರ್ಜುನ್‌ಕಿಟ್ಟು, ಛಾಯಾಗ್ರಾಹಕ ಕುಮಾರ್ ಸೇರಿದಂತೆ ಸಣ್ಣ ಮಟ್ಟದಿಂದ ಕೆಲಸ ಮಾಡಿದವರೆಲ್ಲನ್ನು ಗುರುತಿಸಿ ಅವರುಗಳನ್ನು ವೇದಿಕೆಗೆ ಆಹ್ವಾನಿಸಿ ಫಲಕಗಳನ್ನು ನೀಡಿದ್ದು ರವಿರವರ ದೊಡ್ಡಗುಣಕ್ಕೆ ಸಾಕ್ಷಿಯಾಗಿತ್ತು.WhatsApp Image 2022 06 27 at 5.51.14 PM

ಗೀತಾ ಎನ್ನುವವರು ಚಿತ್ರವನ್ನು 19 ಬಾರಿ ವೀಕ್ಷಣೆ ಮಾಡಿದ್ದರಿಂದ ಅವರಿಗೆ ’ಅತ್ಯುತ್ತಮ ಪ್ರೇಕ್ಷಕಿ’ ಎಂದು ಸನ್ಮಾನ ಮಾಡಲಾಯಿತು. ಕಾಗಿನೆಲೆ ಮಠದ ಸ್ವಾಮಿಗಳು ಶುಭ ಹಾರೈಕೆಯ ಪತ್ರವನ್ನು ಕಳುಹಿಸಿಕೊಟ್ಟಿದ್ದರು. ಮೂರು ಗಂಟೆಗಳ ಕಾಲ ನಡೆದ ಕಾರ್ಯಕ್ರಮದಲ್ಲಿ ಎಲ್ಲರೂ ಹೊರಗೆ ಹೋಗದಂತೆ ಸಮಾರಂಭಕ್ಕೆ ಕಳೆ ತಂದುಕೊಟ್ಟರುWhatsApp Image 2022 06 27 at 5.51.16 PM

You Will  Love   Like  These

Chitra Suddhi
daali uttarakhand kannada movie

ಡಾಲಿ ಧನಂಜಯ “ಉತ್ತರ ಕಾಂಡ”ದ ನಾಯಕ.

ವಿಜಯ್ ಕಿರಗಂದೂರು ಅರ್ಪಿಸುವ, ಕೆ.ಆರ್.ಜಿ ಸ್ಟುಡಿಯೋಸ್ ಲಾಂಛನದಲ್ಲಿ ಕಾರ್ತಿಕ್ ಹಾಗೂ ಯೋಗಿ ಜಿ ರಾಜ್ ನಿರ್ಮಿಸುತ್ತಿರುವ ” ಉತ್ತರಕಾಂಡ” ಚಿತ್ರದ ನಾಯಕನಾಗಿ ಡಾಲಿ ಧನಂಜಯ ಅಭಿನಯಿಸುತ್ತಿದ್ದಾರೆ. ಈ ಹಿಂದೆ ಕೆ.ಆರ್.ಜಿ ಸ್ಟುಡಿಯೋಸ್ ನಿರ್ಮಾಣದಲ್ಲಿ ಡಾಲಿ ಧನಂಜಯ ನಾಯಕನಾಗಿ ನಟಿಸಿದ್ದ “ರತ್ನನ ಪ್ರಪಂಚ” ಚಿತ್ರ ಸಹ ಪ್ರಚಂಡ ಯಶಸ್ಸು ಕಂಡಿತ್ತು.…

Chitra Suddhi
In the movie "December 24". Boys from Kunigal Taluk

“ಡಿಸೆಂಬರ್ 24” ಚಿತ್ರದಲ್ಲಿ ಹಾವಳಿ ಕೊಡೋಕೆ ಕುಣಿಗಲ್...

“ಡಿಸೆಂಬರ್ 24” ಚಿತ್ರದಲ್ಲಿ ಅನಿಲ್ ಗೌಡ್ರು, ಕುಮಾರ್ ಗೌಡ್ರು ಹಾಗೂ ಬೆಟ್ಟೇಗೌಡ್ರು ಖಡಕ್ ಖಳನಾಯಕರಾಗಿ ಅಭಿನಯಿಸಿದ್ದು, ಈ ಚಿತ್ರದಲ್ಲಿ ಇವರು ತುಂಬಾ ವಿಭಿನ್ನವಾದ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಈ ಚಿತ್ರದಲ್ಲಿ ನಾಯಕರ ಪಾತ್ರ ಎಷ್ಟು ಮುಖ್ಯನೋ ಹಾಗೆ ಖಳನಾಯಕರ ಪಾತ್ರಗಳು ಅಷ್ಟೇ ಮುಖ್ಯ. ಅದರಂತೆ ಖಳನಾಯಕರ ಆರ್ಭಟ ಜೋರಾಗೆ ಇರಲಿದೆ…

News
VXplore Banking & Competitive Exams Coaching Academy

ಅದು ಕೆಂಗೇರಿಯಲ್ಲಿ ಹೊಸದಾಗಿ ಶುರುವಾದ ಸ್ಪರ್ಧಾತ್ಮಕ ಪರೀಕ್ಷೆಗಳ...

ಸಾವಿರಾರು ವಿದ್ಯಾರ್ಥಿಗಳಿಗೆ ಭವಿಷ್ಯ ಕಟ್ಟಿಕೊಟ್ಟ ಪ್ರತಿಷ್ಠಿತ ವಿದ್ಯಾ ಸಂಸ್ಥೆಯ ನಿರ್ದೇಶಕರಾದ  ಚಂದ್ರ ಮೂರ್ತಿ ಯವರು ಇದರ ಸಂಸ್ಥಾಪಕರು. ಉತ್ತಮ ಮಟ್ಟದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಭೇತಿ ನೀಡುವ ಕಾರಣದಿಂದ ಈ VXplore Banking & Competitive Exams Coaching Academy. ತರಭೇತಿ ಕೇಂದ್ರವನ್ನು ತೆರೆದಿದ್ದಾರೆ. ಅದು ಆಕಾಕ್ಷಿ ವಿಧ್ಯಾರ್ಥಿಗಳಿಗೆ ಅವರ…

Chitra Suddhi
i am pregnant kannada movie censored ua

“ಐ ಆಮ್ ಪ್ರೆಗ್ನೆಂಟ್” ಚಿತ್ರವು ಸೆನ್ಸಾರ್ ಮಂಡಳಿಯಿಂದ...

“ಅನು ಸಿನಿಮಾಸ್” ಬ್ಯಾನರ್ ಅಡಿಯಲ್ಲಿ ತಯಾರಾಗುತ್ತಿರುವ “ಐ ಆಮ್ ಪ್ರೆಗ್ನೆಂಟ್” ಎಂಬ ಚಿತ್ರವನ್ನು ಸೆನ್ಸಾರ್ ಮಂಡಳಿಯಿಂದ ಉತ್ತಮ ಪ್ರತಿಕ್ರಿಯೆ ಪಡೆದಿದೆ . ಕೆಲವೇ ದಿನಗಳಲ್ಲಿ ಚಿತ್ರಮಂದಿರಕ್ಕೆ ಲಗ್ಗೆಯಿಡಲು ಚಿತ್ರತಂಡ ಎಲ್ಲ ತಯಾರಿ ಮಾಡಿಕೊಳ್ಳುತ್ತಿದ್ದಾರೆ . ಇದರಲ್ಲಿ ನುರಿತ ಕಲಾವಿದರು ಹಾಗೂ ನುರಿತ ತಂತ್ರಜ್ಞರು ಕೂಡ ಇದಕ್ಕೆ ಉತ್ತಮ ಬೆಂಬಲವನ್ನು…

Chitra Suddhi
90 bidi manig nadi song release

ನಾಳೆಯಿಂದ ನೈಂಟಿ ನಶೆ!

ಹಿರಿಯ ಹಾಸ್ಯ ನಟ ಬಿರಾದಾರ್ ಅಭಿನಯದ ಐನೂರನೇ ಚಿತ್ರ ಎಂಬ ಹಣೆಪಟ್ಟಿ ಹೊತ್ತುಕೊಂಡು ಆರಂಭದಿಂದಲೇ ಭರ್ಜರಿ ಸದ್ದು ಮಾಡುತ್ತಲೇ ಬಂದ ಚಿತ್ರ ’90 ಬಿಡಿ ಮನೀಗ್ ನಡಿ’. ಉತ್ತರ ಕರ್ನಾಟಕ ಶೈಲಿಯ ಕಾಮಿಡಿ ಕ್ರೈಂ ಥ್ರಿಲ್ಲರ್ ಕಥೆ ಎನ್ನುತ್ತಾ, ‘ಟೀಸರ್’ ಮೂಲಕ ಚಿತ್ರ ಭರವಸೆ ಮೂಡಿಸಿತ್ತು. ಇದೀಗ ಚಿತ್ರತಂಡ…