ರಾಜ್ಯಾದ್ಯಂತ “ಪುರುಷೋತ್ತಮ”ನಿಗೆ ಉತ್ತಮ ಪ್ರತಿಕ್ರಿಯೆ. ಯಶಸ್ವಿ 50ನೇ ದಿನದತ್ತ ದಾಪುಗಾಲು.‌

ಕ್ರೀಡಾ ಕ್ಷೇತ್ರದಲ್ಲಿ ಭರ್ಜರಿ ಸಾಧನೆ ಮಾಡಿರುವ ಎ.ವಿ.ರವಿ, ಕನ್ನಡ ಚಿತ್ರರಂಗದಲ್ಲಿ ಜಿಮ್ ರವಿ ಎಂದೇ ಪರಿಚಿತ.

ಪ್ರಸ್ತುತ ಜಿಮ್ ರವಿ ನಾಯಕರಾಗಿ ನಟಿಸಿರುವ “ಪುರುಷೋತ್ತಮ” ಚಿತ್ರ ರಾಜ್ಯಾದ್ಯಂತ ಯಶಸ್ವಿ ಪ್ರದರ್ಶನ ಕಾಣುತ್ತಿದೆ. ಯಶಸ್ವಿ 6 ನೇ ವಾರ ಪೂರೈಸಿ 7ನೇ ವಾರದತ್ತ ದಾಪುಗಾಲು ಹಾಕಿದೆ. ಕೊರೋನ ನಂತರ ಹೊಸ ನಟನೊಬ್ಬನ ಚಿತ್ರಕ್ಕೆ ಇಷ್ಟು ಒಳ್ಳೆಯ ಪ್ರತಿಕ್ರಿಯೆ ದೊರಕುತ್ತಿರುವುದು ಇದೇ ಮೊದಲು.WhatsApp Image 2022 06 07 at 10.49.07 PM

ಕ್ರೀಡಾ ರಂಗದಲ್ಲಿ ಈವರೆಗೂ ಮುನ್ನೂರಕ್ಕೂ ಹೆಚ್ಚು ಚಿನ್ನದ ಪದಕ ಪಡೆದಿರುವ ಜಿಮ್ ರವಿ, ಬಾಡಿ ಬಿಲ್ಡಿಂಗ್ ನಲ್ಲಿ ಭಾರತ ತಂಡವನ್ನು ಪ್ರತಿನಿಧಿಸಿದ್ದಾರೆ ಹಾಗೂ ಭಾರತ ತಂಡದ ಕೋಚ್ ಆಗೂ ಕಾರ್ಯ ನಿರ್ವಹಿಸಿದ್ದಾರೆ. ದಕ್ಷಿಣ ಭಾರತದ ಖ್ಯಾತ ನಟರಿಗೆ ಜಿಮ್ ರವಿ ಟ್ರೈನರ್ ಕೂಡ ಆಗಿ ಹೆಸರು ಮಾಡಿದವರು.WhatsApp Image 2022 06 07 at 10.49.07 PM 1

ದಕ್ಷಿಣ ಭಾರತದ ಮೇರು ಕಲಾವಿದರೊಂದಿಗೆ ಕಾರ್ಯ ನಿರ್ವಹಿಸಿರುವ ಜಿಮ್ ರವಿ, ಕನ್ನಡ, ತೆಲುಗು ಸೇರಿದಂತೆ ವಿವಿಧ ಭಾಷೆಗಳಲ್ಲಿ 150ಕ್ಕೂ ಅಧಿಕ ಚಿತ್ರಗಳಲ್ಲಿ ನಟಿಸಿದ್ದಾರೆ. ಆದರೆ ನಾಯಕರಾಗಿ ಇದು ಮೊದಲ ಚಿತ್ರ.

ಚಿತ್ರ ನೋಡಿದವರಿಂದ ಪ್ರಶಂಸೆಯ ಮಹಾಪೂರವೇ ಹರಿದು ಬರುತ್ತಿದೆ.
ಅದರಲ್ಲೂ ಮಹಿಳಾ ಪ್ರೇಕ್ಷಕರಿಗೆ ಮನಸ್ಸಿಗೆ ತುಂಬಾ ಹತ್ತಿರವಾಗಿದೆ ಈ ಚಿತ್ರ. ಗಂಡ-ಹೆಂಡತಿ ಹೇಗೆ ಜೀವನ ನಡೆಸಬೇಕು ಹಾಗೂ ಡೈವರ್ಸ್ ಕುರಿತು ಈ ಚಿತ್ರದಲ್ಲಿ ಬಂದಿರುವ ಸಂದೇಶ ಹೆಂಗಳೆಯರ ಮನ ಗೆದ್ದಿದೆ. ಉತ್ತಮ ಕಥೆ ಆಯ್ಕೆ ಮಾಡಿಕೊಂಡಿರುವುದಕ್ಕೆ ಜನ ಜಿಮ್ ರವಿ ಅವರಿಗೆ ಅಭಿನಂದನೆ ತಿಳಿಸಿದ್ದಾರೆ.WhatsApp Image 2022 06 07 at 10.49.08 PM

ಇನ್ನೂ ಖುಷಿಯ ವಿಚಾರವೆಂದರೆ, ಚಿತ್ರ ನೋಡಿ ಸಂತೋಷಪಟ್ಟಿರುವ ಕಲರ್ಸ್ ವಾಹಿನಿ, ವೂಟ್ ಹಾಗೂ ಕಲರ್ಸ್ ಕನ್ನಡಕ್ಕಾಗಿ ಭಾರೀ ಮೊತ್ತಕ್ಕೆ ಈ ಚಿತ್ರದ ಡಿಜಿಟಲ್ ಹಕ್ಕನ್ನು ಖರೀದಿಸಿದ್ದಾರೆ. ಹೊಸ ನಟನೊಬ್ಬನ ಚಿತ್ರಕ್ಕೆ ಇಂತಹ ಮೊತ್ತ ದೊರಕಿರುವುದು ಇದೇ ಪ್ರಥಮಬಾರಿ ಎನ್ನುತ್ತಾರೆ ಜಿಮ್ ರವಿ.WhatsApp Image 2022 06 07 at 10.49.08 PM 1

ಜಿಮ್ ರವಿ ನಾಯಕರಾಗಷ್ಟೇ ಅಲ್ಲದೆ, ಈ ಚಿತ್ರದ ನಿರ್ಮಾಪಕರೂ ಹೌದು. ಅಪೂರ್ವ ಈ ಚಿತ್ರದ ನಾಯಕಿ. ಎ.ವಿ.ಹರೀಶ್, ಮೈಸೂರು ಪ್ರಭು, ಕ್ರಿಸ್ಟಿ ಹಿಮಾನುಯಲ್, ಕಿರಣ್, ಶರಣ್, ಅಂಕಿತ ಮೂರ್ತಿ
ಮುಂತಾದ ಕಲಾವಿದರು ಈ ಚಿತ್ರದಲ್ಲಿ ಅಭಿನಯಿಸಿದ್ದಾರೆ.‌

ಐವತ್ತನೇ ದಿನದ ಸಮಾರಂಭವನ್ನು ಅದ್ದೂರಿಯಾಗಿ ನಡೆಸಲು ಜಿಮ್ ರವಿ ತಯಾರಿ ನಡೆಸಿದ್ದಾರೆ. ಕನ್ನಡ, ತೆಲುಗು, ತಮಿಳು ಚಿತ್ರರಂಗದ ಸಾಕಷ್ಟು ಗಣ್ಯರು ಈ ಸಮಾರಂಭಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ. ಅದೇ ಸಂದರ್ಭದಲ್ಲಿ ಜಿಮ್ ರವಿ ತಮ್ಮ ಮುಂದಿನ ಚಿತ್ರದ ಘೋಷಣೆ ಮಾಡಲಿದ್ದಾರೆ.

ರವಿ ಸ್ ಜಿಮ್ ಪ್ರೊಡಕ್ಷನ್ಸ್ ಲಾಂಛನದಲ್ಲಿ ನಿರ್ಮಾಣವಾಗಿರುವ
ವಿಜಯ್ ರಾಮೇಗೌಡ ಈ ಚಿತ್ರ ಅರ್ಪಿಸಿದ್ದಾರೆ. ಅಮರನಾಥ್ ಎಸ್ ವಿ ಈ ಚಿತ್ರವನ್ನು ನಿರ್ದೇಶಿಸಿದ್ದಾರೆ. ಶ್ರೀಧರ್ ವಿ ಸಂಭ್ರಮ್ ಸಂಗೀತ ನಿರ್ದೇಶನ, ಕುಮಾರ್ ಛಾಯಾಗ್ರಹಣ, ಅರ್ಜುನ್ ಕಿಟ್ಟು ಸಂಕಲನ ಹಾಗೂ ಕಲೈ ನೃತ್ಯ ನಿರ್ದೇಶನ ಈ ಚಿತ್ರಕ್ಕಿದೆ.

You Will  Love   Like  These

Chitra Suddhi
daali uttarakhand kannada movie

ಡಾಲಿ ಧನಂಜಯ “ಉತ್ತರ ಕಾಂಡ”ದ ನಾಯಕ.

ವಿಜಯ್ ಕಿರಗಂದೂರು ಅರ್ಪಿಸುವ, ಕೆ.ಆರ್.ಜಿ ಸ್ಟುಡಿಯೋಸ್ ಲಾಂಛನದಲ್ಲಿ ಕಾರ್ತಿಕ್ ಹಾಗೂ ಯೋಗಿ ಜಿ ರಾಜ್ ನಿರ್ಮಿಸುತ್ತಿರುವ ” ಉತ್ತರಕಾಂಡ” ಚಿತ್ರದ ನಾಯಕನಾಗಿ ಡಾಲಿ ಧನಂಜಯ ಅಭಿನಯಿಸುತ್ತಿದ್ದಾರೆ. ಈ ಹಿಂದೆ ಕೆ.ಆರ್.ಜಿ ಸ್ಟುಡಿಯೋಸ್ ನಿರ್ಮಾಣದಲ್ಲಿ ಡಾಲಿ ಧನಂಜಯ ನಾಯಕನಾಗಿ ನಟಿಸಿದ್ದ “ರತ್ನನ ಪ್ರಪಂಚ” ಚಿತ್ರ ಸಹ ಪ್ರಚಂಡ ಯಶಸ್ಸು ಕಂಡಿತ್ತು.…

Chitra Suddhi
In the movie "December 24". Boys from Kunigal Taluk

“ಡಿಸೆಂಬರ್ 24” ಚಿತ್ರದಲ್ಲಿ ಹಾವಳಿ ಕೊಡೋಕೆ ಕುಣಿಗಲ್...

“ಡಿಸೆಂಬರ್ 24” ಚಿತ್ರದಲ್ಲಿ ಅನಿಲ್ ಗೌಡ್ರು, ಕುಮಾರ್ ಗೌಡ್ರು ಹಾಗೂ ಬೆಟ್ಟೇಗೌಡ್ರು ಖಡಕ್ ಖಳನಾಯಕರಾಗಿ ಅಭಿನಯಿಸಿದ್ದು, ಈ ಚಿತ್ರದಲ್ಲಿ ಇವರು ತುಂಬಾ ವಿಭಿನ್ನವಾದ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಈ ಚಿತ್ರದಲ್ಲಿ ನಾಯಕರ ಪಾತ್ರ ಎಷ್ಟು ಮುಖ್ಯನೋ ಹಾಗೆ ಖಳನಾಯಕರ ಪಾತ್ರಗಳು ಅಷ್ಟೇ ಮುಖ್ಯ. ಅದರಂತೆ ಖಳನಾಯಕರ ಆರ್ಭಟ ಜೋರಾಗೆ ಇರಲಿದೆ…

News
VXplore Banking & Competitive Exams Coaching Academy

ಅದು ಕೆಂಗೇರಿಯಲ್ಲಿ ಹೊಸದಾಗಿ ಶುರುವಾದ ಸ್ಪರ್ಧಾತ್ಮಕ ಪರೀಕ್ಷೆಗಳ...

ಸಾವಿರಾರು ವಿದ್ಯಾರ್ಥಿಗಳಿಗೆ ಭವಿಷ್ಯ ಕಟ್ಟಿಕೊಟ್ಟ ಪ್ರತಿಷ್ಠಿತ ವಿದ್ಯಾ ಸಂಸ್ಥೆಯ ನಿರ್ದೇಶಕರಾದ  ಚಂದ್ರ ಮೂರ್ತಿ ಯವರು ಇದರ ಸಂಸ್ಥಾಪಕರು. ಉತ್ತಮ ಮಟ್ಟದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಭೇತಿ ನೀಡುವ ಕಾರಣದಿಂದ ಈ VXplore Banking & Competitive Exams Coaching Academy. ತರಭೇತಿ ಕೇಂದ್ರವನ್ನು ತೆರೆದಿದ್ದಾರೆ. ಅದು ಆಕಾಕ್ಷಿ ವಿಧ್ಯಾರ್ಥಿಗಳಿಗೆ ಅವರ…

Chitra Suddhi
i am pregnant kannada movie censored ua

“ಐ ಆಮ್ ಪ್ರೆಗ್ನೆಂಟ್” ಚಿತ್ರವು ಸೆನ್ಸಾರ್ ಮಂಡಳಿಯಿಂದ...

“ಅನು ಸಿನಿಮಾಸ್” ಬ್ಯಾನರ್ ಅಡಿಯಲ್ಲಿ ತಯಾರಾಗುತ್ತಿರುವ “ಐ ಆಮ್ ಪ್ರೆಗ್ನೆಂಟ್” ಎಂಬ ಚಿತ್ರವನ್ನು ಸೆನ್ಸಾರ್ ಮಂಡಳಿಯಿಂದ ಉತ್ತಮ ಪ್ರತಿಕ್ರಿಯೆ ಪಡೆದಿದೆ . ಕೆಲವೇ ದಿನಗಳಲ್ಲಿ ಚಿತ್ರಮಂದಿರಕ್ಕೆ ಲಗ್ಗೆಯಿಡಲು ಚಿತ್ರತಂಡ ಎಲ್ಲ ತಯಾರಿ ಮಾಡಿಕೊಳ್ಳುತ್ತಿದ್ದಾರೆ . ಇದರಲ್ಲಿ ನುರಿತ ಕಲಾವಿದರು ಹಾಗೂ ನುರಿತ ತಂತ್ರಜ್ಞರು ಕೂಡ ಇದಕ್ಕೆ ಉತ್ತಮ ಬೆಂಬಲವನ್ನು…

Chitra Suddhi
90 bidi manig nadi song release

ನಾಳೆಯಿಂದ ನೈಂಟಿ ನಶೆ!

ಹಿರಿಯ ಹಾಸ್ಯ ನಟ ಬಿರಾದಾರ್ ಅಭಿನಯದ ಐನೂರನೇ ಚಿತ್ರ ಎಂಬ ಹಣೆಪಟ್ಟಿ ಹೊತ್ತುಕೊಂಡು ಆರಂಭದಿಂದಲೇ ಭರ್ಜರಿ ಸದ್ದು ಮಾಡುತ್ತಲೇ ಬಂದ ಚಿತ್ರ ’90 ಬಿಡಿ ಮನೀಗ್ ನಡಿ’. ಉತ್ತರ ಕರ್ನಾಟಕ ಶೈಲಿಯ ಕಾಮಿಡಿ ಕ್ರೈಂ ಥ್ರಿಲ್ಲರ್ ಕಥೆ ಎನ್ನುತ್ತಾ, ‘ಟೀಸರ್’ ಮೂಲಕ ಚಿತ್ರ ಭರವಸೆ ಮೂಡಿಸಿತ್ತು. ಇದೀಗ ಚಿತ್ರತಂಡ…