ಜನಮನ ಗೆದ್ದ ರಾಘವೇಂದ್ರ ಸ್ಟೋರ್ಸ್

Raghavendra Stores won the public's attention.

ಒಂದು ಕಡೆ ಚುನಾವಣೆ. ಮತ್ತೊಂದು ಕಡೆ ಐಪಿಎಲ್ . ಇದರ ನಡುವೆ ಕಳೆದವಾರ ಬಿಡುಗಡೆಯಾದ ರಾಘವೇಂದ್ರ ಸ್ಟೋರ್ಸ್ ಚಿತ್ರ ರಾಜ್ಯಾದ್ಯಂತ ಯಶಸ್ವಿ ಪ್ರದರ್ಶನ ಕಾಣುತ್ತಿದೆ.‌ ಈ ಸಂತೋಷವನ್ನು ಚಿತ್ರತಂಡದ ಸದಸ್ಯರು ಮಾಧ್ಯಮದ ಮುಂದೆ ಹಂಚಿಕೊಂಡರು. ‌Raghavendra Stores won the public's attention.

ಚುನಾವಣೆ, ಐಪಿಎಲ್ ನಡುವೆ ಈ ಚಿತ್ರ ಬಿಡುಗಡೆ ಮಾಡುತ್ತಾರಾ? ಎಂದು ಎಷ್ಟೋ ಜನ‌ ಕೇಳುತ್ತಿದ್ದರು. ಆದರೆ ನಿರ್ಮಾಪಕ ವಿಜಯ್ ಕಿರಗಂದೂರ್ ಅವರು ಕಂಟೆಂಟ್ ಚೆನ್ನಾಗಿದ್ದರೆ ಜನ ಖಂಡಿತವಾಗಿ ನೋಡುತ್ತಾರೆ ಎಂಬ ನಂಬಿಕೆಯಿಂದ ಈ ಚಿತ್ರವನ್ನು ಬಿಡುಗಡೆ ಮಾಡಿದರು.‌ ಅವರ ಮಾತು ನಿಜವಾಯಿತು. ಜನ ನಮ್ಮ ಚಿತ್ರಕ್ಕೆ ತೋರುತ್ತಿರುವ ಮೆಚ್ಚುಗೆಗೆ ಮನತುಂಬಿ ಬಂದಿದೆ ಹಾಗೂ ಒಂದೊಳ್ಳೆಯ ತಂಡದ ಜೊತೆಗೆ ಕೆಲಸ ಮಾಡಿದ್ದು ಖುಷಿಯಾಗಿದೆ‌. ರಾಯರ ಹೆಸರಿನ ಈ ಚಿತ್ರಕ್ಕೆ ರಾಯರೆ ಯಶಸ್ಸು ನೀಡುತ್ತಿದ್ದಾರೆ ಎಂದರು ನಾಯಕ ಜಗ್ಗೇಶ್.

ನಾವು ಈ ಸಿನಿಮಾ ಬಿಡುಗಡೆಗೂ ಹತ್ತು ದಿನಗಳ ಮುಂಚೆ ಪ್ರಮೋಷನ್ ಶುರು ಮಾಡಿದ್ದು. ಆನಂತರ ಬಿಡುಗಡೆಯಾದ ಟ್ರೇಲರ್ ಹಾಗೂ ಹಾಡಿಗೆ ಒಳ್ಳೆಯ ರೆಸ್ಪಾನ್ಸ್ ಬಂತು. ನನ್ನ ಈ ಹಿಂದಿನ‌ ಸಿನಿಮಾಗಳ ಜಾನರ್ ಬೇರೆ. ಈ ಸಿನಿಮಾ ಜಾನರ್‌ ಬೇರೆ. ಲೇಟ್ ಮ್ಯಾರೇಜ್ ಹಾಗೂ ಆನಂತರ ಅವರಿಗೆ ಮಕ್ಕಳಾಗದ ಸಮಸ್ಯೆ ಬಗ್ಗೆಗಿನ ಕಥಾಹಂದರವನ್ನು ಈ ಚಿತ್ರ ಹೊಂದಿದೆ. ಚಿತ್ರವನ್ನು ಜನ ಮೆಚ್ಚಿಕೊಂಡಿದ್ದಾರೆ. ಯಶಸ್ಸಿಗೆ ಕಾರಣರಾದ ನನ್ನ ತಂಡಕ್ಕೆ,‌ ನಿರ್ಮಾಣ ಮಾಡಿರುವ ಖ್ಯಾತ ಹೊಂಬಾಳೆ ಫಿಲಂಸ್ ನ ವಿಜಯ್ ಕಿರಗಂದೂರ್ ಅವರಿಗೆ ಹಾಗೂ ಜಗ್ಗೇಶ್ ಅವರ ಆದಿಯಾಗಿ ಚಿತ್ರದಲ್ಲಿ ‌ನಟಿಸಿರುವ ಎಲ್ಲಾ ಕಲಾವಿದರಿಗೆ ಧನ್ಯವಾದ ತಿಳಿಸುತ್ತೇನೆ ಎಂದರು ನಿರ್ದೇಶಕ ಸಂತೋಷ್ ಆನಂದರಾಮ್.Raghavendra Stores won the public's attention.

ಚಿತ್ರದಲ್ಲಿ ಅಭಿನಯಿಸಿರುವ ಶ್ವೇತ ಶ್ರೀವಾಸ್ತವ್, ದತ್ತಣ್ಣ, ಮಿತ್ರ, ರವಿಶಂಕರ್ ಗೌಡ, ಚಿತ್ಕಲಾ ಬಿರಾದಾರ್, ಕೆ.ಆರ್.ಜಿ ಸ್ಟುಡಿಯೋಸ್ ನ ಯೋಗಿ ಜಿ ರಾಜ್, ಸಂಗೀತ ನಿರ್ದೇಶಕ ಅಜನೀಶ್ ಲೋಕನಾಥ್, ಛಾಯಾಗ್ರಹಕ ಶ್ರೀಶ ಕುದುವಳ್ಳಿ ಮುಂತಾದವರು ಈ ಸಂದರ್ಭದಲ್ಲಿ ಚಿತ್ರದ ಕುರಿತು ಮಾತನಾಡಿದರು.

You Will  Love   Like  These

Chitra Suddhi
daali uttarakhand kannada movie

ಡಾಲಿ ಧನಂಜಯ “ಉತ್ತರ ಕಾಂಡ”ದ ನಾಯಕ.

ವಿಜಯ್ ಕಿರಗಂದೂರು ಅರ್ಪಿಸುವ, ಕೆ.ಆರ್.ಜಿ ಸ್ಟುಡಿಯೋಸ್ ಲಾಂಛನದಲ್ಲಿ ಕಾರ್ತಿಕ್ ಹಾಗೂ ಯೋಗಿ ಜಿ ರಾಜ್ ನಿರ್ಮಿಸುತ್ತಿರುವ ” ಉತ್ತರಕಾಂಡ” ಚಿತ್ರದ ನಾಯಕನಾಗಿ ಡಾಲಿ ಧನಂಜಯ ಅಭಿನಯಿಸುತ್ತಿದ್ದಾರೆ. ಈ ಹಿಂದೆ ಕೆ.ಆರ್.ಜಿ ಸ್ಟುಡಿಯೋಸ್ ನಿರ್ಮಾಣದಲ್ಲಿ ಡಾಲಿ ಧನಂಜಯ ನಾಯಕನಾಗಿ ನಟಿಸಿದ್ದ “ರತ್ನನ ಪ್ರಪಂಚ” ಚಿತ್ರ ಸಹ ಪ್ರಚಂಡ ಯಶಸ್ಸು ಕಂಡಿತ್ತು.…

Chitra Suddhi
In the movie "December 24". Boys from Kunigal Taluk

“ಡಿಸೆಂಬರ್ 24” ಚಿತ್ರದಲ್ಲಿ ಹಾವಳಿ ಕೊಡೋಕೆ ಕುಣಿಗಲ್...

“ಡಿಸೆಂಬರ್ 24” ಚಿತ್ರದಲ್ಲಿ ಅನಿಲ್ ಗೌಡ್ರು, ಕುಮಾರ್ ಗೌಡ್ರು ಹಾಗೂ ಬೆಟ್ಟೇಗೌಡ್ರು ಖಡಕ್ ಖಳನಾಯಕರಾಗಿ ಅಭಿನಯಿಸಿದ್ದು, ಈ ಚಿತ್ರದಲ್ಲಿ ಇವರು ತುಂಬಾ ವಿಭಿನ್ನವಾದ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಈ ಚಿತ್ರದಲ್ಲಿ ನಾಯಕರ ಪಾತ್ರ ಎಷ್ಟು ಮುಖ್ಯನೋ ಹಾಗೆ ಖಳನಾಯಕರ ಪಾತ್ರಗಳು ಅಷ್ಟೇ ಮುಖ್ಯ. ಅದರಂತೆ ಖಳನಾಯಕರ ಆರ್ಭಟ ಜೋರಾಗೆ ಇರಲಿದೆ…

News
VXplore Banking & Competitive Exams Coaching Academy

ಅದು ಕೆಂಗೇರಿಯಲ್ಲಿ ಹೊಸದಾಗಿ ಶುರುವಾದ ಸ್ಪರ್ಧಾತ್ಮಕ ಪರೀಕ್ಷೆಗಳ...

ಸಾವಿರಾರು ವಿದ್ಯಾರ್ಥಿಗಳಿಗೆ ಭವಿಷ್ಯ ಕಟ್ಟಿಕೊಟ್ಟ ಪ್ರತಿಷ್ಠಿತ ವಿದ್ಯಾ ಸಂಸ್ಥೆಯ ನಿರ್ದೇಶಕರಾದ  ಚಂದ್ರ ಮೂರ್ತಿ ಯವರು ಇದರ ಸಂಸ್ಥಾಪಕರು. ಉತ್ತಮ ಮಟ್ಟದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಭೇತಿ ನೀಡುವ ಕಾರಣದಿಂದ ಈ VXplore Banking & Competitive Exams Coaching Academy. ತರಭೇತಿ ಕೇಂದ್ರವನ್ನು ತೆರೆದಿದ್ದಾರೆ. ಅದು ಆಕಾಕ್ಷಿ ವಿಧ್ಯಾರ್ಥಿಗಳಿಗೆ ಅವರ…

Chitra Suddhi
90 bidi manig nadi song release

ನಾಳೆಯಿಂದ ನೈಂಟಿ ನಶೆ!

ಹಿರಿಯ ಹಾಸ್ಯ ನಟ ಬಿರಾದಾರ್ ಅಭಿನಯದ ಐನೂರನೇ ಚಿತ್ರ ಎಂಬ ಹಣೆಪಟ್ಟಿ ಹೊತ್ತುಕೊಂಡು ಆರಂಭದಿಂದಲೇ ಭರ್ಜರಿ ಸದ್ದು ಮಾಡುತ್ತಲೇ ಬಂದ ಚಿತ್ರ ’90 ಬಿಡಿ ಮನೀಗ್ ನಡಿ’. ಉತ್ತರ ಕರ್ನಾಟಕ ಶೈಲಿಯ ಕಾಮಿಡಿ ಕ್ರೈಂ ಥ್ರಿಲ್ಲರ್ ಕಥೆ ಎನ್ನುತ್ತಾ, ‘ಟೀಸರ್’ ಮೂಲಕ ಚಿತ್ರ ಭರವಸೆ ಮೂಡಿಸಿತ್ತು. ಇದೀಗ ಚಿತ್ರತಂಡ…

Chitra Suddhi
i am pregnant kannada movie censored ua

“ಐ ಆಮ್ ಪ್ರೆಗ್ನೆಂಟ್” ಚಿತ್ರವು ಸೆನ್ಸಾರ್ ಮಂಡಳಿಯಿಂದ...

“ಅನು ಸಿನಿಮಾಸ್” ಬ್ಯಾನರ್ ಅಡಿಯಲ್ಲಿ ತಯಾರಾಗುತ್ತಿರುವ “ಐ ಆಮ್ ಪ್ರೆಗ್ನೆಂಟ್” ಎಂಬ ಚಿತ್ರವನ್ನು ಸೆನ್ಸಾರ್ ಮಂಡಳಿಯಿಂದ ಉತ್ತಮ ಪ್ರತಿಕ್ರಿಯೆ ಪಡೆದಿದೆ . ಕೆಲವೇ ದಿನಗಳಲ್ಲಿ ಚಿತ್ರಮಂದಿರಕ್ಕೆ ಲಗ್ಗೆಯಿಡಲು ಚಿತ್ರತಂಡ ಎಲ್ಲ ತಯಾರಿ ಮಾಡಿಕೊಳ್ಳುತ್ತಿದ್ದಾರೆ . ಇದರಲ್ಲಿ ನುರಿತ ಕಲಾವಿದರು ಹಾಗೂ ನುರಿತ ತಂತ್ರಜ್ಞರು ಕೂಡ ಇದಕ್ಕೆ ಉತ್ತಮ ಬೆಂಬಲವನ್ನು…