ಮಹಿಳೆಯರಿಂದ ರಾಜಯೋಗ ಟ್ರೈಲರ್ ಬಿಡುಗಡೆ

Rajayoga trailer released

ಮಾನವನ ಜೀವನದಲ್ಲಿ ರಾಜಯೋಗ ಎಂಬ ಪದಕ್ಕೆ ಬಹಳ ಮಹತ್ವವಿದೆ. ರಾಜಯೋಗ ಬಂತೆಂದರೆ ಮುಂದೆ ಆತನಿಗೆ ಒಳ್ಳೆಯದಾಗುತ್ತದೆ ಎಂಬ ನಂಬಿಕೆಯಿದೆ. ಹಾಸ್ಯನಟ ಪೋಷಕನಟ ಧರ್ಮಣ್ಣ ನಾಯಕನಾಗಿ ನಟಿಸಿರುವ ಚಲನಚಿತ್ರದ ಹೆಸರೂ ಸಹ ರಾಜಯೋಗ. ಈ ಚಿತ್ರದ ಟ್ರೈಲರ್ ಬಿಡುಗಡೆ Rajayoga trailer released ಕಾರ್ಯಕ್ರಮ ಇತ್ತೀಚೆಗೆ ನಡೆಯಿತು.Rajayoga trailer released

ವಿಶೇಷವಾಗಿ ಇಬ್ಬರು ಸಾಮಾನ್ಯ ಮಹಿಳೆಯರು ಈ ಟ್ರೈಲರ್ ಬಿಡುಗಡೆಗೊಳಿಸಿದರು. ಲಿಂಗರಾಜ ಉಚ್ಚಂಗಿದುರ್ಗ ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ನಿರ್ದೇಶನ ಮಾಡುತ್ತಿರುವ ಈ ಚಿತ್ರವನ್ನು ಶ್ರೀರಾಮರತ್ನ ಪ್ರೊಡಕ್ಷನ್ಸ್ ಅಡಿ ಕುಮಾರ ಕಂಠೀರವ, ದೀಕ್ಷಿತ್ ಕೃಷ್ಣ, ಪ್ರಭು ಚಿಕ್ಕನಾಯ್ಕನಹಳ್ಳಿ, ಲಿಂಗರಾಜು ಕೆಎನ್, ಅರ್ಜುನ್ ಅಣತಿ ಅಲ್ಲದೆ ಧರ್ಮಣ್ಣ ಸಹೋದರ ಹೊನ್ನಪ್ಪ ಕಡೂರು ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ.Rajayoga trailer released


ಈ ಸಂದರ್ಭದಲ್ಲಿ ನಿರ್ದೇಶಕ ಲಿಂಗರಾಜು ಮಾತನಾಡುತ್ತ, ಇದು ನನ್ನ ನಿರ್ದೇಶನದ ಮೊದಲ ಚಿತ್ರ. ಗ್ರಾಮೀಣ ಭಾಗದಲ್ಲಿ ನಡೆಯುವ ಕಥೆ. ನಾನೂ ಸಹ ಹಳ್ಳಿಯಿಂದ ಬಂದವನು. ದೀಕ್ಷಿತ್ ಕೃಷ್ಣ, ಲಿಂಗರಾಜು ನನ್ನ ಸ್ನೇಹಿತರು, ಪ್ರಾಮಾಣಿಕವಾಗಿ ಕೆಲಸ ಮಾಡಿದರೆ ಒಂದಲ್ಲ ಒಂದು ದಿನ ರಾಜಯೋಗ ಬಂದೇ ಬರುತ್ತದೆ ಎನ್ನುವುದೇ ಈ ಚಿತ್ರದ ಕಾನ್ಸೆಪ್ಟ್. ರಾಮ ರಾಮ ರೇ ಚಿತ್ರದಲ್ಲಿ ದರ್ಮಣ್ಣ ಅವರ ಅಭಿನಯ ನೋಡಿ, ಈ ಚಿತ್ರಕ್ಕೆ ಆಯ್ಕೆ ಮಾಡಿದ್ದೇನೆ. ತಂದೆ, ಪತ್ನಿ, ಚಿಕ್ಕಪ್ಪ ದೊಡ್ಡಪ್ಪ ಹೀಗೆ ಎಲ್ಲಾ ಪಾತ್ರಗಳು ಅವರ ಸುತ್ತ ಬರುತ್ತವೆ. ತಂದೆ ಮಗನ ನಡುವೆ ನಡೆಯುವ ಕಥೆ. ಜೋತಿಷ್ಯ ಸುಳ್ಳಲ್ಲ, ಆದರೆ ಅದನ್ನು ಕೆಲವರು ದುರುಪಯೋಗ ಮಾಡಿಕೊಳ್ಳುತ್ತಿದ್ದಾರೆ. ಚಿತ್ರದ ಕೊನೆಯಲ್ಲಿ ಮಗನ ಪಾತ್ರದ ಮೂಲಕ ತಂದೆಗೆ ಬುದ್ದಿ ಕಲಿಸುವ ಕಥೆಯಿದೆ. ಸೀರಿಯಸ್ ವಿಷಯವನ್ನು ಹಾಸ್ಯದ ಮೂಲಕ ಹೇಳಲು ಪ್ರಯತ್ನಿಸಿದ್ದೇವೆ, ಪಾಸ್ಟ್, ಫ್ಯೂಚರ್ ಯೋಚಿಸದೆ, ಪ್ರೆಸೆಂಟ್ ಲೈಫ್ ಬಗ್ಗೆ ಗಮನ ಹರಿಸಿದರೆ ನಮ್ಮ ಜೀವನ ಚೆನ್ನಾಗಿರುತ್ತದೆ ಎಂದು ಹೇಳುವ ಕಥೆ. ೩ ಹಂತಗಳಲ್ಲಿ ೪೫ ದಿನಗಳ ಕಾಲ ಚಿತ್ರೀಕರಿಸಿದ್ದೇವೆ.Rajayoga trailer released

ಸದ್ಯ ಚಿತ್ರದ ಡಿಐ ನಡೀತಿದೆ ಎಂದು ಹೇಳಿದರು, ನಾಯಕನಟ ಧರ್ಮಣ್ಣ ಮಾತನಾಡುತ್ತ ನಾನಿಲ್ಲಿ ಕೂರಲು ಕಾರಣ ರಾಮಾ ರಾಮಾ ರೇ ತಂಡ. ಈ ಚಿತ್ರದಲ್ಲಿ ಕಥೆ, ನಿರ್ದೇಶಕ‌ ಇಬ್ಬರೂ ನಾಯಕರು. ನಾನೊಂದು ಪಾತ್ರ ಮಾಡಿದ್ದೇನೆ ಅಷ್ಟೇ. ಈ ಪಾತ್ರದಲ್ಲಿ ಕಾಮಿಡಿ, ಎಮೋಷನ್ ಎಲ್ಲಾ ಇದೆ, ಈ ಥರದ ಪಾತ್ರವನ್ನು ಹಿಂದೆಂದೂ ಮಾಡಿಲ್ಲ, ಗ್ರಾಮೀಣ ಭಾಗದಲ್ಲಿ ನಡೆಯೋ ಕಥೆಯಲ್ಲಿ ಸಂಬಂಧದ ಮೌಲ್ಯಗಳನ್ನು ಹಾಸ್ಯದ ಹಿನ್ನೆಲೆಯಲ್ಲಿ ಹೇಳಲು ಪ್ರಯತ್ನಿಸಿದ್ದೇವೆ. ಈ ಸಿನಿಮಾ ನೋಡುವಾಗ ಹಿರಿಯ ನಟರಾದ ಅನಂತನಾಗ್, ಶಶಿಕುಮಾರ್ ಖಂಡಿತ ನೆನಪಾಗ್ತಾರೆ. ಸದ್ಯದಲ್ಲೇ ನಿಮ್ಮ ಮುಂದೆ ಬರುತಗತೇವೆ ಎಂದು ಹೇಳಿದರು.

ಆದರ್ಶಗಳಿಗಾಗಿ ಬದುಕುವ ಬದುಕು ಒಂದು ತಪಸ್ಸೇ ಸರಿ

ಚಿತ್ರದ ನಾಯಕಿಯಾಗಿ ನಿರೀಕ್ಷಾರಾವ್ ನಟಿಸಿದ್ದಾರೆ. ಚಿತ್ರದಲ್ಲಿ ೬ ಹಾಡುಗಳಿದ್ದು, ಅಕ್ಷಯ್ ರಿಶಭ್ ಸಂಗೀತ ಸಂಯೋಜನೆ ಮಾಡಿದ್ದಾರೆ. ವಿಷ್ಣುಪ್ರಸಾದ್ ಕ್ಯಾಮೆರಾವರ್ಕ್ ನಿಭಾಯಿಸಿದ್ದಾರೆ. ಬಿ.ಎಸ್.ಕೆಂಪರಾಜು ಅವರ ಸಂಕಲನ ಈ ಚಿತ್ರಕ್ಕಿದೆ, ನಾಗೇಂದ್ರ ಶಾ ನಾಯಕನ ತಂದೆಯ ಪಾತ್ರ ನಿರ್ವಹಿಸಿದ್ದು, ಕೃಷ್ಣ ಮೂರ್ತಿ ಕವುತಾರ್ ಒಬ್ಬ ಜೋತಿಷಿಯ ಪಾತ್ರ ಮಾಡಿದ್ದಾರೆ. ಶ್ರೀನಿವಾಸಗೌಡ್ರು, ಉಷಾ ರವಿಶಂಕರ್, ಮಹಾಂತೇಶ ಹಿರೇಮಠ್ ಉಳಿದ ಪಾತ್ರವರ್ಗದಲ್ಲಿದ್ದಾರೆ,

You Will  Love   Like  These

Chitra Suddhi
daali uttarakhand kannada movie

ಡಾಲಿ ಧನಂಜಯ “ಉತ್ತರ ಕಾಂಡ”ದ ನಾಯಕ.

ವಿಜಯ್ ಕಿರಗಂದೂರು ಅರ್ಪಿಸುವ, ಕೆ.ಆರ್.ಜಿ ಸ್ಟುಡಿಯೋಸ್ ಲಾಂಛನದಲ್ಲಿ ಕಾರ್ತಿಕ್ ಹಾಗೂ ಯೋಗಿ ಜಿ ರಾಜ್ ನಿರ್ಮಿಸುತ್ತಿರುವ ” ಉತ್ತರಕಾಂಡ” ಚಿತ್ರದ ನಾಯಕನಾಗಿ ಡಾಲಿ ಧನಂಜಯ ಅಭಿನಯಿಸುತ್ತಿದ್ದಾರೆ. ಈ ಹಿಂದೆ ಕೆ.ಆರ್.ಜಿ ಸ್ಟುಡಿಯೋಸ್ ನಿರ್ಮಾಣದಲ್ಲಿ ಡಾಲಿ ಧನಂಜಯ ನಾಯಕನಾಗಿ ನಟಿಸಿದ್ದ “ರತ್ನನ ಪ್ರಪಂಚ” ಚಿತ್ರ ಸಹ ಪ್ರಚಂಡ ಯಶಸ್ಸು ಕಂಡಿತ್ತು.…

Chitra Suddhi
In the movie "December 24". Boys from Kunigal Taluk

“ಡಿಸೆಂಬರ್ 24” ಚಿತ್ರದಲ್ಲಿ ಹಾವಳಿ ಕೊಡೋಕೆ ಕುಣಿಗಲ್...

“ಡಿಸೆಂಬರ್ 24” ಚಿತ್ರದಲ್ಲಿ ಅನಿಲ್ ಗೌಡ್ರು, ಕುಮಾರ್ ಗೌಡ್ರು ಹಾಗೂ ಬೆಟ್ಟೇಗೌಡ್ರು ಖಡಕ್ ಖಳನಾಯಕರಾಗಿ ಅಭಿನಯಿಸಿದ್ದು, ಈ ಚಿತ್ರದಲ್ಲಿ ಇವರು ತುಂಬಾ ವಿಭಿನ್ನವಾದ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಈ ಚಿತ್ರದಲ್ಲಿ ನಾಯಕರ ಪಾತ್ರ ಎಷ್ಟು ಮುಖ್ಯನೋ ಹಾಗೆ ಖಳನಾಯಕರ ಪಾತ್ರಗಳು ಅಷ್ಟೇ ಮುಖ್ಯ. ಅದರಂತೆ ಖಳನಾಯಕರ ಆರ್ಭಟ ಜೋರಾಗೆ ಇರಲಿದೆ…

News
VXplore Banking & Competitive Exams Coaching Academy

ಅದು ಕೆಂಗೇರಿಯಲ್ಲಿ ಹೊಸದಾಗಿ ಶುರುವಾದ ಸ್ಪರ್ಧಾತ್ಮಕ ಪರೀಕ್ಷೆಗಳ...

ಸಾವಿರಾರು ವಿದ್ಯಾರ್ಥಿಗಳಿಗೆ ಭವಿಷ್ಯ ಕಟ್ಟಿಕೊಟ್ಟ ಪ್ರತಿಷ್ಠಿತ ವಿದ್ಯಾ ಸಂಸ್ಥೆಯ ನಿರ್ದೇಶಕರಾದ  ಚಂದ್ರ ಮೂರ್ತಿ ಯವರು ಇದರ ಸಂಸ್ಥಾಪಕರು. ಉತ್ತಮ ಮಟ್ಟದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಭೇತಿ ನೀಡುವ ಕಾರಣದಿಂದ ಈ VXplore Banking & Competitive Exams Coaching Academy. ತರಭೇತಿ ಕೇಂದ್ರವನ್ನು ತೆರೆದಿದ್ದಾರೆ. ಅದು ಆಕಾಕ್ಷಿ ವಿಧ್ಯಾರ್ಥಿಗಳಿಗೆ ಅವರ…

Chitra Suddhi
i am pregnant kannada movie censored ua

“ಐ ಆಮ್ ಪ್ರೆಗ್ನೆಂಟ್” ಚಿತ್ರವು ಸೆನ್ಸಾರ್ ಮಂಡಳಿಯಿಂದ...

“ಅನು ಸಿನಿಮಾಸ್” ಬ್ಯಾನರ್ ಅಡಿಯಲ್ಲಿ ತಯಾರಾಗುತ್ತಿರುವ “ಐ ಆಮ್ ಪ್ರೆಗ್ನೆಂಟ್” ಎಂಬ ಚಿತ್ರವನ್ನು ಸೆನ್ಸಾರ್ ಮಂಡಳಿಯಿಂದ ಉತ್ತಮ ಪ್ರತಿಕ್ರಿಯೆ ಪಡೆದಿದೆ . ಕೆಲವೇ ದಿನಗಳಲ್ಲಿ ಚಿತ್ರಮಂದಿರಕ್ಕೆ ಲಗ್ಗೆಯಿಡಲು ಚಿತ್ರತಂಡ ಎಲ್ಲ ತಯಾರಿ ಮಾಡಿಕೊಳ್ಳುತ್ತಿದ್ದಾರೆ . ಇದರಲ್ಲಿ ನುರಿತ ಕಲಾವಿದರು ಹಾಗೂ ನುರಿತ ತಂತ್ರಜ್ಞರು ಕೂಡ ಇದಕ್ಕೆ ಉತ್ತಮ ಬೆಂಬಲವನ್ನು…

Chitra Suddhi
90 bidi manig nadi song release

ನಾಳೆಯಿಂದ ನೈಂಟಿ ನಶೆ!

ಹಿರಿಯ ಹಾಸ್ಯ ನಟ ಬಿರಾದಾರ್ ಅಭಿನಯದ ಐನೂರನೇ ಚಿತ್ರ ಎಂಬ ಹಣೆಪಟ್ಟಿ ಹೊತ್ತುಕೊಂಡು ಆರಂಭದಿಂದಲೇ ಭರ್ಜರಿ ಸದ್ದು ಮಾಡುತ್ತಲೇ ಬಂದ ಚಿತ್ರ ’90 ಬಿಡಿ ಮನೀಗ್ ನಡಿ’. ಉತ್ತರ ಕರ್ನಾಟಕ ಶೈಲಿಯ ಕಾಮಿಡಿ ಕ್ರೈಂ ಥ್ರಿಲ್ಲರ್ ಕಥೆ ಎನ್ನುತ್ತಾ, ‘ಟೀಸರ್’ ಮೂಲಕ ಚಿತ್ರ ಭರವಸೆ ಮೂಡಿಸಿತ್ತು. ಇದೀಗ ಚಿತ್ರತಂಡ…