ಲೈಕಾ ಪ್ರೊಡಕ್ಷನ್ ನಡಿ ಬರ್ತಿದೆ ರಜನಿಕಾಂತ್ 170ನೇ ಸಿನಿಮಾ..32 ವರ್ಷ ಬಳಿಕ ಮತ್ತೆ ಒಂದಾದ ತಲೈವಾ-ಬಿಗ್ ಬಿ

Rajinikanth's 170th movie under Lyca production.. Thalaiva-Big B reunited after 32 years

ಭಾರತೀಯ ಚಿತ್ರರಂಗದ ಪ್ರತಿಷ್ಠಿತ ನಿರ್ಮಾಣ ಸಂಸ್ಥೆ ಲೈಕಾ ಮತ್ತೊಂದು ಸಾಹಸಕ್ಕೆ ಕೈ ಹಾಕಿದೆ. ಇಂಡಿಯನ್, ಖೈದಿ ನಂಬರ್ 150, 2.0, ದರ್ಬಾರ್ ಇತ್ತೀಚೆಗೆ ಪೊನ್ನಿಯಿನ್ ಸೆಲ್ವನ್ ನಂತಹ ಹಿಟ್ ಸಿನಿಮಾಗಳನ್ನು ನಿರ್ಮಿಸಿರುವ ಲೈಕಾ ಸೂಪರ್ ಸ್ಟಾರ್ ರಜನಿಕಾಂತ್ ಜೊತೆ ಮತ್ತೆ ಕೈ ಜೋಡಿಸಿದೆ. ರಜನಿಯ 170ನೇ ಚಿತ್ರಕ್ಕೆ ಹಣ ಸುರಿಯುತ್ತಿದೆ. ವಿಶೇಷ ಅಂದರೆ ರಜನಿ ಜೊತೆ ಬಾಲಿವುಡ್ ದಂತಕಥೆ ಅಮಿತಾಬ್ ಬಚ್ಚನ್ ಕೂಡ ನಟಿಸುತ್ತಿದ್ದಾರೆ.Rajinikanth's 170th movie under Lyca production.. Thalaiva-Big B reunited after 32 years

ರಜನಿಕಾಂತ್ ಹಾಗೂ ಅಮಿತಾಬ್ ಬಚ್ಚನ್..ಭಾರತೀಯ ಚಿತ್ರರಂಗದ ಘಟಾನುಘಟಿ ನಾಯಕರು. ಈ ಇಬ್ಬರು ತಾರೆಯರು ಅಂದಾ ಕಾನೂನ್, ಗೆರಾಫ್ತಾರ್ ಮತ್ತು ಹಮ್ ಸಿನಿಮಾಗಳಲ್ಲಿ ನಟಿಸಿದ್ದರು. ಈ ಚಿತ್ರಗಳು ಪ್ರೇಕ್ಷಕರ ಮೆಚ್ಚುಗೆ ಪಡೆದುಕೊಂಡಿದ್ದವು. ರಜನಿ ಬಚ್ಚನ್ ಅಭಿನಯಕ್ಕೂ ಮೆಚ್ಚುಗೆಯ ಮಹಾಪೂರ ಹರಿದು ಬಂದಿತ್ತು. ಈ ಸಿನಿಮಾಗಳ ಯಶಸ್ಸಿನ ನಂತರ ಇದೀಗ 32 ವರ್ಷದ ಬಳಿಕ ಒಟ್ಟಿಗೆ ಸಿನಿಮಾ ಮಾಡುತ್ತಿದ್ದಾರೆ. ಈ ಸಿನಿಮಾಗೆ ಲೈಕಾ ಪ್ರೊಡಕ್ಷನ್ ಹಣ ಹಾಕುತ್ತಿದೆ.ಬಹಳ ಅದ್ಧೂರಿಯಾಗಿ ಮೂಡಿ ಬರಲಿರುವ ಈ ಪ್ರಾಜೆಕ್ಟ್ ಮುಂದಿನ ತಿಂಗಳ ಅಂತ್ಯಕ್ಕೆ ಟೇಕಾಫ್ ಆಗಲಿದೆ.Rajinikanth's 170th movie under Lyca production.. Thalaiva-Big B reunited after 32 years

ರಜನಿ-ಬಚ್ಚನ್ ನಟಿಸಲಿರುವ, ಲೈಕಾ ನಿರ್ಮಾಣ ಮಾಡುತ್ತಿರುವ ಈ ಸಿನಿಮಾವನ್ನು ಜೈಭೀಮ್ ಖ್ಯಾತಿಯ ಟಿಜೆ ಜ್ಞಾನವೇಲ್ ನಿರ್ದೇಶಿಸಲಿದ್ದಾರೆ. ಜೈ ಭೀಮ್ ಮೂಲಕ ಇಂಡಿಯನ್ ಸಿನಿಲೋಕದಲ್ಲಿ ಸಂಚಲನ ಸೃಷ್ಟಿಸಿದ್ದ ಜ್ಞಾನವೇಲ್ ರಜನಿ ಹಾಗೂ ಬಚ್ಚನ್ ನಂತಹ ಸೂಪರ್ ಸ್ಟಾರ್ಸ್ ಗೆ ಸಿನಿಮಾ ಆಕ್ಷನ್ ಕಟ್ ಹೇಳುತ್ತಿದ್ದು, ಈ ಪ್ರಾಜೆಕ್ಟ್ ಮೇಲೆ ನಿರೀಕ್ಷೆ ಹೆಚ್ಚಿದೆ.

You Will  Love   Like  These

Chitra Suddhi
daali uttarakhand kannada movie

ಡಾಲಿ ಧನಂಜಯ “ಉತ್ತರ ಕಾಂಡ”ದ ನಾಯಕ.

ವಿಜಯ್ ಕಿರಗಂದೂರು ಅರ್ಪಿಸುವ, ಕೆ.ಆರ್.ಜಿ ಸ್ಟುಡಿಯೋಸ್ ಲಾಂಛನದಲ್ಲಿ ಕಾರ್ತಿಕ್ ಹಾಗೂ ಯೋಗಿ ಜಿ ರಾಜ್ ನಿರ್ಮಿಸುತ್ತಿರುವ ” ಉತ್ತರಕಾಂಡ” ಚಿತ್ರದ ನಾಯಕನಾಗಿ ಡಾಲಿ ಧನಂಜಯ ಅಭಿನಯಿಸುತ್ತಿದ್ದಾರೆ. ಈ ಹಿಂದೆ ಕೆ.ಆರ್.ಜಿ ಸ್ಟುಡಿಯೋಸ್ ನಿರ್ಮಾಣದಲ್ಲಿ ಡಾಲಿ ಧನಂಜಯ ನಾಯಕನಾಗಿ ನಟಿಸಿದ್ದ “ರತ್ನನ ಪ್ರಪಂಚ” ಚಿತ್ರ ಸಹ ಪ್ರಚಂಡ ಯಶಸ್ಸು ಕಂಡಿತ್ತು.…

Chitra Suddhi
In the movie "December 24". Boys from Kunigal Taluk

“ಡಿಸೆಂಬರ್ 24” ಚಿತ್ರದಲ್ಲಿ ಹಾವಳಿ ಕೊಡೋಕೆ ಕುಣಿಗಲ್...

“ಡಿಸೆಂಬರ್ 24” ಚಿತ್ರದಲ್ಲಿ ಅನಿಲ್ ಗೌಡ್ರು, ಕುಮಾರ್ ಗೌಡ್ರು ಹಾಗೂ ಬೆಟ್ಟೇಗೌಡ್ರು ಖಡಕ್ ಖಳನಾಯಕರಾಗಿ ಅಭಿನಯಿಸಿದ್ದು, ಈ ಚಿತ್ರದಲ್ಲಿ ಇವರು ತುಂಬಾ ವಿಭಿನ್ನವಾದ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಈ ಚಿತ್ರದಲ್ಲಿ ನಾಯಕರ ಪಾತ್ರ ಎಷ್ಟು ಮುಖ್ಯನೋ ಹಾಗೆ ಖಳನಾಯಕರ ಪಾತ್ರಗಳು ಅಷ್ಟೇ ಮುಖ್ಯ. ಅದರಂತೆ ಖಳನಾಯಕರ ಆರ್ಭಟ ಜೋರಾಗೆ ಇರಲಿದೆ…

News
VXplore Banking & Competitive Exams Coaching Academy

ಅದು ಕೆಂಗೇರಿಯಲ್ಲಿ ಹೊಸದಾಗಿ ಶುರುವಾದ ಸ್ಪರ್ಧಾತ್ಮಕ ಪರೀಕ್ಷೆಗಳ...

ಸಾವಿರಾರು ವಿದ್ಯಾರ್ಥಿಗಳಿಗೆ ಭವಿಷ್ಯ ಕಟ್ಟಿಕೊಟ್ಟ ಪ್ರತಿಷ್ಠಿತ ವಿದ್ಯಾ ಸಂಸ್ಥೆಯ ನಿರ್ದೇಶಕರಾದ  ಚಂದ್ರ ಮೂರ್ತಿ ಯವರು ಇದರ ಸಂಸ್ಥಾಪಕರು. ಉತ್ತಮ ಮಟ್ಟದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಭೇತಿ ನೀಡುವ ಕಾರಣದಿಂದ ಈ VXplore Banking & Competitive Exams Coaching Academy. ತರಭೇತಿ ಕೇಂದ್ರವನ್ನು ತೆರೆದಿದ್ದಾರೆ. ಅದು ಆಕಾಕ್ಷಿ ವಿಧ್ಯಾರ್ಥಿಗಳಿಗೆ ಅವರ…

Chitra Suddhi
90 bidi manig nadi song release

ನಾಳೆಯಿಂದ ನೈಂಟಿ ನಶೆ!

ಹಿರಿಯ ಹಾಸ್ಯ ನಟ ಬಿರಾದಾರ್ ಅಭಿನಯದ ಐನೂರನೇ ಚಿತ್ರ ಎಂಬ ಹಣೆಪಟ್ಟಿ ಹೊತ್ತುಕೊಂಡು ಆರಂಭದಿಂದಲೇ ಭರ್ಜರಿ ಸದ್ದು ಮಾಡುತ್ತಲೇ ಬಂದ ಚಿತ್ರ ’90 ಬಿಡಿ ಮನೀಗ್ ನಡಿ’. ಉತ್ತರ ಕರ್ನಾಟಕ ಶೈಲಿಯ ಕಾಮಿಡಿ ಕ್ರೈಂ ಥ್ರಿಲ್ಲರ್ ಕಥೆ ಎನ್ನುತ್ತಾ, ‘ಟೀಸರ್’ ಮೂಲಕ ಚಿತ್ರ ಭರವಸೆ ಮೂಡಿಸಿತ್ತು. ಇದೀಗ ಚಿತ್ರತಂಡ…

Chitra Suddhi
i am pregnant kannada movie censored ua

“ಐ ಆಮ್ ಪ್ರೆಗ್ನೆಂಟ್” ಚಿತ್ರವು ಸೆನ್ಸಾರ್ ಮಂಡಳಿಯಿಂದ...

“ಅನು ಸಿನಿಮಾಸ್” ಬ್ಯಾನರ್ ಅಡಿಯಲ್ಲಿ ತಯಾರಾಗುತ್ತಿರುವ “ಐ ಆಮ್ ಪ್ರೆಗ್ನೆಂಟ್” ಎಂಬ ಚಿತ್ರವನ್ನು ಸೆನ್ಸಾರ್ ಮಂಡಳಿಯಿಂದ ಉತ್ತಮ ಪ್ರತಿಕ್ರಿಯೆ ಪಡೆದಿದೆ . ಕೆಲವೇ ದಿನಗಳಲ್ಲಿ ಚಿತ್ರಮಂದಿರಕ್ಕೆ ಲಗ್ಗೆಯಿಡಲು ಚಿತ್ರತಂಡ ಎಲ್ಲ ತಯಾರಿ ಮಾಡಿಕೊಳ್ಳುತ್ತಿದ್ದಾರೆ . ಇದರಲ್ಲಿ ನುರಿತ ಕಲಾವಿದರು ಹಾಗೂ ನುರಿತ ತಂತ್ರಜ್ಞರು ಕೂಡ ಇದಕ್ಕೆ ಉತ್ತಮ ಬೆಂಬಲವನ್ನು…