ಜುಲೈ 29 ಕ್ಕೆ ತೆರೆಗೆ ಬರಲಿದೆ ವಿಭಿನ್ನ ಕಥೆಯ “ರಕ್ಕಂ”.

rakkam kannada movie july 29th

ನಮ್ಮ ಹೈಕ್ಳು ಚಿತ್ರ ಲಾಂಛನದಲ್ಲಿ ಸ್ನೇಹಲತ ಅವರು ನಿರ್ಮಿಸಿರುವ
” ರಕ್ಕಂ” ಚಿತ್ರ ಜುಲೈ 29 ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಕೆ.ಸೆಂದಿಲ್ ಈ ಚಿತ್ರವನ್ನು ನಿರ್ದೇಶಿಸಿದ್ದಾರೆ.rakkam kannada movie

ನಮ್ಮ ತಂಡದಲ್ಲಿ ಹೆಚ್ಚಿನವರಿಗೆ ಇದು ಮೊದಲ ಚಿತ್ರವಿರಬಹುದು, ಆದರೆ ಎಲ್ಲರಿಗೂ ರಂಗಭೂಮಿ, ಕಿರುತೆರೆಯಲ್ಲಿ ಹಲವು ವರ್ಷಗಳ ಅನುಭವವಿದೆ‌. ನಾನು ಮೂಲತಃ ರಂಗಭೂಮಿ ಕಲಾವಿದ. ಎನ್ ಎಸ್ ಡಿ ಯಲ್ಲಿ ತರಬೇತಿ ಪಡೆದುಕೊಂಡಿದ್ದೇನೆ. ಪುನೀತ್ ರಾಜ್‍ಕುಮಾರ್ ಅವರು ನಡೆಸಿಕೊಡುತ್ತಿದ್ದ “ಕನ್ನಡದ ಕೋಟ್ಯಾಧಿಪತಿ” ಸೇರಿದಂತೆ ಅನೇಕ ರಿಯಾಲಿಟಿ ಶೋಗಳಿಗೆ ಕೆಲಸ ಮಾಡಿದ್ದೇನೆ. ಈಗ ಹಂಸಲೇಖ ಅವರ ಬಳಿ ಕಾರ್ಯ ನಿರ್ವಹಿಸುತ್ತಿದ್ದೇನೆ. ಇದು ಮೊದಲ ನಿರ್ದೇಶನದ ಚಿತ್ರ. ಕೋವಿಡ್ ಪೂರ್ವದಲ್ಲಿ ನಿರ್ಮಾಣವಾದ ಚಿತ್ರವಿದು. ಪ್ರಧಾನಮಂತ್ರಿಗಳು ಡಿಮಾನಿಟೇಸೇಶನ್ ಮಾಡಿದ ಸಮಯದಲ್ಲಿ ಹುಟ್ಡಿದ ಕಥೆ ಇದು. ಸಸ್ಪೆನ್ಸ್ ಥ್ರಿಲ್ಲರ್ ಚಿತ್ರ ಎಂದರೂ ತಪ್ಪಾಗಲಾರದು. “ರಕ್ಕಂ” ಎಂದರೆ ಹಣದ ಗಂಟು ಎಂಬ ಅರ್ಥವಿದೆ.rakkam kannada movie

ಹೆಚ್ಚಿನ ಭಾಗದ ಚಿತ್ರೀಕರಣ ಬೆಂಗಳೂರಿನಲ್ಲೇ ನಡೆದಿದೆ. ರಣಧೀರ್ ಗೌಡ ನಾಯಕನಾಗಿ ನಟಿಸಿದ್ದಾರೆ. ಅಮೃತ ನಾಯರ್ ನಾಯಕಿ. ಹಿರಿಯ ಕಲಾವಿದ ನಂಜಪ್ಪ ಬೆನಕ, ಹಿರಿಯ ನಿರ್ದೇಶಕ ಬಿ.ರಾಮಮೂರ್ತಿ ಅವರು ಸೇರಿದಂತೆ ಸಾಕಷ್ಟು ಜನ ನಮ್ಮ ಚಿತ್ರದಲ್ಲಿ ನಟಿಸಿದ್ದಾರೆ. ಇದೇ 29 ರಂದು ನಮ್ಮ ಚಿತ್ರ ತೆರೆಗೆ ಬರಲಿದೆ. ನೋಡಿ ಹಾರೈಸಿ ಎಂದರು ನಿರ್ದೇಶಕ ಸೆಂದಿಲ್. ನಿರ್ದೇಶಕರು ಹೇಳಿದ ಕಥೆ ನನಗೆ ತುಂಬಾ ಹಿಡಿಸಿತು. ಹಾಗಾಗಿ ನಿರ್ಮಾಣಕ್ಕೆ ಮುಂದಾದೆ ಎಂದರು ನಿರ್ಮಾಪಕಿ ಸ್ನೇಹಲತ‌rakkam kannada movie

ಆದರ್ಶ ಫಿಲಂ ಇನ್ಸ್ಟಿಟ್ಯೂಟ್ ಹಾಗೂ ರಂಗಾಯಣದಲ್ಲಿ ಅಭಿನಯ ಕಲಿತಿದ್ದೀನಿ. ಸಹಾಯಕ ನಿರ್ದೇಶಕನಾಗೂ ದುಡಿದಿದ್ದೇನೆ. ನಾಯಕನಾಗಿ ಇದು ಮೊದಲ ಚಿತ್ರ. ರಂಗ ಎಂಬುದು ನನ್ನ ಪಾತ್ರದ ಹೆಸರು. ಎರಡು ಶೇಡ್ ಗಳಲ್ಲಿ ಅಭಿನಯಿಸಿದ್ದೇನೆ. ಮೊದಲು ಹಳ್ಳಿಯವನಾಗಿ ನಂತರ ಪಟ್ಟಣವಾಸಿಯಾಗಿ ಕಾಣಿಸಿಕೊಂಡಿದ್ದೇನೆ. ಚಿತ್ರ ಚೆನ್ನಾಗಿ ಮೂಡಿಬಂದಿದೆ ನಿಮ್ಮ ಪ್ರೋತ್ಸಾಹವಿರಲಿ ಎನ್ನುತ್ತಾರೆ ನಾಯಕ ರಣಧೀರ್ ಗೌಡ.rakkam kannada movie

ಚಿತ್ರದಲ್ಲಿ ನಟಿಸಿರುವ ಹಿರಿಯ ಕಲಾವಿದ ನಂಜಪ್ಪ ಬೆನಕ, ನಿರ್ದೇಶಕ ಬಿ.ರಾಮಮೂರ್ತಿ, ನಟರಾದ ವಿನಯ್ ಪಾಂಡವಪುರ, ದಯಾನಂದ್,
ಸಹ ನಿರ್ದೇಶಕ ಗೋಪಾಲ್, ಛಾಯಾಗ್ರಾಹಕ ಶ್ಯಾಮ್, ಸಂಗೀತ ನಿರ್ದೇಶಕ ಶ್ರೀವತ್ಸ, ಗಾಯಕ ರವೀಂದ್ರ ಸೊರಗಾವಿ, ನೃತ್ಯ ನಿರ್ದೇಶಕರಾದ, ಚಾಮರಾಜ್, ಅರುಣ್ ಹಾಗೂ ಕಾರ್ಯಕಾರಿ ನಿರ್ಮಾಪಕ ಸಂದೇಶ್ “ರಕ್ಕಂ” ಚಿತ್ರದ ಬಗ್ಗೆ ಮಾತನಾಡಿದರು. ನಿರ್ಮಾಪಕ ಸಂಜಯ್ ಬಾಬು, ನಿರ್ದೇಶಕ ಮಾ ಚಂದ್ರು
ಅತಿಥಿಗಳಾಗಿ ಆಗಮಿಸಿ ಚಿತ್ರತಂಡಕ್ಕೆ ಶುಭ ಕೋರಿದರು.

You Will  Love   Like  These

Chitra Suddhi
daali uttarakhand kannada movie

ಡಾಲಿ ಧನಂಜಯ “ಉತ್ತರ ಕಾಂಡ”ದ ನಾಯಕ.

ವಿಜಯ್ ಕಿರಗಂದೂರು ಅರ್ಪಿಸುವ, ಕೆ.ಆರ್.ಜಿ ಸ್ಟುಡಿಯೋಸ್ ಲಾಂಛನದಲ್ಲಿ ಕಾರ್ತಿಕ್ ಹಾಗೂ ಯೋಗಿ ಜಿ ರಾಜ್ ನಿರ್ಮಿಸುತ್ತಿರುವ ” ಉತ್ತರಕಾಂಡ” ಚಿತ್ರದ ನಾಯಕನಾಗಿ ಡಾಲಿ ಧನಂಜಯ ಅಭಿನಯಿಸುತ್ತಿದ್ದಾರೆ. ಈ ಹಿಂದೆ ಕೆ.ಆರ್.ಜಿ ಸ್ಟುಡಿಯೋಸ್ ನಿರ್ಮಾಣದಲ್ಲಿ ಡಾಲಿ ಧನಂಜಯ ನಾಯಕನಾಗಿ ನಟಿಸಿದ್ದ “ರತ್ನನ ಪ್ರಪಂಚ” ಚಿತ್ರ ಸಹ ಪ್ರಚಂಡ ಯಶಸ್ಸು ಕಂಡಿತ್ತು.…

Chitra Suddhi
In the movie "December 24". Boys from Kunigal Taluk

“ಡಿಸೆಂಬರ್ 24” ಚಿತ್ರದಲ್ಲಿ ಹಾವಳಿ ಕೊಡೋಕೆ ಕುಣಿಗಲ್...

“ಡಿಸೆಂಬರ್ 24” ಚಿತ್ರದಲ್ಲಿ ಅನಿಲ್ ಗೌಡ್ರು, ಕುಮಾರ್ ಗೌಡ್ರು ಹಾಗೂ ಬೆಟ್ಟೇಗೌಡ್ರು ಖಡಕ್ ಖಳನಾಯಕರಾಗಿ ಅಭಿನಯಿಸಿದ್ದು, ಈ ಚಿತ್ರದಲ್ಲಿ ಇವರು ತುಂಬಾ ವಿಭಿನ್ನವಾದ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಈ ಚಿತ್ರದಲ್ಲಿ ನಾಯಕರ ಪಾತ್ರ ಎಷ್ಟು ಮುಖ್ಯನೋ ಹಾಗೆ ಖಳನಾಯಕರ ಪಾತ್ರಗಳು ಅಷ್ಟೇ ಮುಖ್ಯ. ಅದರಂತೆ ಖಳನಾಯಕರ ಆರ್ಭಟ ಜೋರಾಗೆ ಇರಲಿದೆ…

News
VXplore Banking & Competitive Exams Coaching Academy

ಅದು ಕೆಂಗೇರಿಯಲ್ಲಿ ಹೊಸದಾಗಿ ಶುರುವಾದ ಸ್ಪರ್ಧಾತ್ಮಕ ಪರೀಕ್ಷೆಗಳ...

ಸಾವಿರಾರು ವಿದ್ಯಾರ್ಥಿಗಳಿಗೆ ಭವಿಷ್ಯ ಕಟ್ಟಿಕೊಟ್ಟ ಪ್ರತಿಷ್ಠಿತ ವಿದ್ಯಾ ಸಂಸ್ಥೆಯ ನಿರ್ದೇಶಕರಾದ  ಚಂದ್ರ ಮೂರ್ತಿ ಯವರು ಇದರ ಸಂಸ್ಥಾಪಕರು. ಉತ್ತಮ ಮಟ್ಟದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಭೇತಿ ನೀಡುವ ಕಾರಣದಿಂದ ಈ VXplore Banking & Competitive Exams Coaching Academy. ತರಭೇತಿ ಕೇಂದ್ರವನ್ನು ತೆರೆದಿದ್ದಾರೆ. ಅದು ಆಕಾಕ್ಷಿ ವಿಧ್ಯಾರ್ಥಿಗಳಿಗೆ ಅವರ…

Chitra Suddhi
i am pregnant kannada movie censored ua

“ಐ ಆಮ್ ಪ್ರೆಗ್ನೆಂಟ್” ಚಿತ್ರವು ಸೆನ್ಸಾರ್ ಮಂಡಳಿಯಿಂದ...

“ಅನು ಸಿನಿಮಾಸ್” ಬ್ಯಾನರ್ ಅಡಿಯಲ್ಲಿ ತಯಾರಾಗುತ್ತಿರುವ “ಐ ಆಮ್ ಪ್ರೆಗ್ನೆಂಟ್” ಎಂಬ ಚಿತ್ರವನ್ನು ಸೆನ್ಸಾರ್ ಮಂಡಳಿಯಿಂದ ಉತ್ತಮ ಪ್ರತಿಕ್ರಿಯೆ ಪಡೆದಿದೆ . ಕೆಲವೇ ದಿನಗಳಲ್ಲಿ ಚಿತ್ರಮಂದಿರಕ್ಕೆ ಲಗ್ಗೆಯಿಡಲು ಚಿತ್ರತಂಡ ಎಲ್ಲ ತಯಾರಿ ಮಾಡಿಕೊಳ್ಳುತ್ತಿದ್ದಾರೆ . ಇದರಲ್ಲಿ ನುರಿತ ಕಲಾವಿದರು ಹಾಗೂ ನುರಿತ ತಂತ್ರಜ್ಞರು ಕೂಡ ಇದಕ್ಕೆ ಉತ್ತಮ ಬೆಂಬಲವನ್ನು…

Chitra Suddhi
90 bidi manig nadi song release

ನಾಳೆಯಿಂದ ನೈಂಟಿ ನಶೆ!

ಹಿರಿಯ ಹಾಸ್ಯ ನಟ ಬಿರಾದಾರ್ ಅಭಿನಯದ ಐನೂರನೇ ಚಿತ್ರ ಎಂಬ ಹಣೆಪಟ್ಟಿ ಹೊತ್ತುಕೊಂಡು ಆರಂಭದಿಂದಲೇ ಭರ್ಜರಿ ಸದ್ದು ಮಾಡುತ್ತಲೇ ಬಂದ ಚಿತ್ರ ’90 ಬಿಡಿ ಮನೀಗ್ ನಡಿ’. ಉತ್ತರ ಕರ್ನಾಟಕ ಶೈಲಿಯ ಕಾಮಿಡಿ ಕ್ರೈಂ ಥ್ರಿಲ್ಲರ್ ಕಥೆ ಎನ್ನುತ್ತಾ, ‘ಟೀಸರ್’ ಮೂಲಕ ಚಿತ್ರ ಭರವಸೆ ಮೂಡಿಸಿತ್ತು. ಇದೀಗ ಚಿತ್ರತಂಡ…